ಲೇಖಕ: admin

ಮಡಿಕೇರಿ ಜ.21 : ರೊಬೆಸ್ಟಾ ಎಡ್ವೆಂಚರಸ್ ಆಂಡ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಫೆ.5 ರಂದು ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರಿನಲ್ಲಿ ರಾಷ್ಟ್ರಮಟ್ಟದ 4X4 ಆಫ್ ರೋಡ್ ರ‍್ಯಾಲಿ ನಡೆಯಲಿದೆ ಎಂದು ಆಯೋಜಕರಾದ ಉದ್ದಪ್ಪಂಡ ತಿಮ್ಮಣ್ಣ ತಿಳಿಸಿದ್ದಾರೆ. ಕ್ಯಾಂಪ್ ಎಟ್ ಬೆಟ್ಟತ್ತೂರಿನಲ್ಲಿ (ಜಿಪಿಎಸ್ ಲೊಕೇಶನ್ : ತ್ರಿ ಹಿಲ್ಸ್ ರೆಸಾರ್ಟ್ ) ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರ‍್ಯಾಲಿ ನಡೆಯಲಿದ್ದು, ಹೊರ ರಾಜ್ಯಗಳ ಪ್ರತಿಭಾವಂತ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. ಸ್ಪರ್ಧೆಯಲ್ಲಿ ಸ್ಟಾಕ್ ಪೆಟ್ರೋಲ್, ಸ್ಟಾಕ್ ಡೀಸಲ್ ಮತ್ತು ಪ್ರೂವ್ ಮೊಡಿಫೈಡ್ ವಿಭಾಗಗಳಿದೆ. ರೊಬೆಸ್ಟಾ 4X4 ಆಫ್ ರೋಡ್ ರ‍್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವವರು 2023 ಜ.30 ರೊಳಗಾಗಿ www.robusta.co.in/events ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9901312776, 9448448399 ಸಂಪರ್ಕಿಸುವಂತೆ ಉದ್ದಪ್ಪಂಡ ತಿಮ್ಮಣ್ಣ ಕೋರಿದ್ದಾರೆ.

Read More

ಸೋಮವಾರಪೇಟೆ ಜ.21 : ರಾಷ್ಟ್ರೀಯ ಹಬ್ಬದ ಸಮಯದಲ್ಲಿ ರಾಷ್ಟ್ರಧ್ವಜದ ಪಾವಿತ್ರತೆ ಕಾಪಾಡಲು ಪ್ಲಾಸ್ಟಿಕ್ ಧ್ವಜ ಬಳಸುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಆಗ್ರಹಿಸಿದರು. ಸೋಮವಾರಪೇಟೆ ತಹಶೀಲ್ದಾರ್ ನರಗುಂದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಮಿತಿ ಸದಸ್ಯರು,  ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾವುಟಗಳನ್ನು ಬಳಸಿ, ತ್ಯಾಜ್ಯದ ರಾಶಿ, ಚರಂಡಿ ಸೇರಿದಂತೆ ಎಲ್ಲೆಂದರಲ್ಲಿ ಎಸೆಯುವುದರಿಂದ ಧ್ವಜಕ್ಕೆ ಅಪಮಾನವಾಗುತ್ತಿದೆ. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜ ತಯಾರಿಸಿ ಮಾರಾಟ ಮಾಡುವುದು ಮತ್ತು ಬಳಸುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಎಂದು  ಮನವಿಯಲ್ಲಿ ತಿಳಿಸಿದ್ದಾರೆ. ಸಮಿತಿಯ ಸದಸ್ಯರಾದ ಕೆ.ಎನ್. ತೇಜಸ್ವಿ, ರಾಜೇಶ್, ಶಂಕರ್, ಬಿ.ಎಂ. ಪ್ರದೀಪ್, ತಾಕೇರಿ ವೆಂಕಟೇಶ್, ಜಯಪ್ರಕಾಶ್ ಹಾಜರಿದ್ದರು.

Read More

ಸೋಮವಾರಪೇಟೆ ಜ.21 : ಗೌಡಳ್ಳಿಯಲ್ಲಿ ಫೆ.11 ರಂದು ನಡೆಯುವ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಚೇರಿಯನ್ನು ಗೌಡಳ್ಳಿಯ ಶ್ರೀ ನವದುರ್ಗಪರಮೇಶ್ವರಿ ದೇವಾಲಯದ ಆವರಣದಲ್ಲಿ ತೆರೆಯಲಾಯಿತು. ಕ.ಸಾ.ಪ.ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ಗೌಡಳ್ಳಿ ಗ್ರಾ.ಪಂ ಅಧ್ಯಕ್ಷ ಜಿ.ಜಿ.ಮಲ್ಲಿಕಾ, ಸಮ್ಮೇಳನದ ಹಣಕಾಸು ಸಮಿತಿ ಅಧ್ಯಕ್ಷ ಪಿ.ಕೆ.ರವಿ, ಕ.ಸಾ.ಪ ಕಾರ್ಯದರ್ಶಿ ಎ.ಪಿ.ವೀರರಾಜ್, ಪ್ರಮುಖರಾದ ಬಿ.ಬಿನಾಗರಾಜ್, ವೀರಭದ್ರಪ್ಪ, ಎಚ್.ಆರ್.ಮುತ್ತಣ್ಣ, ನವೀನ್ ಅಜ್ಜಳ್ಳಿ, ಸವಿನಾ ಮತ್ತಿತರರು ಇದ್ದರು.

Read More

ಸೋಮವಾರಪೇಟೆ ಜ.21 : ಸೋಮವಾರಪೇಟೆ ಪುಷ್ಪಗಿರಿ ಜೂನಿಯರ್ ಜೇಸಿ ವಿಭಾಗದಿಂದ ನೇರುಗಳಲೆ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಜೂನಿಯರ್ ಜೇಸಿ ಅಧ್ಯಕ್ಷೆ ರಿಶಾ ಮಾತನಾಡಿ, ಜೇಸಿ ಜೂನಿಯರ್ ವಿಭಾಗದಿಂದ ಈ ವರ್ಷ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಗುರಿ ಇದೆ. ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಎಂದರು. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಮಂಜುಳ ಅವರು ಮಕ್ಕಳ, ಕಿವಿ, ಮೂಗು, ಗಂಟಲಿನ ಆರೋಗ್ಯ ತಪಾಸಣೆ ಮಾಡಿದರು. ಜೇಸಿ ಸಂಸ್ಥೆಯ ಅಧ್ಯಕ್ಷೆ ಎಂ.ಎ.ರುಬಿನಾ, ಜೇಸಿ ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ, ಎಸ್‍ಡಿಎಂಸಿ ಅಧ್ಯಕ್ಷೆ ಪದ್ಮಾವತಿ, ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ ಇದ್ದರು.

Read More

ಸೋಮವಾರಪೇಟೆ ಜ.21 : ನೇರುಗಳಲೆ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಸಿ.ಕೃಷ್ಣೇಗೌಡ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಗ್ರಾ.ಪಂ, ಎಸ್‍ಡಿಎಮ್‍ಸಿ, ಶಿಕ್ಷಕರು ಮತ್ತು ವಿದ್ಯಾರ್ಥಿವೃಂದದ ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ನೇರುಗಳಲೆ ಗ್ರಾ.ಪಂ ಅಧ್ಯಕ್ಷೆ ಪುಷ್ಪ ಎಸ್‍ಡಿಎಮ್‍ಸಿ ಅಧ್ಯಕ್ಷೆ ಪದ್ಮಾವತಿ, ಪೋಷಕರ ಸಮಿತಿ ಅಧ್ಯಕ್ಷ ರಾಜಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ, ಗ್ರಾಪಂ ಮಾಜಿ ಅಧ್ಯಕ್ಷ ಲೋಕಾನಂದ ಮತ್ತಿತರರು ಇದ್ದರು.

Read More

ಸೋಮವಾರಪೇಟೆ,ಜ.20 : ಭಾರತೀಯ ಜನತಾ ಪಾರ್ಟಿಯ 6 ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆ ಹಾಗೂ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯು ಸೋಮವಾರಪೇಟೆ ಕೊಡವ ಸಮಾಜದಲ್ಲಿ ನಡೆಯಿತು. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಸದ್ಯದಲ್ಲಿಯೇ ರಾಜ್ಯ ವಿಧಾನ ಸಭಾ ಚುನಾವಣೆ ಎದುರಾಗಲಿದ್ದು, ಯಾರೇ ಅಭ್ಯರ್ಥಿಯಾದರೂ ಬಿಜೆಪಿಯ ಗೆಲುವಿಗೆ ಕಾರ್ಯಕರ್ತರು ಶ್ರಮವಹಿಸಬೇಕು ಎಂದರು. ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕಾರ್ಯ ಆಗಬೇಕು. ಚುನಾವಣೆಯಲ್ಲಿ ಈ ಬಾರಿಯೂ ಬಿಜೆಪಿ ಗೆಲ್ಲಲಿದೆ ಎಂದರು. ಜಿ.ಪಂ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶವು ಬಲಿಷ್ಠವಾಗುತ್ತಿದೆ. ರಾಜ್ಯ ಸರ್ಕಾರದಿಂದ ಅನೇಕ ಜನಪರ ಕಾರ್ಯಕ್ರಮಗಳು ಜನರ ಮನ ಗೆದ್ದಿವೆ. ಬಿಜೆಪಿಯು ಬೂತ್ ಮಟ್ಟದಲ್ಲಿ ಬಲಿಷ್ಠವಾಗಿದೆ ಎಂದರು. ಸಭೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಪಕ್ಷದ ಮುಖಂಡರಾದ…

Read More

ಮಡಿಕೇರಿ ಜ.20 : ಕೊಡಗಿನ ಎರಡು ಪುಣ್ಯ ಕ್ಷೇತ್ರಗಳಾದ ತಲಕಾವೇರಿ ಹಾಗೂ ಎಮ್ಮೆಮಾಡುಗೆ ಸಂಪರ್ಕ ಕಲ್ಪಿಸುವ ಮೂರ್ನಾಡು- ನಾಪೋಕ್ಲು ರಸ್ತೆಯನ್ನು ಸಂಪೂರ್ಣ ಡಾಂಬರೀಕರಣಗೊಳಿಸದಿದ್ದಲ್ಲಿ ಯುವ ಜಾತ್ಯತೀತ ಜನತಾದಳದ ವತಿಯಿಂದ ಗ್ರಾಮಸ್ಥರ ಸಹಕಾರದೊಂದಿಗೆ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಯುವ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಜಿ.ಜಾಶಿರ್ ಎಚ್ಚರಿಕೆ ನೀಡಿದ್ದಾರೆ. ಕಳೆದ 11 ವರ್ಷಗಳಿಂದ ಸಂಪೂರ್ಣವಾಗಿ ಹದಗೆಟ್ಟಿದ್ದ ರಸ್ತೆಯ ದುರಸ್ತಿಗೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಡಿ.22 ರಂದು ರಸ್ತೆ ತಡೆ ಪ್ರತಿಭಟನೆ ನಡೆಸಲಾಗಿತ್ತು. ಆ ಸಂದರ್ಭ ಸ್ಥಳಕ್ಕೆ ಆಗಮಿಸಿದ ಅಭಿಯಂತರರು 15 ದಿನಗಳಲ್ಲಿ ರಸ್ತೆ ದುರಸ್ತಿಪಡಿಸುವ ಭರವಸೆ ನೀಡಿದ್ದರು. ಇದೀಗ ರಸ್ತೆ ದುರಸ್ತಿ ಕಾರ್ಯ ಕಾಟಾಚಾರಕ್ಕಷ್ಟೇ ನಡೆಯುತ್ತಿದ್ದು, ಸಂಪೂರ್ಣ ರಸ್ತೆಯನ್ನು ಡಾಂಬರೀಕರಣಗೊಳಿಸದೆ ನಿರ್ಲಕ್ಷಿಸಲಾಗಿದೆ. ಕೆಲವು ಗುಂಡಿಗಳನ್ನಷ್ಟೇ ಮುಚ್ಚುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಸುಮಾರು 2 ವರ್ಷಗಳ ಹಿಂದೆ ಈ ರಸ್ತೆಯ ದುರಸ್ತಿಗಾಗಿ ಟೆಂಡರ್ ಪ್ರಕ್ರಿಯೆ ನಡೆದು ವಿರಾಜಪೇಟೆಯ ಗುತ್ತಿಗೆದಾರರೊಬ್ಬರು ಗುತ್ತಿಗೆ ಪಡೆದಿದ್ದರು. ಆದರೆ…

Read More

ಮಡಿಕೇರಿ ಜ.20 : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಾಲ್ಕನೇ ಹಂತದಡಿ ನಗರದ ಭಗವತಿ ದೇವಾಲಯದ ಬಳಿಯಿಂದ ಗಾಳಿಬೀಡು ಜಂಕ್ಷನ್‍ವರೆಗೆ ರಸ್ತೆ ನಿರ್ಮಾಣಕ್ಕೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಡಿಕೇರಿ ನಗರದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿಗೆ 13 ಕೋಟಿ ರೂ. ವೆಚ್ಚದ ಟೆಂಡರ್ ಅನುಮೋದನೆ ಆಗಿದ್ದು, ಆ ನಿಟ್ಟಿನಲ್ಲಿ 2.43 ಕೋಟಿ ರೂ. ವೆಚ್ಚದ ವಿವಿಧ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. ಮಡಿಕೇರಿ ನಗರದಲ್ಲಿನ ಹಲವು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ಮುಂದಿನ ಶುಕ್ರವಾರ (ಜ.27) ಏರ್ಪಡಿಸಲಾಗಿದೆ. ಆ ನಿಟ್ಟಿನಲ್ಲಿ ನಗರದ ಹಲವು ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಲ್ಲಿ ಕ್ರಮವಹಿಸಲಾಗಿದೆ ಎಂದರು. ಮಡಿಕೇರಿ ನಗರಸಭೆಯು ತೆರಿಗೆ ಸಂಗ್ರಹದಲ್ಲಿ ಶೇಕಡಾವಾರು ಪ್ರಗತಿ ಸಾಧಿಸಿದೆ. ನಗರಸಭೆಯಿಂದ ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಗತ್ಯ ಕೆಲಸಗಳು ನಡೆದಿವೆ. ನಗರದ ಎಲ್ಲಾ ರಸ್ತೆಗಳನ್ನು ಗುಂಡಿ ಮುಚ್ಚುವ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯಲಿವೆ ಎಂದು ಶಾಸಕರು ಹೇಳಿದರು.…

Read More

ಕುಶಾಲನಗರ ಜ.20 : ಕುಶಾಲನಗರ ಸಂಚಾರಿ ಪೊಲೀಸ್‍ಠಾಣಾ ಆಶ್ರಯದಲ್ಲಿ ಶಾಲಾ ಕಾಲೇಜು ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕುಶಾಲನಗರ ಬೈಚನಹಳ್ಳಿ ಬಳಿಯಿಂದ ಆರಂಭಗೊಂಡ ವಿದ್ಯಾರ್ಥಿಗಳ ಜಾಥಾ ಕಾರ್ಯಕ್ರಮಕ್ಕೆ ತಾಲೂಕು ತಹಶೀಲ್ದಾರ್ ಟಿ.ಎಂ ಪ್ರಕಾಶ್, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಸತೀಶ್ ಚಾಲನೆ ನೀಡಿದರು. ಪಟ್ಟಣದ ಮುಖ್ಯ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಮೆರವಣಿಗೆ ತೆರಳಿ ನಾಗರೀಕರಿಗೆ ಸಂಚಾರ ವ್ಯವಸ್ಥೆ ಬಗ್ಗೆ ಅರಿವು ಜಾಗೃತಿ ಮೂಡಿಸುವ ಘೋಷಣೆ ಕೂಗಿದರು. ಈ ಸಂದರ್ಭ ಕುಶಾಲನಗರ ಡಿವೈಎಸ್‍ಪಿ ಗಂಗಾಧರಪ್ಪ, ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ಸಂಚಾರಿಠಾಣೆ ಅಧಿಕಾರಿಗಳಾದ ಹೆಚ್.ಜೆಚಂದ್ರಪ್ಪ, ಹೆಚ್.ಟಿಗೀತಾ ಮತ್ತು ಸಿಬ್ಬಂದಿಗಳು ಇದ್ದರು.

Read More

ಕುಶಾಲನಗರ ಜ.20 : ಕುಶಾಲನಗರದಲ್ಲಿ ಜ.21 ರಿಂದ 4 ದಿನಗಳ ಕಾಲ ನಡೆಯಲಿರುವ ಸಹರ ಕ್ರಿಕೆಟ್ ಕ್ಲಬ್‍ನ 2ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ ಕಾರ್ಯಕ್ರಮ ನಡೆಯಿತು. ಐಶ್ವರ್ಯ ಪದವಿ ಪೂರ್ವಕಾಲೇಜಿನ ಸಂಸ್ಥಾಪಕ ಪುಲಿಯಂಡರಾವ್ ದೇವಯ್ಯ ಟ್ರೋಫಿ ಅನಾವರಣಗೊಳಿಸಿ ಪಂದ್ಯಾವಳಿಗೆ ಶುಭಕೋರಿದರು. ಈ ಸಂದರ್ಭ ಕ್ರಿಕೆಟ್‍ಕ್ಲಬ್ ನ ಹೆಚ್.ಕೆ.ಸುಮೇರ್, ಉಪಾಧ್ಯಕ್ಷ ಅನ್ವರ್, ಕಾರ್ಯದರ್ಶಿ ಚಂದು, ಸಹಕಾರ್ಯದರ್ಶಿ ಅರಿಫ್, ಆಶಿಕ್, ಯೂನೋಸ್ ರಫೀಕ್ ಮತ್ತಿತರರು ಇದ್ದರು.

Read More