ಕುಶಾಲನಗರ ಜ.20 : ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಒಂಭತ್ತು ಸರ್ಕಾರಿ ಶಾಲೆಗಳ ಮಕ್ಕಳಿಗೆ ಕಲಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಆಚರಿಸುತ್ತಿರುವ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿಸುರೇಶ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 15 ಕ್ಲಸ್ಟರ್‍ಗಳಿದ್ದು, ಎಲ್ಲೆಡೆ ಕಲಿಕಾ ಹಬ್ಬಾಚರಣೆ ನಡೆಯುತ್ತಿದೆ. ಮಕ್ಕಳ ಆಂತರಿಕ ಪ್ರಜ್ಞೆ ಹಾಗೂ ಅಂತಸ್ಸತ್ವವನ್ನು ಬೆಳೆಸುವಂತಹ ಕಾರ್ಯಕ್ರಮವಿದು. ಮಕ್ಕಳಲ್ಲಿ ಇರುವ ಅದ್ಭುತ ಶಕ್ತಿಯನ್ನು ಉದ್ದೀಪನಗೊಳಿಸುವ ಮೂಲಕ ಮುಂದಿನ ಸಮಾಜದ ರೂವಾರಿಗಳಾಗಿಸುವುದು ನೂತನ ಶಿಕ್ಷಣ ನೀತಿಯ ಭಾಗವಾಗಿದೆ ಎಂದು ಸುರೇಶ್ ಹೇಳಿದರು. ಕೆ.ಎಸ್.ಮೂರ್ತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ, ಕುಶಾಲನಗರ ಪುರಸಭೆ ಉಪಾಧ್ಯಕ್ಷೆ ಸುರಯ್ಯಾ ಭಾನು, ಶಿಕ್ಷಣ ಸಂಯೋಜಕರಾದ ರಾಧಾಕೃಷ್ಣ, ಕ್ಷೇತ್ರ ಸಂಪನ್ಮೂಲ ಶಿಕ್ಷಕ ಲೋಕೇಶ್, ಸಂತೋμï, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ರಾಣಿ, ಮೌಲಾನ ಶಾಲೆಯ ಮುಖ್ಯ ಶಿಕ್ಷಕಿ ಶ್ವೇತಾ, ಕುಶಾಲನಗರದ ಸರ್ಕಾರಿಸಂಯುಕ್ತ ಪ್ರೌಢಶಾಲೆ ಉಪಪ್ರಾಂಶುಪಾಲ ಪರಮೇಶ್ವರಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸಮೀರಾ, ದಾನಿಗಳಾದ ಸೂದನ…
ಲೇಖಕ: admin
ಮಡಿಕೇರಿ ಜ.20 : ತಂದೆ ತಾಯಿಯರ ಯೋಗಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕ್ರೆ ಆಸ್ತಿಯನ್ನು ಹೊಂದಿದ್ದರು. ಅವರಿಂದ ಅವರ ಎರಡನೇ ಮಗಳಾದ ಜಯಲಕ್ಷಿ ಬಿ.ಎಸ್ ದಾನಪತ್ರದ ಮೂಲಕ ತಮ್ಮ ಹೆಸರಿಗೆ ಖಾತೆಯನ್ನು ಮಾಡಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಪೋಷಕರ ಯೋಗಕ್ಷೇಮ ನೋಡಿಕೊಳ್ಳದೆ ನಿರ್ಲಕ್ಷಿಸಿದರು. ಇದರಿಂದ ನೊಂದ ಪೋಷಕರು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಿ ದಾನಪತ್ರ ರದ್ದುಗೊಳಿಸಿ ಆಸ್ತಿಯನ್ನು ವಾಪಸ್ಸು ಕೊಡಿಸುವಂತೆ ಮನವಿ ಮಾಡಿದ್ದರು. ಆ ನಿಟ್ಟಿನಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಅರ್ಜಿಯನ್ನು ಉಪ ವಿಭಾಗಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ಉಪವಿಭಾಗಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ 2007ರ…
ಮಡಿಕೇರಿ ಜ.20 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ‘ಸಾಮಾಜಿಕ ಅರಿವು’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ‘ನಗಾರಿ’ ಬಾರಿಸುವ ಮೂಲಕ ಚಾಲನೆ ನೀಡಿದರು. ನಗರದ ಜೂನಿಯರ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸರ್ಕಾರ ಪ್ರಸಕ್ತ ಬಜೆಟ್‍ನಲ್ಲಿ ಘೋಷಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಸಾಮಾಜಿಕ ಅರಿವು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಮಾಡಿದೆ ಎಂದು ಅವರು ತಿಳಿಸಿದರು. ಸಮಾಜದಲ್ಲಿ ಕಟ್ಟಕಡೆಯ ಜನರು ಸಹ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು. ಸಮಾಜದಲ್ಲಿ ಎಲ್ಲರೂ ಸಮಾನವಾಗಿ ಬದುಕಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಇದುವರೆಗೆ 140 ಕೋಟಿ ರೂ.ಗೂ ಹೆಚ್ಚು ಬೆಳೆ ಪರಿಹಾರ ವಿತರಿಸಲಾಗಿದ್ದು, ಆ ನಿಟ್ಟಿನಲ್ಲಿ ಬೆಳಕು ಚೆಲ್ಲುವಂತಾಗಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಅವರು ಮಾತನಾಡಿ ಸರ್ಕಾರದ…
ಮಡಿಕೇರಿ ಜ.20 : ಆಧುನಿಕ ಮೊಬೈಲ್ ಯುಗದಲ್ಲಿ ಮೊಬೈಲ್, ಟಿವಿ ಜೊತೆಗೆ ಪ್ರಾಚೀನ ಜಾನಪದ ಮತ್ತು ಬುಡಕಟ್ಟು ಕಲೆ ಹಾಗೂ ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಕರೆ ನೀಡಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಐನ್‍ಮನೆ ಕೆಫೆ ಸಹಕಾರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾನಪದ/ ಬುಡಕಟ್ಟು ನೃತ್ಯ ಸ್ಪರ್ಧಾ ಕಾರ್ಯಕ್ರಮಕ್ಕೆ ‘ದುಡಿ’ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸ್ತುತ ದಿನದಲ್ಲಿ ಮೊಬೈಲ್ ಇಲ್ಲದೆ ಬದುಕುವುದು ಕಷ್ಟಸಾಧ್ಯ ಎಂಬಂತಾಗಿದೆ. ಆದರೂ ಎಷ್ಟು ಬೇಕು ಅಷ್ಟನ್ನು ಬಳಸಿಕೊಂಡು, ಹಿಂದಿನ ಕಲೆ, ಜಾನಪದ ಸಂಸ್ಕೃತಿಗೂ ಒತ್ತು ನೀಡುವಂತಾಗಬೇಕು ಎಂದು ಶಾಸಕರು ಹೇಳಿದರು. ಇತ್ತೀಚಿನ ದಿನಗಳಲ್ಲಿ ಅಂಕಿ ಅಂಶಗಳನ್ನು ಕ್ಯಾಲಿಕ್ಯೂಲೇಟರ್ ಬಳಸಿ ಉತ್ತರಿಸುತ್ತೇವೆ. ಆದರೆ ಹಿಂದೆ ಮಗ್ಗಿ/ ಕೈ ಬೆರಳಿನ ಮೂಲಕ ಅಂಕಿ ಅಂಶಗಳ ಮಾಹಿತಿಯನ್ನು ನೀಡುತ್ತಿದ್ದರು ಎಂದರು. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬದುಕುವಂತಾಗಬೇಕು. ವಿದ್ಯೆ…
ಮಡಿಕೇರಿ ಜ.20 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಪೊನ್ನಂಪೇಟೆ ಹಾಕಿ ಟರ್ಫ್‍ನಲ್ಲಿ ಖೇಲೋ ಇಂಡಿಯಾ ತರಬೇತಿಗೆ ಜನವರಿ, 25 ರಂದು ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆಯ ಹಾಕಿ ಟರ್ಫ್‍ನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆದ್ದರಿಂದ ಆಸಕ್ತಿ ಇರುವ ಕ್ರಿಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-229985 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.20 : ಸಾಂಬಾರ ಮಂಡಳಿ ವತಿಯಿಂದ ಜ.24 ರಂದು ಬೆಳಗ್ಗೆ 10.30 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಹೋಟೆಲ್ ಕ್ರಿಸ್ಟಲ್ ಕೋರ್ಟ್‍ನಲ್ಲಿ ಖರೀದಿದಾರರು ಮತ್ತು ಮಾರಾಟಗಾರರ ಜತೆ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಸಾಂಬಾರ ಮಂಡಳಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜ.20 : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯನ್ನು ಸರ್ಕಾರದ ಆದೇಶದಂತೆ 2023 ರ ಜನವರಿ, 13 ರ ಪ್ರಕಾರ ಅನುಷ್ಠಾನಗೊಳಿಸುತ್ತಿದ್ದು, ಪ್ರವರ್ಗ-1 ರಡಿಯಲ್ಲಿ ಬರುವ ಉಪ್ಪಾರ ಮತ್ತು ಇದರ ಉಪಜಾತಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಜನವರಿ, 17 ರಿಂದ ಮಾರ್ಚ್, 02 ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಉಪ್ಪಾರ ಮತ್ತು ಇದರ ಉಪಜಾತಿಯ ಸಮಾಜದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು. ಘಟಕ ವೆಚ್ಚವು 2.50 ಲಕ್ಷ ರೂ.ಗಳಾಗಿದೆ. ಇದರಲ್ಲಿ ರೂ.2 ಲಕ್ಷಗಳ ಸಹಾಯಧನ ಮತ್ತು ಹೆಚ್ಚುವರಿಯಾಗಿ ಅಗತ್ಯವಿದ್ದಲ್ಲಿ ರೂ.50 ಸಾವಿರಗಳ ಸಾಲವನ್ನು ವಾರ್ಷಿಕ ಶೇ.4 ರ ಬಡ್ಡಿ ದರದಲ್ಲಿ 3 ವರ್ಷಗಳ ಮರುಪಾವತಿ…
ಮಡಿಕೇರಿ ಜ.20 : ರಾಷ್ಟ್ರೀಯ ಮತದಾರರ ದಿನ ಪ್ರಯುಕ್ತ ಜ.25 ರಂದು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ಜಿಲ್ಲಾಡಳಿತ ವತಿಯಿಂದ ಕಾರ್ಯಕ್ರಮ ನಡೆಯಲಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಎಲ್ಲಾ ಶಾಲಾ-ಕಾಲೇಜು ಮುಖ್ಯಸ್ಥರು ತಮ್ಮ ಕಚೇರಿಯಲ್ಲಿ, ಶಾಲಾ-ಕಾಲೇಜುಗಳಲ್ಲಿ ಜನವರಿ, 25 ರಂದು ಬೆಳಗ್ಗೆ 11.30 ಗಂಟೆಗೆ ಭಾರತ ಚುನಾವಣಾ ಆಯೋಗ ಸಿದ್ದಪಡಿಸಿರುವ ವೋಟರ್ ಪ್ಲೆಡ್ಜ್‍ನೊಂದಿಗೆ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ಏರ್ಪಡಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.20 : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಸೋಮವಾರಪೇಟೆ ತಾಲ್ಲೂಕಿನ ಕೂಡ್ಲೂರು ಗ್ರಾಮದ ಗೋಪಾಲ ಅವರಿಗೆ ಉದ್ಯಮಶೀಲತಾ ಯೋಜನೆಯಡಿ ನಿಗಮದಿಂದ 3.50 ಲಕ್ಷ ರೂ.ಸಹಾಯಧನದಡಿ ಪಿಕ್ ಅಪ್ ವಾಹನವನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ವಾಹನದ ಕೀ ನೀಡುವ ಮೂಲಕ ಹಸ್ತಾಂತರಿಸಿದರು. ನಿಗಮದ ವ್ಯವಸ್ಥಾಪಕರಾದ ಎನ್.ಬಿ.ಚಂದ್ರಶೇಖರ್, ಬಸವನಹಳ್ಳಿ ಲ್ಯಾಂಪ್ ಸಹಕಾರ ಸಂಘದ ಅಧ್ಯಕ್ಷರಾದ ಆರ್.ಕೆ.ಚಂದ್ರು, ಇತರರು ಇದ್ದರು.
ಮಡಿಕೇರಿ ಜ.20 : ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ತೋಟವನ್ನಾಗಿ ಪರಿವರ್ತಿಸಿರುವ ಪ್ರಕರಣಗಳಲ್ಲಿ, ಗುತ್ತಿಗೆ ಆಧಾರದಲ್ಲಿ 30 ವರ್ಷಗಳ ಅವಧಿಗೆ ಜಾಗ ನೀಡುವ ಕುರಿತು ಸರ್ಕಾರ ಹೊರಡಿಸಿರುವ ಆದೇಶದಂತೆ ಕ್ರಮ ಕೈಗೊಳ್ಳಬೇಕೆ ಹೊರತು ಬಡಕೃಷಿಕರನ್ನು ತೆರವುಗೊಳಿಸಬಾರದೆಂದು ಕರ್ನಾಟಕ ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲ್ಲೂಕು ಶಾಖೆಯ ಸಂಚಾಲಕ ಗರಗಂದೂರು ಲಕ್ಷ್ಮಣ್ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಣ್ಣ ಬೆಳೆಗಾರರು ಅತಿಕ್ರಮಿಸಿ ತೋಟವನ್ನಾಗಿ ಪರಿವರ್ತಿಸಿರುವ ಸರ್ಕಾರಿ ಜಾಗವನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಒತ್ತುವರಿ ಜಾಗದ ಕೃಷಿಯನ್ನು ನಾಶ ಪಡಿಸುವುದು ಸರಿಯಾದ ಕ್ರಮವಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಫಿ ತೋಟಗಳಲ್ಲಿ ಸಾಕಷ್ಟು ಮರಗಿಡಗಳನ್ನು ಬೆಳೆಸುವುದರಿಂದ ಅದು ಪರಿಸರ ಸಂರಕ್ಷಣೆಗೂ ಪೂರಕವಾಗಿದೆ. ಸರ್ಕಾರಿ ಪೈಸಾರಿ ಜಾಗದಲ್ಲಿರುವ ಕಾಫಿ ತೋಟಗಳನ್ನು ತೆರವುಗೊಳಿಸುವ ಭಾಗವಾಗಿ ಅಲ್ಲಿನ ಗಿಡಗಳನ್ನು ಕಡಿದು ಹಾಕುವುದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಷ್ಟ್ರಕ್ಕೆ ದೊಡ್ಡ ಮಟ್ಟದ ವಿದೇಶಿ ವಿನಿಮಯ ಗಳಿಸಿಕೊಡುವ ಕಾಫಿ ಉತ್ಪಾದನೆಯ ಮೇಲೂ…






