ಮಡಿಕೇರಿ ಜ.19 : ತಲಕಾವೇರಿ ದೇವಾಲಯದ ಮೂಲ ಅರ್ಚಕ ಗೋಪಾಲಕೃಷ್ಣ ಆಚಾರ್ಯ(82) ವಿಧಿವಶವಾಗಿದ್ದಾರೆ. ಗೋಪಾಲಕೃಷ್ಣ ಆಚಾರ್ಯ ಅವರು 1995 ರಲ್ಲಿ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಡೆಪ್ಯುಟಿ ತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು. ಇವರು ವಂಶ ಪಾರಂಪರ್ಯವಾಗಿ ತಲಕಾವೇರಿ ದೇವಾಲಯದಲ್ಲಿ ಮೂಲ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿ, ಕೊಡುಗೈದಾನಿಯಾಗಿದ್ದರು. ಮೃತರು ಪತ್ನಿ ಪದ್ಮಾವತಿ, ಪುತ್ರ ಪುತ್ತೂರು ಶಾಖೆಯ ಟಾಟಾ ಅರವಿಂದ ಮೋಟರ್ಸ್ ಕಂಪೆನಿಯ ಸರ್ವಿಸ್ ಮೆನೇಜರ್ ಕೃಷ್ಣ ಪ್ರಸಾದ್ ಆಚಾರ್ಯ, ವಿಟ್ಲ ಗ್ರಾಮೀಣ ಬ್ಯಾಂಕ್ ಪುತ್ತೂರು ಶಾಖೆಯ ವ್ಯವಸ್ಥಾಪಾಕಿ ಸವಿತಾ ನಾಗರಾಜ್, ಸಹಿತ ನಾಲ್ವರು ಪುತ್ರಿಯನ್ನು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯ ವ್ಯಕ್ತಿಗಳು ಆಗಮಿಸಿ ಸಂತಾಪ ಸೂಚಿಸಿದರು.
ಲೇಖಕ: admin
ಯಾದಗಿರಿ ಜ.19 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಿದರು. ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್-ಚೆನ್ನೈಎಕ್ಸ್ಪ್ರೆಸ್ -ವೇ,ಪ್ಯಾಕೇಜ್ -3 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ರಾಜ್ಯಪಾಲ ಡಾ. ತಾವರಚಂದ್ ಗೆಹ್ಲೋಟ್ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ , ಕೇಂದ್ರದ ರಾಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖುಬಾ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ನರಸಿಂಹ ಗೌಡ, ರಾಯಚೂರು ಸಂಸದ ಅಮರೇಶಗೌಡ ನಾಯಕ ಮುಂತಾದವರು ಇದ್ದರು.
ಮಡಿಕೇರಿ ಜ.19 : ಮೇಯಲು ಬಿಟ್ಟಿದ್ದ ಹಸುವೊಂದು ಹುಲಿದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುದಿಯತಂಡ ಮೊಣ್ಣಯ್ಯ ಅವರಿಗೆ ಸೇರಿದ ಸಿಂಧಿ ತಳಿಯ ಹಸುವನ್ನು ಎಂದಿನಂತೆ ಗದ್ದೆಯಲ್ಲಿ ಮೇಯಲು ಬಿಟ್ಟಿದ್ದರು. ಆದರೆ, ಹಸು ಸಂಜೆಯಾದರು ಕೊಟ್ಟಿಗೆಗೆ ಹಿಂದಿರುಗಿರಲಿಲ್ಲ. ಮರುದಿನ ಹಸುವಿಗಾಗಿ ಹುಡುಕಾಟ ನಡೆಸಿದಾಗ, ಹಸುವನ್ನು ಕಟ್ಟಿದ ಜಾಗದಿಂದ ಸುಮಾರು 300 ಮೀಟರ್ ದೂರದಲ್ಲಿ ಹಸುವಿನ ಕಳೆಬರ ಪತ್ತೆಯಾಗಿದೆ. ಹುಲಿಯನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಡಿಕೇರಿ ಜ.19 : ವಜ್ರಕಾಯ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಕೊಡಗು ಮೂಲದ ನಟಿ ಶುಭ್ರ ಅಯ್ಯಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ಕೊಡಗಿನಲ್ಲಿ ಸಪ್ತಪದಿ ತುಳಿದಿದ್ದಾರೆ. 2014ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದ ಶುಭ್ರ ಅಯ್ಯಪ್ಪ ಕಳೆದ ವರ್ಷ ತೆರೆಗೆ ಬಂದ ‘ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ’ ಚಿತ್ರದಲ್ಲಿ ನಟಿಸಿದ್ದರು. ಸದ್ಯ ಶುಭ್ರಾ ಅವರು ‘ರಾಮನ ಅವತಾರ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದಾರೆ.
ಮಡಿಕೇರಿ ಜ.19 : ಕಡಂಗ ಕೊಕ್ಕಂಡಬಾಣೆ ದರ್ಗಾದಲ್ಲಿ ವಾರ್ಷಿಕವಾಗಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಜ.20 ರಂದು ನಡೆಯಲಿದೆ. ಅಂದು ಮಧ್ಯಾಹ್ನ ಜುಮ ನಮಾಜ್ ಬಳಿಕ ಸಲಿಮ್ ಫೈಜಿ ಉಸ್ತದರ ಮತ್ತು ಆಡಳಿತ ಮಂಡಳಿಯ ಸಮ್ಮುಖದಲ್ಲಿ ಉದ್ಘಾಟನೆಗೊಳ್ಳಲಿದ್ದು, ರಾತ್ರಿ 8 ಗಂಟೆಗೆ ಸೈಯದ್ ಸಫ್ವಾನ್ ಪ್ರಾರ್ಥನೆಯ ಮುಖಾಂತರ 4 ದಿನಗಳ ಮತ ಪ್ರವಚನ ಕಾರ್ಯ ಕ್ಕೆ ಉರೂಸ್‍ಗೆ ಚಾಲನೆ ದೊರೆಯಲಿದೆ. ಐದು ದಿನಗಳಲ್ಲಿ ನಡೆಯುವ ಉರುಸ್ ಕಾರ್ಯಕ್ರಮದಲ್ಲಿ ಸೋಮವಾರ ಮತ್ತು ಮಂಗಳವಾರ ಸಂಜೆ ನಾಲ್ಕು ಗಂಟೆಗೆ ಸಾರ್ವಜನಿಕವಾಗಿ ಅನ್ನದಾನ ನಡೆಯಲಿದೆ. ವರದಿ : ನೌಫಲ್ ಕಡಂಗ
ಮಡಿಕೇರಿ ಜ.19 : ತನ್ನ ಕಿರಿಯ ವಯಸ್ಸಿನಲ್ಲಿ ಸಾಧನೆಯ ಹಾದಿ ಹಿಡಿದಿರುವ ಪುಟಾಣಿ ದೀಕ್ಷಾ ಹಲವಾರು ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾಳೆ. ಈಕೆ ಕೂರ್ಗ್ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್ ಶಿಪ್‍ನ ನೃತ್ಯ ಸ್ಪರ್ಧೆಯಲ್ಲಿ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಪ್ರಥಮ ಬಹುಮಾನ, ಗೋಣಿಕೊಪ್ಪಲಿನ ಶ್ರೀ ಕಾವೇರಿ ದಸರಾ ಸಮಿತಿ ಆಯೋಜಿಸಿದ ಛದ್ಮವೇಶ ಸ್ಪರ್ಧೆಯಲ್ಲಿ ತೃತೀಯ ಹಾಗೂ ಕೊಡಗು ಜಿಲ್ಲಾ ಘಟಕ ಆಯೋಜಿಸಿದ ಸಮರ್ಥ ಕನ್ನಡಿಗರು ಕನ್ನಡ ಹಬ್ಬದ ಛದ್ಮವೇಶ ಸ್ಪರ್ಧೆಯಲ್ಲಿ ಪ್ರಥಮ, ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಬೆಳ್ಳಿ ಮಹೋತ್ಸವದ ಅಂಗವಾಗಿ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ತನ್ನದಾಗಿಸಿಕೊಂಡಿರುವ ದೀಕ್ಷಾ, ಮುಳಿಯ ಜ್ಯುವೆಲರ್ಸ್ ಅವರು ಏರ್ಪಡಿಸಿದ ಛದ್ಮವೇಶ ಸ್ಪರ್ಧೆಯಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾಳೆ. ಸೂಪರ್ ಕಿಡ್ಸ್ ಚಾನೆಲ್ – ವಾವ್ ಸಿನಿಮಾ ಚಾನೆಲ್ ಆಯೋಜಿಸಿದ ವಾವ್ ಕೊಡಗು ಟ್ಯಾಲೆಂಟ್ಸ್ ಚಾಂಪಿಯನ್ ಶಿಪ್‍ನಲ್ಲಿ ಕೊಡಗು ಟ್ಯಾಲೆಂಟ್ ಅವಾರ್ಡ್ ಪಡೆದಿರುತ್ತಾಳೆ. ಅಲ್ಲದೆ ಹಲವಾರು ವೇದಿಕೆಯಲ್ಲಿ ತನ್ನ ಪ್ರತಿಭೆಯನ್ನು ಹೊರಹೊಮ್ಮಿದ್ದಾಳೆ. ಈಕೆ ಬಿಟ್ಟಂಗಾಲದ ನಿವಾಸಿಗಳಾದ ಕೆ.ಎ.ನವೀನ್ ಕುಮಾರ್- ಎ.ಎಸ್.ನಿತ್ಯ…
ಮಡಿಕೇರಿ ಜ.19 : ಮಡಿಕೇರಿ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅನಾವರಣಗೊಳಿಸಿದರು. ನಗರದ ಶಾಸಕರ ಕಚೇರಿಯಲ್ಲಿ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೆಕಲ್ ನವೀನ್, ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ತಾಲ್ಲೂಕು ಗೌರವ ಕಾರ್ಯದರ್ಶಿ ಕಡ್ಲೆರ ತುಳಸಿ ಮೋಹನ್, ನಿರ್ದೇಶಕಿ ಪ್ರೇಮ ರಾಘವಯ್ಯ ಮತ್ತಿತರರು ಉಪಸ್ಥಿತರಿದ್ದರು. ಬೆಟ್ಟಗೇರಿಯ ಉದಯ ಪ್ರೌಢಶಾಲೆಯ ಸಭಾಂಗಣದಲ್ಲಿ ಜ.28 ರಂದು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಮಡಿಕೇರಿ ಜ.19 : ಭಾರತೀಯ ಜನತಾ ಪಾರ್ಟಿ ಹಾಗೂ ಗ್ರಾಮಾಂತರ ವೃತ್ತಿಪರ ಪ್ರಕೋಷ್ಠದ ವತಿಯಿಂದ ಜ.22 ರಂದು ಮರಗೋಡಿನಲ್ಲಿ ಉಚಿತ ವೈದ್ಯಕೀಯ, ಶಸ್ತ್ರಚಿಕಿತ್ಸಾ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಪ್ರಕೋಷ್ಠದ ಜಿಲ್ಲಾ ಸಂಚಾಲಕ ಮೋಹನ್ ಅಪ್ಪಾಜಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಬೆಳಗ್ಗೆ 10.30 ಗಂಟೆಗೆ ಶಿಬಿರಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಶಿಬಿರದಲ್ಲಿ ಉಚಿತ ವೈದ್ಯಕೀಯ ದಂತ ತಜ್ಞರಿಂದ ಸಲಹೆ ಮತ್ತು ಚಿಕಿತ್ಸೆ ಹಾಗೂ ಸಮಾಲೋಚನೆ, ದಂತ ಆರೋಗ್ಯ ತಪಾಸಣೆ, ಶಸ್ತ್ರ ಚಿಕಿತ್ಸೆ, ಶ್ರವಣ ತಪಾಸಣಾ ಶಿಬಿರ, ಸಾಮಾನ್ಯ ವೈದ್ಯಕೀಯ ಚಿಕಿತ್ಸೆ, ಮೂತ್ರ ಶಾಸ್ತ್ರಜ್ಞರು ಹಾಗೂ ಸ್ತ್ರೀ ರೋಗ ತಜ್ಞರಿಂದ ಸಮಾಲೋಚನೆ, ಗಂಡು ಮತ್ತು ಹೆಣ್ಣು ಬಂಜೆತನ ಸಲಹೆಗಳು, ಫಲಾನುಭವಿಗಳಿಗೆ ಉಚಿತ ಲ್ಯಾಬ್ ಹಾಗೂ ಶಸ್ತ್ರ ಚಿಕಿತ್ಸೆಗಳು, ಮೂಲ ಔಷಧಿಗಳು, ರೋಗ ನಿರೋಧಕ ಪಾನೀಯ ನೀಡಲಾಗುವುದು…
ಮಡಿಕೇರಿ ಜ.19 : ಸುಳ್ಯದ ಶ್ರೀ ವೆಂಕಟರಮಣ ಕ್ರ್ರೆಡಿಟ್ ಕೊ-ಆಪರೇಟಿವ್ ಸೊಸೈಟಿಯ ಎರಡು ನೂತನ ಶಾಖೆಗಳನ್ನು ನಾಪೋಕ್ಲು ಮತ್ತು ಸೋಮವಾರಪೇಟೆಯಲ್ಲಿ ಆರಂಭಿಸಲಾಗುತ್ತಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಪಿ.ಸಿ. ಜಯರಾಮ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನ ಪೊನ್ನಮ್ಮ ಕಾವೇರಪ್ಪ ಕಾಂಪ್ಲೆಕ್ಸ್‍ನಲ್ಲಿ 18ನೇ ಶಾಖೆಯ ಉದ್ಘಾಟನೆ ಜ.23 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಶಾಖೆಯ ಕಛೇರಿಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಭದ್ರತಾ ಕೊಠಡಿಯನ್ನು ಮಡಿಕೇರಿಯ ಪ್ರಾಥಮಿಕ ಕೃಷಿ ಪತ್ತಿನ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಎ.ಕೆ.ಮನು ಮುತ್ತಪ್ಪ, ಗಣಕೀಕರಣ ವ್ಯವಸ್ಥೆಯನ್ನು ಸಹಕಾರ ಸಂಘಗಳ ಉಪನಿಬಂಧಕರಾದ ಕೃಷ್ಣಪ್ರಸಾದ್ ಎಂಎಸ್. ಉದ್ಘಾಟಿಸಲಿದ್ದಾರೆ. ಪ್ರಥಮ ಪಾಲು ಪತ್ರವನ್ನು ನಾಪೋಕ್ಲು ಗ್ರಾಪಂ ಅಧ್ಯಕ್ಷರಾದ ಪಾರ್ವತಿ, ಪ್ರಥಮ ಠೇವಣಿ ಪತ್ರವನ್ನು ಮಡಿಕೇರಿ ಸರ್ವೋದಯ ಸಮಿತಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಂಬೆಕಲ್ಲು, ಪ್ರಥಮ ಉಳಿತಾಯ ಖಾತೆ ಪತ್ರವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ತುಳಸಿ ಮೋಹನ್ ಕಡ್ಲೇರ ವಿತರಿಸಲಿದ್ದಾರೆ. ಮುಖ್ಯ…
ಮಡಿಕೇರಿ ಜ.19 : ಬೂತ್ ಮಟ್ಟದಿಂದ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಜ.21 ರಿಂದ 29ರ ವರೆಗೆ ಬೂತ್ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ. ಪ್ರತಿಮನೆಯನ್ನು ಬಿಜೆಪಿ ಮನೆಯನ್ನಾಗಿಸುವುದು ನಮ್ಮ ಗುರಿಯಾಗಿದೆ ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಕಾರ್ಯಕರ್ತರ ಮನೆ ಮೇಲೆ ಪಕ್ಷದ ಧ್ವಜ ಹಾರಿಸುವ ಮೂಲಕ ಒಂದನೇ ಹಂತದ ಅಭಿಯಾನವನ್ನು ಪೂರ್ಣಗೊಳಿಸಲಾಗಿದೆ. ಎರಡನೇ ಹಂತದ ಅಭಿಯಾನಕ್ಕೆ ಜ.21 ರಂದು ಚಾಲನೆ ದೊರೆಯಲಿದೆ ಎಂದರು. 9 ದಿನಗಳವರೆಗೆ ನಡೆಯಲಿರುವ ಅಭಿಯಾನದಲ್ಲಿ ಒಂದು ಕೋಟಿ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದ್ದು, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು 543 ಬೂತ್‍ಗಳಲ್ಲಿಯೂ ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲಾಗುವುದು ಎಂದು ತಿಳಿಸಿದರು. ಸರ್ಕಾರದ ಯೋಜನೆಯನ್ನು ಪ್ರತಿಬೂತ್‍ನಲ್ಲಿ 10 ಗೋಡೆ ಬರಹಗಳ ಮೂಲಕ ಗಮನ ಸೆಳೆಯುವುದು, ಎಲ್ಲಾ ಬೂತ್‍ಗಳಲ್ಲಿ ಈಗಾಗಲೇ ವಾಟ್ಸ್‍ಅಪ್ ಗ್ರೂಪ್ ತಯಾರಿಸಿ ಡಿಜಿಟಲ್ ಸಂಪರ್ಕ ಹೊಂದುವುದು, ಮನೆಗಳ ಮೇಲೆ ಮತ್ತು…






