ಮಡಿಕೇರಿ ಜ.18 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವು ಜನವರಿ, 19 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ಎಂ.ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಮಡಿಕೇರಿ ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಇತರರು ಪಾಲ್ಗೊಳ್ಳಲಿದ್ದಾರೆ.
ಲೇಖಕ: admin
ಸುಂಟಿಕೊಪ್ಪ,ಜ.18 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗದ್ದೆಹಳ್ಳ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಆಂದೋಲನದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ದೇವಾಲಯದ ಆವರಣದಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಭವ್ಯ ಸೇವಾ ಪ್ರತಿನಿಧಿ ಜ್ಯೋತಿ ವಾಸು, ಗದ್ದೆಹಳ್ಳದ ಒಕ್ಕೂಟದ ಉಪಾಧ್ಯಕ್ಷ ಆನಂದ ಹಾಗೂ ಶ್ರೀಮುತ್ತಪ್ಪ ದೇವಸ್ಥಾನದ ಆರ್ಚಕ ಶಿವಮಣಿ, ಸುಂಟಿಕೊಪ್ಪ, ಗದ್ದೆಹಳ್ಳ ಹಾಗೂ ನಾರ್ಗಾಣೆ, ವಿಭಾಗದ ಸ್ವ ಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಮಡಿಕೇರಿ ಜ.18 : ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್1 ನಲ್ಲೂರು ಮತ್ತು ಎಫ್2 ಬಾಳೆಲೆ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜನವರಿ, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಸರಬರಾಜಿನಲ್ಲಿ ಸ್ಥಗಿತಗೊಳ್ಳಲಿದೆ. ಆದ್ದರಿಂದ ಕಿರುಗೂರು, ನಲ್ಲೂರು, ಪೊನ್ನಪ್ಪಸಂತೆ, ಸುಳುಗೋಡು, ಬಾಳೆಲೆ, ಮತ್ತೂರು, ಕಾನೂರು, ದೇವನೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಎಫ್6 ಹುದಿಕೇರಿ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜನವರಿ, 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ ಬಲ್ಯಮಂಡೂರು, ಚಿಕ್ಕಮಂಡೂರು, ತಾವರೆಕೆರೆ, ಮುಗಟಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಅನಿತಾ ಬಾಯಿ ಅವರು ಕೋರಿದ್ದಾರೆ.
ಮಡಿಕೇರಿ ಜ.18 : ಜಿಲ್ಲಾ ವಲಯ ಕೈಮಗ್ಗ ಉದ್ದಿಮೆಗಳಿಗೆ ಸಹಾಯ ಯೋಜನೆಯಡಿ 2022-23 ನೇ ಸಾಲಿನಲ್ಲಿ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಜ.30 ರಿಂದ ಫೆ .5 ರವರೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಜನವರಿ 30 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ತಿಳಿಸಿದ್ದಾರೆ.
ಮಡಿಕೇರಿ ಜ.18 : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಪ್ರಯುಕ್ತ ನರಿಯಂದಡ ಗ್ರಾಮ ಪಂಚಾಯಿತಿ ವಾಪ್ತಿಯ ಚೆಯ್ಯಂಡಾಣೆ ವೃತ್ತಕ್ಕೆ ಒಳಪಡುವ ನರಿಯಂದಡ, ಕೋಕೇರಿ, ಚೇಲವಾರ ಗ್ರಾಮಗಳಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಜನವರಿ, 21 ರಂದು ಬೆಳಗ್ಗೆ 10 ಗಂಟೆಗೆ ನರಿಯಂದಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಾಲ್ಲೂಕು ತಹಶೀಲ್ದಾರ್ ಪಿ.ಎಸ್.ಮಹೇಶ್ ಅವರು ತಿಳಿಸಿದ್ದಾರೆ.
ವಿರಾಜಪೇಟೆ ಜ.18 : ಬಾಳಿ ಬದುಕಬೇಕಾಗಿದ್ದ ಸಹೋದರರ ಬಾಳಿನಲ್ಲಿ ಆಕಸ್ಮಿಕವಾಗಿ ಕತ್ತಲು ಆವರಿಸಿ ದೃಷ್ಟಿ ಹೀನರಾದರು, ಗುಡಿಸಲು ಮನೆಯು ಆಸರೆಯಾದ ಹಿನ್ನಲೆಯಲ್ಲಿ ಗ್ರಾ.ಪಂ ಸುಮಾರು ಎರಡು ತಿಂಗಳ ಅವಧಿಯಲ್ಲಿ ಮನೆ ನಿರ್ಮಾಣ ಮಾಡಿ ಅಂಧ ಸಹೋದರರಿಗೆ ಮಕರ ಸಂಕ್ರಾಂತಿಯ ಉಡುಗೊರೆಯಾಗಿ ನೀಡಿತು. ವಿರಾಜಪೇಟೆ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಬಾರಿಕಾಡು ಪೈಸಾರಿ ನಿವಾಸಿ ಪಿ.ಕೆ.ರಾಮಚಂದ್ರ ಮತ್ತು ಸರೋಜ ದಂಪತಿಗಳ ಪುತ್ರರಾದ ಪಿ.ಆರ್. ಕೃಷ್ಣೇಂದ್ರ ಮತ್ತು ಪಿ.ಆರ್. ಜಯೇಂದ್ರ ದೃಷ್ಟಿ ಕಳೆದುಕೊಂಡು ಜೀವನ ಸಾಗಿಸುತ್ತಿರುವ ಸಹೋದರರು. ಬಡ ಜೀವಗಳ ಬಾಳಿಗೆ ಕೆದಮುಳ್ಳೂರು ಗ್ರಾ.ಪಂ ಯು ಬಸವ ಕಲ್ಯಾಣ ಯೋಜನೆ ಅಡಿಯಲ್ಲಿ ಮನೆಯೊಂದು ನಿರ್ಮಾಣ ಮಾಡಿ ಸಂಕ್ರಾಂತಿ ದಿನದ ಕಾಣಿಕೆಯಾಗಿ ನೀಡಿತು. ಕೆದಮುಳ್ಳೂರು ಗ್ರಾ.ಪಂ ಚುನಾಯಿತ ಪ್ರತಿನಿಧಿಗಳು, ಪಿ.ಡಿ.ಓ, ಕಾರ್ಯದರ್ಶಿ, ಸಿಬ್ಬಂದಿಗಳು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಸರಳವಾಗಿ ನಡೆದ ಗೃಹಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ತಾಲ್ಲೂಕು ದಂಢಾಧಿಕಾರಿ ಹಾಗೂ ತಹಶೀಲ್ದಾರ್ ಅರ್ಚನಾ ಭಟ್, ಸಮಾಜ ಸಬಲೀಕರಣ ಎಂಬುದು ಬಡವರ, ದೀನ ದಲಿತರನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು…
ಮಡಿಕೇರಿ ಜ.18 : ಭಾರತೀಯ ಸೇನೆಯ ಮಾಜಿ ಮುಖ್ಯಸ್ಥರು, ಕಾರ್ಗಿಲ್ ಸಮರದ ನೇತೃತ್ವ ವಹಿಸಿದ್ದ ಜನರಲ್ ವೇದ್ ಪ್ರಕಾಶ್ ಮಲ್ಲಿಕ್ ಪಿವಿಎಸ್ ಎಂ, ಎವಿಎಸ್‍ಎಂ ಅವರು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ವೀಕ್ಷಿಸಿದರು. ಪತ್ನಿ ಡಾ.ಅಂಜನಾ ಮಲ್ಲಿಕ್ ಅವರೊಂದಿಗೆ ಭೇಟಿ ನೀಡಿದ ವಿ.ಪಿ.ಮಲ್ಲಿಕ್ ಅವರು ಸ್ಮಾರಕ ಭವನ ವೀಕ್ಷಿಸಿ ಇಲ್ಲಿನ ವ್ಯವಸ್ಥಿತ ಸಂಗ್ರಹದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಜನರಲ್ ತಿಮ್ಮಯ್ಯ ಅವರ ಸೇನಾ ಜೀವನ ಪ್ರತೀಯೊಬ್ಬ ಭಾರತೀಯನಿಗೂ ಆದರ್ಶಪ್ರಾಯ ಎಂದು ಮಲ್ಲಿಕ್ ಹೇಳಿದರು. ತಿಮ್ಮಯ್ಯ ಸ್ಮಾರಕ ಭವನದ ವ್ಯವಸ್ಥಾಪಕ ಗೌಡಂಡ ಸುಬೇದಾರ್ ಮೇಜರ್ ತಿಮ್ಮಯ್ಯ, ನಾಯಕ್ ಸುಬೇದಾರ್ ಮೋಹನ್ ಹಾಜರಿದ್ದರು.
ಸಿದ್ದಾಪುರ ಜ.18 : ಮಿಲನ್ಸ್ ಫುಟ್ಬಾಲ್ ಅಸೋಸಿಯೇಷನ್ ಅಮ್ಮತ್ತಿ ಹಾಗೂ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಜ.20 ರಿಂದ 29 ರವರೆಗೆ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಮಿಲನ್ಸ್ ಫುಟ್ಬಾಲ್ ಕ್ಲಬ್ ಅಧ್ಯಕ್ಷ ಲಿಜೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯಾವಳಿಯಲ್ಲಿ ವಿವಿಧ ರಾಜ್ಯ ಹಾಗೂ ಜಿಲ್ಲೆಗಳ ಒಟ್ಟು 16 ತಂಡಗಳು ಭಾಗವಹಿಸುತ್ತಿದ್ದು, ಅಮ್ಮತ್ತಿ ಪ್ರೌಢಶಾಲಾ ಮೈದಾನದಲ್ಲಿ ಪಂದ್ಯಾವಳಿಯು ನಡೆಯಲಿದೆ ಎಂದು ಮಾಹಿತಿ ನೀಡಿದರು. ಜ.20 ರಂದು ಸಂಜೆ 7.30ಕ್ಕೆ ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ, ಭಾರತ ತಂಡದ ತಾಂತ್ರಿಕ ಸಮಿತಿ ಸಲಹೆಗಾರ ಐ.ಎಂ.ವಿಜಯನ್ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕ್ಯಾಪ್ಟನ್ ಅಯ್ಯಪ್ಪ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಕಾರ್ಮಾಡು ಗ್ರಾ.ಪಂ ಅಧ್ಯಕ್ಷ ನಿರನ್ ನಾಣಯ್ಯ, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪಾಣತ್ತಲೆ ಸೇರಿದಂತೆ ಅತಿಥಿಗಳು ಪಾಲ್ಗೊಳ್ಳಲಿದ್ದಾರೆ. ಫೈನಲ್ ಪಂದ್ಯಾವಳಿ ಹಾಗೂ ಸಮಾರೋಪ ಸಮಾರಂಭ ಜ.29…
ವಿರಾಜಪೇಟೆ ಜ.18 : ತಾಲೂಕಿನ ಗಡಿ ಭಾಗದಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜ.21ರಂದು ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸರ್ವರೂ ಸಮ್ಮೇಳನ ಯಶಸ್ವಿಗೊಳಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ ಹೇಳಿದರು. ವಿರಾಜಪೇಟೆಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಇದು ಒಂಬತ್ತನೇ ಸಮ್ಮೇಳನ. ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಅತ್ಯಂತ ಯಶಸ್ವಿಯಾಗಿ ಸಮ್ಮೇಳನ ನಡೆಯಬೇಕಾಗಿದೆ. ಸಮ್ಮೇಳನಕ್ಕೆ ಈಗಾಗಲೇ ಎಲ್ಲಾ ಸಿದ್ದತೆ ನಡೆದಿದ್ದು ವಿವಿಧ ಸಮಿತಿ ರಚನೆ ಮಾಡಿ ಜವಾಬ್ದಾರಿ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಹೆಸರಾಂತ ಪಕ್ಷಿತಜ್ಷ, ಸಾಹಿತಿ, ವೈದ್ಯರಾದ ಡಾ. ಎಸ್.ವಿ ನರಸಿಂಹನ್ ಅವರನ್ನು ಸರ್ವಾನುಮತದಿಂದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಜ.21ರಂದು ಬೆಳಿಗ್ಗೆ 8.30 ಕ್ಕೆ ಧ್ವಜಾರೋಹಣ ನಂತರ ಸ್ತಬ್ಧ ಚಿತ್ರ ಹಾಗೂ ಪೂರ್ಣ ಕುಂಭದೊಂದಿಗೆ ಮೆರವಣಿಗೆ ನಡೆಯಲಿದೆ.…
ಮಡಿಕೇರಿ ಜ.18 : ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಅವರು ಕುಂದಚೇರಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಹಿರಿಯರನ್ನು ಭೇಟಿಯಾಗಿ ಸಮಸ್ಯೆಗಳ ಕುರಿತು ಚರ್ಚಿಸಿದರು. ಕುಂದಚೇರಿ ಪಂಚಾಯಿತಿ ವ್ಯಾಪ್ತಿಯ ಚೆಟ್ಟಿಮಾನಿ, ಕುಂದಚೇರಿ, ಪದಕಲ್ಲು, ಕೋಪಟ್ಟಿ ಮತ್ತು ಸಿಂಗತ್ತೂರು ಗ್ರಾಮದ ಹಿರಿಯ ಮುಖಂಡರು, ಸಮಾಜ ಸೇವಕರು, ವಿವಿಧ ಸಂಘ ಸಂಸ್ಥೆಗಳ ಮೂಲಕ ಸಮಾಜಿಕ ಕಳಕಳಿ ಮೆರೆಯುತ್ತಿರುವವರ ಮನೆಗಳಿಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷರಾದ ಸವಿತ ಉದಯ ಕುಮಾರ್, ಉಪಾಧ್ಯಕ್ಷ ವಿಶುಪ್ರವೀಣ್ ಕುಮಾರ್, ಹಿರಿಯ ಸದಸ್ಯ ಕೆ.ಯು.ಹಾರಿಸ್, ವಲಯಾಧ್ಯಕ್ಷ ಕೆದಂಬಾಡಿ ಹರೀಶ್, ಹಿರಿಯ ಮುಖಂಡರಾದ ಕೆದಂಬಾಡಿ ರಘುನಾಥ್, ಕೆದಂಬಾಡಿ ಸುರೇಂದ್ರ, ಕೆದಂಬಾಡಿ ರಮೇಶ್, ಮುಕ್ಕಾಟಿ ನೇತ್ರಾವತಿ, ಚೂದಾಡಮ್ಮನ ರುಕ್ಮಿಣಿ, ಹೆಚ್.ಎಂ.ಕೃಷ್ಣಪ್ಪ (ಕಿಟ್ಟ) ಸಿ.ಎಸ್.ರಶೀದ್, ಕೆ.ಕೆ.ಹಂಸ, ತಮ್ಲೀಮ್, ಕೆದಂಬಾಡಿ ಹೂವಣ್ಣ, ಕೆದಂಬಾಡಿ ವಿಶ್ವನಾಥ್, ಕೆ.ಎಂ.ಇಸ್ಮಾಯಿಲ್ ಹಾಜಿ, ಸಾಂಧೀಪನಿ ವಿದ್ಯಾಪೀಠದ ಮುಖ್ಯಸ್ಥರಾದ ಕೆ.ಆರ್.ಯೋಗೇಶ್, ವಕೀಲ ಎಂ.ಆರ್.ಗಣೇಶ್, ಕೆ.ಪಿಸಿಸಿ ಸದಸ್ಯ ರಮಾನಾಥ್ ಬೇಕಲ್, ಡಿಸಿಸಿ ಸದಸ್ಯ ಸುನಿಲ್ ಪತ್ರಾವೊ,…






