ಲೇಖಕ: admin

ಮಡಿಕೇರಿ ಜ.16 : ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಇನ್ನು ಉಳಿದಿರುವ ಅವಧಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ನಿತ್ಯದ ಚಟುವಟಿಕೆ ಹಾಗೂ ಪರೀಕ್ಷಾ ತಯಾರಿ ಸಂಬಂಧ ಪ್ರತ್ಯೇಕ ವೇಳಾಪಟ್ಟಿ ಮಾಡಿಕೊಂಡು ಆ ಮೂಲಕ ಉತ್ತಮ ಫಲಿತಾಂಶ ಗಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ವ್ಯಕ್ತಿತ್ವ ವಿಕಸನ ಮಾರ್ಗದರ್ಶಕ, ಏಕಲವ್ಯ ಪ್ರಶಸ್ತಿ ವಿಜೇತ ಅಥ್ಲೀಟ್ ತೀತಮಾಡ ಅರ್ಜುನ್ ದೇವಯ್ಯ ಹೇಳಿದರು. ಕೊಡಗು ವಿಕಸನ ಸಂಸ್ಥೆ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಮಡಿಕೇರಿಯ ಸಂತ ಜೋಸೇಫರ ವಿದ್ಯಾಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಪರೀಕ್ಷೆ ಸಿದ್ಧತೆ ಮಾರ್ಗದರ್ಶನ’ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರದ ಜತೆಗೆ ಪೋಷಕರ ಪಾತ್ರ ಬಹಳ ಮುಖ್ಯವಾಗುತ್ತದೆ. ಪೋಷಕರು ಮಕ್ಕಳೊಂದಿಗೆ ಆಪ್ತವಾಗಿದ್ದಷ್ಟು ಮಕ್ಕಳು ಮಾನಸಿಕವಾಗಿ ಬಲವಾಗುತ್ತಾರೆ. ಮನೆಯಲ್ಲಿ ಒಳ್ಳೆಯ ವಾತಾವರಣ ಇದ್ದಾಗ ಮಕ್ಕಳ ಕಲಿಕೆಯ ಆಸಕ್ತಿ ಹೆಚ್ಚುತ್ತದೆ ಎಂದರು. ಶಾಲೆಯಲ್ಲಿ ಶಿಕ್ಷಕರು ಹೇಳಿಕೊಟ್ಟ ಪಾಠದಲ್ಲಿ ಗೊಂದಲ ಇದ್ದಾಗ ಆ ಬಗ್ಗೆ ಶಿಕ್ಷಕರ ಬಳಿ ಹೇಳಿ ಬಗೆಹರಿಸಿಕೊಳ್ಳಬೇಕು. ಶಿಕ್ಷಕರು ಕೂಡಾ…

Read More

ಮಡಿಕೇರಿ ಜ.16 : ಇದೇ ಜ.30 ರಂದು ಹುತಾತ್ಮರ ದಿನಾಚರಣೆ ಹಿನ್ನೆಲೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ಮೆರವಣಿಗೆ ಮೂಲಕ ಗಾಂಧಿ ಮೈದಾನಕ್ಕೆ ತೆಗೆದುಕೊಂಡು ಹೋಗುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜ.30 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಿಂದ ಮೆರವಣಿಗೆಯಲ್ಲಿ ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದಲ್ಲಿರಿಸಿ ಬೆಳಗ್ಗೆ 10.30 ಗಂಟೆಗೆ ಸರ್ವಧರ್ಮ ಪ್ರಾರ್ಥನೆ, ನಂತರ 11 ಗಂಟೆಗೆ ಸರಿಯಾಗಿ 2 ನಿಮಿಷ ಮೌನ ಆಚರಣೆ ನಡೆಯಲಿದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಗಾಂಧಿ ಮಂಟಪದಲ್ಲಿ…

Read More

ಮಡಿಕೇರಿ ಜ.16 : ಇದೇ ಜ.26 ರಂದು ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಸಿ.ಸತೀಶ್, ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಸ್ವಾಗತ, ಧ್ವಜಾರೋಹಣ ಮತ್ತು ವೇದಿಕೆ, ಸಾಂಸ್ಕೃತಿಕ , ಕವಾಯತು, ಉಪಾಹಾರ, ಭಾಷಣ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಪೂರೈಕೆ ಹೀಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಐದು ತಂಡಗಳಿಗೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳಿಗೆ ಉಪಾಹಾರ ಕಲ್ಪಿಸುವಂತೆ ಸೂಚಿಸಿದರು. ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ, ರಾಷ್ಟ್ರಕವಿ ಕುವೆಂಪು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ಮಂಗೇರಿರ ಮುತ್ತಣ್ಣ, ಸ್ಕ್ವಾಡರ್ನ್ ಲೀಡರ್…

Read More

ಮಡಿಕೇರಿ ಜ.16 : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪಕ್ಷದ ಹಿರಿಯ ಮುಖಂಡ ಟಿ.ಪಿ.ರಮೇಶ್ ಅವರು ನೇಮಕಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಶಿಫಾರಸ್ಸಿನೊಂದಿಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಲ್ ಅವರು ಬಿಡುಗಡೆಗೊಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿಯ ರಾಜ್ಯ, ವಿಭಾಗ ಹಾಗೂ ಜಿಲ್ಲಾ ಪದಾಧಿಕಾರಿಗಳ ಪಟ್ಟಿಯಲ್ಲಿ ಟಿ.ಪಿ.ರಮೇಶ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಟಿ.ಪಿ.ರಮೇಶ್ ಅವರು ಕಳೆದ 15 ವರ್ಷಗಳಿಂದ ಕೆಪಿಸಿಸಿ ಸದಸ್ಯರಾಗಿ, ಎರಡು ವರ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿ ಪ್ಯಾನಲಿಸ್ಟ್ ಆಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್‍ನ ಸಂಯೋಜಕರಾಗಿ ಹಾಗೂ ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಸೇವೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಜ.16 :  ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಉದ್ಯಮಿ ಅಕ್ಕಳತಂಡ ಎಸ್. ಮೊಯ್ದು ಅವರ ಪ್ರಾಯೋಜಕತ್ವದಲ್ಲಿ ಹೊರತರಲಾದ ಪ್ರಸಕ್ತ ಸಾಲಿನ ಕ್ಯಾಲೆಂಡರ್ (ದಿನದರ್ಶಿ) ಅನ್ನು  ಬಿಡುಗಡೆಗೊಳಿಸಲಾಯಿತು. ವಿರಾಜಪೇಟೆಯಲ್ಲಿರುವ ಕೆ. ಎಂ. ಎ. ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಹಿರಿಯ ಸದಸ್ಯರಿಗೂ ಆಗಿರುವ ನಿವೃತ್ತ ಅಬಕಾರಿ ಉಪನಿರೀಕ್ಷಕರಾದ ಆಲೀರ ಎಂ. ಹುಸೈನ್ ಅವರು ನೂತನ ಕೆ. ಎಂ. ಎ. ಕ್ಯಾಲೆಂಡರನ್ನು ಅನಾವರಣಗೊಳಿಸಿದರು. ಬಳಿಕ ಕ್ಯಾಲೆಂಡರ್ ನ ಮೊದಲ ಪ್ರತಿಯನ್ನು ಕೆ. ಎಂ. ಎ. ಸಂಸ್ಥೆಯ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರಿಗೆ ಹಸ್ತಾಂತರಿಸುವ ಮೂಲಕ ಕ್ಯಾಲೆಂಡರ್ ವಿತರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಆಲೀರ ಎಂ. ಹುಸೈನ್ , ಸೇವೆ ಮಾಡಲು ಯಾವುದೇ ನಿರ್ದಿಷ್ಟ ಆಯಾಮಗಳಿಲ್ಲ. ನಿಸ್ವಾರ್ಥವಾಗಿ ಮಾಡುವ ಜನೋಪಯೋಗಿ ಸೇವೆ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ  ದುದ್ದಿಯಂಡ ಹೆಚ್. ಸೂಫಿ ಹಾಜಿ, ಸಂಸ್ಥೆಯ ವತಿಯಿಂದ ಕಳೆದ…

Read More

ಶ್ರೀಮಂಗಲ ಜ.16 : ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿಯಲ್ಲಿ ಚೆಟ್ಟಂಗಡ ಕುಟುಂಬ ಆಯೋಜಿಸಿರುವ ಎರಡನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ನಮ್ಮೆ-2023 ಲಾಂಛನವನ್ನು ನೆಮ್ಮಲೆ ಗ್ರಾಮದಲ್ಲಿರುವ ಚೆಟ್ಟಂಗಡ ಕುಟುಂಬದ ಐನ್ ಮನೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಅನಾವರಣಗೊಳಿಸಿದರು. ಲಾಂಛನ ಬಿಡುಗಡೆ ಮುನ್ನ ಐನ್ ಮನೆಯಲ್ಲಿ ಕುಟುಂಬದ ಹಿರಿಯರು, ಅತಿಥಿಗಳೊಂದಿಗೆ ಗುರು ಕಾರೋಣರಿಗೆ ಕಾರ್ಯಕ್ರಮದ ಯಶಸ್ವಿಗಾಗಿ ಸಾಮೂಹಿಕವಾಗಿ ಪ್ರಾರ್ಥಿಸಿದರು. ಲಾಂಛನವನ್ನು ಬಿಡುಗಡೆ ಮಾಡಿ ಮಾತನಾಡಿದ ಸುಜಾ ಕುಶಾಲಪ್ಪ,  1997ರಲ್ಲಿ ಪಾಂಡಂಡ ದಿವಂಗತ ಕುಟ್ಟಪ್ಪ ಅವರು ಕೊಡವ ಜನಾಂಗದಲ್ಲಿ ಒಗ್ಗಟ್ಟು ಬೆಸೆಯಲು ಹಾಗೂ ಕುಟುಂಬಗಳನ್ನು ಒಂದೇ ಸ್ಥಳದಲ್ಲಿ ಸೇರಿಸುವ , ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನಕ್ಕಾಗಿ ಕೌಟುಂಬಿಕ ಹಾಕಿ ನಮ್ಮೆಯನ್ನು ಪ್ರಾರಂಭಿಸಿದರು. ನಂತರ ಕ್ರಿಕೆಟ್ ಪಂದ್ಯಾವಳಿಯನ್ನು ಸಹ ಕಾರ್ಷನ್ ಕಾರ್ಯಪ್ಪ ಅವರು ಆರಂಭಿಸಿದರು.ಇದು ಜನಪ್ರಿಯವಾಗಿದೆ.ಇದೀಗ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಕಳೆದ ವರ್ಷದಿಂದ ಪೊನ್ನೋಲತಂಡ ಕುಟುಂಬ ಆರಂಭಿಸಿದ್ದು, 2ನೇ ವರ್ಷದ ಪಂದ್ಯವಳಿಯನ್ನು ಚೆಟ್ಟಂಗಡ ಕುಟುಂಬ ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಇದು ಜನಪ್ರಿಯವಾಗಲಿ ಎಂದು…

Read More

ಮಡಿಕೇರಿ ಜ.16 : ಕೊಡಗು ಜಿಲ್ಲಾ ಅಂಬಾಭವಾನಿ ಯುವಕ ಮತ್ತು ಯುವತಿ, ಕ್ರೀಡಾ ಮತ್ತು ಮನೋರಂಜನಾ ಸಂಘ ತಾಳತ್ತಮನೆ, ನೆಹರು ಯುವ ಕೇಂದ್ರ, ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನದ ಪ್ರಯುಕ್ತ ತಾಳತ್ತಮನೆಯಲ್ಲಿ “ಭಾಗವಹಿಸುವ ದಿನ” ಕಾರ್ಯಕ್ರಮ ನಡೆಯಿತು. ತಾಳತ್ತಮನೆಯ ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಮಹಿಳಾ ವೇದಿಕೆಯ ಅಧ್ಯಕ್ಷರಾದ ರತ್ನಮಂಜರಿ ಉದ್ಘಾಟಿಸಿದರು. ಯುವ ವೇದಿಕೆಯ ಅಧ್ಯಕ್ಷ ಎಂ.ಆರ್.ಮೋಹನ್ ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಮತ್ತು ರಾಷ್ಟ್ರೀಯ ಯುವ ದಿನದ ಮಹತ್ವವನ್ನು ಸಭೆಗೆ ತಿಳಿಸಿದರು. ಸಮಾಜದ ಯುವಕ ಯುವತಿಯರು ಮುಂದೆ ಬಂದು ಯುವ ವೇದಿಕೆಯಿಂದ ನಡೆಸುವ ಎಲ್ಲಾ ಚಟುವಟಿಕೆಗಳಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸಂಘದ ಸಹ ಕಾರ್ಯದರ್ಶಿ ಎ.ಎಂ.ನರಸಿಂಹ, ಕಟ್ಟಡ ಸಮಿತಿ ಕಾರ್ಯದರ್ಶಿ ಎಂ.ಎಸ್.ಯೋಗೇಂದ್ರ, ಸಮಿತಿ ಸದಸ್ಯರಾದ ಎಂ.ಬಿ.ಪೂವಪ್ಪ, ಕೆ.ಎಸ್.ಹೇಮಂತ್,…

Read More

ಕುಶಾಲನಗರ, ಜ.16 : ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆ.3 ರಂದು ಕುಶಾಲನಗರದಲ್ಲಿ ಹಮ್ಮಿಕೊಂಡಿರುವ ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ಹಿರಿಯ ಪತ್ರಕರ್ತರಾದ ಕುಶಾಲನಗರದಲ್ಲಿ ನೆಲೆಸಿರುವ ಬಿ.ಆರ್.ನಾರಾಯಣ ಆಯ್ಕೆಯಾಗಿದ್ದಾರೆ. ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಬಿ.ಆರ್.ನಾರಾಯಣ್ ಅವರನ್ನು ಕುಶಾಲನಗರ ಕಸಾಪ ದಿಂದ ಸಿದ್ದಯ್ಯ ಪುರಾಣಿಕ ಬಡಾವಣೆಯಲ್ಲಿರುವ ಅವರ ಮನೆಗೆ ತೆರಳಿ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಗಮಿಸುವಂತೆ ಆತ್ಮೀಯವಾಗಿ ಆಹ್ವಾನ ನೀಡಿ ಸ್ವಾಗತಿಸಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಹಾಗೂ ಕಸಾಪ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಸೇರಿದಂತೆ ಕಸಾಪ ಪದಾಧಿಕಾರಿಗಳು ಹಾಗೂ ಸಮ್ಮೇಳನದ ವಿವಿಧ ಉಪಸಮಿತಿಗಳ ಪ್ರಮುಖರು ಸೇರಿದಂತೆ ಸಾಹಿತಿ ಬಿ.ಆರ್.ನಾರಾಯಣ ಅವರನ್ನು ಸನ್ಮಾನಿಸಿ ಫಲ ತಾಂಬೂಲ ನೀಡಿ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಕೇಶವಕಾಮತ್, ಸುಮಾರು ನಾಲ್ಕು ದಶಕಗಳ ಕಾಲ ಉಪನ್ಯಾಸಕ ವೃತ್ತಿ, ಪತ್ರಿಕೋದ್ಯಮ ಹಾಗೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಬಿ.ಆರ್.ನಾರಾಯಣ ಅವರು ಸಮ್ಮೇಳನಕ್ಕೆ ಆಯ್ಕೆಯಾಗಿರುವುದು ಸಂತಸದ ವಿಷಯ. ಈ…

Read More

ಸುಂಟಿಕೊಪ್ಪ,ಜ.16: ವಿಶೇಷ ಚೇತನ ಬದುಕಿಗೆ ಆಸರೆಯಾಗಲು ಸರಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ವಿಶೇಷ ಚೇತನರ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಕರೆ ನೀಡಿದರು. ಸುಂಟಿಕೊಪ್ಪ ಅಂಬೇಡ್ಕರ್ ಭವನದಲ್ಲಿ ನಡೆದ ಗ್ರೇಡ್ 1 ಗ್ರಾ.ಪಂ ಯ ವಿಶೇಷ ಚೇತನರ ಗ್ರಾಮ ಸಭೆಯಲ್ಲಿ ಮಾತನಾಡಿದರು. ವಿಕಲಚೇತನರು ಶೇ.75 ಇದ್ದವರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಇಲಾಖೆಯಿಂದ ನೀಡಲಾಗುತ್ತಿದೆ. ಇದಕ್ಕೆ ಬಹಳಷ್ಟು ಅರ್ಜಿ ಬರುತ್ತಿದ್ದು, ಕೊಡಗಿಗೆ ಕೇವಲ 5 ದ್ವಿಚಕ್ರ ವಾಹನಕ್ಕೆ ಅನುದಾನ ಲಭ್ಯವಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ಅರ್ಹರನ್ನು ಆಯ್ಕೆ ಮಾಡಲಾಗುತ್ತಿದೆ. ಗ್ರಾಮ 1 ಸೇವಾಸಿಂಧು ಕೇಂದ್ರ ತೆರೆಯಲು ವಿಶೇಷ ಚೇತನರಿಗೆ ಸಹಾಯಧನ ನೀಡಲಾಗುತ್ತಿದೆ. ರಿಯಾಯಿತಿ ದರದಲ್ಲಿ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸಲು ಅನುವು ಮಾಡಿಕೊಡಲಾಗುತ್ತಿದೆ. ರೈಲಿನಲ್ಲಿ ಸಂಚರಿಸಲು ಉಚಿತಪಾಸ್ ನೀಡಲಾಗುತ್ತಿದೆ. ವಿಕಲಚೇತನರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಮಾನಸಿಕ ಸಮಸ್ಯೆ ಇರುವ ವಿಕಲಚೇತನರಿಗೆ ಉಚಿತ ವೈಧ್ಯಕೀಯ ಚಿಕಿತ್ಸೆ ಲಭ್ಯವಾಗುತ್ತಿದೆ. ಮಲಗಿದಲ್ಲೇ ಇರುವ ವಿಕಲಚೇತನರಿಗೆ ವಾಟರ್ ಬೆಡ್ ಕಲ್ಪಿಸಲಾಗುತ್ತಿದೆ. ಎಸ್‍ಎಸ್‍ಎಲ್‍ಸಿ ಪಾಸಾದ ಟೈಲರಿಂಗ್…

Read More

ಸುಂಟಿಕೊಪ್ಪ,ಜ.16 : ಕೊಡಗರಹಳ್ಳಿ ನೇತಾಜಿ ಯುವಕ ಸಂಘದ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಮಂಡುವಂಡ ಪುನೀತ್ ಪೂಣ್ಣಚ್ಚ ಆಯ್ಕೆಯಾಗಿದ್ದಾರೆ. ಸಂಘದ ನೇತಾಜಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಕೊಡಗರಹಳ್ಳಿ ಗ್ರಾ.ಪಂ ಸದಸ್ಯ ಸುನಿಲ್ ಹಾಗೂ ಖಜಾಂಜಿಯಾಗಿ ಮಿಥುನ್ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಡಾ.ಶಶಿಕಾಂತರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿ ಸಿ.ಸಿ.ನಾರಾಯಣಸ್ವಾಮಿ ವರದಿ ವಾಚಿಸಿದರು. ಖಜಾಂಜಿ ಸಿ.ಎನ್.ದತ್ತ ಸೋಮಣ್ಣ ಲೆಕ್ಕ ಪತ್ರ ಮಂಡಿಸಿದರು. ನಿರ್ಗಮಿತ ಅಧ್ಯಕ್ಷ ಡಾ.ಶಶಿಕಾಂತರೈ ಮಾತನಾಡಿ ಸಂಘವು ಜಿಲ್ಲೆಯಲ್ಲಿ ಹೆಸರು ಪಡೆದ ಸಂಘವಾಗಿದ್ದು ಪುಟ್ಬಾಲ್ ಕ್ರೀಡೆಯಲ್ಲಿ ಜಿಲ್ಲಾ ಚಾಂಪಿಯನ್ ಮಟ್ಟವನ್ನು ಪಡೆದಿದೆ. ಕ್ರೀಡೆ ಮಾತ್ರವಲ್ಲದೆ ಜನೋಪಯೋಗಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳಾಗಿ ಆರೋಗ್ಯ ಶಿಬಿರ, ಪಶುವೈಧ್ಯಕೀಯ ಶಿಬಿರ, ಅಂತರ ಶಾಲಾ ಹಾಕಿ ಪಂದ್ಯಾವಳಿಗಳನ್ನು ನಡೆಸಿಕೊಂಡು ಬರುತ್ತಿವೆ. 1959 ರಷ್ಟು ಹಿಂದೆಯೇ ಈ ಸಂಘ ಸ್ಥಾಪನೆಯಾಗಿದ್ದು, ಸಂಘದ ಹಿರಿಯ ಸದಸ್ಯರಾದ ಡಾ.ಎಂ.ಪಿ.ಗಣೇಶ್ ಅವರು ಪದ್ಮಶ್ರೀ ಪುರಸ್ಕøತರಾಗಿರುವುದು ಹೆಮ್ಮೆಯ ವಿಚಾರ. ಹಾಗೆಯೇ ಸಂಘದ ಸದಸ್ಯರುಗಳು…

Read More