ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- ***ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ***
- *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
- *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
- *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
- *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
- *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್ಕೋಟ್, ಪುಸ್ತಕ ವಿತರಣೆ*
- *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
- *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
- *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*






