ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ರಾಜ್ಯಪಾಲರನ್ನು ಭೇಟಿಯಾದ ASP*
- *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
- *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
- *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
- *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ*
- *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
- *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
- *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
- *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
- *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*






