ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
- *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
- *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
- *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
- *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
- *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
- *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
- *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
- *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
- *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*






