ಸುಂಟಿಕೊಪ್ಪ, NEWS DESK ಸೆ.19: ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ರೂ.59,53,671 ನಿವ್ವಳ ಲಾಭ ಗಳಿಸಿದೆ. ಗುಂಡುಗುಟ್ಟಿ ಮಂಜುನಾಥಯ್ಯ ಸಹಕಾರ ಭವನದಲ್ಲಿ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಸಂಘದ ಅಧ್ಯಕ್ಷ ಜೆರ್ಮಿ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದ ಜೆರ್ಮಿ ಡಿಸೋಜ ಅವರು ಸಂಘದ ಪ್ರಗತಿಯ ಕುರಿತು ಮಾಹಿತಿ ನೀಡಿದರು. 2025-26ನೇ ಸಾಲಿನಲ್ಲಿ ಸಂಘದಲ್ಲಿ 1,999 ಮಂದಿ ಸದಸ್ಯರಿದ್ದು, ಸದಸ್ಯರ ಪಾಲು ಹಣ ರೂ.86,27,280 ಹಾಗೂ ಸರ್ಕಾರದ ಪಾಲು ಹಣ ರೂ.78,000 ಇದೆ ಎಂದು ತಿಳಿಸಿದರು. ಸಂಘದ ಸಾಲ ಮರುಪಾವತಿ ಪ್ರಮಾಣ ಶೇ.98.50ರಷ್ಟಿದ್ದು, ಸರ್ಕಾರದ ಬಡ್ಡಿ ರಿಯಾಯಿತಿ ಯೋಜನೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದರು. ಅಧ್ಯಕ್ಷರ ಮಾತಿಗೆ ಪ್ರತಿಕ್ರಿಯಿಸಿ ಮಾತನಾಡಿದ ಚಂದ್ರಶೇಖರ್ ಅವರು, ಸಂಘದ ಸದಸ್ಯರ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರದ ಶಿಕ್ಷಣದಲ್ಲಿ ಪ್ರತಿಭಾ ಪುರಸ್ಕಾರದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಪಡೆಯುವ ಮಕ್ಕಳಲ್ಲಿ ಮೊದಲ ಮೂರು ಸ್ಥಾನ ಪಡೆಯುವವರಿಗೆ…
ಲೇಖಕ: admin
ಮಡಿಕೇರಿ NEWS DESK ಸೆ.19 : ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ ನ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ರೇಷ್ಮಾ ಎನ್.ಎ. ಅವರು “Sudha Murty’s Writings: A Mirror to Indian Consciousness” ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಯಶಸ್ವಿಯಾಗಿ ಪಿ.ಎಚ್.ಡಿ. ಪದವಿ ಪಡೆದಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ಗೀತಾ ಭಾಸ್ಕರ್ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ಡಾ.ರೇಷ್ಮಾ ಎನ್.ಎ. ಅವರು ಭೂ ದಾಖಲೆಗಳ ಇಲಾಖೆಯ ನಿವೃತ್ತ ಅಧಿಕಾರಿ ನಿಡ್ಯಮಲೆ ಅನುರಾಜ್ ಹಾಗೂ ಚೇರಂಬಾಣೆ ಅರುಣ ಜೂನಿಯರ್ ಕಾಲೇಜು ನಿವೃತ್ತ ಪ್ರಾಂಶುಪಾಲರಾದ ದೇವಕಿ ಅನುರಾಜ್ ಅವರ ಪುತ್ರಿಯಾಗಿದ್ದಾರೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ‘ಸಂವಿಧಾನ ಓದು’ ಕೃತಿಯನ್ನು ‘Reading the Constitution’ ಎಂಬ ಹೆಸರಿನಲ್ಲಿ ಡಾ.ರೇಷ್ಮಾ ಎನ್.ಎ. ಅವರು ಇಂಗ್ಲಿಷ್ ಭಾಷೆಗೆ ಇತ್ತೀಚೆಗೆ ಅನುವಾದಿಸಿದ್ದಾರೆ.
ಮಡಿಕೇರಿ NEWS DESK ಸೆ.19 : ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿತಾಣವಾಗಿರುವ ದುಬಾರೆ ಸಾಕಾನೆ ಶಿಬಿರವನ್ನು ಸೆ.20ರಿಂದ ಸಾರ್ವಜನಿಕರ ವೀಕ್ಷಣೆಗೆ ಪುನರಾರಂಭಿಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ. ಕರ್ನಾಟಕ ಸರಕಾರ ಸಾಕಾನೆ ಶಿಬಿರಗಳಿಗಾಗಿ ರೂಪಿಸಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಷ್ಠಾನಗೊಳಿಸಿದ ಬಳಿಕ ಶಿಬಿರವನ್ನು ಪುನರಾರಂಭಿಸಲಾಗುತ್ತಿದೆ. ಆರಂಭಿಕ ಹಂತದಲ್ಲಿ ಬೆಳಿಗ್ಗೆ 9.30ರಿಂದ 11.30ರವರೆಗೆ ಮಾತ್ರ ಶಿಬಿರದ ಚಟುವಟಿಕೆಗಳನ್ನು ನಡೆಸಲಾಗುವುದು. ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಮುಂದಿನ ದಿನಗಳಲ್ಲಿ ಇತರೆ ಅವಧಿಗಳಲ್ಲಿಯೂ ಕಾರ್ಯಾಚರಣೆಯನ್ನು ವಿಸ್ತರಿಸುವ ಕುರಿತು ನಿರ್ಧರಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರವಾಸಿಗರು ಹಾಗೂ ಆನೆಗಳ ನಡುವೆ ಯಾವುದೇ ರೀತಿಯ ನೇರ ಸಂಪರ್ಕಕ್ಕೆ ಅವಕಾಶ ಇರುವುದಿಲ್ಲ. ಪ್ರವಾಸಿಗರು ಆನೆಗಳಿಗೆ ಸ್ನಾನ ಮಾಡಿಸುವುದು ಮತ್ತು ಆಹಾರ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರ ಪ್ರವೇಶವನ್ನು ಸೀಮಿತ ಸಂಖ್ಯೆಯ ಬ್ಯಾಚ್ ಗಳಲ್ಲಿ, ನಿಗದಿತ ಅವಧಿಯಲ್ಲಿ ಆಯೋಜಿಸಲಾಗುತ್ತದೆ. ಪ್ರತಿ ಬ್ಯಾಚ್‌ಗೆ ಸುಮಾರು 45 ನಿಮಿಷಗಳ ಕಾಲಾವಕಾಶ ನೀಡಲಾಗಿದ್ದು, ಬ್ಯಾಚ್ ನಲ್ಲಿ ಗರಿಷ್ಠ 150 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.…
ಸುಂಟಿಕೊಪ್ಪ, ಸೆ.18 NEWS DESK : ಸುಂಟಿಕೊಪ್ಪ ಬಿಜೆಪಿ ಘಟಕದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನವನ್ನು ಶ್ರೀರಾಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಸಿಹಿ ಹಂಚುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗಣಪತಿ ದೇವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಪುಷ್ಪಾರ್ಚನೆ ಸಲ್ಲಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಕಾರ್ಯಕರ್ತರು ಹಾಗೂ ಮುಖಂಡರು ಸಿಹಿ ಹಂಚಿ ಜನ್ಮದಿನವನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಪಿ.ಆರ್. ಸುನಿಲ್ ಕುಮಾರ್, ಬಿಜೆಪಿ ನಗರಾಧ್ಯಕ್ಷ ಧನುಕಾವೇರಪ್ಪ, ಮುಖಂಡರಾದ ವಾಸುದೇವ, ವಿಘ್ನೇಶ್, ಲೀಲಾಮೇದಪ್ಪ, ರಾಜ, ಈಶ್ವರ, ಸಂದೀಪ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಡಿಕೇರಿ ಸೆ.18 NEWS DESK : ಮತದಾರರ ಪಟ್ಟಿಯನ್ನು ಮತ್ತಷ್ಟು ನಿಖರ ಹಾಗೂ ಪರಿಷ್ಕೃತಗೊಳಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ 2026 ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸ್ವೀಪ್ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ. ಅಭಿಯಾನದ ಅಂಗವಾಗಿ ಸೆಪ್ಟೆಂಬರ್, 19 ಮತ್ತು 20 ರಂದು ವಿಶೇಷ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ಅರ್ಹ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ನಮೂನೆ 6, ಅನಿವಾಸಿ ಭಾರತೀಯರ(ಎನ್‍ಆರ್‍ಐ) ಮತದಾರರ ನೋಂದಣಿಗೆ ನಮೂನೆ 6ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅಥವಾ ಆಕ್ಷೇಪಣೆ ಸಲ್ಲಿಸಲು ನಮೂನೆ 7 ಹಾಗೂ ಮತದಾರರ ಪಟ್ಟಿಯಲ್ಲಿನ ವಿವರಗಳ ತಿದ್ದುಪಡಿ, ವಿಳಾಸ ಬದಲಾವಣೆ, ಮತದಾರರ ಗುರುತಿನ ಚೀಟಿ ಸೇರಿದಂತೆ ವಿವಿಧ ಬದಲಾವಣೆಗಳಿಗೆ ನಮೂನೆ 8 ಬಳಸಬಹುದಾಗಿದೆ. ಜೊತೆಗೆ ಅರ್ಹ ಮತದಾರರು ತಮ್ಮ ಹೆಸರು ಮತದಾರರ…
ಕುಶಾಲನಗರ, ಸೆ.17 NEWS DESK : ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಅಲಂಕೃತ ಬೆಳ್ಳಿರಥದಲ್ಲಿ ವಿಶ್ವಕರ್ಮ ಮೂರ್ತಿಯನ್ನಿಟ್ಟು ಗ್ರಾಮದಲ್ಲಿ ಮೆರವಣಿಗೆ ಮೆರವಣಿಗೆ ನಡೆಸಲಾಯಿತು. ಗ್ರಾಮದ ಶ್ರೀ ಕಾಳಿಕಾಂಭ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಭಕ್ತಾದಿಗಳು ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಜಯಂತೋತ್ಸವದಲ್ಲಿ ಮಾತನಾಡಿದ ಗ್ರಾಮದ ವಿಶ್ವಕರ್ಮ ಸಮಾಜದ ಅಧ್ಯಕ್ಷ ಟಿ.ಎಸ್.ಪ್ರಕಾಶಚಾರಿ ವಿಶ್ವಕರ್ಮ ಜಯಂತಿ ಎಂಬುದು ವಿಶ್ವಕರ್ಮರ ಜನ್ಮ ದಿನವನ್ನು ಆಚರಿಸುವ ಪದ್ಧತಿಯಾಗಿದೆ.ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದದ್ದು ಎಂದರು. ಸಮಾಜದ ಉಪಾಧ್ಯಕ್ಷ ಟಿ.ಎಸ್.ಮೂರ್ತಾಚಾರಿ, ಕಾರ್ಯದರ್ಶಿ ಟಿ.ಎನ್.ದೇವರಾಜ್, ಕೋಶಾಧಿಕಾರಿ ಟಿ.ಎನ್.ಜಗದೀಶ್, ಪದಾಧಿಕಾರಿಗಳಾದ ಟಿ.ಎಸ್.ಗಣೇಶಚಾರಿ, ಟಿ.ಆರ್. ಪ್ರಸನ್ನ, ಟಿ.ವಿ.ಡಂಕಣಚಾರಿ, ಟಿ.ಆರ್. ಮಂಜುನಾಥ್ ಇತರರು ಇದ್ದರು. ಮೆರವಣಿಗೆಯಲ್ಲಿ ಸಮಾಜದ ಬಂಧುಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಮಂಗಳೂರು.ಸೆ.18 NEWS DESK : ತುಳು ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸವಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತುಳುಭಾಷೆ ಮಾತನಾಡುತ್ತಾರೆ. ಹಾಗಾಗಿ ಈ ಎರಡು ಜಿಲ್ಲೆಗೆ ಅನ್ವಯವಾಗುವಂತೆ ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ನಗರದ ಪ್ರಜಾಸೌಧ ಕಟ್ಟಡದ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಸಾವಜನಿಕರಿಂದ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು. ಈ ಸಂಬಂಧ ಸಾವಜನಿಕರು ಒಂದು ತಿಂಗಳಲ್ಲಿ ಅಭಿಪ್ರಾಯ ನೀಡಬಹುದಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು. ಜಿಲ್ಲೆಗೊಂದು ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಎಂಬುದು ಸರಕಾರದ ಉದ್ದೇಶವಾಗಿದೆ. ಆ ದಿಸೆಯಲ್ಲಿ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಗುರುತಿಸಿರುವ ಜಾಗದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು, ಬೋಧನಾ…
ಮಡಿಕೇರಿ ಸೆ.18 NEWS DESK : ಹಿರಿಯ ನಾಗರಿಕರನ್ನು ಗೌರವ ಹಾಗೂ ಸಂತೋಷದಿಂದ ನೋಡಿಕೊಳ್ಳುವುದು ಪ್ರತಿಯೊಂದು ಕುಟುಂಬದ ಜವಾಬ್ದಾರಿಯಾಗಿದೆ. ಹಿರಿಯರು ನೆಮ್ಮದಿಯಿಂದ ಇರುವ ಮನೆ ಹಾಗೂ ಸಮಾಜವೇ ನಿಜವಾದ ಸಮೃದ್ಧಿಯ ಸಂಕೇತ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಅಭಿಪ್ರಾಯಪಟ್ಟರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ನಗರದ ಗಾಂಧಿ ಮೈದಾನದಲ್ಲಿ ನಡೆದ ವಿವಿಧ ಆಟೋಟ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಮಳೆಯೊಂದಿಗೆ ಉತ್ತಮ ಬೆಳೆ ದೊರೆಯಬೇಕಾದರೆ ಪ್ರಕೃತಿಯ ಕೃಪೆಯ ಜೊತೆಗೆ ನಮ್ಮ ಹಿರಿಯರ ಆಶೀರ್ವಾದವೂ ಅಗತ್ಯ. ಯಾವ ದೇಶದಲ್ಲಿ ಹಿರಿಯರು ನೆಮ್ಮದಿಯಿಂದ ಬದುಕುತ್ತಿದ್ದಾರೋ ಆ ದೇಶ ಸಮೃದ್ಧವಾಗಿರುತ್ತದೆ ಎಂಬ ಮಾತಿದೆ. ಅದೇ ರೀತಿ ಮನೆಯಲ್ಲಿರುವ ಉಪಕರಣಗಳು, ಸೌಲಭ್ಯಗಳು ಅಥವಾ ಹಣದ ಆಧಾರದ ಮೇಲೆ ಆ ಮನೆ ಶ್ರೀಮಂತವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಅಲ್ಲಿರುವ ತಂದೆ-ತಾಯಿ ಸಂತೋಷವಾಗಿದ್ದಾರೆಯೇ, ನೆಮ್ಮದಿಯಿಂದ ಊಟ…
ಕುಶಾಲನಗರ, NEWS DESK ಸೆ.18: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಹಾಗೂ ವಿರಾಜಪೇಟೆ ತಾಲೂಕು ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ, ವಿವಿಧ ಸಂಘ-ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ಅಕ್ಟೋಬರ್ 1ರಿಂದ ನಡೆಯಲಿರುವ 2131ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಕುಶಾಲನಗರದಲ್ಲಿ ಬಿಡುಗಡೆಗೊಳಿಸಲಾಯಿತು. ಯೋಜನೆಯ ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಒಂದು ವಾರಗಳ ಕಾಲ ವಿರಾಜಪೇಟೆಯ ಹೆಗ್ಗಳ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿರುವ ಶಿಬಿರದ ಯಶಸ್ಸಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭ ವೇದಿಕೆಯ ಅಧ್ಯಕ್ಷ ಎ.ಟಿ. ರಂಗಸ್ವಾಮಿ, ಜಿಲ್ಲಾ ನಿರ್ದೇಶಕ ವಿಠಲ ಸಾಲಿಯಾನ್, ಸ್ಥಾಪಕ ಅಧ್ಯಕ್ಷ ಪಿ. ಅಭಿಮನ್ಯು ಕುಮಾರ್, ನಿಕಟಪೂರ್ವ ಅಧ್ಯಕ್ಷ ಅರುಣ್…
ಸೋಮವಾರಪೇಟೆ, NEWS DESK ಸೆ. 18: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 20ರ ಭಾನುವಾರ ಪೂರ್ವಾಹ್ನ 10 ಗಂಟೆಗೆ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಿ.ಬಿ. ಸೋಮಯ್ಯ ತಿಳಿಸಿದ್ದಾರೆ. ಸಂಘವು ಜನಸೇವೆಯಲ್ಲಿ ಸಾರ್ಥಕ 106 ವರ್ಷಗಳನ್ನು ಪೂರೈಸಿದ್ದು, ಸಂಘದ ಏಳಿಗೆಗೆ ಸಹಕರಿಸುತ್ತಿರುವ ಸರ್ವ ಸದಸ್ಯರು, ಠೇವಣಿದಾರರು ಹಾಗೂ ಗ್ರಾಹಕರು ಅಭಿನಂದನಾರ್ಹರು. ಸಂಘವು 31–03–2026ಕ್ಕೆ ರೂ. 531 ಕೋಟಿಗಳ ವ್ಯವಹಾರ ನಡೆಸಿ ಲಾಭದತ್ತ ಸಾಗಿದೆ ಎಂದು ಅವರು ತಿಳಿಸಿದರು. ಸಂಘವು ತಾಲೂಕಿನ ಅಬ್ಬೂರುಕಟ್ಟೆ ಹಾಗೂ ಬಳಗುಂದ ಶಾಖೆಗಳನ್ನು ಹೊಂದಿದ್ದು, ಗ್ರಾಮೀಣ ಭಾಗದ ರೈತರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ. ಸಂಘದಲ್ಲಿ ಜಾಮೀನು ಸಾಲ ವಿಮಾ ಯೋಜನೆ ಹಾಗೂ ಪಿಗ್ಮಿ ಓವರ್‌ಡ್ರಾಫ್ಟ್ ಸಾಲದ ವಿಮಾ ಯೋಜನೆ ಜಾರಿಯಲ್ಲಿದೆ. ಯಶಸ್ವಿನಿ ರೈತರ ವಿಮಾ ಯೋಜನೆಯೂ ಜಾರಿಯಲ್ಲಿದ್ದು, 2,084 ಸದಸ್ಯರು ಸದರಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದರು. 2025–26ನೇ ಸಾಲಿನಲ್ಲಿ 7ನೇ ತರಗತಿ, ಎಸ್‌ಎಸ್‌ಎಲ್‌ಸಿ ಹಾಗೂ…






