ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*
- *ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
- **ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**
- *ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*
- *ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
- *ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
- *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
- *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
- *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
- *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*






