ಲೇಖಕ: admin

ಮಡಿಕೇರಿ NEWS DESK ಜ.26 : ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯು ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್, ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಲೋಕಾಯುಕ್ತ ಎಸ್ ಪಿ. ದಿನೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಸಂವಿಧಾನದ ಶ್ರೇಷ್ಠ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ‍್ಯ ಮತ್ತು ಭ್ರಾತೃತ್ವಕ್ಕೆ…

Read More

ಮಡಿಕೇರಿ ಜ.26 NEWS DESK : ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು  ಭೂಮಿ ಪೂಜೆ ನೆರವೇರಿಸಿದರು. ಕೆದಮುಳ್ಳೂರು ಪಂಚಾಯತ್ ವ್ಯಾಪ್ತಿಯಲ್ಲಿ ಕ್ಲಬ್ ಮಹೇಂದ್ರ ಕಡೆಗೆ ತೆರಳುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿಗಾಗಿ ರೂ.10 ಲಕ್ಷಗಳನ್ನು ಒದಗಿಸಿದ್ದು, ಇಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ದಿನಕ್ಕೆ ನೂರಾರು ಜನರು ಓಡಾಡುವ ಈ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಳ್ಳುವ ಉದ್ದೇಶದಿಂದ ಸಾರ್ವಜನಿಕರ ಕೋರಿಕೆ ಮೇರೆಗೆ ರಸ್ತೆ ಅಭಿವೃದ್ಧಿಗೊಳ್ಳಲು ಅನುದಾನ ಒದಗಿಸಿದ್ದೇನೆ. ಸಾರ್ವಜನಿಕರ ಯಾವುದೇ ಪೂರಕವಾದ ಬೇಡಿಕೆಗೆ ಸ್ಪಂದಿಸುತ್ತಾ, ಅಗತ್ಯ ಎನಿಸಿದರೆ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ತಾನು ಸಹಕಾರ ನೀಡುವುದಾಗಿ ಇದೇ ಸಂದರ್ಭದಲ್ಲಿ ಹೇಳಿದರು. ಅನುದಾನವನ್ನು ಸದುಪಯೋಗಪಡಿಸಿಕೊಂಡು ಉತ್ತಮ ರಸ್ತೆ ಇಲ್ಲಿ ನಿರ್ಮಾಣವಾಗುವಂತಾಲಿ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕೆಡಿಪಿ ಸದಸ್ಯರು ಮಾಳೇಟೀರ ಪ್ರಶಾಂತ್,  ವಲಯ ಅಧ್ಯಕ್ಷರು ನಡಿಕೇರಿಯಂಡ ಮಹೇಶ್ ಪಂಚಾಯಿತಿ…

Read More

ವಿರಾಜಪೇಟೆ ಜ.26 NEWS DESK : ಹೆಗ್ಗಳ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಸದಸ್ಯ ಟಿ.ಆರ್.ವಿನೋದ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂವಿಧಾನದ ಪ್ರಸ್ತಾವನೆಯ ಪೂರ್ವ ಪೀಠಿಕೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಅಧಿಕಾರಿ ಬಿ.ಎನ್.ಶಾಂತಿಭೂಷಣ್ ಬೋರ್ಕರ್ ದಿನದ ಮಹತ್ವದ ಕುರಿತು ಮಾತನಾಡಿ, ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಸಂವಿಧಾನವು ಅತ್ಯಂತ ಶ್ರೇಷ್ಠವಾಗಿದೆ. ಸಂವಿಧಾನವು ಪ್ರಜೆಗಳಿಗೆ ಹಕ್ಕುಗಳನ್ನು ನೀಡಿದ್ದು, ಕಾನೂನಿನ ಪರಿಪಾಲನೆ ಅತೀ ಮುಖ್ಯವಾಗಿದೆ ಎಂದರು. ಸ್ವಾತಂತ್ರ್ಯ, ಸಮಾನತೆ, ನ್ಯಾಯ, ಬ್ರಾತೃತ್ವ ಗಳು ಸಂವಿಧಾನದ ಪ್ರಮುಖ ಮೂಲಾಂಶಗಳಾಗಿದ್ದು, ಸಂವಿಧಾನದ ಮೌಲ್ಯಗಳಿಗೆ ಗೌರವವನ್ನು ಸೂಚಿಸಿ ಸದೃಢ ರಾಷ್ಟ್ರದ ನಿರ್ಮಾಣಕ್ಕೆ ಸರ್ವರೂ ಪಣ ತೊಡಬೇಕು ಎಂದು ಹೇಳಿದರು. ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ ಮಾತನಾಡಿ, ಸಂವಿಧಾನವು ಪ್ರತಿಯೊಬ್ಬ ಭಾರತೀಯನ ಸಾರ್ವಭೌಮದ ಪ್ರತೀಕವಾಗಿದೆ. ಸಮಾನತೆಯ ನೆಲೆಗಟ್ಟನ್ನು ಕಲ್ಪಿಸಿ ಐಕ್ಯತೆಯನ್ನು ಮೂಡಿಸುತ್ತದೆ. ಸಂವಿಧಾನದ…

Read More

ಮಡಿಕೇರಿ ಜ.26 NEWS DESK : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಸುಮಾರು 2.50 ಕೋಟಿ ರೂ.ವೆಚ್ಚದಲ್ಲಿ ಬಾಲಕಿಯರ ನೂತನ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಭೂಮಿಪೂಜೆ ನೆರೆವೇರಿಸಿದರು. ಶಾಸಕರಾದ ಡಾ.ಮಂತರ್ ಗೌಡ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಮಡಿಕೇರಿ‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Read More

ಮಡಿಕೇರಿ ಜ.26 NEWS DESK : ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಎನ್‍ಆರ್‍ಎಲ್‍ಎಂ, ಸಂಜೀವಿನಿ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಕೊಡಗು‌ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಗಾಂಧಿ ಮೈದಾನದಲ್ಲಿ ಚಾಲನೆ ನೀಡಿದರು. ಶಾಸಕರಾದ ಡಾ.ಮಂತರ್ ಗೌಡ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಮಡಿಕೇರಿ‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Read More

ಮಡಿಕೇರಿ ಜ.26 NEWS DESK : ಈಗಿನ ತಲೆಮಾರಿನ ಜೆನ್ ಜಿ ಪೀಳಿಗೆಗೆ ತಕ್ಕಂತೆ ಡಿಜಿಟಲ್ ಮಾಧ್ಯಮದಲ್ಲಿಯೇ ಧಮ೯ ಮತ್ತು ಜೀವನ ಸಂಸ್ಕಾರವನ್ನು ಕಲಿಸುವ ನಿಟ್ಟಿನಲ್ಲಿ ಬ್ರಾಹ್ಮಣ ಸಮಾಜ ಕಾಯ೯ಯೋಜನೆ ರೂಪಿಸಬೇಕೆಂದು ಹಿರಿಯ ಪತ್ರಕತ೯ ಅನಿಲ್ ಹೆಚ್.ಟಿ. ಸಲಹೆ ನೀಡಿದ್ದಾರೆ. ನಗರದ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಆಯೋಜಿತ ಬ್ರಾಹ್ಣಣ ವಿದ್ಯಾಭಿವೃದ್ಧಿ ನಿಧಿಯ ವಾಷಿ೯ಕ ಪ್ರತಿಭಾ ಪುರಸ್ಕಾರ ವಿತರಣೆ, ಸಾಧಕರಿಗೆ ಸನ್ಮಾನ ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದ ಅನಿಲ್, ಡಿಜಿಟಲ್ ಯುಗದಲ್ಲಿ ಜನಿಸಿದ ಜೆನ್ ಜಿ ಮತ್ತು ಆಲ್ಫಾ ಪೀಳಿಗೆಯು ಮೊಬೈಲ್, ಇಂಟರ್ ನೆಟ್ ಹೊರತಾಗಿ ಜೀವನವನ್ನೇ ಯೋಚಿಸುತ್ತಿಲ್ಲ. ಹಳೇ ತಲೆಮಾರಿನ ಸಂಸ್ಕೖತಿ, ಸಂಪ್ರದಾಯ, ಲೇಖಕರು, ಸಾಹಿತ್ಯದ ಪರಿಚಯವೂ ಈ ಪೀಳಿಗೆಗೆ ಇಲ್ಲ. ಈ ನಿಟ್ಟಿನಲ್ಲಿ ಬ್ರಾಹ್ಮಣ ಸಮಾಜವು ವಾರಕ್ಕೊಂದು ದಿನವಾದರೂ ನವಪೀಳಿಗೆಯೂ ಸೇರಿದಂತೆ ವಿದ್ಯಾಥಿ೯ಗಳಿಗೆ ಧಮ೯ ಶಿಕ್ಷಣದಂಥ ಕಾಯ೯ಕ್ರಮ ರೂಪಿಸಬೇಕೆಂದು ಕರೆ ನೀಡಿದರು.  ಆಧುನಿಕ ದಿನಗಳಲ್ಲಿ ಕೌಟುಂಬಿಕ ಸಂಬಂದಗಳು ಮೌಲ್ಯ ಕಳೆದುಕೊಳ್ಳುತ್ತಿದೆ ಎಂದು ವಿಷಾಧಿಸಿದ ಅನಿಲ್, ಬ್ರಿಟನ್ ಲೇಖಕ ಸ್ಟೀಫನ್ ಫ್ರೈ…

Read More

ಕುಶಾಲನಗರ, ಜ.26 NEWS DESK : ಪ್ರತಿಯೊಬ್ಬರೂ ದೇಶದ ಸಮಗ್ರತೆ, ಐಕ್ಯತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆಗೆ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ  ಸಂಭ್ರಮದಿಂದ ನಡೆದ  77 ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರಜಾತಂತ್ರ ವ್ಯವಸ್ಥೆಗೆ ಬುನಾದಿ ಹಾಕಿರುವ ನಮ್ಮ ಸಂವಿಧಾನವು ವಿಶ್ವಕ್ಕೆ ಮಾದರಿಯಾಗಿದೆ. ಸಂವಿಧಾನದ ಪಾಲನೆ ಹಾಗೂ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು. ಗಣತಂತ್ರ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದ ಸಮಾಜ ವಿಜ್ಞಾನ ಶಿಕ್ಷಕಿ ಎಸ್.ಎಂ.ಗೀತಾ ಮಾತನಾಡಿ, ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ 150 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಗಣತಂತ್ರ ದಿನವನ್ನು ಅದೇ ಪರಿಕಲ್ಪನೆಯಲ್ಲಿ ಆಚರಿಸಲಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಎಸ್ ಡಿ ಎಂ ಸಿ.ಸದಸ್ಯರಾದ ಕೆ.ಎಸ್.ರಾಚಾಚಾರಿ, ಶ್ರೀನಿವಾಸಚಾರಿ, ಲಕ್ಷ್ಮಿ , ಗೈಡ್ಸ್ ಶಿಕ್ಷಕಿ ಕೆ.ಟಿ.ಸೌಮ್ಯ,ಶಿಕ್ಷಕರಾದ…

Read More

ಕುಶಾಲನಗರ ಜ.26 NEWS DESK : ಕುಶಾಲನಗರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ತಾಲ್ಲೂಕು ತಹಸಿಲ್ದಾರ್ ಹಾಗೂ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾದ ಕಿರಣ್ ಜಿ.ಗೌರಯ್ಯ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ರಾಷ್ಟ್ರೀಯ ದಿನಗಳು ಕೇವಲ ಭಾಷಣಕ್ಕೆ ಸೀಮಿತವಾಗಬಾರದು. ಸಂವಿಧಾನದಲ್ಲಿ ಉಲ್ಲೇಖಿಸಿದಂತೆ ಕರ್ತವ್ಯ ನಿರ್ವಹಿಸಬೇಕು. ಯುವ ಪೀಳಿಗೆಗೆ ಸಂದೇಶ ನೀಡಿ ಜಾಗೃತಿ ಮೂಡಿಸಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವಂತಾಗಬೇಕು. ಸರ್ವಾಂಗೀಣ ಪ್ರಗತಿ ಕಂಡಿರುವ ನಮ್ಮ ದೇಶ ಆರ್ಥಿಕವಾಗಿ ಬಲಿಷ್ಠವಾಗಿದೆ ಎಂದ ಕಿರಣ್ ಗೌರಯ್ಯ ಅವರು, ಭವ್ಯ ಭಾರತದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಸ್ವಚ್ಛ ಪರಿಸರದೊಂದಿಗೆ ಮುಂದಿನ ಪೀಳಿಗೆಗೆ ಸಮೃದ್ಧ ನಾಡನ್ನು ಹಸ್ತಾಂತರಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯವಾಗಿದೆ ಎಂದರು.  ಮುಖ್ಯ ಭಾಷಣಕಾರರಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹಂಡ್ರಂಗಿ ನಾಗರಾಜು ಮಾತನಾಡಿ, ಗಣರಾಜ್ಯೋತ್ಸವ ದಿನದ ಮಹತ್ವದ ಮತ್ತು ವಿಶೇಷತೆಗಳನ್ನು ತಿಳಿ ಹೇಳಿದರು. ಸಂವಿಧಾನದ ಆಶೋತ್ತರಗಳನ್ನು ಪಾಲಿಸುವುದು ಎಲ್ಲರ…

Read More

ಮಡಿಕೇರಿ ಜ.26 NEWS DESK : ಮಡಿಕೇರಿಯ ಮೈತ್ರಿ ಭವನದ ಬಳಿ ನಿರ್ಮಿಸಲು ಉದ್ದೇಶಿಸಿರುವ ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭ  ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಕೆ.ಸೋಮಶೇಖರ್, ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Read More

ಕುಶಾಲನಗರ ಜ.26 NEWS DESK : ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮೊದಲಿಗೆ ಧ್ವಜಾರೋಹಣ ನೆರವೇರಿಸಿ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವದ ಸಂದೇಶ ನೀಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಅಭಿವೃದ್ಧಿ) ಹಾಗೂ ಡಯಟ್ ಸಂಸ್ಥೆಯ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್, ಇಡೀ ವಿಶ್ವಕ್ಕೆ ಮಾದರಿಯಾದ ನಮ್ಮ ದೇಶದ ಸಂವಿಧಾನವು ಧರ್ಮಗ್ರಂಥವಿದ್ದಂತೆ.  ಸಂವಿಧಾನ ಕೇವಲ ಸ್ಮರಣೆಯಲ್ಲ; ಇದು ದೇಶದ ಪುನಶ್ಚೇತನದ ಶಕ್ತಿಯಾಗಿದೆ ಎಂದು ಬಣ್ಣಿಸಿದರು. ಸಂವಿಧಾನವು ಪ್ರಜಾಪ್ರಭುತ್ವದ ಆದರ್ಶ, ನ್ಯಾಯಾಂಗ ವ್ಯವಸ್ಥೆಯ ಅಡಿಪಾಯ, ರಾಷ್ಟ್ರದ ಪ್ರಗತಿಯ ಮೂಲವಾಗಿದೆ. ಶಿಕ್ಷಣದ ಮೂಲಕ ಭವಿಷ್ಯ ನಿರ್ಮಿಸುವುದು ಎಲ್ಲರ ಹೊಣೆ’ ಎಂದು ಹೇಳಿದರು. ವಿಶ್ವದಲ್ಲೇ ಗಟ್ಟಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಹಿಡಿದಿದೆ. ದೇಶದ ಹೊಣೆಗಾರಿಕೆ ಅರಿತ ನಾವುಗಳು ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ರಾಮಚಂದ್ರರಾಜೇ ಅರಸ್ ಹೇಳಿದರು.…

Read More