ಮಡಿಕೇರಿ ಜ.13 : ಜನನಿ ಮಹಿಳಾ ಮಂಡಳಿ ಹಾಗೂ ಬಾಲಗೋಕುಲ ಸಂಯುಕ್ತಾಶ್ರಯದಲ್ಲಿ ನಗರದ ರಾಘವೇಂದ್ರ ದೇವಾಲಯದ ಆಶಾ ಪ್ರಾವಿಷನ್ ಸ್ಟೋರ್ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಸದಸ್ಯ ಧನಂಜಯ ಅಗೋಳಿಕಜೆ ಮಾತನಾಡಿ 1893ರಲ್ಲಿ ಚಿಕಾಗೋದಲ್ಲಿ ನಡೆದ ವರ್ಲ್ಡ್ಸ್ ಪಾರ್ಲಿಮೆಂಟ್ ಆಫ್ ರಿಲಿಜನ್ಸ್‌ನಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ್ದ ಭಾಷಣ ಇಂದಿಗೂ ಪ್ರಸಿದ್ಧ. ವೇದಾಂತ ಮತ್ತು ಯೋಗದ ಭಾರತೀಯ ತತ್ತ್ವ ಚಿಂತನೆಗಳನ್ನು ವಿಶ್ವ ಭೂಪಟದಲ್ಲಿ ರಾರಾಜಿಸುವಂತೆ ಮಾಡಿದವರಲ್ಲಿ ಸ್ವಾಮಿ ವಿವೇಕಾನಂದರು ಕೂಡಾ ಪ್ರಮುಖರಲ್ಲಿ ಒಬ್ಬರು. ತಮ್ಮ ಪ್ರಖರ ಭಾಷಣಗಳು ಮತ್ತು ಉಪನ್ಯಾಸಗಳ ಮೂಲಕ ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ವಿವೇಕಾನಂದರು ಪ್ರಯತ್ನಿಸಿದರು ಎಂದರು. ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಓದಿ ಮನನ ಮಾಡಿಕೊಂಡರೆ ಜೀವನದಲ್ಲಿ ಎಂತಹ ಕಷ್ಟಕಾರ್ಪಣ್ಯಗಳು ಬಂದರು ಎದೆಗುಂದದೆ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವು ನಮಗೆ ಬರುತ್ತದೆ ಹಾಗೆ ನಾವೆಲ್ಲರೂ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿ ಭವ್ಯ,…
ಲೇಖಕ: admin
ಮಡಿಕೇರಿ ಜ.12 : ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಮೈಸೂರು ಕೆ.ಆರ್.ನಗರ ನಿವಾಸಿ ಮಂಜುನಾಥ (32) ಬಂಧಿತ ಆರೋಪಿಯಾಗಿದ್ದಾನೆ. ಪೊಲೀಸರು 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಪತ್ತೆ ಮಾಡಿದ ಕುಶಾಲನಗರ ಗ್ರಾಮಾಂತರ ಸಿ.ಪಿ.ಐ ಹಾಗೂ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಪ್ರಶಂಸಿಸಿದ್ದಾರೆ.
ಚೆಟ್ಟಳ್ಳಿ ಜ.12 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯಲ್ಲಿ ಪ್ರತಿಷ್ಠಾಪಿಸಲಿರುವ ಶ್ರೀಪಂಚಮುಖಿ ವಾಯುಪುತ್ರಮೂರ್ತಿಯನ್ನು ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಹಾಗೂ ಚೆಟ್ಟಳ್ಳಿ ಗ್ರಾಮಸ್ಥರು ಪೂರ್ಣಕುಂಭ ಕಲಶದೊಂದಿಗೆ ಬರಮಾಡಿಕೊಂಡರು. ವಿಜಯ ಪ್ಲಾಂಟೇಷನ್ ಮಾಲೀಕ ಎಸ್.ಜಿ.ಶ್ರೀನಿವಾಸ್ ಹಾಗೂ ಬಲ್ಲಾರಂಡ ಮಣಿಉತ್ತಪ್ಪ ವಿಶೇಷ ಪೂಜೆ ಸಲ್ಲಿಸಿದರು. ಚೆಟ್ಟಳ್ಳಿ ಶ್ರೀನರೇಂದ್ರ ಮೋದಿ ರೈತ ಸಹಕಾರ ಭವನದಿಂದ ಸಹಕಾರ ಸಂಘದ ಮುಖ್ಯ ಕಚೇರಿಯವರೆಗೆ ಪಟ್ಟಣದುದ್ದಕ್ಕೂ ಮೆರವಣಿಗೆಯಲ್ಲಿ ಸಾಗಿ ಕಾವೇರಿಮಾತೆಗೆ, ಪಶುಪತಿನಾಥನಿಗೆ ಪೂಜೆ ಸಲ್ಲಿಸಲಾಯಿತು. ನಂತರ ಈರಳೆವಳಮುಡಿ ಶಾಖೆಗೆ ಕೊಂಡೊಯ್ಯಲಾಯಿತು. ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಶ್ರೀ ಪಂಚಮುಖಿ ವಾಯುಪುತ್ರಮೂರ್ತಿಯನ್ನು ಪ್ರತಿಷ್ಠಾಪಿಸುತಿದ್ದೇವೆ. ಸಂಕ್ರಾತಿ ದಿನವಾದ ಜ.15ರಂದು ವಿವಿಧ ಪೂಜಾಕೈಂರ್ಕದೊಂದಿಗೆ ಸಂಘದ ಈರಳೆವಳಮುಡಿ ಶಾಖೆಯ ಆವರಣದಲ್ಲಿ ಅನಾವರಣಗೊಳಿಸುವುದಾಗಿ ಮಣಿಉತ್ತಪ್ಪ ತಿಳಿಸಿದರು. ಈ ಸಂದರ್ಭ ವೀರಾಂಜನೆಯ ಯುವಕ ಸಂಘದ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ, ಗೌರಿಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ಪುತ್ತರಿರ ಶಿವುನಂಜಪ್ಪ, ಕಾರ್ಕಳದ ಶಿಲ್ಪಿ ಗುಣವಂತೇಶ್ವರ ಭಟ್, ಚೆಟ್ಟಳ್ಳಿ ಸಹಕಾರ ಸಂಘದ ಉಪಾಧ್ಯಕ್ಷ ಕಣಜಾಲು…
ಮಡಿಕೇರಿ ಜ.12 : ಮಡಿಕೇರಿಯ ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಜ.14 ಮತ್ತು 15 ರಂದು ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ಎರಡು ದಿನಗಳ ಕಾಲ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಜ.14 ರಂದು ಸಂಜೆ 6 ರಿಂದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ದಿಶಾಬಲಿ, ಮಹಾ ಪೂಜೆ ಹಾಗೂ ಪ್ರಸಾದ ವಿತರಣೆಯಾಗಲಿದೆ. ಜ.15 ರಂದು ಬೆಳಗ್ಗೆ 8 ಗಂಟೆಗೆ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ ಪೂಜೆ, ಆಶ್ಲೇಷ ಬಲಿ ಕಲಶಾಭಿಷೇಕ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗ ಹಾಗೂ ಅನ್ನದಾನ ನೆರವೇರಲಿದೆ. ಸಂಜೆ 5.30 ರಿಂದ 6.30ರ ವರೆಗೆ ರಂಗಪೂಜೆ, 7 ಗಂಟೆಗೆ ಬಲಿ ಉತ್ಸವ…
ಸೋಮವಾರಪೇಟೆ ಜ.12 :ಸ್ವಾಮಿ ವಿವೇಕಾನಂದರು ಮಹಾನ್ ಆಧ್ಯಾತ್ಮಿಕ ವ್ಯಕ್ತಿ ಹಾಗೂ ದಾರ್ಶನಿಕರಾಗಿದ್ದರು. ಯುವ ಜನತೆಗೆ ಸ್ಪೂರ್ತಿಯಾಗಿದ್ದರು ಎಂದು ಜಯವೀರಮಾತೆ ಚರ್ಚ್ ನ ಧರ್ಮಗುರು ಎಂ.ರಾಯಪ್ಪ ಹೇಳಿದರು. ಸೋಮವಾರಪೇಟೆ ಪುಷ್ಪಗಿರಿ ಜೇಸಿ ಸಂಸ್ಥೆಯ ವತಿಯಿಂದ ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ದಿನ ಹಾಗೂ ರಾಷ್ಟ್ರೀಯ ಯುವದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿವೇಕಾನಂದರು ಸಹಿಷ್ಣುತಾ ಭಾವವನ್ನು ಪ್ರಪಂಚಕ್ಕೆ ಸಂದೇಶ ನೀಡಿದರು. ಇವರ ಯುವ ಜನಾಂಗದ ಬಗ್ಗೆ ಹೆಚ್ಚಿನ ವಿಶ್ವಾಸ ಹೊಂದಿದ್ದರು. ಈ ಕಾರಣದಿಂದ ಮಹಾನ್ ಚೇತನ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು. ಶನಿವಾರಸಂತೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪರಶಿವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಶ್ಚಟಗಳಿಂದ ಮುಕ್ತರಾದರೆ ನಿಮ್ಮ ಭವಿಷ್ಯ ಉಜ್ವಲವಾಗಲಿದೆ. ದುಶ್ಚಟಗಳಿಗೆ ಬಲಿಯಾದರೆ ಇಡೀ ಜೀವನ ನಾಶವಾಗಲಿದೆ ಎಂದು ಕಿವಿಮಾತು ಹೇಳಿದರು. ಇತ್ತೀಚಿನ ದಿನಗಳಲ್ಲಿ ಕೆಲ ವಿದ್ಯಾರ್ಥಿಗಳು ಈ ಪಿಡುಗಿಗೆ ಬಲಯಾಗುತ್ತಿರುವ ಬಗ್ಗೆ ತಿಳಿದು ಬಂದಿದೆ. ಶಿಕ್ಷಕರು ಮಾಹಿತಿಯನ್ನು ಕಲೆ ಹಾಕಿ…
ಸೋಮವಾರಪೇಟೆ ಜ.12 : ಸೊಮವಾರಪೇಟೆಯ ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಪ್ರಥಮ ದರ್ಜೆ ಕಾಲೇಜಿಗೆ ಗುರುವಾರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಡಳಿತ ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪ್ರಥಮ ಹಾಗೂ ದ್ವಿತೀಯ ಬಿ.ಎ.ಯಲ್ಲಿ ಒಂದು ವಿಷಯದಲ್ಲಿ ಎಲ್ಲಾ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿರುವ ಬಗ್ಗೆ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕೆಲವು ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಇಷ್ಟ ಬಂದಾಗ ಬರುವುದು, ಹೋಗುವುದರ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕರು ಭೇಟಿ ನೀಡಿದ ಸಂದರ್ಭ ವಸ್ತು ಸ್ಥಿತಿ ಬೆಳಕಿಗೆ ಬಂತು. ಕೆಲವು ವಿದ್ಯಾರ್ಥಿಗಳು ಆಟವಾಡುತಿದ್ದರೆ, ಉಪನ್ಯಾಸಕರುಗಳು ಕೊಠಡಿಯಲ್ಲಿ ಹರಟೆಯಲ್ಲಿ ತೊಡಗಿದ್ದರು. ಕೆಲವು ತರಗತಿಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಗೈರಾಗಿದ್ದು ಕಂಡು ಬಂತು. ಈ ಸಂಧರ್ಭ ಪ್ರಾಂಶುಪಾಲರನ್ನು ಪ್ರಶ್ನಿಸಿದ ಶಾಸಕರು ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಬರುತ್ತಿಲ್ಲ. ಹಿಂದೆ 500-600 ವಿದ್ಯಾರ್ಥಿಗಳಿದ್ದ ಕಾಲೇಜಿನಲ್ಲಿ ಇಂದು 143 ವಿದ್ಯಾರ್ಥಿಗಳಿದ್ದಾರೆ. ನೀವುಗಳು ಈ ಕಾಲೇಜನ್ನು ಮುಚ್ಚಿಸಿ ಬಿಡ್ತಿರಿ ಎಂದು ಹರಿಹಾಯ್ದರು.…
ಸೋಮವಾರಪೇಟೆ ಜ.12 : ಈ ನೆಲದ ‘ಕನ್ನಡ’ ಭಾಷೆಗೆ ಮೊದಲ ಆದ್ಯತೆಯನ್ನು ನೀಡುವುದರ ಜೊತೆಯಲ್ಲೆ, ಬದುಕಿನ ಭಾಷೆಯಾಗಿರುವ ಇಂಗ್ಲೀಷ್ ಜ್ಞಾನವನ್ನು ವಿದ್ಯಾರ್ಥಿಗಳು ಹೊಂದಿಕೊಳ್ಳುವುದು ಅವಶ್ಯವೆಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಶಾಲೆಯ ಆವರಣದಲ್ಲಿ ಆಯೋಜಿತ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ‘ಯುವ ದಿನಾಚರಣೆ’ಯನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಭಾಷೆ ಕನ್ನಡಕ್ಕೆ ಹೆಚ್ಚಿನ ಒತ್ತು ನೀಡುವುದು ಅವಶ್ಯವಾಗಿರುವುದರ ಜೊತೆಯಲ್ಲೆ, ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ ಇಡೀ ವಿಶ್ವವೇ ಮಾಹಿತಿಗಳ ವಿನಿಮಯದೊಂದಿಗೆ ಕಿರಿದಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಉನ್ನತ ವ್ಯಾಸಂಗ ಮಾಡಿದ್ದರು ಇಂಗ್ಲೀಷ್ ಜ್ಞಾನ ಇಲ್ಲದಿದ್ದಲ್ಲಿ ಯೋಗ್ಯ ಉದ್ಯೋಗವನ್ನು ಪಡೆಯುವುದು ಕಷ್ಟಸಾಧ್ಯವಾದ ಪರಿಸ್ಥಿತಿ ಇದೆಯೆಂದು ಇಂದಿನ ಪರಿಸ್ಥಿತಿಗಳನ್ನು ವಿಶ್ಲೇಷಿಸಿದರು. ಗ್ರಾಪಂಗಳ ಗ್ರಂಥಾಲಯ ಬಳಸಿ- ಇಂದಿನ ಆಧುನಿಕ ಯುಗದಲ್ಲಿ ಜಗತ್ತಿನ ಎಲ್ಲಾ ವಿಚಾರಗಳ ಅರಿವನ್ನು ಹೊಂದಿದಾಗ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯ. ಈ…
ವಿರಾಜಪೇಟೆ ಜ.12 : ಕಂದಾಯ ಇಲಾಖೆಯ ವತಿಯಿಂದ ವಿರಾeಪೇಟೆಯ ಮಹಿಳಾ ಸಮಾಜದಲ್ಲಿ ನಡೆದ ಸಾಗುವಳಿ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಸರಕಾರದ ಆದೇಶದಂತೆ ಅರ್ಜಿ ಸಲ್ಲಿಸಿದ ತಾಲೂಕಿನ ಅರ್ಹ ಫಲಾನುಭವಿಗಳಿಗೆ ವಿತರಿಸಿದರು. ವಿರಾಜಪೇಟೆ ತಾಲೂಕು ವ್ಯಾಪ್ತಿಯ ವಿವಿಧ ಯೋಜನೆಗಳಡಿ ಮಾಸಿಕ ಪಿಂಚಣಿ ಆದೇಶ ಪ್ರತಿಯನ್ನು ಮತ್ತು ಬಗರ್ ಹುಕುಂ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಸಾಗುವಳಿ ಚೀಟಿಯನ್ನು ವಿತರಣೆಮಾಡಿದರು. ಈ ಸಂದರ್ಭ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ ಅವರು ಮುಂದಿನ ದಿನಗಳಲ್ಲಿ ಇನ್ನಷ್ಷು ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದರು. ಇದೇ ಸಂದರ್ಭ ತಾಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ಫಲಾನುಭವಿಗಳಿಗೆ ಸುಮಾರು 9 ಸಾಗುವಳಿ ಚೀಟಿ, 92 ವಿವಿಧ ಪಿಂಚಣಿ ಆದೇಶ ಪ್ರತಿ ವಿತರಣೆ ಮಾಡಿದರು. ಈ ಸಂದರ್ಭ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಬಿಜೆಪಿಯ ಮಾಪಂಗಡ ಯಮುನಾ ಚಂಗಪ್ಪ, ತಾಲೂಕು ತಹಶೀಲ್ದಾರ್ ಅರ್ಚನಾ ಭಟ್, ಕಂದಾಯ ಪರಿವೀಕ್ಷಕ ಎಂ.ಎಲ್ ಹರೀಶ್,…
ಮಡಿಕೇರಿ ಜ.12 : ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಸರಗೂರು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ , ಕೊಡಗು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವೈದ್ಯರುಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಬಿ.ಕೆ.ರವೀಂದ್ರ ರೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಂತಹ ಕಾರ್ಯಕ್ರಮವನ್ನು ವೈದ್ಯರುಗಳು ಮತ್ತು ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಖಜಾಂಚಿ ಡಾ. ಕೆ.ಎನ್.ಚಂದ್ರಶೇಖರ್ , ಬಂಜೆತನ ನಿವಾರಣೆ ಕುರಿತಂತೆ ವೈದ್ಯರುಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯವಾಗಿದ್ದು, ಈ ತರಬೇತಿ ಕಾರ್ಯಕ್ರಮದಲ್ಲಿ ನುರಿತ ವೈದ್ಯರುಗಳ ತಂಡದಿಂದ ಸಂತಾನ ಹೀನತೆಯನ್ನು ನಿವಾರಿಸಲು ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮಡಿಕೇರಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ…
ಸೋಮವಾರಪೇಟೆ ಜ.12 : ಸೋಮವಾರಪೇಟೆ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಸ್ವಾಮಿ ವಿವೇಕಾನಂದರ 160ನೇ ಜಯಂತಿ ಯನ್ನು ಆಚರಿಸಲಾಯಿತು. ಸಮಿತಿಯ ಗೌರವಾಧ್ಯಕ್ಷ ಹಾಗೂ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪಟ್ಟಣದ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಈ ಸಂದರ್ಭ ಸಮಿತಿಯ ಕಾರ್ಯದರ್ಶಿ ಎಸ್.ಮಹೇಶ್, ಖಜಾಂಚಿ ಜಯಣ್ಣ, ರೋಟರಿ ಸಂಸ್ಥೆಯ ನಾಗೇಶ್, ಬಿ.ಎಸ್.ಸುಂದರ್, ನಾಗೇಶ್, ಜೇಸಿ ಸಂಸ್ಥೆ ಅಧ್ಯಕ್ಷರಾದ ರುಬೀನಾ, ಜಾನಪದ ಪರಿಷತ್ ಅಧ್ಯಕ್ಷ ಪ್ರಕಾಶ್, ಜ್ಞಾನವಿಕಾಸ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.






