ಲೇಖಕ: admin

ಮಡಿಕೇರಿ ಜ.11 : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು  ಜ.28 ರಂದು ಬೆಟ್ಟಗೇರಿ ಉದಯ ಪ್ರೌಢಶಾಲೆಯಲ್ಲಿ ನಡೆಯಲಿದೆ. ಸಮ್ಮೇಳನದಲ್ಲಿ ಯುವಕವಿಗಳಿಂದ ಕವಿ ಗೋಷ್ಠಿ, ಗಾಯಕರುಗಳಿಂದ ಗುಂಪು ಗಾಯನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಕವನವು 12 ರಿಂದ 20 ಸಾಲುಗಳ ಮಿತಿಯಲ್ಲಿ ಇರತಕ್ಕದ್ದು. ಮಡಿಕೇರಿ ತಾಲೂಕಿನ ಯುವಕವಿಗಳಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕವನ ವಾಚನ ಮಾಡುವವರು ತಮ್ಮ ಹೆಸರು, ವಿಳಾಸ, ವಾಟ್ಸಾಪ್ ಸಂಖ್ಯೆ ಫೋಟೋ ದೊಂದಿಗೆ ದಿನಾಂಕ 16.01.2023ರ ಒಳಗಾಗಿ ತಾವು ರಚಿಸಿದ ಕವನವನ್ನು ಶ್ರೀ ಅಂಬೇಕಲ್ ನವೀನ್, ಕಾರ್ಯಾಧ್ಯಕ್ಷರು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಚೇರಿ, ಸುದರ್ಶನ ವೃತ್ತದ ಬಳಿ, ಮಡಿಕೇರಿ. ಇಲ್ಲಿಗೆ ಕಳುಹಿಸತಕ್ಕದ್ದು ಅಥವಾ ವಾಟ್ಸಪ್ ಮೂಲಕ ದೂರವಾಣಿ ಸಂಖ್ಯೆ 9448005642 ಯನ್ನು ಸಂಪರ್ಕಿಸಿ ಕವನ ಮತ್ತು ಅರ್ಜಿಯನ್ನು ಸಲ್ಲಿಸತಕ್ಕದ್ದು. ಗುಂಪು ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಛಿಸುವ ತಂಡಗಳು…

Read More

ಮಡಿಕೇರಿ ಜ.11 : ಕೊಡಗಿನ ಮಣ್ಣು ಪೋಷಕಾಂಶಗಳಿಂದ ಕೂಡಿದ ‘ಚಿನ್ನ’ವೇ ಆಗಿದ್ದು, ಈ ಮಣ್ಣಿನ ಆರೋಗ್ಯ ಸಂರಕ್ಷಣೆಯ ಮೂಲಕ ಜಿಲ್ಲೆಯ ಬೆಳೆಗಾರರು ಉತ್ತಮ ಕೃಷಿ ನಡೆಸಲು ಸಾಧ್ಯವಿದೆ ಎಂದು ಚೆಟ್ಟಳ್ಳಿ ಕಾಫಿ ಸಂಶೋಧನಾ ಉಪ ಕೇಂದ್ರದ ಉಪ ನಿರ್ದೇಶಕ ಕೆ.ಚಂದ್ರಪ್ಪ ಅಭಿಪ್ರಾಯಪಟ್ಟರು. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಚೆಟ್ಟಳ್ಳಿಯ ಕಾಫಿ ಸಂಶೋಧನಾ ಕೇಂದ್ರದ ಪ್ರಮುಖರೊಂದಿಗಿನ ‘ಸಂವಾದ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಜಿಲ್ಲೆಯ ಮಣ್ಣು ಉತ್ತಮವಾಗಿದ್ದರು, ನಿರಂತರವಾದ ಮಳೆ ಮೊದಲಾದ ಕಾರಣಗಳಿಂದ ಮಣ್ಣಿನಲ್ಲಿರುವ ಪೋಷಕಾಂಶಗಳು ಅಸಮತೋಲಿತವಾಗಿರುತ್ತದೆ. ಈ ಹಿನ್ನೆಲೆ ಬೆಳೆಗಾರರು ತಮ್ಮ ತೋಟದ ಮಣ್ಣಿನ ಪರೀಕ್ಷೆಯ ಮೂಲಕ, ಕೇಂದ್ರ ನೀಡುವ ಸಲಹೆ ಸೂಚನೆಗಳನ್ನು ಆಧರಿಸಿ ಅಗತ್ಯ ಪೋಷಕಾಂಶಗಳನ್ನು ಮಣ್ಣಿಗೆ ಒದಗಿಸುವುದು ಅತ್ಯವಶ್ಯವಾಗಿದೆ ಎಂದರು. ಯಾವುದೇ ಪರೀಕ್ಷೆಗಳಿಲ್ಲದೆ ಅನಗತ್ಯವಾಗಿ ಮಣ್ಣಿಗೆ ಹೆಚ್ಚಿನ ರಸಗೊಬ್ಬರಗಳನ್ನು ನೀಡುವ ಮೂಲಕ ಮಣ್ಣು ಸತ್ತ್ವವನ್ನು ಕಳೆದುಕೊಳ್ಳದಂತೆ ಎಚ್ಚರ ವಹಿಸಬೇಕೆಂದು ಸಲಹೆ ನೀಡಿದರು. ಬೆಳೆಗಾರರು ತಮ್ಮ ತೋಟದ ಮಣ್ಣನ್ನು ಕನಿಷ್ಟ 3 ವರ್ಷಗಳಿಗೊಮ್ಮೆ ಪರೀಕ್ಷಿಸಿಕೊಂಡು, ಮಣ್ಣಿನ ಆಮ್ಲೀಯತೆಯ…

Read More

ನಾಪೋಕ್ಲು ಜ.11 : ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳ ಮತ್ತು ಪೋಷಕರ ನಿರೀಕ್ಷೆಯನ್ನು ಹುಸಿಗೊಳಿಸದೆ ಮಕ್ಕಳ ಉತ್ತಮ ಭವಿಷ್ಯವನ್ನು ರೂಪುಗೊಳಿಸಲು ಕಾರ್ಯ ಪ್ರವೃತ್ತವಾಗಿದೆ ಎಂದು ಸ್ಥಳೀಯ ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ರತ್ನ ಚರ್ಮನ ಹೇಳಿದರು. ಅಂಕುರ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪಾಠದ ಜೊತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲಾಗುತ್ತಿದ್ದು, ಇದರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದ ಅವರು ಸಂಸ್ಥೆಯ ಉದ್ದೇಶ ಹಾಗೂ ಸಂಸ್ಥೆ ನಡೆದು ಬಂದ ದಾರಿಯ ಬಗ್ಗೆ ಮೇಲುಕು ಹಾಕಿದರು. ಸಂಸ್ಥೆಯ ಅಧ್ಯಕ್ಷ ಕೇಟೋಳಿರ ರಾಜಾ ಚರ್ಮಣ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಟ್ರಸ್ಟ್ ಕಾಮೆಂಡ ಕಂಬಯ್ಯ, ನಿವೃತ್ತ ಪ್ರಾಂಶುಪಾಲ ಪ್ರೊ. ಕಲ್ಯಾಟ0ಡ ಪೂಣಚ್ಚ, ಪೆಮ್ಮುಡಿಯಂಡ ಅಪ್ಪಣ್ಣ, ಮುಕ್ಕಾಟಿರ ವಿನಯ್, ಕು0ಡಿಯೋಳಂಡ ಗಣೇಶ್ ಮುತ್ತಪ್ಪ, ಬಡುವಂಡ್ರ ಅರುಣ್ ಅಪ್ಪಚ್ಚು, ಮುಂಡಂಡ ಜಯಕುಮಾರ್, ಕೇಟೋಳಿರ ಗಾಯನ್ ಗೌರಮ್ಮ ಸೇರಿದಂತೆ ಪೋಷಕರು. ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕಿ…

Read More

ಮಡಿಕೇರಿ ಜ.11 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ಜನವರಿ, 12 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಶಾಸಕರು ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ, ಶಾಸಕರಾದ ಸುಜಾ ಕುಶಾಲಪ್ಪ, ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ಸುಶ್ಮಿತಾ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ,…

Read More

ಮಡಿಕೇರಿ ಜ.11 : ಪ್ರಸಕ್ತ (2022-23) ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಗೆ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಸೇವಾಸಿಂದು ಪೋರ್ಟಲ್ https://sevasindhu.karnataka.gov.in  ನಲ್ಲಿ ಲಭ್ಯವಿರುತ್ತದೆ. ಫಲಾಪೇಕ್ಷಿಗಳು ‘ಗ್ರಾಮ ಒನ್’ ‘ಬೆಂಗಳೂರು ಒನ್’ ಅಥವಾ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ವಿದ್ಯುತ್ ಚಾಲಿತ ಮತ್ತು ಅಲ್ಲದ ದ್ವಿ-ಚಕ್ರ/ ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ ಖರೀದಿಸಲು ಗರಿಷ್ಠ ರೂ.50 ಸಾವಿರ ಸಹಾಯಧನ, ಉಳಿದ ಮೊತ್ತ ಸಾಲ. ಪೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ರೇಷನ್‍ಕಾರ್ಡ್, ಗುರುತಿನ ಚೀಟಿ, ಆಧಾರ ಕಾರ್ಡ್ (ದೂರವಾಣಿ ಸಂಖ್ಯೆ ಜೋಡಣೆಯಾಗಿರಬೇಕು), ಬ್ಯಾಂಕ್ ಪಾಸ್ ಪುಸ್ತಕ, ಡಿಎಲ್(2 ವೀಲರ್) ಈ ದಾಖಲಾತಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ, 16 ಕೊನೆಯ ದಿನವಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಿ ಎರಡು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ…

Read More

ಮಡಿಕೇರಿ ಜ.11 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧೀನ ಬೋಧಕ ಆಸ್ಪತ್ರೆ ಮಡಿಕೇರಿಯಲ್ಲಿ ಸರ್ಕಾರಿ ಸ್ವಾಮ್ಯದ 4 ಡಯಾಲಿಸಿಸ್ ಉಪಕರಣಗಳು ಮತ್ತು ಖಾಸಗಿ ಸಹಭಾಗಿತ್ವದಲ್ಲಿ 7 ಉಪಕರಣಗಳು ಒಟ್ಟು 11 ಡಯಾಲಿಸಿಸ್ ಉಪಕರಣಗಳು ಕಾರ್ಯನಿರ್ವಹಿಸುತ್ತದೆ. ಅವುಗಳಲ್ಲಿ ಖಾಸಗಿ ಸಹಭಾಗಿತ್ವದ 4 ಉಪಕರಣಗಳು ದುರಸ್ತಿಯಾಗಿದ್ದು, ತುರ್ತು ರಿಪೇರಿ ಕ್ರಮವಹಿಸಲಾಗಿದೆ. ಅದಾಗ್ಯೂ ಒಟ್ಟು 7 ಉಪಕರಣಗಳಿಂದ ನಿರಂತರವಾಗಿ ಡಯಾಲಿಸಿಸ್ ಅನ್ನು ಸಾರ್ವಜನಿಕ ರೋಗಿಗಳಿಗೆ ಒದಗಿಸಲಾಗುತ್ತಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕಾರ್ಯಪ್ಪ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.11 : ಪ್ರಸಕ್ತ ಸಾಲಿನಲ್ಲಿ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು, ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್‍ಸಿಗಳು ಹೀಗೆ ಎಲ್ಲರೂ ಶ್ರಮಿಸುವಂತೆ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ನಿರ್ದೇಶನ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ‘ಎಸ್‍ಎಸ್‍ಎಲ್‍ಸಿ ಫಲಿತಾಂಶ ವಿಶ್ಲೇಷಣೆ ಮತ್ತು ಸುಧಾರಣೆ’ ಕುರಿತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಜೊತೆ ನಡೆದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬಾರಿ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಕೊಡಗು ಜಿಲ್ಲೆ 11ನೇ ಸ್ಥಾನ ಪಡೆದಿತ್ತು, ಈ ಬಾರಿ 3 ನೇ ಸ್ಥಾನದೊಳಗೆ ಫಲಿತಾಂಶ ಬರುವಂತೆ ಗುಣಮಟ್ಟದ ಕಲಿಕೆಗೆ ಎಲ್ಲರೂ ಶ್ರಮಿಸಬೇಕು ಎಂದರು. ‘ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ರಾಜ್ಯ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೂ ಮೊದಲು ಜನವರಿ ಕೊನೆ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ಜಿಲ್ಲಾ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ…

Read More

ಮಡಿಕೇರಿ ಜ.11 : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೂತನ ಸಂಘಟನಾ ಸಂಚಾಲಕರಾಗಿ ಭಾವ ಮಾಲ್ದಾರೆ, ಎಂ.ಮನೋಜ್ ಕುಮಾರ್, ರಘು ವಿರಾಜಪೇಟೆ, ರಫೀಕ್ ಪೊನ್ನಂಪೇಟೆ ಹಾಗೂ ಸದಸ್ಯರಾಗಿ ಕುಮಾರಸ್ವಾಮಿ ಕುಶಾಲನಗರ ಆಯ್ಕೆಯಾಗಿದ್ದಾರೆ ಎಂದು ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ತಿಳಿಸಿದ್ದಾರೆ. ತಾಲ್ಲೂಕು ಸಂಚಾಲಕರಾಗಿ ಮನು ವಿರಾಜಪೇಟೆ, ಉಮೇಶ್ ಕುಶಾಲನಗರ, ಶ್ರೀನಿವಾಸ್ ಮಡಿಕೇರಿ, ಅರುಣ ಪೊನ್ನಂಪೇಟೆ ಹಾಗೂ ನಾಗರಾಜ್ ಸೋಮವಾರಪೇಟೆ ನೇಮಕಗೊಂಡಿದ್ದಾರೆ. ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿಯಾಗಿ ಪವಿತ್ರ ಶಿವಕುಮಾರ್, ಸಂಘಟನಾ ಸಂಚಾಲಕಿಯರಾಗಿ ಪದ್ಮಾವತಿ ಕುಶಾಲನಗರ, ನಾಗಮ್ಮ ಕೊಡ್ಲಿಪೇಟೆ, ಶಶಿಕಲಾ ಹಾಗೂ ಖಜಾಂಚಿಯಾಗಿ ಭಾಗ್ಯವತಿ, ತಾಲ್ಲೂಕು ಸಂಚಾಲಕರಾಗಿ ಗೌರಮ್ಮ ಜಯಣ್ಣ ಕುಶಾಲನಗರ, ರೇಖಾ ಮಹೇಶ್ ವಿರಾಜಪೇಟೆ, ನೇತ್ರಾವತಿ ಪೊನ್ನಂಪೇಟೆ ಹಾಗೂ ಹೆಚ್.ಹೆಚ್.ಗೌರಮ್ಮ ಮಡಿಕೇರಿ ಆಯ್ಕೆಯಾಗಿದ್ದಾರೆ. ::: ಸದಸ್ಯತ್ವ ನೋಂದಣಿ ::: ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರು ತಿತಿಮತಿ, ಕಾರೇಕಾಡು, ದೇವಮ್ಮಚ್ಚಿ ಪೈಸಾರಿಗೆ ಭೇಟಿ ನೀಡಿ ಸಮಿತಿಯ ಪ್ರಾಥಮಿಕ ಸದಸ್ಯತ್ವ ನೋಂದಣಿ ಅಭಿಯಾನ ನಡೆಸಿದರು.…

Read More

ಮಡಿಕೇರಿ ಜ.11 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 33ನೇ ಮಕರ ಸಂಕ್ರಾಂತಿ ಮಹೋತ್ಸವ ಜ.14 ರಂದು ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಸುಧೀರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕರ ಸಂಕ್ರಾಂತಿ ಪ್ರಯುಕ್ತ ದೇವಾಲಯದಲ್ಲಿ ನಡೆಯಲಿರುವ ವಿವಿಧ ಪೂಜಾ ಕೈಂಕರ್ಯಗಳ ಕುರಿತು ಮಾಹಿತಿ ನೀಡಿದರು. ಜ.13 ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಪಂಚಾಮೃತ ಅಭಿಷೇಕ ಇತ್ಯಾದಿ ಸೇವೆಗಳು ನಡೆಯಲಿದೆ. ಜ.14 ರಂದು ಪ್ರಾತಃಕಾಲ 6.30ಕ್ಕೆ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, 7 ಗಂಟೆಗೆ ಶ್ರೀ ಮುತ್ತಪ್ಪ ಹಾಗೂ ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ ಜರುಗಲಿದ್ದು, ಬೆಳಿಗ್ಗೆ 7.30 ರಿಂದ ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ನಡೆಯಲಿದೆ. ಬೆಳಿಗ್ಗೆ 8.30 ಗಂಟೆಗೆ ಶ್ರಿ ಕುಟ್ಟಿಚಾತನ್ ದೇವರ ವೆಳ್ಳಾಟಂ, 9 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 10 ಗಂಟೆಗೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30…

Read More

ಮಡಿಕೇರಿ ಜ.15 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯ ವಾಯುಪುತ್ರ ಭವನದಲ್ಲಿ “ಶ್ರೀ ಪಂಚಮುಖಿ ವಾಯುಪುತ್ರ” ಮೂರ್ತಿಯ ಅನಾವರಣ ಕಾರ್ಯಕ್ರಮ ಜ.15 ರಂದು ನಡೆಯಲಿದೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ತಮ್ಮ ಅಧ್ಯಕ್ಷತೆಯಲ್ಲಿ ಅಂದು ಬೆಳಗ್ಗೆ 10.30 ಗಂಟೆಗೆ ನಡೆಯವ ಸಮಾರಂಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಹಾಗೂ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಪಿ.ಕೃಷ್ಣಮೂರ್ತಿ ಪಾಲ್ಗೊಳ್ಳಲಿದ್ದಾರೆ ಎಂದರು. ಸುಮಾರು 9 ಅಡಿ ಎತ್ತರದ “ಶ್ರೀ ಪಂಚಮುಖಿ ವಾಯುಪುತ್ರ” ಮೂರ್ತಿಯನ್ನು ಕೆತ್ತಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಕಾರ್ಕಳದ ಗುಣವಂತೇಶ್ವರ ಭಟ್ ಉಪನ್ಯಾಸ ನೀಡಲಿದ್ದಾರೆ. ಸಂಘದ ರೈತ ಸದಸ್ಯರ 3 ರಿಂದ 9 ವರ್ಷದೊಳಗಿನ ಮಕ್ಕಳು ವಾಯುಪುತ್ರ ಮೂರ್ತಿಗೆ ಅಭಿಷೇಕ ಮಾಡಲಿದ್ದಾರೆ. ಮೂರ್ತಿಯನ್ನು ಶ್ರೀಕೃಷ್ಣ ಶಿಲೆಯಿಂದ ಕೆತ್ತಲಾಗಿದೆ ಎಂದು ತಿಳಿಸಿದರು. ಶಿಥಿಲಾವಸ್ಥೆಗೊಂಡಿದ್ದ ಈರಳೆವಳಮುಡಿ ಶಾಖೆಯ…

Read More