ಲೇಖಕ: admin

ಮಡಿಕೇರಿ ಜ.11 : ಕೊಡಗು ಆಮ್ ಆದ್ಮಿ ಪಕ್ಷದ ಸಭೆಯು ಜ.14 ರಂದು ಸೋಮವಾರಪೇಟೆಯಲ್ಲಿ ನಡೆಯಲಿದೆ ಎಂದು ಕೊಡಗು ಗ್ರಾಮ ಸಂಪರ್ಕ ಅಭಿಯಾನದ ಅಧ್ಯಕ್ಷ ಎಂ.ಕೆ.ಅಪ್ಪಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ 10.30ಕ್ಕೆ ಸೋಮವಾರಪೇಟೆಯ ಐಬಿಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷಕ್ಕೆ ನೂತನ ಕಾರ್ಯಕರ್ತರು ಸೇರ್ಪಡೆಯಾಗಲಿದ್ದಾರೆ. ಪಕ್ಷಕ್ಕೆ ಸೇರಲು ಇಚ್ಛೆ ಇರುವ ಸಾರ್ವಜನಿಕರು ಆಗಮಿಸುವಂತೆ ತಿಳಿಸಿದರು. ವಿಧಾನ ಸಭಾ ಚುನಾವಣೆ ಸಮೀಪ ಇರುವುದರಿಂದ ಪಕ್ಷದ ಮುಖಂಡರು, ಹಿತೈಷಿಗಳು, ಬೆಂಬಲಿಗರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸುವಂತೆ ಅಯ್ಯಪ್ಪ ಮನವಿ ಮಾಡಿದರು.

Read More

ಮಡಿಕೇರಿ ಜ.10 : ಮೈಸೂರಿನ ನಾರಾಯಣ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಜ.13 ರಂದು ಮಡಿಕೇರಿ, ವಿರಾಪೇಟೆಯಲ್ಲಿ ಹಾಗೂ ಕುಶಾಲನಗರದಲ್ಲಿ ಲ್ಯಾಪರೋಸ್ಕೋಪಿಕ್ ಮತ್ತು ಜೀರ್ಣಾಂಗ ಕ್ಯಾನ್ಸರ್ ತಪಾಸಣೆ ಶಿಬಿರ ನಡೆಯಲಿದೆ. ಕುಶಾಲನಗರದ ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆವರೆಗೆ, ಮಡಿಕೇರಿಯ ರವಿ ಆರ್ಥೋಪೆಡಿಕ್ ಸೆಂಟರ್‍ನಲ್ಲಿ 11.30 ರಿಂದ ಮಧ್ಯಾಹ್ನ 12.30ರ ವರೆಗೆ, ವಿರಾಜಪೇಟೆಯ ಮಗ್ಗುಲ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಸೆಂಟರ್‍ನಲ್ಲಿ ಮಧ್ಯಾಹ್ನ 1.30 ರಿಂದ ಮಧ್ಯಾಹ್ನ 2.30ರ ವರೆಗೆ ಲ್ಯಾಪರೋಸ್ಕೋಪಿಕ್ ಮತ್ತು ಗ್ಯಾಸ್ಟ್ರೋ ಆಂಕೋ ಶಸ್ತ್ರಚಿಕಿತ್ಸಕ ಡಾ.ಎಚ್.ಎಂ.ಲೋಕೇಶ್ ತಪಾಸಣೆ ನಡೆಸಲಿದ್ದಾರೆ. ಶಿಬಿರದಲ್ಲಿ ಲ್ಯಾಪರೋಸ್ಕೋಪಿಕ್ ಸರ್ಜರಿ, ಪಿತ್ತಕೋಶದ ಕಲ್ಲುಗಳು, ಹರ್ನಿಯಾ, ಅಪೆಂಡಿಸೈಟಿಸ್, ಜೀರ್ಣಾಂಗ ಕ್ಯಾನ್ಸರ್, ಗ್ಯಾಸ್ಟ್ರೈಟಿಸ್, ಹೊಟ್ಟೆ, ಕರುಳು, ಲಿವರ್ ಮತ್ತು ಪ್ಯಾಂಕ್ರಿಯಾಸ್ ಕಾಯಿಲೆಗಳು, ಬೊಜ್ಜುತನಕ್ಕೆ ಚಿಕಿತ್ಸೆ ನೀಡಲಾಗುವುದು. ನೋಂದಣಿಗಾಗಿ 8884458890, 9513408004, 8277468176 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಜ.11 : ಚೆಟ್ಟಳ್ಳಿಯ ಬಟ್ಟೀರ ಕುಟುಂಬಸ್ಥರ ವತಿಯಿಂದ ಪ್ರಥಮ ವರ್ಷದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಜ.29ರಂದು ನಡೆಯಲಿದೆ ಎಂದು ಕುಟುಂಬದ ಹಿರಿಯರಾದ ಬಟ್ಟೀರ.ಎಸ್.ಕಾಳಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೆಟ್ಟಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಬೆಳಗ್ಗೆ 9.30 ಗಂಟೆಗೆ ಕೋವಿ ಪೂಜೆಯೊಂದಿಗೆ ಸ್ಪರ್ಧೆಗೆ ಚಾಲನೆ ದೊರೆಯಲಿದೆ ಎಂದರು. .22 ರೈಫಲ್(50 ಮೀ), 12 ಬೋರ್(30 ಮೀ) ಹಾಗೂ ಏರ್ ರೈಫಲ್(15 ಮೀ) ವಿಭಾಗದಲ್ಲಿ ಮುಕ್ತ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರತಿಯೊಬ್ಬರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ಆಕರ್ಷಕ ಟ್ರೋಫಿ ಮತ್ತು ನಗದು ನೀಡಿ ಗೌರವಿಸಲಾಗುವುದು. .22 ರೈಫಲ್, 12 ಬೋರ್ ಸ್ಪರ್ಧೆಯ ನೋಂದಣಿಗೆ ತಲಾ 200 ರೂ., ಹಾಗೂ ಏರ್ ರೈಫಲ್ 100 ರೂ ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9480438001, 6361743747 ಸಂಖ್ಯೆಯನ್ನು ಸಂಪರ್ಕಿಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಟ್ಟೀರ ಕುಟುಂಬಸ್ಥರಾದ…

Read More

ಮಡಿಕೇರಿ ಜ.11 :  ಸೋಮವಾರಪೇಟೆಯ ಎಸ್ ಜೆ ಎಂ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳ ಚಟುವಟಿಕೆ ಗಮನಿಸಿ 150 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಶಾಲಾ ವತಿಯಿಂದ ಅಧ್ಯಕ್ಷ  ಸಿ ಕೆ. ರೋಹಿತ್  ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಕೆ.ಎನ್. ತೇಜಸ್ವಿ, ಖಜಾಂಜಿ ಜಿ.ಟಿ.ಯೋಗೇಂದ್ರ, ಮಾಜಿ ಅಧ್ಯಕ್ಷ ಸಿ.ಕೆ.ಮಲ್ಲಪ್ಪ, ದಾನಿಗಳಾದ ಪವನ್ ಮುತ್ತಪ್ಪ, ಕೆ.ಎಂ.ಜಗದೀಶ್, ಎ.ಎಸ್ .ಮಹೇಶ್, ಎಸ್. ಬಿ.ಲೀಲಾರಾo, ವಸಂತ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Read More

ವಿರಾಜಪೇಟೆ ಜ.11 : ಬೈತೂರಪ್ಪ ದೇವಾಲಯದಲ್ಲಿ ವರ್ಷಂಪ್ರತಿ ನಡೆಯುವ ಉತ್ಸವ ಸಂದರ್ಭದಲ್ಲಿ ಕೇರಳದಿಂದ ಕಾಲ್ನಡಿಗೆಯಲ್ಲಿ ಆಗಮಿಸುವ “ಕೋರತಚ್ಛ” ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯಕ್ಕೆ ಆಗಮಿಸಿ ಹಬ್ಬದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಊರಿನವರು ಕೋರತಚ್ಛ ತಂಡವನ್ನು ಆತ್ಮೀಯತೆಯಿಂದ ಬರಮಾಡಿಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಕೇರಳದ ಉಳಿಕಲ್ಲ್ ತಾಲ್ಲೂಕಿನ ಬಯತೂರ್ ಎಂಬ ಜಾಗದಲ್ಲಿ ವರ್ಷಂಪ್ರತಿ ಹಬ್ಬ ನಡೆಯಲಿದ್ದು, ಕೊಡಗಿನಲ್ಲಿ ಮೈಮೇಲೆ ಬರುವ ಬಹುತೇಕ ದೇವಾನುದೇವತೆಗಳು ಈ ಹಬ್ಬದಲ್ಲಿ ಭಾಗಿಯಾಗಿ ದರ್ಶನ ಪಡೆಯುತ್ತಾರೆ. ಇದರ ದೊಡ್ಡ ಹಬ್ಬ ಜ.24 ಹಾಗೂ 25ರಂದು ನಡೆಯುತ್ತದೆ. 25ರಂದು ಕೊಡಗಿನ ದೇವರುಗಳ ದರ್ಶನ ಕಾಣಸಿಗುತ್ತದೆ.

Read More

ವಿರಾಜಪೇಟೆ ಜ.11 : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್. ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರವು ದಿಡ್ಡಳಿಯ ಚೆನ್ನಂಗಿ ಬಸವನಹಳ್ಳಿಯ ಸರಕಾರಿ ಗಿರಿಜನ ಆಶ್ರಮ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ‘ಕಾಡುಹಕ್ಕಿ ಗೂಡು’ ಕಾರ್ಯಕ್ರಮದಡಿಯಲ್ಲಿ ಸಮೀಪದ ಗಿರಿಜನ ಹಾಡಿಯ ಮನೆಯೊಂದರಲ್ಲಿ ಸಂವಾದ ಕಾರ್ಯಕ್ರಮ ಜರುಗಿತು. ಗಿರಿಜನ ಹಾಡಿಯ ಶಾಂತಮ್ಮ ಎಂಬವರ ಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಊರಿನ ಬುಡಕಟ್ಟು ಜನಾಂಗದ ಮುಖಂಡರಾದ ಅಪ್ಪಾಜಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿ ಶಿಬಿರಾರ್ಥಿಗಳಿಗೆ ಬುಡಕಟ್ಟು ಜನರ ಜೀವನ ಪದ್ಧತಿ, ಆಹಾರ ಕ್ರಮಗಳು, ಸಂಪ್ರದಾಯಗಳು, ಪದ್ಧತಿ ಪರಂಪರೆ, ಇತಿಹಾಸ, ಜೀವನ ಪದ್ಧತಿ, ಹಬ್ಬಗಳ ಆಚರಣಾ ವಿಧಾನಗಳನ್ನ ಸಂಪೂರ್ಣವಾಗಿ ವಿವರಿಸಿ ಬುಡಕಟ್ಟು ಜನರ ಸಮಸ್ಯೆಗಳನ್ನು ತಿಳಿಸಿಕೊಟ್ಟರು. ಈ ಸಂದರ್ಭ ಎನ್.ಎಸ್.ಎಸ್. ಅಧಿಕಾರಿಗಳಾದ ಅರ್ಜುನ್ ಎಚ್. ಆರ್., ಉಪನ್ಯಾಸಕರಾದ ಬಿ. ಎನ್. ಶಾಂತಿಭೂಷಣ್, ಬಸವನಹಳ್ಳಿ ಶಾಲೆಯ ಮುಖ್ಯ ಶಿಕ್ಷಕರಾದ ಸಿದ್ದಲಿಂಗ ಶೆಟ್ಟಿ, ಶಿಕ್ಷಕರು, ಗ್ರಾಮಸ್ಥರು ಹಾಜರಿದ್ದರು.

Read More

ಸುಂಟಿಕೊಪ್ಪ,ಜ.11 : ತಮಿಳು ಸಂಘದ ವತಿಯಿಂದ ಜ.15 ರಂದು 23ನೇ ವರ್ಷದ ಪೊಂಗಲ್ ಹಾಗೂ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ವಿಘ್ನೇಶ್ ತಿಳಿಸಿದರು. ಅಂದು ಬೆಳಿಗ್ಗೆ 10 ಗಂಟೆಗೆ ಮಾದಾಪುರ ರಸ್ತೆಯಲ್ಲಿರುವ ವೃಕ್ಷೋಧ್ಭವ ಮಹಾಗಣಪತಿ ದೇವಸ್ಥಾನದಿಂದ ಹಾಲಿನ ಕಳಸದೊಂದಿಗೆ ಮೆರವಣಿಗೆ ಹೊರಟು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶ್ರೀ ಚಾಮುಂಡೇಶ್ವರಿ ದೇವಸ್ಥನಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಿಸಿದರು. ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಭಕ್ತಾಧಿಗಳಿಗೆ 1 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ಅನ್ನÀ ಸಂತರ್ಪಣೆಯನ್ನು ನೇರವೇರಿಸಲಾಗುವುದು. ನಂತರ 3.30ರಿಂದ ಸಂಜೆ 6 ಗಂಟೆಯವರೆಗೆ ಪುರುಷರಿಗೆ ಮಹಿಳೆಯರಿಗೆ ಮಕ್ಕಳಿಗೆ ವಿವಿಧ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ. ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಇರಿಸಿ ವಿದ್ಯುತ್‍ದೀಪ ಅಲಂಕೃತ ಮಂಟಪದ ಮೆರವಣಗೆಯು ಸುಂಟಿಕೊಪ್ಪ ಪಟ್ಟಣದಲ್ಲಿ ಸಾಗಲಿದೆ. ರಾತ್ರಿ ದೇವಸ್ಥಾನದಲ್ಲಿ ಶ್ರೀ ಚಾಮುಂಡೇಶ್ವರಿ ವಿಶೇಷ ಪೂಜೆಯ ನಂತರ ಭಕ್ತಾಧಿಗಳಿಗೆ ಪ್ರಸಾದ (ಪೊಂಗಳ್) ವಿನಿಯೋಗ ನಡೆಯಲಿದೆ. ಎಂದು ಪತ್ರಿಕಾ ಹೇಳಿಕೆಯಲ್ಲಿ ತಮಿಳು ಸಂಘದ ಅಧ್ಯಕ್ಷರಾದ ವಿಘ್ನೇಶ್ ತಿಳಿಸಿದ್ದಾರೆ. ಈ…

Read More

ಸುಂಟಿಕೊಪ್ಪ,ಜ.11 : ತಮಿಳು ಸಂಘ ಮತ್ತು ಪೊಂಗಳ್ ಆಚರಣಾ ಸಮಿತಿ ನೂತನ ಅಧ್ಯಕ್ಷರಾಗಿ ವಿಘ್ನೇಶ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಗಿ ಆರ್.ಅರುಣ್ ಕುಮಾರ್, ಖಜಾಂಚಿಯಾಗಿ ವೇಲುಮುರುಗನ್ ಉಪಾಧ್ಯಕ್ಷರಾಗಿ ಶರವಣ, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಸೂರ್ಯ ಅವರನ್ನು ಆಯ್ಕೆ ಮಾಡಲಾಯಿತು.

Read More

ಮಡಿಕೇರಿ ಜ.10 : ನ್ಯಾಯಮೂರ್ತಿ ಸದಾಶಿವ ಆರೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಯ ಈಡೇರಿಕೆಗಾಗಿ ಆಗ್ರಹಿಸಿದರು. ಈ ಸಂದರ್ಭ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಮಾತನಾಡಿ, ಸಾಮಾಜಿಕ ಪರಿವರ್ತನೆಗೆ ಹೋರಾಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪರಿಶಿಷ್ಟರಲ್ಲೇ ಅತ್ಯಂತ ದುರ್ಬಲರಾದ ವರ್ಗಗಳಿಗೆ ವಿಶೇಷ ರಕ್ಷಣೆ ಹಾಗೂ ಮೀಸಲಾತಿ ಅಗತ್ಯತೆಗಳನ್ನು ಜನಸಂಖ್ಯೆ ಆಧಾರದಲ್ಲಿಯೂ ಮತ್ತು ಆರ್ಥಿಕ ಹಿಂದುಳಿದಿರುವಿಕೆಯನ್ನು ಆಧರಿಸಿ ಪ್ರತಿಪಾದಿಸಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಜನಪರ ಸಂಘಟನೆಗಳೆಲ್ಲಾ ಒಂದಾಗಿ ಪರಿಶಿಷ್ಟ ಒಳಮೀಸಲಾತಿ ಜಾರಿಯಾಗಬೇಕೆಂದು ಹೋರಾಟ ಮಾಡಿದ್ದರ ಪರಿಣಾಮ ಈ ಹಿಂದಿನ ಧರ್ಮಸಿಂಗ್ ನೇತೃತ್ವದ ಸರ್ಕಾರ ಒಂದು ಆಯೋಗವನ್ನು ರಚನೆ ಮಾಡಿ ಆ ಆಯೋಗದ ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರನ್ನು ನೇಮಕ ಮಾಡಿತ್ತು. ನ್ಯಾಯಮೂರ್ತಿ ಸದಾಶಿವರವರು ಏಳು ವರ್ಷಕ್ಕೂ…

Read More

ಮಡಿಕೇರಿ ಜ.10 : ಕೊಡಗು ಜಿಲ್ಲೆಯಲ್ಲಿ ಶೀಘ್ರ ಜಿಲ್ಲಾ ಮಟ್ಟದ ತುಳು ಸಮ್ಮೇಳನವನ್ನು ನಡೆಸಲು ಎಲ್ಲಾ ತುಳು ಭಾಷಿಕ ಸಮುದಾಯದ ಪ್ರಮುಖರ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅವರ ಅಧ್ಯಕ್ಷತೆಯಲ್ಲಿ ನಗರದ ಬಾಲಭವನ ಸಭಾಂಗಣದಲ್ಲಿ ನಡೆದ ತುಳು ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯಲ್ಲಿ ವಿವಿಧ ತುಳು ಭಾಷಿಕರ ಸಮುದಾಯದ ಪ್ರಮುಖರು ಹಾಗೂ ಕೂಟದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಲಾಯಿತು. ಸಮ್ಮೇಳನದಲ್ಲಿ ಆಕರ್ಷಣೀಯ ಸ್ತಬ್ಧಚಿತ್ರ, ತುಳುರಥ, ಮೆರವಣಿಗೆ, ವಿಚಾರಗೋಷ್ಠಿ ನಡೆಸಲು ವಿವಿಧ ಉಪ ಸಮಿತಿಗಳನ್ನು ರಚಿಸುವುದು ಮತ್ತು ಮುಖ್ಯ ಅತಿಥಿಗಳ ಭಾಗವಹಿಸುವಿಕೆ ಕುರಿತು ಚರ್ಚಿಸಲಾಯಿತು. 15 ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯ ತುಳು ಬಾಂಧವರನ್ನು ಸೇರಿಸುವುದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸುವುದು ಮತ್ತು ಮುಂದಿನ ಸಭೆಯಲ್ಲಿ ಸಮ್ಮೇಳನದ ದಿನಾಂಕ ಅಂತಿಮಗೊಳಿಸಲು ನಿರ್ಧರಿಸಲಾಯಿತು. ಸಮ್ಮೇಳನದ ಯಶಸ್ಸಿಗೆ ಎಲ್ಲಾ ತುಳು ಭಾಷಿಕ ಸಮುದಾಯ ಒಗ್ಗಟ್ಟಾಗಿ ಶ್ರಮಿಸುವ ಕುರಿತು ಸಭೆಯಲ್ಲಿ ಭರವಸೆ ದೊರೆಯಿತು. ತುಳುವೆರ ಜನಪದ…

Read More