ಮಡಿಕೇರಿ ಜ.10 : ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು. ‘ಚಂದ್ರಗಿರಿ ತೀರದಲ್ಲಿ’ ಕಾದಂಬರಿಯ ಮೂಲಕ ಪ್ರಸಿದ್ಧಿಗೆ ಬಂದಿದ್ದ ಸಾರಾ ಅಬೂಬಕರ್ ಅನೇಕ ಕೃತಿಗಳನ್ನು ರಚಿಸಿ ಖ್ಯಾತರಾಗಿದ್ದರು. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಮಂಗಳೂರಿನ ಬಂದರ್ ಝೀನತ್ ಬಕ್ಷ್ ಮಸೀದಿ ಆವರಣದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಹಿಳಾ ಧ್ವನಿಯಾಗಿದ್ದ ಸಾರಾ ಅಬೂಬಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ನ್ಯಾಯವಾದಿ ಪಿ.ಅಹ್ಮದ್ ಮತ್ತು ಜೈನಾಬಿ ದಂಪತಿಯ ಪುತ್ರಿಯಾಗಿರುವ ಅವರು ಹುಟ್ಟೂರಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದರು. ಕಾಸರಗೋಡಿನಲ್ಲಿ ಹೈಸ್ಕೂಲ್ ಪೂರೈಸಿದ ಸಾರಾ ತನ್ನ ಅಜ್ಜಿ ಹೇಳುತ್ತಿದ್ದ ಕಥೆಗಳಿಂದಾಗಿ ಅವರು ಎಳೆಯದರಲ್ಲೇ ಸಾಹಿತ್ಯ ಕ್ಷೇತ್ರದತ್ತ ಆಕರ್ಷಿತರಾಗಿದ್ದರು.…
ಲೇಖಕ: admin
ಮಡಿಕೇರಿ ಜ.10 : ಅಗ್ನಿ ಆಕಸ್ಮಿಕದಿಂದ ಪೆಯಿಂಟ್ ಮತ್ತು ಫ್ಯಾನ್ಸಿ ಮಳಿಗೆ ಹಾಗೂ ಗೋದಾಮು ಸಂಪೂರ್ಣವಾಗಿ ಸುಟ್ಟುಕರಕಲಾದ ಘಟನೆ ಗೋಣಿಕೊಪ್ಪಲಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಇಮ್ತಾರಾಂ ಎಂಬುವವರಿಗೆ ಸೇರಿದ ಸ್ವಂತ ಮಳಿಗೆಗಳು ಇದಾಗಿದ್ದು, ಇಡೀ ಕಟ್ಟಡ ಬೆಂಕಿಗಾಹುತಿಯಾಗಿದೆ. ಪೆಯಿಂಟ್ ದಾಸ್ತಾನು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಸುಮಾರು 80 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಗೋಣಿಕೊಪ್ಪ ಅಗ್ನಿಶಾಮಕ ದಳದ ಅಧಿಕಾರಿ ಪಳಂಗಪ್ಪ ಅವರ ನೇತೃತ್ವದ ತಂಡ ಅಗ್ನಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿತು. ಸಾರ್ವಜನಿಕರು ಕೂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. ಇಮ್ತಾರಾಂ ಕಳೆದ 35 ವರ್ಷಗಳಿಂದ ಗೋಣಿಕೊಪ್ಪಲಿನಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ.
ಮಡಿಕೇರಿ ಜ.10 : ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ದಾಳಿಯಾಗಿದ್ದು, ಎಮ್ಮೆಯೊಂದು ಬಲಿಯಾಗಿದೆ. ಬಲ್ಯಮಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚೇಂದೀರ ಸುರೇಶ್ ಎಂಬುವವರಿಗೆ ಸೇರಿದ ಎಮ್ಮೆ ಇದಾಗಿದೆ. ಗ್ರಾಮದಲ್ಲಿ ಆತಂಕದ ಪರಿಸ್ಥಿತಿ ಇದ್ದು, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಎರಡು ತಿಂಗಳ ಹಿಂದೆ ಹುಲಿಗಳು ಹಸುಗಳನ್ನು ಬಲಿ ಪಡೆದ ಘಟನೆಗಳು ನಡೆದಿತ್ತು. ಅರಣ್ಯ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಜ.10 : ಮೈಸೂರಿನ ನಾರಾಯಣ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಜ.13 ರಂದು ಮಡಿಕೇರಿ, ವಿರಾಪೇಟೆಯಲ್ಲಿ ಹಾಗೂ ಕುಶಾಲನಗರದಲ್ಲಿ ಲ್ಯಾಪರೋಸ್ಕೋಪಿಕ್ ಮತ್ತು ಜೀರ್ಣಾಂಗ ಕ್ಯಾನ್ಸರ್ ತಪಾಸಣೆ ಶಿಬಿರ ನಡೆಯಲಿದೆ. ಕುಶಾಲನಗರದ ಮೆಡಿಪ್ಲೆಕ್ಸ್ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆವರೆಗೆ, ಮಡಿಕೇರಿಯ ರವಿ ಆರ್ಥೋಪೆಡಿಕ್ ಸೆಂಟರ್‍ನಲ್ಲಿ 11.30 ರಿಂದ ಮಧ್ಯಾಹ್ನ 12.30ರ ವರೆಗೆ, ವಿರಾಜಪೇಟೆಯ ಮಗ್ಗುಲ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಸೆಂಟರ್‍ನಲ್ಲಿ ಮಧ್ಯಾಹ್ನ 1.30 ರಿಂದ ಮಧ್ಯಾಹ್ನ 2.30ರ ವರೆಗೆ ಲ್ಯಾಪರೋಸ್ಕೋಪಿಕ್ ಮತ್ತು ಗ್ಯಾಸ್ಟ್ರೋ ಆಂಕೋ ಶಸ್ತ್ರಚಿಕಿತ್ಸಕ ಡಾ.ಎಚ್.ಎಂ.ಲೋಕೇಶ್ ತಪಾಸಣೆ ನಡೆಸಲಿದ್ದಾರೆ. ಶಿಬಿರದಲ್ಲಿ ಲ್ಯಾಪರೋಸ್ಕೋಪಿಕ್ ಸರ್ಜರಿ, ಪಿತ್ತಕೋಶದ ಕಲ್ಲುಗಳು, ಹರ್ನಿಯಾ, ಅಪೆಂಡಿಸೈಟಿಸ್, ಜೀರ್ಣಾಂಗ ಕ್ಯಾನ್ಸರ್, ಗ್ಯಾಸ್ಟ್ರೈಟಿಸ್, ಹೊಟ್ಟೆ, ಕರುಳು, ಲಿವರ್ ಮತ್ತು ಪ್ಯಾಂಕ್ರಿಯಾಸ್ ಕಾಯಿಲೆಗಳು, ಬೊಜ್ಜುತನಕ್ಕೆ ಚಿಕಿತ್ಸೆ ನೀಡಲಾಗುವುದು. ನೋಂದಣಿಗಾಗಿ 8884458890, 9513408004, 8277468176 ಸಂಪರ್ಕಿಸಬಹುದಾಗಿದೆ.
ನಾಪೋಕ್ಲು ಜ.10 : ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಹಿರಿಯರು ಹುಟ್ಟು ಹಾಕಿದ ಸ್ವಾತಂತ್ರ್ಯ ಪೂರ್ವ ಮಾತೃ ಸಂಸ್ಥೆಯಾದ ಅಖಿಲ ಕೊಡವ ಸಮಾಜದ ಆರ್ಥಿಕ ಪುನಶ್ಚೇತನಕ್ಕಾಗಿ ನೂತನ ಆರ್ಥಿಕ ಉಪ ಸಮಿತಿಯನ್ನು ಮಾಡಲಾಗಿದ್ದು, ಇದರ ಮೂಲಕ ಜನಾಂಗಬಾಂಧವರು ಕೈಜೋಡಿಸಬೇಕು ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಹಾಗೂ ಇಗ್ಗುತ್ತಪ್ಪ ದೇವಾಲಯದ ದೇವತಕ್ಕರಾದ ಪರದಂಡ ಸುಬ್ರಮಣಿ ಕಾವೇರಪ್ಪ ಹೇಳಿದರು. ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಅವರು ಮಾತನಾಡಿ ಕೊಡವ ಜನಾಂಗದ ಪದ್ಧತಿ, ಪರಂಪರೆ ಹಾಗೂ ಸಂಸ್ಕೃತಿಯ ಉಳಿವಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಮನವಿ ಮಾಡಿದರು. ಅಖಿಲ ಕೊಡವ ಸಮಾಜದ ವತಿಯಿಂದ ಏರ್ಪಡಿಸಲಾಗಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ದೇವಾಲಯದ ಭಕ್ತ ಜನ ಸಂಘದ ಅಧ್ಯಕ್ಷ ಕಾಂಡಂಡ ಜೋಯಪ್ಪ, ನೂತನ ಆರ್ಥಿಕ ಸಮಿತಿಯ ಗೌರವ ಕಾರ್ಯದರ್ಶಿ ಅಮ್ಮಣಿಚಂಡ ರಾಜ ನಂಜಪ್ಪ, ಪದಾಧಿಕಾರಿಗಳಾದ ಕೀತಿಯಂಡ ವಿಜಯಕುಮಾರ್( ಶರಿ), ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಬೊಳ್ಳೆರ ವಿನಯ್ ಅಪ್ಪಯ್ಯ, ಮಾಚಿಮಂಡ ರವೀಂದ್ರ ,ಬಾಚಿರ ಜಗದೀಶ್…
ಮಡಿಕೇರಿ ಜ.10 : ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿಯು ಮಹಿಳೆಯರಿಗೆ ಆದ್ಯತೆ ನೀಡಿದ್ದು, ರೋಟರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸದಸ್ಯೆಯರಾಗಿ ಸೇಪ೯ಡೆಯಾಗುತ್ತಿರುವುದು ಮಹತ್ವದ ವಿಚಾರವಾಗಿದೆ ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪ್ರಕಾಶ್ ಕಾರಂತ್ ಶ್ಲಾಘಿಸಿದ್ದಾರೆ. ಮಡಿಕೇರಿ ರೋಟರಿ ವುಡ್ಸ್ ಗೆ ಅಧಿಕೖತ ಭೇಟಿ ನೀಡಿ ಸಭಾ ಕಾಯ೯ಕ್ರಮ ಉದ್ಗಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಗವನ೯ರ್ ಪ್ರಕಾಶ್ ಕಾರಂತ್, ಪರಿಪೂಣ೯ತೆಯತ್ತ ಸಾಗಲು ಕಾಲದಿಂದ ಕಾಲಕ್ಕೆ ಬದಲಾವಣೆ ಅಗತ್ಯ. ರೋಟರಿಯು ಸದಾ ಬದಲಾವಣೆಗೆ ಒಗ್ಗುತ್ತಾ, ಅಂಥ ಬದಲಾವಣೆಗಳಿಗೆ ತಕ್ಕಂತೆ ತನ್ನ ಕಾಯ೯ಯೋಜನೆಗಳನ್ನು ರೂಪಿಸುತ್ತಿದೆ. ಮಹಿಳಾ ಸದಸ್ಯರನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸೇಪ೯ಡೆ ಮಾಡುತ್ತಾ ಮಹಿಳೆಯರಿಗೂ ಸೂಕ್ತ ಅವಕಾಶ ಕಲ್ಪಿಸುತ್ತಾ ಬಂದಿರುವ ರೋಟರಿಗೆ 117 ವಷ೯ಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಈ ವಷ೯ ಜೆನಿಫರ್ ಜೋನ್ಸ್ ಎಂಬ ಮಹಿಳೆಯೇ ಅಂತರರಾಷ್ಟ್ರೀಯ ಅಧ್ಯಕ್ಷೆಯಾಗಿ ನೇಮಕವಾಗಿ ಅತ್ಯಂತ ಸಶಕ್ತವಾಗಿ ಕಾಯ೯ನಿವ೯ಹಿಸುತ್ತಿರುವುದು ಶ್ಲಾಘನೀಯ ಮತ್ತು ಹೆಮ್ಮೆಯ ವಿಚಾರ. ಮಹಿಳೆಯರ ಸಮಾನ ಹಕ್ಕುಗಳಿಗೆ ರೋಟರಿಯು ಮನ್ನಣೆ ನೀಡಿದೆ. ಶೇ.30 ರಷ್ಟು…
ಮಡಿಕೇರಿ ಜ.10 : ಕೊಡಗು ಜಿಲ್ಲಾ ವ್ಯಾಪ್ತಿಯ ಹಾಗೂ ನೆರೆಯ ಜಿಲ್ಲೆಗಳ ದೇವಾಲಯಗಳಲ್ಲಿನ ಗಂಟೆಗಳನ್ನು ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತರ ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ. ಮೈಸೂರಿನ ಆರ್.ಎಸ್.ನಾಯ್ಡು ನಗರದ ಅಮ್ಜದ್ ಆಹಮ್ಮದ್ (37), ಅಜ್ಜು ಲೇಜೌಟ್ ನ ಸಮಿವುಲ್ಲಾ (22), ಹೈದರ್ (36) ಹಾಗೂ ಕೆಸರೆ ನಗರದ ಜುಲ್ಪಿಕರ್ (36) ಬಂಧಿತ ಆರೋಪಿಗಳು. ಕಳವು ಮಾಡಿದ ಸುಮಾರು 750 ಕೆ.ಜಿ.ತೂಕದ ವಿವಿಧ ಮಾದರಿಯ ಲೋಹದ ಗಂಟೆಗಳು ಹಾಗೂ 1 ಕಾರು ಸೇರಿದಂತೆ ಒಟ್ಟು ರೂ.10 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಮುಡಿ ಕಮಟೆ ಶ್ರೀ ಮಹದೇವ ದೇವಸ್ಥಾನ, ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟೂರು ಕಾರ್ಮಾಡಿನ ಶ್ರೀ ಕಾಲಭೈರವೇಶ್ವರ ದೇವಸ್ಥಾನ, ಬಿಳೂರಿನ ಕಲ್ಲುಗುಡಿ ಶ್ರೀ ಈಶ್ವರ ದೇವಸ್ಥಾನ, ಬೆಸಗೂರಿನ ಶ್ರೀ ಮಹಾದೇವ ದೇವಸ್ಥಾನ…
ವಿರಾಜಪೇಟೆ ಜ.10 : ಗಡಿ ಭಾಗದಲ್ಲಿ ಸೂಕ್ತ ತಪಾಸಣೆ ಕೇಂದ್ರಗಳು ಇಲ್ಲದೆ ತೆರಿಗೆ ವಂಚಿಸಿ ರಾಜ್ಯ ಗಡಿ ಪ್ರವೇಶ ಮಾಡುವ ಅಂತರ್ ರಾಜ್ಯ ವಾಹನಗಳಿಂದ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲಾ ಗಡಿ ಭಾಗದಲ್ಲಿ ಆರ್.ಟಿ.ಓ. ತಪಾಸಣೆ ಕೇಂದ್ರವನ್ನು ಆರಂಭಿಸುವಂತೆ ಕರ್ನಾಟಕ ರಾಜ್ಯ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೆಷನ್ ನ ಜಿಲ್ಲಾ ಶಾಖೆ ಒತ್ತಾಯಿಸಿದೆ. ಕರ್ನಾಟಕ ರಾಜ್ಯ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೆಷನ್ ಕೊಡಗು ಜಿಲ್ಲಾ ಶಾಖೆಯ ವತಿಯಿಂದ ರಾಜ್ಯದ ಗಡಿಭಾಗವಾದ ವಿರಾಜಪೇಟೆ-ಪೆರುಂಬಾಡಿ ಪೊಲೀಸ್ ತಪಾಸಣೆ ಕೇಂದ್ರ ಬಳಿ ಜಿಲ್ಲಾ ಘಟಕದ ಮಾಜಿ ಗೌರವಧ್ಯಕ್ಷ ಎಂ.ಎ.ರಫೀಕ್ ಮಾತನಾಡಿ, ದಿನ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಜಿಲ್ಲೆಯ ಗಡಿದಾಟಿ ಪ್ರವಾಸಿ ವಾಹನಗಳು ಜಿಲ್ಲೆಗೆ ಮತ್ತು ರಾಜ್ಯ ಇತರ ಭಾಗಗಳಿಗೆ ತೆರಳುತ್ತವೆ. ಆಗಮಿಸುವ ಎಲ್ಲಾ ವಾಹನಗಳ ದಾಖಲೆಗಳನ್ನು ಪರಿಶೀಲನೆ ಮಾಡುವ ತಪಾಸಣೆ ಕೇಂದ್ರಗಳಿ ಇಲ್ಲದಿರುವುದು ನಮ್ಮ ದೌರ್ಬಲ್ಯವಾಗಿದೆ ಎಂದರು. ರಾಜ್ಯದ ತೆರಿಗೆಯನ್ನು ವಂಚಿಸಿ ಜಿಲ್ಲೆಗೆ ವಾಹನಗಳು ಬರುತ್ತಿರುವುದು ಇಲಾಖೆಯ ಗಮನಕ್ಕೆ ಬಂದರು ಮೌನ ವಹಿಸಿರುವುದು ಖಂಡನೀಯ. ಜಿಲ್ಲೆಯಲ್ಲಿ…
ಮಡಿಕೇರಿ ಜ.10 : ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಕರಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಕಲಿಕಾ ಚೇತರಿಕೆಯ ಅಂಗವಾಗಿ ವಿ ಮಕ್ಕಳ ಸಂತೆ ನಡೆಯಿತು. ಕಾರ್ಯಕ್ರಮವನ್ನು ಗ್ರಾ.ಪಂ ಸದಸ್ಯೆ ನೇತ್ರಾವತಿ ಉದ್ಘಾಟಿಸಿದರು. ವಿದ್ಯಾರ್ಥಿಗಳು ಬಗೆ ಬಗೆಯ ದಿನಸಿ ವಸ್ತುಗಳು, ತರಕಾರಿ ಮತ್ತಿತರ ವಸ್ತುಗಳನ್ನು ಮಾರಾಟ ಮಾಡಿ ಜನ ಮೆಚ್ಚುಗೆ ಗಳಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯ ವಿಲೀನ್ ಮಾತನಾಡಿ, ಇಂತಹ ವಿನೂತನ ಕಾರ್ಯಕ್ರಮಗಳು ಶಾಲೆಯಲ್ಲಿ ಅಳವಡಿಸಿಕೊಳ್ಳುವುದರಿಂದ ಮಕ್ಕಳಲ್ಲಿ ವ್ಯಾಪಾರಕ್ಕೆ ಮತ್ತು ಗ್ರಾಹಕರ ನಡುವಿನ ಸಂಬಂಧವನ್ನು ಹೇಗೆ ಬೆಳೆಸಿಕೊಳ್ಳಬಹುದು ಎಂದು ತಿಳಿಯಲಾಗುವುದು ಎಂದರು.. ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ, ಸಹ ಶಿಕ್ಷಕ ದಮಯಂತಿ, ಅಂಗನವಾಡಿ ಕಾರ್ಯಕರ್ತೆ ಲಿಬ್ರಾಹಿಂ, ಗ್ರಂಥಾಲಯ ಮೇಲ್ವಿಚಾರಕಿ ರಿನಿ ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಜ.10 : ಪ್ರಸಕ್ತ (2022-23) ಸಾಲಿನ, 2 ವರ್ಷದ ಬಿ.ಇಡಿ ಕೋರ್ಸ್‍ಗೆ ಇಲಾಖಾ ವೆಬ್‍ಸೈಟ್ www.Schooleducation.nic.in ನಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು, 2023 ರ ಜನವರಿ, 07 ರಿಂದ ಫೆಬ್ರವರಿ, 23 ರವರೆಗೆ ಕೂಡಿಗೆ ಡಯಟ್ ಇಲ್ಲಿ ಮೂಲ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ತಮಗೆ ಸೂಚಿಸಿದ ದಿನಾಂಕದಂದು ಹಾಜರಾಗಿ ದಾಖಲಾತಿ ಪರಿಶೀಲಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕೂಡಿಗೆಯ ಡಯಟ್ ಹಿರಿಯ ಉಪನ್ಯಾಸಕರಾದ ಸೋಮಲಿಂಗೇಗೌಡ(9902728234), ಉಪನ್ಯಾಸಕರಾದ ಹೇಮಂತ್ ಕುಮಾರ್ (9036365942), ವಿಜಯ್(8105360463) ರೇಣುಕಾ ಸಿ.ಎಲ್ (9740502601), ಗಾಯತ್ರಿ ಬಾಯಿ (9538649531) ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.






