ಲೇಖಕ: admin

ಮಡಿಕೇರಿ ಜ.10 : “ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಜ.12 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೊರೆ ಎಂ.ಎಸ್.ಅವರು ಕೋರಿದ್ದಾರೆ.

Read More

ಮಡಿಕೇರಿ ಜ.10 : ಪ್ರಸಕ್ತ(2022-23) ಸಾಲಿನ ಡಿಸೆಂಬರ್ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಜ.18 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.

Read More

ಕುಶಾಲನಗರ ಜ.10 : ಕೊಡವ ಸಂಸ್ಕೃತಿ ಆಚಾರ, ವಿಚಾರ, ಪದ್ಧತಿ ಮತ್ತು ಪರಂಪರೆಯನ್ನು ಆಚರಿಸುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕಾಗಿದೆ ಎಂದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದರು. ಕುಶಾಲನಗರ ಕೊಡವ ಸಮಾಜದ ಆಶ್ರಯದಲ್ಲಿ ಪುತ್ತರಿ ಒತ್ತೊರ್ಮೆ ಕೂಟ ಉದ್ಘಾಟಿಸಿ ಮಾತನಾಡಿದ ಅವರು, ಯುವಪೀಳಿಗೆ ಆಧುನಿಕತೆಯಕಡೆಗೆ ಮಾರುಹೋಗಿ ಕೊಡವ ಮೂಲ ಸಂಸ್ಕೃತಿಯನ್ನು ಮರೆಯುವ ಪರಿಸ್ಥಿತಿ ಎದುರಾಗುತ್ತಿದೆ. ಯುವಜನಾಂಗಕ್ಕೆ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಿ ಮಾರ್ಗದರ್ಶನ ನೀಡುವಂತಾಗಬೇಕು. ಕೊಡವ ಸಂಸ್ಕೃತಿಯ ಮಹತ್ವವನ್ನು ತಿಳಿಸಿ, ಉಳಿಸಿ ಬೆಳೆಸಲು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಉದ್ಯಮಿಚೇಂದಂಡಜೆಮ್ಸಿ ಪೊನ್ನಪ್ಪ ಮಾತನಾಡಿ, ಕುಶಾಲನಗರಕೊಡವ ಸಮಾಜದಲ್ಲಿ ಸದಸ್ಯರ ಸಂಖ್ಯೆಏರಿಕೆಯಾಗಿದ್ದು, ಸಮುದಾಯದ ಕಾರ್ಯಕ್ರಮಗಳಿಗೆ ಪ್ರತ್ಯೇಕಕಟ್ಟಡದಅವಶ್ಯಕತೆಇದೆ ಈ ಹಿನ್ನಲೆಯಲ್ಲಿ ವಿಶಾಲವಾದಜಾಗ ಖರೀದಿಸಿ ಅತ್ಯಾಧುನಿಕಕಟ್ಟಡ ನಿರ್ಮಾಣ ಮಾಡಬೇಕೆಂದು ಸಲಹೆ ನೀಡಿದರು. ಹಿರಿಯರುಕಿರಿಯರಿಗೆ ಸಂಸ್ಕೃತಿ ಹೇಳಿಕೊಡುವ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಲು ಪ್ರಯತ್ನಿಸಬೇಕುಎಂದರು. ಕೊಡವ ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ ಮಾತನಾಡಿ, ಕೊಡವ ಸಮಾಜದ ಮೂಲಕ ನಿರಂತರವಾಗಿ…

Read More

ಕುಶಾಲನಗರ ಜ.10 : ಕುಶಾಲನಗರ ತಾಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಿರ-ಚರ ಆಸ್ತಿಗಳ ದಾಖಲೆಗಳನ್ನು ಕುಶಾಲನಗರ ಪುರಸಭೆಗೆ ಹಸ್ತಾಂತರಿಸಲಾಯಿತು. ಮುಳ್ಳುಸೋಗೆ ಗ್ರಾ.ಪಂ ಅಭಿವೃದ್ಧಿಅಧಿಕಾರಿ ಸುಮೇಶ್, ಸೋಮವಾರದಾಖಲೆ ಕಡತಗಳೊಂದಿಗೆ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ನಾಯ್ಕ್‍ಅವರಿಗೆ ಹಸ್ತಾಂತರಿಸಿದರು. ಹಸ್ತಾಂತರ ಸಂದರ್ಭತಾಲೂಕು ಪಂಚಾಯಿತಿಕಾರ್ಯನಿರ್ವಹಣಾಧಿಕಾರಿಜಯಣ್ಣ, ಸಹಾಯಕ ನಿರ್ದೇಶಕರವೀಶ್ ಮತ್ತು ಪಂಚಾಯಿತಿ ಸಿಬ್ಬಂದಿಗಳು ಇದ್ದರು.

Read More

ಮಡಿಕೇರಿ ಜ.9 : ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ತ್ರೈಮಾಸಿಕ ಸಭೆ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಂಡಳಿ ಕಚೇರಿ ವನವಿಕಾಸ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಔಷಧೀಯ ಸಸ್ಯಗಳ ಉದ್ಯಾನ ನಿರ್ಮಾಣ ಸಂಬಂಧ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪ್ರಗತಿ ಬಗ್ಗೆ ಅಧ್ಯಕ್ಷರು ಮಾಹಿತಿ ಪಡೆದುಕೊಂಡರು. ಆರ್ಥಿಕ ವರಾಂತ್ಯದವರೆಗೆ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಮುಂದಿನ ಆರ್ಥಿಕ ವರ್ಷದಲ್ಲಿ ಹೆಚ್ಚಿನ ಅನುದಾನಕ್ಕಾಗಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿ, ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಮಂಡಳಿ ಸದಸ್ಯರು ಸಲಹೆ ನೀಡಿದರು. ಸನ್ಮಾನ : ಸಭೆ ಆರಂಭಕ್ಕೂ ಮುನ್ನ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರಾಧಾದೇವಿ ಅವರನ್ನು ಸನ್ಮಾನಿಸಲಾಯಿತು. ಮಂಡಳಿಯ ಕಾರ್ಯಚಟುವಟಿಕೆಗಳಿಗೆ ಸಹಕಾರ ನೀಡಿದಕ್ಕಾಗಿ ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಂಡಳಿ ಸದಸ್ಯ ಕಾರ್ಯದರ್ಶಿ ಅನಿತ…

Read More

ಮಡಿಕೇರಿ ಜ.9 : “ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ಜನವರಿ, 10 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ, ವಿರಾಜಪೇಟೆ, 33/11 ಕೆವಿ, ಶ್ರೀಮಂಗಲ, 33/11 ಕೆವಿ, ಸಿದ್ದಾಪುರ 33/11ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.9 : ಕೊಡಗು ರಕ್ಷಣಾ ವೇದಿಕೆ ಆರಂಭಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪರವಾದ ಹೋರಾಟಕ್ಕೆ ಜಾತ್ಯತೀತ ಜನತಾದಳದ ಮುಖಂಡ, ಎಂ ಅಂಡ್ ಎಂ ಸಮೂಹ ಸಂಸ್ಥೆಗಳ ಮುಖ್ಯಸ್ಥ ಹಾಗೂ ಸಮಾಜ ಸೇವಕ ನಾಪಂಡ ಎಂ.ಮುದ್ದಪ್ಪ ಬೆಂಬಲ ಸೂಚಿಸಿದ್ದಾರೆ. ಕೊಡಗಿಗೆ ಅಗತ್ಯವಾಗಿ ಬೇಕಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯ ಕುರಿತು ಪ್ರಮುಖರ ಗಮನ ಸೆಳೆಯಲೆಂದು ಕೊರವೇ ನಿಯೋಗ ಬೆಂಗಳೂರಿಗೆ ತೆರಳಿತ್ತು. ಈ ಸಂದರ್ಭ ಮುದ್ದಪ್ಪ ಅವರನ್ನು ಭೇಟಿಯಾದ ಕೊರವೇ ಪ್ರಮುಖರು ಆಸ್ಪತ್ರೆ ಅಭಿಯಾನಕ್ಕೆ ಬೆಂಬಲ ಕೋರಿದರು. ಇದಕ್ಕೆ ಸ್ಪಂದಿಸಿದ ಅವರು ಕೊರವೇ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಕೊರವೇ ಅಧ್ಯಕ್ಷ ಅಚ್ಚಾಂಡಿರ ಪವನ್ ಪೆಮ್ಮಯ್ಯ ಮಾತನಾಡಿ ಪ್ರತಿಯೊಂದು ಚಿಕಿತ್ಸೆಗೂ ಜಿಲ್ಲೆಯ ಜನ ಬೆಂಗಳೂರು, ಮೈಸೂರು, ಮಂಗಳೂರು ಆಸ್ಪತ್ರೆಗಳನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ಇಷ್ಟರವರೆಗೆ ವೀರರನಾಡು ಕೊಡಗು ಜಿಲ್ಲೆಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡದೆ ಇರುವುದು ದುರಂತವೆಂದು ಬೇಸರ ವ್ಯಕ್ತಪಡಿಸಿದರು. ಎಲ್ಲಾ ವ್ಯವಸ್ಥೆಗಳಿರುವ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ…

Read More

ಮಡಿಕೇರಿ ಜ.9 : ಕೇಂದ್ರ ಸರ್ಕಾರದ ಆದೇಶದಂತೆ 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು, ಡಿ.15 ರಿಂದ ನೋಂದಣಿ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ಭತ್ತ/ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಒಬ್ಬ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ 10 ರಿಂದ ಗರಿಷ್ಟ 20…

Read More

ಮಡಿಕೇರಿ ಜ.9 : ಸೋಮವಾರಪೇಟೆ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ‘ಡಾ.ಶಿವಕುಮಾರ ಸ್ವಾಮೀಜಿ ಬಸ್ಸು ನಿಲ್ದಾಣ’ವನ್ನು ತುಮಕೂರಿನ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಮಹಾಸ್ವಾಮೀಜಿ, ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹಾಗೂ ಪರಮಪೂಜ್ಯ ಸ್ವಾಮೀಜಿಗಳು ಸಾರ್ವಜನಿಕರಿಗೆ ಸಮರ್ಪಿಸಿದರು. ಬಳಿಕ ಸೋಮವಾರಟೆಯ ಡಾ.ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವ ಸಮಿತಿ ವತಿಯಿಂದ ಸಾಕ್ಷಿ ಕನ್ವೆನ್ಷನ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಡಾ.ಶಿವಕುಮಾರ ಸ್ವಾಮೀಜಿ ಅವರ ಬದುಕು, ಶಿಸ್ತು ಬದ್ಧ ಜೀವನ ಸ್ಮರಣೀಯ, ಜ್ಞಾನ, ಪ್ರಸಾದ ಮತ್ತು ಸಮಾಜದ ಕಾಯಕಕ್ಕೇ ಹೆಚ್ಚಿನ ಒತ್ತು ನೀಡಿದ್ದರು. ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ನೀಡಲು ಶ್ರಮಿಸಿದರು ಎಂದರು.’ ಆಕಾಶ, ಸಮುದ್ರವನ್ನು ಹೇಗೆ ಒಂದಕ್ಕೊಂದು ಹೋಲಿಕೆ ಮಾಡಲು ಸಾಧ್ಯವಿಲ್ಲವೋ ಹಾಗೆಯೇ ಶಿವಕುಮಾರ ಸ್ವಾಮೀಜಿಗೆ ಅವರೇ ಹೋಲಿಕೆ. ಲಕ್ಷಾಂತರ ಜನರ ಬದುಕಿಗೆ ದಾರಿದೀಪ ಬೆಳಗಿದ್ದಾರೆ ಎಂದು ಸಿದ್ದಲಿಂಗ ಮಹಾಸ್ವಾಮೀಜಿ ಅವರು ನುಡಿದರು. ಸೋಮವಾರಪೇಟೆಯಲ್ಲಿ ನಿರ್ಮಿಸಲಾಗಿರುವ ಶಿವಕುಮಾರ ಸ್ವಾಮೀಜಿ ಅವರ ಬಸ್ಸು ನಿಲ್ದಾಣ ಅದೊಂದು ಪ್ರಾರ್ಥನಾ ಮಂದಿರ ಎಂದು ವರ್ಣಿಸಿದರು. ಸ್ಥಳೀಯ ಶಾಸಕರು…

Read More

ಮಡಿಕೇರಿ ಜ.9 : ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ನೂರ್ಕೊಲ್ ನಾಡ್ ಒತ್ತೊರ್ಮೆ ಕೂಟ ಸಂಭ್ರಮದಿಂದ ನಡೆಯಿತು. ಚೆಟ್ಟಳ್ಳಿ ಮಂಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮನ್ನು ಸಮಾಜದ ಪದಾಧಿಕಾರಿಗಳು ದೀಪ ಬೇಳಗಿಸುವ ಮೂಲಕ ಉದ್ಘಾಟಿಸಿದರು. ಸಮಾಜದ ಅಧ್ಯಕ್ಷ ಮುಳ್ಳಂಡ ರತ್ತು ಚಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೋಮಾಲೆ ಪೊಮ್ಮಕ್ಕಡ ಕೂಟದ ಉಮ್ಮತಾಟ್, ನೃತ್ಯ ಹಾಗೂ ಪುರುಷರ ಬೊಳಕಾಟ್, ಪರೆಯಕಳಿ ಪ್ರದರ್ಶನ, ಕೊಡವ ಹಾಡು, ವಿವಿಧ ಮನೊರಂಜನಾ ಕ್ರೀಡೆಗಳು ಗಮನ ಸೆಳೆಯಿತು. ಮಕ್ಕಳಿಗೆ ಕೊಡವ ಆಟ್‍ಪಾಟ್ ತರಬೇತಿ ನೀಡಲಾಯಿತು. ವಿಶೇಷವಾಗಿ ಎಲೆ ಊಟದ ವ್ಯವಸ್ಥೆ ಆಯೋಜಿಸಲಾಗಿತ್ತು. ಸಮಾರೋಪ ಸಮಾರಂಭ : ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಧ್ಯಕ್ಷರಾದ ಮುಳ್ಳಂಡ ರತ್ತು ಚಂಗಪ್ಪ ಮಾತನಾಡಿ, ನೂತನವಾಗಿ ಪ್ರಾರಂಭಗೊಂಡ ಚೆಟ್ಟಳ್ಳಿ ಕೊಡವ ಸಮಾಜ ಎಲ್ಲರ ಸಹಕಾರದಿಂದ ಇಂದು ಉತ್ತಮ ಕಾರ್ಯವನ್ನು ಮಾಡಲು ಸಹಕಾರಿಯಾಗಿದೆ. ಸಮಾಜಕ್ಕೊಂದು ಸ್ವಂತ ಕಟ್ಟಡ ಇದ್ದಾಗ ಮಾತ್ರ ಶಾಶ್ವತನೆಲೆ ಯಾಗಲಿದೆ ಎಂದರು. ಸಮಾಜದ ನಿರ್ದೇಶಕ ಬಿದ್ದಂಡ ಮಾದಯ್ಯ, ಐಚೆಟ್ಟಿರ ಚೋಂದಮ್ಮ, ಜಂಟಿ ಕಾರ್ಯದರ್ಶಿ ಮುಳ್ಳಂಡ ಶೋಭ ಚಂಗಪ್ಪ,…

Read More