ಲೇಖಕ: admin

ಮಡಿಕೇರಿ ಜ.9 : ‘ಹುಲಿ’ಗಳು ಎಂದಿಗೂ ಮನುಷ್ಯನ ಮೇಲೆ ಎದುರು ಭಾಗದಿಂದ ನೇರವಾಗಿ ದಾಳಿ ಮಾಡುವುದಿಲ್ಲ, ಬದಲಾಗಿ ಹಿಂಬದಿಯಿಂದ ದಾಳಿ ಮಾಡುತ್ತವೆ. ಇದರಿಂದ ಪಾರಾಗಲು ಪಶ್ಚಿಮ ಬಂಗಾಳದ ಸುಂದರ ಬನ್ ವ್ಯಾಪ್ತಿಯಲ್ಲಿ ತಲೆಯ ಹಿಂಭಾಗಕ್ಕೆ ‘ಮುಖವಾಡ’ವನ್ನು ಅಳವಡಿಸಿಕೊಳ್ಳುವ ತಂತ್ರಗಾರಿಕೆಯನ್ನು ಅನುಸರಿಸಲಾಗುತ್ತಿದ್ದು, ಇದು ಫಲಪ್ರದವಾಗಿದೆ. ಈ ಮಾದರಿ ಕೊಡಗು ಜಿಲ್ಲೆಯಲ್ಲೂ ಉಪಯುಕ್ತವಾಗಬಹುದು ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಕರ್ನಲ್ ಸಿ.ಪಿ. ಮುತ್ತಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಬ್ರಹ್ಮಪುತ್ರ ನದಿ ಸಮುದ್ರವನ್ನು ಸೇರುವ ಸುಂದರಬನ್‍ನಲ್ಲಿ ಹುಲಿ ದಾಳಿಗೆ ಸಾಕಷ್ಟು ಮಂದಿ ಸಾವನ್ನಪ್ಪಿದ್ದು, ಅಲ್ಲಿ ಇದೀಗ ತಲೆಯ ಹಿಂಭಾಗಕ್ಕೆ ಅಳವಡಿಸುವ ಮುಖವಾಡ ಬಳಸಲಾಗುತ್ತಿದೆ. ಇದರಿಂದ ಹುಲಿ ದಾಳಿ ಪ್ರಕರಣಗಳು ಇಳಿಮುಖವಾಗಿದೆ. ಈ ಮುಖವಾಡ ಧರಿಸಿದಲ್ಲಿ, ದಾಳಿ ಮಾಡುವ ಹುಲಿಗೆ ವ್ಯಕ್ತಿಯ ಹಿಂಭಾಗದ ಮುಖವಾಡ ವ್ಯಕ್ತಿಯ ಮುಖದಂತೆ ಗೋಚರಿಸುವುದರಿಂದ ದಾಳಿಗೆ ಮುಂದಾಗುವುದಿಲ್ಲವೆಂದು ಗಮನ ಸೆಳೆದರು. ::: ಪ್ರಸ್ತಾವನೆ ::: ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ಹುಲಿ ಹಾವಳಿ ಹೆಚ್ಚಾಗುತ್ತಿದ್ದು,…

Read More

ಮಡಿಕೇರಿ ಜ.9 : ನಗರದಲ್ಲಿ ತಲೆ ಎತ್ತುತ್ತಿರುವ ಗುಜರಿ ಅಂಗಡಿಗಳಿಂದ ಸಾರ್ವಜನಿಕರಿಗೆ ಹಾಗೂ ವಾಹನಗಳ ಸಂಚಾರಕ್ಕೆ ಅನಾನುಕೂಲವಾಗುತ್ತಿದೆ. ನಗರಸಭೆ ತಕ್ಷಣ ಎಚ್ಚೆತ್ತುಕೊಂಡು ಗುಜರಿ ಅಂಗಡಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಟಕಣೆ ನೀಡಿರುವ ಅವರು, ನಗರದ ಜನನಿಬಿಡ ಮತ್ತು ಇಕ್ಕಟ್ಟಾದ ಪ್ರದೇಶದಲ್ಲಿ ಗುಜರಿ ಅಂಗಡಿಗಳಿಗೆ ಅವಕಾಶ ನೀಡಬಾರದೆನ್ನುವ ನಿಯಮವಿದ್ದರೂ ಅಲ್ಲಲ್ಲಿ ಗುಜರಿ ಅಂಗಡಿಗಳು ತಲೆ ಎತ್ತುತ್ತಿವೆ. ಇದರಿಂದಾಗಿ ರಸ್ತೆಗಳಲ್ಲಿ ಗಾಜಿನ ಚೂರು, ಕಬ್ಬಿಣದ ತುಂಡುಗಳು, ಹಳೆಯ ವಾಹನಗಳ ಬಿಡಿಭಾಗಗಳು ಮತ್ತಿತರ ತ್ಯಾಜ್ಯಗಳು ಕಾಣಿಸಿಕೊಳ್ಳುತ್ತಿದ್ದು, ಪಾದಾಚಾರಿಗಳು ಹಾಗೂ ವಾಹನ ಚಾಲಕರು ಅಪಾಯದ ಆತಂಕದಲ್ಲಿ ಮುಂದೆ ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗುಜರಿ ಅಂಗಡಿಗಳಿರುವ ಪ್ರದೇಶದ ರಸ್ತೆಗಳಲ್ಲಿ ಸಂಚಾರ ಸುರಕ್ಷಿತವಲ್ಲ ಎನ್ನುವುದು ಈಗಾಗಲೇ ಖಾತ್ರಿಯಾಗಿದ್ದು, ಫುಟ್ ಪಾತನ್ನು ಕೂಡ ಗುಜರಿ ಸಾಮಾನುಗಳು ಆಕ್ರಮಿಸಿಕೊಂಡಿವೆ. ಮಾರುಕಟ್ಟೆ ರಸ್ತೆಯಲ್ಲಿ ಗುಜರಿ ಅಂಗಡಿ ಬಳಿ ದ್ವಿಚಕ್ರ ವಾಹನ ಚಾಲಕರೊಬ್ಬರು ಅನಾಹುತ ತಪ್ಪಿಸಲು ಹೋಗಿ ಕೈ ಮುರಿದುಕೊಂಡು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.…

Read More

ಹಾವೇರಿ ಜ.9 : ಹಾವೇರಿಯಲ್ಲಿ  ನಡೆದ  86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ  ಕೊಡಗಿನ ಇಬ್ಬರನ್ನು ಸನ್ಮನಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರನ್ನು ಸಾಹಿತ್ಯ ಸಂಘಟಕ ಎಂದು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.  ಅಧಿವೇಶನದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಅವರನ್ನು ಸನ್ಮಾನಿಸಲಾಯಿತು  ಕನಕ ಶರೀಫ ಸರ್ವಜ್ಞರ ಪ್ರಧಾನ ವೇದಿಕೆಯಲ್ಲಿ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಮೂರು ಸಾವಿರ ಮಠದ ಪರಮಪೂಜ್ಯ ಜಗದ್ಗುರು ಗುರು ಸಿದ್ಧರಾಜ ಯೋಗಿಂದ್ರ ಸ್ವಾಮೀಜಿಗಳು, ಇಸ್ರೋ ಸಂಸ್ಥೆಯ ಹಿರಿಯ ವಿಜ್ಞಾನಿ  ಕಿರಣ್ ಕುಮಾರ್, ಮೂಡುಬಿದಿರೆಯ ಆಳ್ವಾಸ್ ವಿದ್ಯಾ ಸಂಸ್ಥೆಯ ಡಾ. ಮೋಹನ್ ಆಳ್ವ ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಉಪಸ್ಥಿತರಿದ್ದರು. ಲಕ್ಷಾಂತರ ಜನರು ಸಮ್ಮೇಳನಕ್ಕೆ ಭೇಟಿ ನೀಡಿದರು.

Read More

ವಿರಾಜಪೇಟೆ ಜ.9 : ಅಂಕ ಗಳಿಸುವ ಉದ್ದೇಶದಿಂದ ಮಕ್ಕಳನ್ನು ವಿಪರೀತ ಒತ್ತಡಕ್ಕೆ ಸಿಲುಕಿಸುವುದು ಉತ್ತಮ ಬೆಳವಣಿಗೆಯಲ್ಲ ಎಂದು ವಿರಾಜಪೇಟೆ ತಾಲೂಕು ದಂಡಾಧಿಕಾರಿ, ತಹಶೀಲ್ದಾರ್ ಡಿ.ಅರ್ಚನಾಭಟ್ ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆಯ ಬ್ರೈಟ್ ಪಬ್ಲಿಕ್ ಸ್ಕೂಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಮಾತನಾಡಿದ ಅವರು, “ಪೋಷಕರು ತಾವು ಸ್ವತಃ ಬದುಕಿನಲ್ಲಿ ಏನೂ ಸಾಧನೆ ಮಾಡಲಿಲ್ಲ ಎಂಬ ಕಾರಣಕ್ಕೆ ತಮ್ಮ ಮಕ್ಕಳನ್ನು ಅನಾರೋಗ್ಯಕರ ಸ್ಪರ್ಧೆಗೆ ಒಡ್ಡಿ ಒತ್ತಡಕ್ಕೆ ಸಿಲುಕಿಸುವುದು ದುಷ್ಪರಿಣಾಮ ಉಂಟು ಮಾಡುತ್ತದೆ. ಅರ್ಹತೆ, ಆಸಕ್ತಿ ಮತ್ತು ಪ್ರತಿಭೆಗೆ ಅನುಸಾರವಾಗಿ ಮಕ್ಕಳು ಆಯಾ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಾರೆ. ಗುರಿ ಮುಟ್ಟಲು ನಿರಂತರ ಪ್ರಯತ್ನ ಮತ್ತು ಜೀವನದಲ್ಲಿ ಸುಂದರ ಕನಸುಗಳನ್ನು ಕಾಣಬೇಕು. ಮಕ್ಕಳಿಗೆ ವಿನಾ ಕಾರಣ ಪರೋಕ್ಷ ದಿಗ್ಬಂಧನ ಹಾಕುವುದು ಉತ್ತಮವಲ್ಲ. ಪೋಷಕರು ಶಿಕ್ಷಣ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಇಟ್ಟುಕೊಂಡಲ್ಲಿ ಸಂಸ್ಥೆಗಳು ಬೆಳವಣಿಗೆಯನ್ನು ಸಾಧಿಸಬಹುದು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಮಾತನಾಡಿ, ಮಕ್ಕಳು ಉತ್ತಮ ಅಂಕ ಪಡೆದು ಉನ್ನತ ಶಿಕ್ಷಣ ಹಾಗೂ ಸ್ಥಾನ-ಮಾನ ಗಳಿಸಬೇಕು ಎಂಬ ಅಭಿಲಾಷೆ ಪ್ರತಿಯೊಬ್ಬ…

Read More

ಮಡಿಕೇರಿ ಜ.9 : ಜಿಲ್ಲೆ, ಹೊರ ಜಿಲ್ಲೆ, ರಾಜ್ಯಗಳ ಎಂಟು ಕೋಟಿ ಮಂದಿಗೆ ನೀರುಣಿಸುವ ‘ಕಾವೇರಿ’ ನದಿಯ ಜಲಾನಯದ ಪ್ರದೇಶವಾಗಿರುವ ‘ಕೊಡಗು’ ಜಿಲ್ಲೆಯ ಕೃಷಿ ಭೂಮಿಗಳನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡಲು ಯಾವುದೇ ಕಾರಣಕ್ಕು ಅವಕಾಶ ನೀಡಬಾರದೆಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಕರ್ನಲ್ ಸಿ.ಪಿ.ಮುತ್ತಣ್ಣ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಕೊಡಗಿನಲ್ಲಿ ಭೂ ಪರಿವರ್ತನೆಯ ನಿಯಮಗಳನ್ನು ಸರಳೀಕರಿಸಿ, ವಾರದ ಅವಧಿಯಲ್ಲೆ ಭೂ ಪರಿವರ್ತನೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಪರಿವರ್ತನೆ ಮಾಡಿಕೊಟ್ಟಲ್ಲಿ ಅದು ಕಾವೇರಿ ನದಿಯ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡಬಹುದು. ಕಾವೇರಿ ನೀರನ್ನು ಅವಲಂಬಿಸಿರುವ ಕೋಟ್ಯಾಂತರ ಜನರಿಗೆ ಇದರಿಂದ ಅನ್ಯಾಯವಾಗಲಿದೆ ಎಂದು ತಿಳಿಸಿದರು. ಕೊಡಗಿನ ಕಾಫಿ ತೋಟ, ಗದ್ದೆ, ಜಮ್ಮಾ ಮತ್ತು ಸಾಗು ಭೂಮಿ, ಬಾಣೆಗೆ ಸಂಬಂಧಿಸಿದಂತೆ ಭೂ ಪರಿವರ್ತನೆಗಳು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ನಿಬಂಧನೆಗಳನ್ನು ಉಲ್ಲಂಘಿಸಿದಂತ್ತಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ…

Read More

ಮಡಿಕೇರಿ ಜ.9 : ಕಾರ್ಮಿಕರು ಹಾಗೂ ಕೃಷಿಕರ ಮೂಲಭೂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಜ.18 ರಿಂದ 22ರವರೆಗೆ 17ನೇ ಸಿಐಟಿಯು ಅಖಿಲ ಭಾರತ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಸಿಐಟಿಯು ಸಮ್ಮೇಳನದ ಸ್ವಾಗತ ಸಮಿತಿಯ ಜಿಲ್ಲಾ ಕಾರ್ಯಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪತ್ತನ್ನು ಸೃಷ್ಟಿಸುವ ಶ್ರಮಿಕ ವರ್ಗವೇ ಸಂಕಷ್ಟಕ್ಕೆ ಸಿಲುಕಿದ್ದು, ಪರಿಹಾರದ ಹಕ್ಕನ್ನು ಚಲಾಯಿಸಬೇಕಾಗಿದೆ ಎಂದರು. ಅರಮನೆ ಮೈದಾನದಲ್ಲಿ ನಡೆಯುವ ಅಖಿಲ ಭಾರತ ಸಮ್ಮೇಳನದಲ್ಲಿ ದೇಶದ 30 ರಾಜ್ಯಗಳ 2 ಸಾವಿರಕ್ಕೂ ಹೆಚ್ಚಿನ ಪ್ರತಿನಿಧಿಗಳು ಸೇರಿದಂತೆ 40 ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು ಪಾಲ್ಗೊಳ್ಳುವ ಮೂಲಕ, ಕಾರ್ಮಿಕ ವರ್ಗದ ಮೂಲಭೂತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆಳುವ ಪ್ರಭುತ್ವದ ವಿರುದ್ಧದ ಹೋರಾಟಗಳನ್ನು ನಿರ್ಣಯಿಸಲಿರುವುದಾಗಿ ತಿಳಿಸಿದರು. ::: ಕೊಡಗಿನ ಸಮಸ್ಯೆಗಳ ಪ್ರಸ್ತಾಪ ::: ಕೊಡಗು ಜಿಲ್ಲೆಯ ಮುಖ್ಯ ಬೆಳೆಯಾದ ಕಾಫಿ ಮತ್ತು ಕರಿಮೆಣಸು ಕೃಷಿ ಫಸಲಿಗೆ ಸೂಕ್ತ ಧಾರಣೆ ಇಲ್ಲದೆ ಬೆಳೆಗಾರ ಸಂಕಷ್ಟಕ್ಕೆ ಸಿಲುಕಿದ್ದಾನೆ. ಇದರಿಂದ ಜಿಲ್ಲೆಯ ತೋಟಗಳಲ್ಲಿ ಬದುಕು ಕಟ್ಟಿಕೊಂಡಿರುವ ಕಾರ್ಮಿಕ ಸಮೂಹವು ಆರ್ಥಿಕ…

Read More

ಮಡಿಕೇರಿ ಜ.9 : ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರನ್ನಾಗಿ ರತ್ನಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಷಯ ಪ್ರಸ್ತಾಪಿಸಲಾಗುತ್ತಿದ್ದು, ಇದು ನಿಯಮ ಬಾಹಿರ ಆಯ್ಕೆ ಪ್ರಕ್ರಿಯೆಯಾಗಿದೆ ಎಂದು ಸಂಘದ ಜಿಲ್ಲಾ ಉಪಾಧ್ಯಕ್ಷ ವಿ.ರವೀಂದ್ರ ರೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು ಸದಸ್ಯರಿರುವ ಸಂಘದಲ್ಲಿ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಆಯ್ಕೆಗೆ ನಿಯಮಗಳನ್ನು ಪಾಲಿಸಬೇಕಾಗಿದೆ. ಯಾವುದೇ ಕಾರ್ಯಕಾರಿಣಿ ಸಭೆ ನಡೆಸದೆ, ದಿನಾಂಕ ನಿರ್ಧರಿಸದೆ ಮತ್ತು ಯಾವ ಸದಸ್ಯರಿಗೂ ಮಾಹಿತಿ ನೀಡದೆ ಏಕಾಏಕಿ ರೆಸಾರ್ಟ್‍ವೊಂದರಲ್ಲಿ ಕೆಲವೇ ವ್ಯಕ್ತಿಗಳು ಸೇರಿಸಿಕೊಂಡು ಅಧ್ಯಕ್ಷರ ಆಯ್ಕೆ ಮಾಡಿರುವುದು ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಆರೋಪಿಸಿದರು. ಕಳೆದ 8 ವರ್ಷಗಳಿಂದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಯಾವುದೇ ಸಭೆ ನಡೆಸದೆ ನಿಷ್ಕ್ರಿಯರಾಗಿದ್ದರು. ಕಾರ್ಯಕಾರಿ ಸಮಿತಿಯಿಂದ ಸಭೆ ಕರೆಯುವಂತೆ ಒತ್ತಡ ಹೇರಿದರೂ ಅಧ್ಯಕ್ಷರು ಇಲ್ಲದ ಕಾರಣ ಹೇಳಿಕೊಂಡು  ದಿನದೂಡುತ್ತಿದ್ದಾರೆ. ಆದರೆ ಊಟಕೊಡಿಸುವ ನೆಪದಲ್ಲಿ ಬೆರಳೆಣಿಕೆಯ ಸದಸ್ಯರನ್ನು ಕರೆಸಿ ಸಂಘದ ಪ್ರಧಾನ ಕಾರ್ಯದರ್ಶಿಗೆ ಅಧ್ಯಕ್ಷ ಸ್ಥಾನ…

Read More

ಮಡಿಕೇರಿ ಜ.9 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಂಯುಕ್ತಶ್ರಯದಲ್ಲಿ ಜ.10 ರಂದು ರಕ್ತದಾನ ಶಿಬಿರ ನಡೆಯಲಿದೆ. ನಗರದ ಫೀ.ಮಾ ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಶಿಬಿರವನ್ನು ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ರವಿ ಕರುಂಬಯ್ಯ ನಡೆಸಿಕೊಡಲಿದ್ದಾರೆ.

Read More

ಮಡಿಕೇರಿ ಜ.9 :  ನೆಲ್ಲಿಹುದಿಕೇರಿ ವ್ಯಾಪ್ತಿಯ ನಲ್ವತ್ತೆಕ್ರೆ ಗ್ರಾಮದಲ್ಲಿ ಬೃಹತ್ ಗಾತ್ರದ ನಾಗರಹಾವನ್ನು ಉರಗ  ರಕ್ಷಕ ಸುರೇಶ್ ಪೂಜಾರಿ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ನಲ್ವತ್ತೆಕ್ರೆ ಗ್ರಾಮದ  ಗಣೇಶ್ ಎಂಬವರ ಮನೆಯ ಅಂಗಳದಲ್ಲಿ ಹಾವು ಇರುವ ಬಗ್ಗೆ  ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಉರಗ ಪ್ರೇಮಿ ಸುರೇಶ್ ಪೂಜಾರಿ ಆರು ಅಡಿ ಉದ್ದದ ನಾಗರ ಹಾವನ್ನು ಹಿಡಿದು ಸುರಕ್ಷಿತವಾಗಿ ಮಾಲ್ದಾರೆ ಅರಣ್ಯಕ್ಕೆ ಬಿಟ್ಟರು. ಮನೆಯ ಬರಲು ಇಲಿ ಅಥವಾ ಕಪ್ಪೆಯನ್ನು ಕಂಡು ಹಾವುಗಳು  ಬರುವುದು ಸಹಜ. ಆದ್ದರಿಂದ ಯಾರು ಹಾವನ್ನು ಕೊಲ್ಲದಂತೆ ಮನವಿ ಮಾಡಿದ ಸುರೇಶ್ ಹಾವುಗಳು ಕಂಡುಬಂದಲ್ಲಿ 8277131863 ಸಂಪರ್ಕಿಸುವಂತೆ ತಿಳಿಸಿದರು.

Read More

ಮಡಿಕೇರಿ ಜ.9 :  ಪಾಲೂರು ಗ್ರಾಮದ ವಾರ್ಷಿಕ ಊರೊರ್ಮೆ  ಸಂಭ್ರಮದಿಂದ ಜರುಗಿತು. ‘ಪಾಲೂರ್ ಕೊಡವಾಮೆ ಕೂಟ’ ಏರ್ಪಡಿಸಿದ್ದ 17ನೇ ವರ್ಷದ ಕಾರ್ಯಕ್ರಮದಲ್ಲಿ ಪಾಲೂರಿನಲ್ಲಿ ನೆಲೆಸಿರುವ ಕೊಡವ ಕುಟುಂಬದ ನೂರಾರು ಸದಸ್ಯರು ಭಾಗಿಯಾಗಿದ್ದರು. ಈ ಸಂದರ್ಭ  ಅಖಿಲ ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಅವರು ಮಾತನಾಡಿ “ಕೊಡವ ಜನಾಂಗದ ಅಭಿವೃದ್ಧಿಗೆ ಗ್ರಾಮ ಮಟ್ಟದಲ್ಲಿ ಇಂತಹ ಕಾರ್ಯಕ್ರಮದ  ಅವಶ್ಯಕತೆ ಇದೆ. ಕೊಡವರ ಆಚಾರ ವಿಚಾರಗಳ ಬಗ್ಗೆ ಯುವಜನತೆಗೆ ಅರಿವು ಮೂಡಿಸಲು ಇದು ಉತ್ತಮ ವೇದಿಕೆಯಾಗಿದೆ ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೇಪಾಡಂಡ ವೇಣು ಉತ್ತಪ್ಪ ಅಧ್ಯಕ್ಷತೆ  ನಡೆದ  ಕಾರ್ಯಕ್ರಮದಲ್ಲಿ  ಗ್ರಾಮದ ಹಿರಿಯ, ಕಾಫಿ ಬೆಳೆಗಾರ ಬೊಳ್ಳಿಯಂಡ ಎಂ.ಪಳoಗಪ್ಪ ಅವರನ್ನು ಗೌರವಿಸಲಾಯಿತು. ಕೊಡವಾಮೆ ಕೂಟದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಕಿರುಚಿತ್ರ, ಸಾಕ್ಷ್ಯಚಿತ್ರ ನಿರ್ದೇಶಕ ಮಂದನೆರವಂಡ ಯುಗ ದೇವಯ್ಯ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಗ್ರಾಮಸ್ಥರಿಗೆ ಹಲವು ಮನೋರಂಜನಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು, ಇದರಲ್ಲಿ ಮುಖ್ಯ ಆಕರ್ಷಣೆಯಾಗಿದ್ದು ‘ಕೊಡವ ವಾಲಗ ಆಟ್’…

Read More