ಲೇಖಕ: admin

ಮಡಿಕೇರಿ ಜ.26 NEWS DESK : ಸವಿತಾ ಸಮಾಜವು ಹಿಂದುಳಿದ ವರ್ಗಕ್ಕೆ ಸೇರಿದ್ದು, ಆರ್ಥಿಕ ಹಾಗೂ ಸಾಮಾಜಿಕವಾಗಿ ತುಂಬಾ ಹಿಂದೆ ಇದ್ದಾರೆ. ಆದ್ದರಿಂದ ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಸಲಹೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ  ನಡೆದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತೀಯ ವ್ಯವಸ್ಥೆಯಲ್ಲಿ ಸಮ ಸಮಾಜ ನಿರ್ಮಾಣ ಆಗುವವರೆಗೆ ಸರ್ಕಾರದ ಮೀಸಲಾತಿ ಸೌಲಭ್ಯ ಪಡೆದು ಶಿಕ್ಷಣ ಮತ್ತು‌ ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕು ಎಂದು ಟಿ.ಪಿ.ರಮೇಶ್ ಅವರು ಕರೆ ನೀಡಿದರು. ರಾಷ್ಟ್ರದ ಎಲ್ಲೆಡೆ ಇರುವ ಸವಿತಾ ಸಮಾಜದವರು ವೃತ್ತಿಯ ಜತೆಗೆ ಎಂಜಿನಿಯರಿಂಗ್, ವೈದ್ಯಕೀಯ ಮತ್ತಿತರ ಕ್ಷೇತ್ರದಲ್ಲಿ ಬೆಳವಣಿಗೆ ಹೊಂದಬೇಕು ಎಂದರು. ಹಿರಿಯ ಪತ್ರಕತ೯ ಅನಿಲ್ ಎಚ್.ಟಿ. ಮಾತನಾಡಿ, ಸಮಾಜ ಮತ್ತು ಸಮಾಜದ ಜನರು ಸುಂದರವಾಗಿ ಇರುವಲ್ಲಿ ಸವಿತಾ…

Read More

ಮಡಿಕೇರಿ ಜ.26 NEWS DESK  : ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮಾಜಿ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಎಸ್.ಜಿ ಉಮೇಶ್ ಟ್ರಸ್ಟಿ ಎಂ. ಶ್ರೀಧರ್ ಹೂವಲ್ಲಿ ಹಾಗೂ ಪತ್ರಿಕಾ ಭವನದ ಸಿಬ್ಬಂದಿಗಳಾದ ಯಮುನಾ.ಕೆ.ಪಿ, ರಾಜೇಶ್‍ಬಿ.ಪಿ, ಶೈನಿ.ಹೆಚ್.ಎಂ ಹಾಗೂ ವರ್ತಕರಾದ ರೆಹಮಾನ್, ಶೇಖ್‍ಅಹಮದ್, ಮಕ್ಕಳಾದ ಮೌಲ್ಯ ಬಜೆಕೋಡಿ, ತನುಶ್ರೀ.ಎಸ್.ಯು ಹಾಗೂ ಇನ್ನಿತತರು ಭಾಗವಹಿಸಿದ್ದರು.

Read More

ಮಡಿಕೇರಿ ಜ.26 NEWS DESK :  ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆ ಸ್ಥಳಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಪರಿಶೀಲಿಸಿದರು. ಜ.28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಹಿನ್ನೆಲೆ ಶಾಸಕರು ಸಿದ್ಧತೆ ಬಗ್ಗೆ ಮಾಹಿತಿ ಪಡೆದರು. ರಾಷ್ಟ್ರದ ಪ್ರಥಮ ಸೇನಾದಂಡ ನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವಂತೆ ಸಲಹೆ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಚೊಟ್ಟೆಯಂಡ ಸಂಜು ಕಾವೇರಪ್ಪ, ಪುತ್ತರೀರ ಪಪ್ಪು ತಿಮ್ಮಯ್ಯ, ಪ್ರಮುಖರಾದ ಸೂರಜ್ ಹೊಸೂರು ಇತರರು ಇದ್ದರು.

Read More

ಮಡಿಕೇರಿ ಜ.26 NEWS DESK : ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆಯು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್, ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಲೋಕಾಯುಕ್ತ ಎಸ್ ಪಿ. ದಿನೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Read More

ಮಡಿಕೇರಿ ಜ.26 NEWS DESK : ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಲಯದ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪಿ.ಆನಂದನ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಸಂವಿಧಾನವು ಜಾರಿಗೆ ಬಂದು ಭಾರತವು ಗಣರಾಜ್ಯವಾದ ಈ ದಿನವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ದಿನವಾಗಿದೆ ಎಂದರು. ಕಾರ್ಯಕ್ರಮ ನಿರ್ವಾಹಕ ಅಧಿಕಾರಿ ಎಂ.ಶಕುಂತಲಾ ಅವರು ಮಾತನಾಡಿ, ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವಲ್ಲಿ ಶ್ರವ್ಯ ಮಾಧ್ಯಮವಾದ ಆಕಾಶವಾಣಿಯ ಪಾತ್ರ ಪ್ರಮುಖವಾಗಿದೆ ಎಂದರು. ಇಂಜಿನಿಯರಿಂಗ್ ವಿಭಾಗದ ಕೆ.ಎಸ್.ಉದಯಕುಮಾರ್, ಎ.ರೆಂಜಿತ್ ಕುಮಾರ್, ಎ.ಎಸ್.ಸೋಮಶೇಖರ್ ಹಾಗೂ ಸಿಬ್ಬಂದಿಗಳಾದ ಟಿ.ಸಿದ್ದೋಜಿ ರಾವ್,ಪುರುಷೋತ್ತಮ, ಭದ್ರತಾ ಸಿಬ್ಬಂದಿಗಳಾದ ಸುಬ್ರಾಯ ಕಾಸ್ಪಾಡಿ, ಕೇಡನ ವಾಸು ಮತ್ತಿತರ ಸಿಬ್ಬಂದಿಗಳು ಈ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ NEWS DESK ಜ.25 : ನಾಪೋಕ್ಲು ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವ ಕುರಿತು ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ಸ್ಪಷ್ಟೀಕರಣ ನೀಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ಶಾದಿ ಮಹಲ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಇದು ಶಾಲೆಗೆ ಸೇರಿದ ಜಾಗ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಶಾಲೆಯ ಪ್ರಾಂಶುಪಾಲರು ಕೂಡ ಶಾಸಕರು ಹಾಗೂ ಅಧಿಕಾರಿಗಳ ಗಮನ ಸೆಳೆದು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ ಯಾರಿಂದಲೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ ಎಂದು ತಿಳಿಸಿದ್ದಾರೆ. ಸರಕಾರಿ ಶಾಲೆಗೆ ಸೇರಿದ ಜಾಗ ಶೈಕ್ಷಣಿಕ ಕಟ್ಟಡಗಳ ನಿರ್ಮಾಣ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರಬೇಕು. ಶಾಲೆಯ ಜಾಗದಲ್ಲಿ ಶಾದಿ ಮಹಲ್ ಸೇರಿದಂತೆ ಬೇರೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿರುವುದಿಲ್ಲ. ಆದರೂ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವುದು…

Read More

ಕುಶಾಲನಗರ NEWS DESK ಜ.25 : ಹಿಂದೂಗಳು ಒಗ್ಗೂಡಿ ಸಂಘಟಿತರಾಗಿ ಹಿಂದೂ ಸಂಸ್ಕೃತಿ, ಪರಂಪರೆಗಳನ್ನು, ಕೌಟುಂಬಿಕ ಮೌಲ್ಯಗಳನ್ನು ಸಂರಕ್ಷಿಸುವ ಮೂಲಕ ಹಿಂದೂ ಸಮಾಜದ ಬಲವರ್ಧನೆಗೆ ಶ್ರಮಿಸಬೇಕೆಂದು ಹಿಂದೂ ಮುಖಂಡರೂ ಆದ ಪುತ್ತೂರಿನ ಶ್ರೀ ವಿವೇಕಾನಂದ ಕಾಲೇಜು ಅಧ್ಯಕ್ಷ ರವೀಂದ್ರ ಪತ್ತೂರು ಕರೆ ನೀಡಿದ್ದಾರೆ. ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಭಾನುವಾರ ಕುಶಾಲನಗರದಲ್ಲಿ ಆಯೋಜಿಸಿದ್ದ ಹಿಂದೂ ಸಂಗಮ ಸಭಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಯಾವುದೇ ವ್ಯಕ್ತಿಯ, ಧರ್ಮದ, ರಾಜಕೀಯ ಪಕ್ಷದ ವಿರುದ್ಧ ಹಿಂದೂ ಸಂಗಮವಲ್ಲ. ನಮ್ಮ ಹಿಂದೂ ಸಮಾಜದ ಸಂಘಟನೆಗೆ ಗ್ರಾಮಗಳಲ್ಲಿ ಸಮಿತಿ ರಚನೆ ಮಾಡುವ ಮೂಲಕ ಜಾಗೃತಿ ಮೂಡುತ್ತಿರುವುದು ಹೆಮ್ಮೆಯ ಸಂಗತಿ. ಆದರೆ, ಹಿಂದೂಗಳೆಲ್ಲಾ ಒಂದೇ ಎಂಬ ಭಾವನೆಗಳೊಂದಿಗೆ ಜಾತಿ ಪದ್ಧತಿ ನಿರ್ಮೂಲನೆ ಮಾಡಬೇಕು. ಸ್ವದೇಶಿ ವಸ್ತುಗಳಿಗೆ ಆದ್ಯತೆ ಕೊಡಬೇಕು. ಹಿಂದುತ್ವದ ಅರ್ಥ ಮಾಡಿಕೊಂಡವರು ಜಗತ್ತಿನಾದ್ಯಂತ ಬೇರೆ ಬೇರೆ ರಂಗಗಳಲ್ಲಿ ಬೆಳೆಯುತ್ತಿದ್ದಾರೆ. ಕೆಲವರು ವಿನಾಶಕ್ಕೆ ಕೆಲಸ ಸಂಚು ರೂಪಿಸುತ್ತಿದ್ದಾರೆ. ಹಿಂದೂ ಪದ ಕೇಳಿದರೆ ಮೈ ಪರಚಿಕೊಳ್ಳುವ ಕಾಲವೊಂದಿತ್ತು. ಸ್ವಾಮಿ ವಿವೇಕಾನಂದರ ಆದರ್ಶಗಳ ಪಾಲನೆ ಹಿಂದೂಗಳ ಹೆಮ್ಮೆ. ರಾಷ್ಟ್ರೀಯ ಸ್ವಯಂ ಸೇವಾ…

Read More

ಮಡಿಕೇರಿ NEWS DESK ಜ.25 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಇಂದು ಗೋಣಿಕೊಪ್ಪಲು-ಪಾಲಿಬೆಟ್ಟ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು. ಮಳೆಗಾಲದಲ್ಲಿ ಹದಗೆಟ್ಟಿದ್ದ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಅನುದಾನ ಒದಗಿಸಿದ್ದರು. ನೂತನ ರಸ್ತೆಯ ಗುಣಮಟ್ಟ ಪರಿಶೀಲಿಸಿದ ಶಾಸಕರು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಕಲ್ಪಿಸಿಕೊಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ ಮತ್ತಿತರರು ಹಾಜರಿದ್ದರು.

Read More

ಶನಿವಾರಸಂತೆ NEWS DESK ಜ.24 : ಶನಿವಾರಸಂತೆ ಒಕ್ಕಲಿಗರ ಸಂಘದ ನೂತನ ಆಡಳಿತ ಮಂಡಳಿ ರಚನೆಗೊಂಡಿದ್ದು, ಅಧ್ಯಕ್ಷರಾಗಿ ಕೇಶವಮೂರ್ತಿ ಆಯ್ಕೆಯಾಗಿದ್ದಾರೆ. ಗೌರವ ಸಲಹಾ ಅಧ್ಯಕ್ಷರಾಗಿ ಕಳಲೆ ಕೃಷ್ಣೇಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಆರ್.ಹರೀಶ್ ಕುಮಾರ್, ಉಪಾಧ್ಯಕ್ಷರಾಗಿ ಜೆ.ಗಿರೀಶ್, ಶೆಟ್ಟಿಗನಹಳ್ಳಿ ಸಾಗರ್, ಪುಷ್ಪ ಪೊನ್ನಪ್ಪ, ಕಾರ್ಯದರ್ಶಿಯಾಗಿ ಚಂದ್ರಕಾಂತ್, ಖಜಾಂಚಿಯಾಗಿ ಎಸ್.ಡಿ.ಬಸವರಾಜು, ಸಂಘಟನಾ ಕಾರ್ಯದರ್ಶಿಗಳಾಗಿ ತಾಳೂರು ಪುನೀತ್, ಮೂದ್ರೊಳ್ಳಿ ವಿನೋದ್, ಎಂ.ಡಿ.ಯೋಗಾನಂದ, ಚಂದನ್, ಅಜ್ಜಳ್ಳಿ ನವೀನ್, ಗಂಗನಹಳ್ಳಿ ಮಂಜುನಾಥ್ ಹಾಗೂ ಪೂರ್ಣಿಮಾ ಕಿರಣ್ ಆಯ್ಕೆಯಾದರು. ನೂತನ ಆಡಳಿತ ಮಂಡಳಿಯ ಮೊದಲ ಸಭೆ ಯಶಸ್ವಿ ಕಲ್ಯಾಣ ಮಂಟಪದಲ್ಲಿ ಸ್ಥಾಪಕ ಅಧ್ಯಕ್ಷ ತಿಪ್ಪಳ್ಳಿ ಸುಬ್ಬಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸದಸ್ಯತ್ವ ನೋಂದಾವಣಿಗೆ ಸ್ಥಾಪಕಾಧ್ಯಕ್ಷರು ಚಾಲನೆ ನೀಡಿದರು. ನೂತನ ಅಧ್ಯಕ್ಷ ಕೇಶವಮೂರ್ತಿ ಅವರು ಮಾತನಾಡಿ ಸರ್ವರು ನಮ್ಮೊಂದಿಗೆ ಕೈಜೋಡಿಸುವುದರೊಂದಿಗೆ ಸಂಘವನ್ನು ಕಟ್ಟಿ ಬೆಳೆಸಲು ಸಹಕರಿಸಬೇಕೆಂದು ಮನವಿ ಮಾಡಿದರು. ಪೂರ್ಣಿಮಾ ಕಿರಣ್ ಪ್ರಾರ್ಥಿಸಿದರು, ನೂತನ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಸ್ವಾಗತಿಸಿದರು, ಕಾರ್ಯದರ್ಶಿ ಚಂದ್ರಕಾಂತ್ ವಂದಿಸಿದರು. ಮಾಜಿ ಅಧ್ಯಕ್ಷರಾದ ಜಗನ್ಪಾಲ್ ಹಾಗೂ…

Read More

ಮಡಿಕೇರಿ NEWS DESK ಜ.24 : ಅರೆಭಾಷೆ ಗೌಡ ಸಮುದಾಯದ ಕ್ರೀಡಾ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದಲ್ಲಿ ರಾಜ್ಯ ಸರಕಾರ 6 ಏಕರೆ ಜಾಗ ಮಂಜೂರು ಮಾಡಿದೆ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರ ನೀಡಿರುವ 6 ಏಕರೆ ಜಾಗದಲ್ಲಿ ಉದ್ದೇಶಿತ ಕ್ರೀಡಾ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಯೋಜನೆಗಳ ಅನುಷ್ಠಾನಕ್ಕಾಗಿ ಒಕ್ಕೂಟವು ಮಡಿಕೇರಿ ಗೌಡ ಸಮಾಜದೊಂದಿಗೆ ಕೈಜೋಡಿಸಲಿದೆ ಎಂದು ಹೇಳಿದ್ದಾರೆ. ಅರೆಭಾಷೆ ಗೌಡ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ 8 ಏಕರೆ ಜಾಗ ನೀಡುವುದಾಗಿ ಮುಖ್ಯಮಂತ್ರಿಗಳು ಈ ಹಿಂದೆ ಭರವಸೆ ನೀಡಿದ್ದರು. ಇದೀಗ 6 ಏಕರೆ ಜಾಗಕ್ಕೆ ಮಂಜೂರಾತಿ ದೊರೆತಿದೆ. ಇದಕ್ಕಾಗಿ ಮುತುವರ್ಜಿ ವಹಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ವಿಶೇಷ ಕಾಳಜಿಯಿಂದ ಸ್ಪಂದಿಸಿದ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರುಗಳಿಗೆ…

Read More