ಹುಬ್ಬಳ್ಳಿ ಜ.24 NEWS DESK : ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿ, ಶುಭ ಹಾರೈಸಿದರು. ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಸಂತೋಷ್ ಲಾಡ್, ಶಾಸಕರು, ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಜ.24 NEWS DESK : ಅರೆಭಾಷಿಕ ಗೌಡ ಜನಾಂಗದ ಶ್ರೇಯೋಭಿವೃದ್ಧಿಗಾಗಿ ನಾಲ್ಕು ದಶಕಗಳ ಹಿಂದೆ ನಗರದಲ್ಲಿ ಸ್ಥಾಪಿತವಾದ ‘ಕೊಡಗು ಗೌಡ ಸಮಾಜ’ದ 2026 ರಿಂದ 28ನೇ ಸಾಲಿನವರೆಗಿನ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು, ಅಧ್ಯಕ್ಷರಾಗಿ ದಂಬೆಕೋಡಿ ಎಸ್.ಆನಂದ ಅವರು ಆಯ್ಕೆಯಾಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಗೌಡ ಸಮಾಜದ ನೂತನ ಅಧ್ಯಕ್ಷ ದಂಬೆಕೋಡಿ ಎಸ್.ಆನಂದ ಅವರು ಆಡಳಿತ ಮಂಡಳಿ ರಚನೆಯ ಕುರಿತು ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಸೂರ್ತಲೆ ಸೋಮಣ್ಣ, ಕಾರ್ಯದರ್ಶಿಯಾಗಿ ಪೂಳಕಂಡ ಎಂ.ಸಂದೀಪ್, ಖಜಾಂಚಿಯಾಗಿ ಕಾಳೇರಮ್ಮನ ನಂದ ಕುಮಾರ್, ನಿರ್ದೇಶಕರುಗಳಾಗಿ ಅಮೆ ಸೀತಾರಾಮ್, ಪೊನ್ನಚನ ಮಧು ಸೂದನ್, ಕೊಲ್ಯದ ಗಿರೀಶ್, ಹುದೇರಿ ರಾಜೇಂದ್ರ, ಪೈಕೆರ ಮನೋಹರ, ಪೇರಿಯನ ಘನಶ್ಯಾಮ್, ತೋಟಂಬೈಲು ಅನಂತ ಕುಮಾರ್, ಮಂದ್ರಿರ ತೇಜಸ್, ಕೊಂಬನ ಪ್ರವೀಣ್, ಚೊಕ್ಕಾಡಿ ಪ್ರೇಮಾ ರಾಘವಯ್ಯ ಹಾಗೂ ಮೂಲೆಮಜಲು ಅಮಿತ ಆಯ್ಕೆಯಾಗಿದ್ದಾರೆ. ಕೊಡಗು ಗೌಡ ಸಮಾಜದ ಹಿಂದಿನ ಅಧ್ಯಕ್ಷ ಪೇರಿಯನ ಜಯಾನಂದ ಅವರು ಹತ್ತು ವರ್ಷಗಳ ಕಾಲ ಅಧ್ಯಕ್ಷರಾಗಿ ಉತ್ತಮ…
ಮಡಿಕೇರಿ ಜ.24 NEWS DESK : ಬೆಂಗಳೂರು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಬೆಳಗಾವಿ ಜಿಲ್ಲಾ ಯುವ ಘಟಕದ ವತಿಯಿಂದ ನೀಡಲಾಗುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿಗೆ ಕೊಡಗಿನ ಬಿ.ಎಲ್.ಯಶಸ್ ರೈ ಆಯ್ಕೆಯಾಗಿದ್ದಾರೆ. ಬಿ.ಎಲ್.ಯಶಸ್ ರೈ 2025ರಲ್ಲಿ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಶೇಷ ಯುವ ರಾಯಭಾರಿಯಾಗಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಜಿಲ್ಲಾ ಯುವ ಜನೋತ್ಸವದಲ್ಲಿ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ್ದರು. ಇವರು ಮೂರ್ನಾಡು ಕೊಡಂಬೂರುವಿನ ಲವಕುಮಾರ್ ರೈ ಹಾಗೂ ಜಯಂತಿ ರೈ ದಂಪತಿಯ ಪುತ್ರ. ಜ.27 ರಂದು ಬೆಳಗಾವಿ ಜಿಲ್ಲೆ ಮೂಡಲಗಿಯಲ್ಲಿ ನಡೆಯುವ ಯುವಜಾತ್ರೆ ಕಾರ್ಯಕ್ರಮದಲ್ಲಿ ಬಿ.ಎಲ್.ಯಶಸ್ ರೈ ಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ NEWS DESK ಜ.24 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ ಕಾಲ ನಡೆಯುವ ‘ಫಲಪುಷ್ಪ ಪ್ರದರ್ಶನ’ವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ 33 ಅಡಿ ಎತ್ತರದಲ್ಲಿ 18 ಅಡಿ ಉದ್ದ, 23 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾದ ಕೊಡಗಿನ ಪ್ರಸಿದ್ದ ಶ್ರೀ ಭಗಂಡೇಶ್ವರ ದೇವಸ್ಥಾನದ ಕಲಾಕೃತಿ ನೋಡುಗರನ್ನು ಸೆಳೆಯುತ್ತಿವೆ. ಸುಮಾರು 8 ಸಾವಿರ ಕುಂದಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್‍ಗಳಲ್ಲಿ ಸುಮಾರು 20 ಸಾವಿರ ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ. ಭಾರತ ಏಕೀಕರಣದ ಸಂಕೇತವಾಗಿ ಕನ್ನಡ…
ಮಡಿಕೇರಿ ಜ.24 NEWS DESK : ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಎನ್‍ಆರ್‍ಎಲ್‍ಎಂ, ಸಂಜೀವಿನಿ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಜನವರಿ, 27 ಮತ್ತು 28 ರಂದು ನಗರದ ಗಾಂಧಿ ಮೈದಾನದ ಆವರಣದಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.
ಸೋಮವಾರಪೇಟೆ ಜ.24 NEWS DESK : ಏಳು ದಶಕಗಳ ನಿರಂತರ ಅಧ್ಯಯನ, ಸಂಶೋಧನೆ ಹಾಗೂ ಬರಹಗಳ ಮೂಲಕ ಕನ್ನಡ ಭಾಷೆಗೆ ಜಾಗತಿಕ ಮನ್ನಣೆ ತಂದು ಕೊಟ್ಟ ವಿಶ್ವ ಕವಿ ಡಾ.ಕುವೆಂಪು ಕನ್ನಡ ಸಾಹಿತ್ಯ ಮರೆಯಲಾರದ ಮಾಣಿಕ್ಯ ಎಂದು ರಾಜ್ಯ ಒಕ್ಕಲಿಗ ಸಮಾಜದ ಕೊಡಗು ಜಿಲ್ಲಾ ನಿರ್ದೇಶಕರೂ ಆದ ಸಮಾಜ ಸೇವಕ ಹರಪಳ್ಳಿ ರವೀಂದ್ರ ಶ್ಲಾಘಿಸಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ತೋಳೂರು ಶೆಟ್ಟಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಯರ ವಸತಿ ಶಾಲೆಯ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ” ರಾಷ್ಟ್ರಕವಿ ಕುವೆಂಪು – ವಿಚಾರಧಾರೆ ” ಗಳ ಕುರಿತಾದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕುವೆಂಪು ಅವರು ತಮ್ಮ ಜೀವನದುದ್ದಕ್ಕೂ ಪರಿಸರ, ಪ್ರಾಣಿ – ಪಕ್ಷಿ, ಗಿಡ – ಮರಗಳನ್ನು ಒಡಗೂಡಿದ ಪ್ರಕೃತಿಯನ್ನು ಆರಾಧಿಸಿದರು. ಪರಿಸರ ಪ್ರಕೃತಿ ಸಂರಕ್ಷಣೆಯ ಮಹತ್ವ ಸಾರಿದರು. ಆ ಮೂಲಕ ಗುಡಿ ಗೋಪುರ ಮಸೀದಿ ಮಂದಿರಗಳನ್ನು ಬಿಟ್ಟು ಹೊರ ಬನ್ನಿ ಎಂದು ಸಾರಿದ ಮಹಾಮಹಿಮ ಎಂದರು. ಯಡೂರು…
ವಿರಾಜಪೇಟೆ ಜ.29 NEWS DESK : ಕುಶಾಲನಗರದ ಸ್ಟಾರ್ಟ್ ಬ್ರೈನ್ ಅಕಾಡೆಮಿ ವತಿಯಿಂದ 4ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಮಹಮ್ಮದ್ ವೈಜ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. ಮಹಮ್ಮದ್ ವೈಜ್ ಅಮ್ಮತ್ತಿಯ ಗುಡ್ ಶೆಪರ್ಡ್ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಮಹಮ್ಮದ್ ರಪೀಕ್ ಮತ್ತು ಸುಮಯ್ಯ ತಬಸ್ಸುಮ್ ಅವರ ಪುತ್ರ.
ಮಡಿಕೇರಿ ಜ.24 NEWS DESK : ಕೊಡವರು ಸೇರಿದಂತೆ ಎಲ್ಲರನ್ನೂ ಒಳಗೊಂಡ ಪರಿಪೂರ್ಣ ಗಣರಾಜ್ಯವನ್ನು ನಿರ್ಮಿಸಬೇಕು ಮತ್ತು ಸೂಕ್ಷ್ಮ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ನಂಬುಗೆಯ ಕೊಡವರ 10 ಕಾನೂನುಬದ್ಧ ಆಕಾಂಕ್ಷೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜ.26 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 77ನೇ ಗಣರಾಜ್ಯೋತ್ಸವದಂದು ಬೆಳಿಗ್ಗೆ 10.30 ರಿಂದ 11.30 ರವರೆಗೆ ಸತ್ಯಾಗ್ರಹ ನಡೆಸಿ ಕೊಡವ ಆತ್ಮಸಾಕ್ಷಿ, ಕೊಡವ ಒಮ್ಮತ ಮತ್ತು ಕೊಡವ ಪ್ರಜ್ಞೆಯ ಅಭಿವ್ಯಕ್ತಿಯನ್ನು ದೃಢೀಕರಿಸುವ ಕುರಿತು ಸಂವಿಧಾನಬದ್ಧವಾದ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಸಂವಿಧಾನದ 5, 6 ಮತ್ತು 8ನೇ ಪರಿಚ್ಛೇದಗಳೊಂದಿಗೆ 244ನೇ ಮತ್ತು 371ನೇ ವಿಧಿಯ ಅಡಿಯಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ರಚಿಸಬೇಕು. ಸ್ವ-ಆಡಳಿತ, ಸ್ವ-ನಿರ್ಣಯ ಹಕ್ಕುಗಳು, ಆದಿಸಮಸಂಜಾತ ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಮಾನ್ಯತೆ ಕಲ್ಪಿಸಬೇಕು.…
ನಾಪೋಕ್ಲು ಜ.24 NEWS DESK : ಚೆರಿಯ ಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಳ ದಾನಿ ಪಿ.ಪಿ.ಮೋಹಿದಿನ್ ಹಾಜಿ ಅವರಿಗೆ ಪುಷ್ಪ ನಮನದೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಶೀದ್ ಅವರು ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಮೋಹಿದೀನ್ ಹಾಜಿ ಅವರ ನಿಸ್ವಾರ್ಥ ಸೇವೆಗೆ ಪ್ರಸಂಸೆ ವ್ಯಕ್ತಪಡಿಸಿದರು. ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ಚರಿಯಪರಂಬುವಿನಲ್ಲಿ ಮೋಹಿದಿನ್ ಹಾಜಿ ಅವರು 1975 ರಲ್ಲಿ ಚರಿಯ ಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 25 ಸೆಂಟ್ ಜಾಗವನ್ನು ದಾನವಾಗಿ ನೀಡಿ ವಿದ್ಯಾರ್ಥಿಗಳಿಗೆ ಬಟ್ಟೆ, ಪುಸ್ತಕವನ್ನು ಉದಾರವಾಗಿ ನೀಡಿ ವಿದ್ಯಾರ್ಜನೆಗೆ ಸಹಕರಿಸಿದ್ದರು . ಅವರು ಶನಿವಾರ ನಿಧನರಾಗಿದ್ದು ಅವರ ಆತ್ಮಕ್ಕೆ ಶಾಂತಿಯನ್ನು ಕೋರಿ ಚೆರಿಯ ಪರಂಬು ಸರ್ಕಾರಿ ಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ, ಅಂಗನವಾಡಿ ಕೇಂದ್ರ ,ಹಳೆಯ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾರ್ಥಿಗಳು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. ಈ ಸಂದರ್ಭ ಶಾಲೆಯ…
ಮಡಿಕೇರಿ ಜ.24 NEWS DESK : ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ನಡೆಯಲಿರುವ ಫಲಪುಷ್ಪ ಪ್ರದರ್ಶನದ ಸಮಯ ವಾಹನ ಸಂಚಾರ, ವಾಹನ ನಿಲುಗಡೆ ಮತ್ತು ಬಂದೋಬಸ್ತು ವ್ಯವಸ್ಥೆಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ಬಿಂದುಮಣಿ ಪರಿಶೀಲಿಸಿದರು.






