ಲೇಖಕ: admin

ಮಡಿಕೇರಿ ಜ.23 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಿರಿಯ ನಾಗರಿಕರ ಕಾಯ್ದೆ 2007, ಹಿರಿಯ ನಾಗರಿಕರ ಆಸ್ತಿ ಸಂರಕ್ಷಣೆ, ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ ಕಾನೂನು ಅರಿವು ಮತ್ತು ನೆರವು ಶಿಬಿರ ಕಾರ್ಯಕ್ರಮವು ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಉದ್ಘಾಟಿಸಿ ಮಾತನಾಡಿ, ಹಿರಿಯ ನಾಗರಿಕರು ಸಮಾಜದ ಆಸ್ತಿ. ಹಿರಿಯರಿಗೆ ಸರ್ಕಾರ ಹಾಗೂ ಸಂಘ ಸಂಸ್ಥೆಗಳಿಂದ ಇರುವಂತಹ ಅವರ ಹಕ್ಕುಗಳನ್ನು ಪಡೆಯುವಲ್ಲಿ ಹಾಗೂ ತಮ್ಮ ಆಸ್ತಿಯಲ್ಲಿ ತಮಗೆ ಅಗತ್ಯವಿರುವಷ್ಟನ್ನು ಇಟ್ಟುಕೊಂಡು ಮಕ್ಕಳಿಗೆ ನೀಡುವಂತಾಗಬೇಕು ಎಂದು…

Read More

ಮಡಿಕೇರಿ ಜ.23 NEWS DESK : ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಾ.25 ಮತ್ತು 26ರಂದು ಮಡಿಕೇರಿ ನಗರದಲ್ಲಿ 36ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ರಾಮೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಶ್ರೀ ಕೋದಂಡ ರಾಮೋತ್ಸವ ಸಮಿತಿ ಹಾಗೂ ಭಕ್ತರ ಪೂರ್ವಭಾವಿ ಸಭೆಯನ್ನು ಫೆ.2 ರಂದು ಸಂಜೆ 4.30 ಗಂಟೆಗೆ ಶ್ರೀ ಕೋದಂಡರಾಮ ದೇವಾಲಯದ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಅವರು ತಿಳಿಸಿದ್ದಾರೆ. ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ರಾಮೋತ್ಸವದ ಯಶಸ್ಸಿಗಾಗಿ ಸಮಿತಿ ಹಾಗೂ ಉಪಸಮಿತಿಗಳನ್ನು ರಚಿಸಲಾಗುವುದು. ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ನಗರದಲ್ಲಿರುವ ಎಲ್ಲಾ ದೇವಾಲಯಗಳ ಪದಾಧಿಕಾರಿಗಳು, ಸದಸ್ಯರು, ಸಂಘ ಸಂಸ್ಥೆಗಳ ಪ್ರಮುಖರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ. ಕಳೆದ ವರ್ಷ ಸರ್ವ ಜನರ, ಸಂಘ ಸಂಸ್ಥೆಗಳ,…

Read More

ಮಡಿಕೇರಿ ಜ.23 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ (5ನೇ ತರಗತಿಗೆ) ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಗೆ 2026-27ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಫೆಬ್ರವರಿ, 05 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿಗೆ ಫೆಬ್ರವರಿ, 06 ರಂದು ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆ ಹಾಗೂ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಫೆಬ್ರವರಿ, 07 ರಂದು ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಫೆಬ್ರವರಿ, 05, 06 ಮತ್ತು 07 ರಂದು ಬೆಳಗ್ಗೆ 9 ಗಂಟೆ ಒಳಗೆ ಇಲಾಖಾ ತರಬೇತುದಾರರಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮಹಾಬಲ ಅಥ್ಲೆಟಿಕ್ಸ್ ತರಬೇತುದಾರರು ದೂ.ಸಂ.9980887499, ಬಿಂದ್ಯಾ ಹಾಕಿ ತರಬೇತುದಾರರು 9481058092 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.

Read More

ವಿರಾಜಪೇಟೆ ಜ.23 NEWS DESK : ವಿರಾಜಪೇಟೆ ಗಡಿಯಾರ ಕಂಬದಿಂದ ಖಾಸಗಿ ಬಸ್ಸು ನಿಲ್ದಾಣದವರೆಗೆ ಏಕಮುಖ ಸಂಚಾರವೇ ಇರಲಿ. ಅಭಿವೃದ್ಧಿ ಹೆಸರಿನಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಿದರೆ ವರ್ತಕರಿಗೆ ವ್ಯಾಪಾರ ವಹಿವಾಟು ಸಮಸ್ಯೆಯಾಗುತ್ತದೆ ಎಂದು 200ಕ್ಕೂ ಅಧಿಕ ಮಂದಿ ವರ್ತಕರು ಸಾಮೂಹಿಕವಾಗಿ ಸಭೆ ನಡೆಸಿ ವಿರಾಜಪೇಟೆ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ವಿರಾಜಪೇಟೆಯ ಹಿಲ್‍ಪ್ಯಾಲೆಸ್ ಹೋಟೆಲ್ ಸಭಾಂಗಣದಲ್ಲಿ ನಡೆದ ವರ್ತಕರ ಸಭೆಯಲ್ಲಿ ರಸ್ತೆ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ. ಅಭಿವೃದ್ಧಿಯ ಜೊತೆಗೆ ಏಕಮುಖ ಸಂಚಾರ ವ್ಯವಸ್ಥೆ ಇದ್ದು ವಾಹನ ನಿಲುಗಡೆಗೆ ಪರ್ಯಾಯ ವ್ಯವಸ್ಥೆ ಮಾಡಬೇಕು, ವರ್ತಕರು ಹಾಗೂ ಮಾಲೀಕರು ತಮ್ಮ ವಾಹನಗಳನ್ನು ರಸ್ತೆ ಬದಿ ನಿಲುಗಡೆ ಮಾಡದೆ ಸಹಕರಿಸುವಂತೆ ತೀರ್ಮಾನಿಸಲಾಯಿತು. ವಿರಾಜಪೇಟೆ ವರ್ತಕ, ವಿರಾಜಪೇಟೆ ವರ್ತಕರ ಸಂಘದ ಅಧ್ಯಕ್ಷ ಪಿ.ಎ.ಮಂಜುನಾಥ್ ಮಾತನಾಡಿ, ದ್ವಿಮುಖ ಸಂಚಾರ ಮಾಡುವುದು, ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲ ಎಂಬ ವಿಚಾರಕ್ಕೆ ಸಭೆ ಸೇರಿ ಒಮ್ಮತದ ತೀರ್ಮಾನ ತೆಗೆದುಕೊಂಡು ಗಡಿಯಾರ ಕಂಬದಿಂದ ಖಾಸಗಿ ಬಸ್…

Read More

ವಿರಾಜಪೇಟೆ ಜ.23 NEWS DESK : ಕುಶಾಲನಗರದ ರೈತಭವನದಲ್ಲಿ ನಡೆದಲ್ಲಿ ನಡೆದ ರಾಜ್ಯ ಮಟ್ಟದ 4ನೇ ಅಬಾಕಸ್ ಮತ್ತು ಕ್ಯಾಲಿಗ್ರಫಿ ಸ್ಪರ್ಧೆಯಲ್ಲಿ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಚಿರಂತ್, ಚರಣ್, ಲಿಥಿನ್ ಮತ್ತು ಯದುನಂದನ್ (7ನೇ ತರಗತಿ), ರಕ್ಷಿತಾ (5ನೇ ತರಗತಿ), ಮತ್ತು ಫಾದಿಲ್ ಮತ್ತು ರಕ್ಷಕ್ (4ನೇ ತರಗತಿ) ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಚಿರಂತ್ ಅಬಾಕಸ್ ಹಾಗೂ ಕ್ಯಾಲಿಗ್ರಫಿ ಎರಡರಲ್ಲೂ ಪ್ರಥಮ ಬಹುಮಾನವನ್ನು ಮತ್ತು ಯದುನಂದನ್ ಅಬಾಕಸ್‍ನಲ್ಲಿ ತೃತೀಯ ಹಾಗೂ ಕ್ಯಾಲಿಗ್ರಫಿಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

Read More

ಮಡಿಕೇರಿ ನ.23 NEWS DESK : ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಜಿಲ್ಲಾ ಪೊಲೀಸ್‌ ಕಚೇರಿಯ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

Read More

ಹುಬ್ಬಳ್ಳಿ ನ.23 NEWS DESK : ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿರುವ ಮೆಟ್ರೋ ಮಾಲ್‌ನಲ್ಲಿ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ-ಪಾಸ್ತಿಗೆ ಹಾನಿಯಾಗಿದೆ. ಗುರುವಾರ ತಡರಾತ್ರಿ ಮೂರು ಅಂತಸ್ತಿನ ಈ ವಾಣಿಜ್ಯ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿಯ ಪ್ರಕಾರ, ತಡರಾತ್ರಿ ವಿದ್ಯುತ್ ಹೋಗಿ ಮತ್ತೆ ಬಂದ ಕೆಲವೇ ಸಮಯದೊಳಗೆ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಮಾಲ್‌ನೊಳಗೆ ಇದ್ದ ಬಟ್ಟೆ ಅಂಗಡಿಗಳು, ಶೂ ಮತ್ತು ಚಪ್ಪಲಿ ಸೇರಿದಂತೆ ವಿವಿಧ ವಸ್ತುಗಳ ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಘಟನೆ ನಡೆದ ಸಮಯದಲ್ಲಿ ಮಾಲ್‌ನಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ ಸಂಯುಕ್ತವಾಗಿ ಪ್ರಾಥಮಿಕ ತನಿಖೆ ಕೈಗೊಂಡಿವೆ.

Read More

ಬೆಂಗಳೂರು ನ.23 NEWS DESK : ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಮರುಪ್ರತಿಷ್ಠಾಪನೆ ಮಾಡಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿ, ನೇತಾಜಿ ಅವರ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ವಂದಿಸಿದರು. ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK  ಜ.23 : ದಕ್ಷಿಣ ಕೊಡಗಿನ ವಿವಿಧೆಡೆ ಹುಲಿ ಉಪಟಳ ವ್ಯಾಪಕವಾಗಿದೆ. ಗೋಣಿಕೊಪ್ಪ ಮತ್ತು ತಿತಿಮತಿ ಭಾಗದ ಹೆದ್ದಾರಿಯಲ್ಲಿ ಹುಲಿ ಸಂಚರಿಸುತ್ತಿರುವ ದೃಶ್ಯ ಸೆರೆಯಾಗಿದ್ದು, ಗ್ರಾಮಸ್ಥರು ಹಾಗೂ ವಾಹನ ಚಾಲಕರು ಆತಂಕಗೊಂಡಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಹುಲಿ ಸಂಚಾರದ ಕುರಿತು ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ತಕ್ಷಣ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಹುಲಿ ಸೆರೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅವರು ಮನವಿ ಮಾಡಿದ್ದಾರೆ. ದಕ್ಷಿಣ ಕೊಡಗಿನ ಗ್ರಾಮೀಣ ಭಾಗದಲ್ಲಿ ನಿರಂತರ ಹುಲಿ ದಾಳಿಯಿಂದ ಹಸುಗಳು ಬಲಿಯಾಗುತ್ತಿವೆ. ಕಾಡಾನೆಗಳು ಕೂಡ ಉಪಟಳ ನೀಡುತ್ತಿದ್ದು, ಗ್ರಾಮಸ್ಥರು ಆತಂಕದಿಂದಲೇ ದಿನ ದೂಡುತ್ತಿದ್ದಾರೆ. ಸರಕಾರ ಹಾಗೂ ಅರಣ್ಯ ಇಲಾಖೆ ವನ್ಯಜೀವಿ ಉಪಟಳದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.

Read More

ಮಡಿಕೇರಿ ನ.23 NEWS DESK  : ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಸೈಬರ್ ಅಪರಾಧ ಹಾಗೂ ಸಂಚಾರ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಸೋಮವಾರಪೇಟೆ ಠಾಣೆಯ ಅಧಿಕಾರಿ ಮತ್ತು‌ ಸಿಬ್ಬಂದಿಗಳು ಸೋಮವಾರಪೇಟೆಯ ಸಂತ ಜೋಸೆಫರ ಪಿಯು ಕಾಲೇಜು ಮತ್ತು ನೇರುಗಳಲೆ ಗ್ರಾಮದ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಪರಿಣಾಮ, ರಸ್ತೆ ಮತ್ತು ಸಂಚಾರ ಸುರಕ್ಷತೆ, ಪೋಕ್ಸೋ ಕಾಯ್ದೆ, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.   ಕುಟ್ಟ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಕುಟ್ಟ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ರಸ್ತೆ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ಕಾಯ್ದೆ ಮತ್ತು ಮಾದಕ ದ್ರವ್ಯ ಬಳಕೆಯಿಂದಾಗುವ ಪರಿಣಾಮಗಳು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.  ಗರ್ವಾಲೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ…

Read More