ಮಡಿಕೇರಿ ನ.23 NEWS DESK : ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಮಡಿಕೇರಿಯ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ, ಮಾದಕ ವಸ್ತು, ಬಾಲ್ಯ ವಿವಾಹ, ಅಕ್ಕ ಪಡೆ ಮುಂತಾದ ವಿಷಯಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.
ಲೇಖಕ: admin
ಮಡಿಕೇರಿ ನ.23 NEWS DESK : ನಕ್ಸಲ್ ನಿಗ್ರಹದಳ ಕುಟ್ಟ, ಮಕ್ಕಳ ವಿಶೇಷ ಪೊಲೀಸ್ ಘಟಕ, ಅಕ್ಕಪಡೆ, ಕುಟ್ಟ ಪೊಲೀಸ್ ಠಾಣೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ನಾಣಚ್ಚಿ ಹಾಡಿ, ನಾಗರಹೊಳೆ ಬಾಳೆ ಕೋವು ಹಾಡಿ, ಸಿಂಕೋನ ಕಾಲೋನಿ ಹಾಡಿ ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಪೋಕ್ಸೋ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಮುಂತಾದವುಗಳ ಬಗ್ಗೆ ಕಾನೂನು ಅರಿವು ಮೂಡಿಸಲಾಯಿತು.
ಬೆಂಗಳೂರು ನ.23 NEWS DESK : ಬೀದರ್ ನಲ್ಲಿ ನಡೆಯಲಿರುವ ಪತ್ರಕರ್ತರ 40ನೇ ರಾಜ್ಯ ಸಮ್ಮೇಳನದ ಲೋಗೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆಗೊಳಿಸಿ, ಶುಭ ಕೋರಿದರು. ಸಚಿವರಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಸಂಘದ ರಾಜ್ಯ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಬೆಂಗಳೂರು ಜ.23 NEWS DESK : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವ ದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್‍ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…
ವಿರಾಜಪೇಟೆ ಜ.23 NEWS DESK : ಕೇರಳದ ಇರಿಟ್ಟಿ ಸಮೀಪದ ಉಳಿಕ್ಕಲ್‍ನ ವಾಯತ್ತೂರು ಕಾಲಿಯಾರ್ (ಕೊಡಗಿನ ಶ್ರೀ ಆದಿ ಬೈತೂರಪ್ಪ) ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ಸಲುವಾಗಿ ಕೊಡಗಿನ ಪುಗ್ಗೆರ ಕುಟುಂಬದ ಎತ್ತು ಪೋರಾಟ್ ಹಾಗೂ ಅಕ್ಕಿ ಅಳೆಯುವ ಶಾಸ್ತ್ರ ನಡೆಯಿತು. ಊಟು ಹಬ್ಬದ ಅಕ್ಕಿಯನ್ನು ಕೊಡಗಿನಿಂದ ದೇವಸ್ಥಾನಕ್ಕೆ ತರಲಾಯಿತು. ಕೊಡಗಿನ ಐತಿಹಾಸಿಕ ಪುಗ್ಗೇರಮನೆಯಿಂದ ಬೈತೂರುವಿಗೆ ಕಾಲಿಯಾರ್ ಊಟು ಉತ್ಸವಕ್ಕಾಗಿ ಅಕ್ಕಿ ತರಲಾಗುತ್ತದೆ. ದೇವಸ್ಥಾನದಲ್ಲಿ ಅಕ್ಕಿ ಹಾಗೂ ಎತ್ತುಗಳೊಂದಿಗೆ ಆಗಮಿಸಿದ ಕೊಡವರನ್ನು ಸಂಪ್ರದಾಯದಂತೆ ಬರಮಾಡಿಕೊಂಡರು. ಕೊಡಗಿನಿಂದ ತಂದ ಅಕ್ಕಿಯನ್ನು ದೊಡ್ಡ ಅಳೆದ ಬಳಿಕ ಕೊಡಗು-ಮಲೆಯಾಳರ ಅಪರೂಪದ ಸಂಗಮವಾಗಿರುವ ವಾಯತ್ತೂರು ಉತ್ಸವ ಆರಂಭವಾಗಲಿದೆ. ಗುರುವಾರದಂದು ಶ್ರೀ ಭೂತಬಲಿ, ವಿಶೇಷ ಪೂಜೆ, ನೈವೇದ್ಯ, ಪುಗ್ಗೆರ ಮನೆಯವರ ಪೂಜಾ ಕೈಂಕರ್ಯಗಳು, ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಇಂದು (ಸೆ.23) ಬೆಳಿಗ್ಗೆ (ಇಂದು)ಕೊಡಗಿನವರಿಂದ ಮೆರವಣಿಗೆ, ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳು, (9 ಊಟ್) ನಾಡಿನ ಎತ್ತು ಪೋರಾಟ, ಅಕ್ಕಿ ಅಳೆಯುವುದು, ರಾತ್ರಿ 8.30 ಗಂಟೆಗೆ ಪುಗ್ಗೆರ ಕುಟುಂಬದ ವಿಶೇಷ…
ಕುಶಾಲನಗರ, ಜ.22 NEWS DESK : ಪ್ರಸಕ್ತ ಸಾಲಿನಲ್ಲಿ ಪ್ರತಿ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಜತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರೂ ಆದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಹೇಳಿದರು. ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಶಿಕ್ಷಣ ಇಲಾಖೆ ಮತ್ತು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್ಇ.ಆರ್.ಟಿ.) ವತಿಯಿಂದ ಶಿಕ್ಷಕ ಶಿಕ್ಷಣ ಯೋಜನೆಯಡಿ ಇಲಾಖೆಯ ಅನುಷ್ಠಾಆಧಿಕಾರಿಗಳು ಹಾಗೂ ಜಿಲ್ಲಾ ಸರ್ಕಾರಿ ಪ್ರೌಢಶಾಲೆ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಗುರುವಾರ ರಾಜ್ಯ ಮಟ್ಟದ ಎಸ್‌ಎಸ್‌ಎಲ್‌ಸಿ ಪೂರ್ವ…
ಮಡಿಕೇರಿ ಜ.22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮವು ಜನವರಿ, 25 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜ.22 NEWS DESK : ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜನವರಿ, 30 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಿಂದ ಮೆರವಣಿಗೆಯಲ್ಲಿ ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದ ಆವರಣದಲ್ಲಿ ಇರಿಸಿ ಬೆಳಗ್ಗೆ 10.30 ಗಂಟೆಗೆ ಸರ್ವಧರ್ಮ ಪ್ರಾರ್ಥನೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.22 NEWS DESK : ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲ್ಲೂಕಿನ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮಿಯೋಜನೆಯಲ್ಲಿ ಒಟ್ಟು 1.17 ಫಲಾನುಭವಿಗಳಿಗೆ ಸೆಪ್ಟೆಂಬರ್ ತಿಂಗಳವರೆಗೆ ಗೃಹ ಲಕ್ಷ್ಮಿ ಹಣ ಪಾವತಿಯಾಗಿದ್ದು, ಇನ್ನೂ 5 ತಿಂಗಳು ಬಾಕಿ ಇದೆ. ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಗೃಹ ಲಕ್ಷ್ಮಿ ಯೋಜನೆಯಡಿ ಸೆಪ್ಟೆಂಬರ್ ತಿಂಗಳವರೆಗೆ 720 ಹೊಸ ಫಲಾನುಭವಿಗಳು ಹೆಸರು ನೋದಾಯಿಸಿಕೊಂಡಿದ್ದು, ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. ಐಟಿ ಮತ್ತು ಜಿಎಸ್‍ಟಿ ಪಾವತಿ ಮಾಡುತ್ತಿರುವ ಫಲನುಭವಿಗಳಲ್ಲಿ ಕೆಲವು ತಾಂತ್ರಿಕ ದೋಷಗಳು ಕಂಡುಬರುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನ ತಂದು ಸಮಸ್ಯೆ ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಸರ್ಕಾರ ಹೊಸದಾಗಿ ಮಹಿಳೆಯರಿಗಾಗಿ ಗೃಹ ಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘವನ್ನು ರಚನೆ ಮಾಡಿದ್ದು, ಮೊದಲ ಹಂತದಲ್ಲಿ ಈಗಾಗಲೇ ತಾಲ್ಲೂಕಿನಲ್ಲಿ ಫಲಾನುಭವಿಗಳನ್ನು ಆಯ್ಕೆ…
ಮಡಿಕೇರಿ ಜ.22 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ಹುಲಿ ಮತ್ತು ಕಾಡಾನೆ ಉಪಟಳ ವ್ಯಾಪಕವಾಗಿದೆ. ಹುಲಿ ದಾಳಿಯಿಂದ ಹಸು ಮತ್ತು ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ತೀವ್ರ ಗಾಯಗೊಳಿಸಿರುವ ಘಟನೆ ಇಂದು ದಕ್ಷಿಣ ಕೊಡಗಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪೋರಂಗಡ ಪೃಥ್ವಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. *ಕಾಡಾನೆ ದಾಳಿ* ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಬಾಡಗ ಬಾಣಂಗಾಲ ಗ್ರಾಮದ ಮಟ್ಟ ಪೈಸಾರಿ ಬಳಿ ನಡೆದಿದೆ. ಸ್ಥಳೀಯ ನಿವಾಸಿ ದೇವರಾಜ (60) ಎಂಬುವವರೇ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಇವರನ್ನು ವಿರಾಜಪೇಟೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ.…






