ಮಂಗಳೂರು.ಸೆ.18 NEWS DESK : ತುಳು ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸವಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತುಳುಭಾಷೆ ಮಾತನಾಡುತ್ತಾರೆ. ಹಾಗಾಗಿ ಈ ಎರಡು ಜಿಲ್ಲೆಗೆ ಅನ್ವಯವಾಗುವಂತೆ ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ನಗರದ ಪ್ರಜಾಸೌಧ ಕಟ್ಟಡದ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಸಾವಜನಿಕರಿಂದ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು. ಈ ಸಂಬಂಧ ಸಾವಜನಿಕರು ಒಂದು ತಿಂಗಳಲ್ಲಿ ಅಭಿಪ್ರಾಯ ನೀಡಬಹುದಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು. ಜಿಲ್ಲೆಗೊಂದು ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಎಂಬುದು ಸರಕಾರದ ಉದ್ದೇಶವಾಗಿದೆ. ಆ ದಿಸೆಯಲ್ಲಿ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಗುರುತಿಸಿರುವ ಜಾಗದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು, ಬೋಧನಾ…
ಲೇಖಕ: admin
ಮಡಿಕೇರಿ ಸೆ.18 NEWS DESK : ಹಿರಿಯ ನಾಗರಿಕರನ್ನು ಗೌರವ ಹಾಗೂ ಸಂತೋಷದಿಂದ ನೋಡಿಕೊಳ್ಳುವುದು ಪ್ರತಿಯೊಂದು ಕುಟುಂಬದ ಜವಾಬ್ದಾರಿಯಾಗಿದೆ. ಹಿರಿಯರು ನೆಮ್ಮದಿಯಿಂದ ಇರುವ ಮನೆ ಹಾಗೂ ಸಮಾಜವೇ ನಿಜವಾದ ಸಮೃದ್ಧಿಯ ಸಂಕೇತ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಅಭಿಪ್ರಾಯಪಟ್ಟರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ನಗರದ ಗಾಂಧಿ ಮೈದಾನದಲ್ಲಿ ನಡೆದ ವಿವಿಧ ಆಟೋಟ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಮಳೆಯೊಂದಿಗೆ ಉತ್ತಮ ಬೆಳೆ ದೊರೆಯಬೇಕಾದರೆ ಪ್ರಕೃತಿಯ ಕೃಪೆಯ ಜೊತೆಗೆ ನಮ್ಮ ಹಿರಿಯರ ಆಶೀರ್ವಾದವೂ ಅಗತ್ಯ. ಯಾವ ದೇಶದಲ್ಲಿ ಹಿರಿಯರು ನೆಮ್ಮದಿಯಿಂದ ಬದುಕುತ್ತಿದ್ದಾರೋ ಆ ದೇಶ ಸಮೃದ್ಧವಾಗಿರುತ್ತದೆ ಎಂಬ ಮಾತಿದೆ. ಅದೇ ರೀತಿ ಮನೆಯಲ್ಲಿರುವ ಉಪಕರಣಗಳು, ಸೌಲಭ್ಯಗಳು ಅಥವಾ ಹಣದ ಆಧಾರದ ಮೇಲೆ ಆ ಮನೆ ಶ್ರೀಮಂತವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಅಲ್ಲಿರುವ ತಂದೆ-ತಾಯಿ ಸಂತೋಷವಾಗಿದ್ದಾರೆಯೇ, ನೆಮ್ಮದಿಯಿಂದ ಊಟ…
ಕುಶಾಲನಗರ, NEWS DESK ಸೆ.18: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಹಾಗೂ ವಿರಾಜಪೇಟೆ ತಾಲೂಕು ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ, ವಿವಿಧ ಸಂಘ-ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ಅಕ್ಟೋಬರ್ 1ರಿಂದ ನಡೆಯಲಿರುವ 2131ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಕುಶಾಲನಗರದಲ್ಲಿ ಬಿಡುಗಡೆಗೊಳಿಸಲಾಯಿತು. ಯೋಜನೆಯ ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಒಂದು ವಾರಗಳ ಕಾಲ ವಿರಾಜಪೇಟೆಯ ಹೆಗ್ಗಳ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿರುವ ಶಿಬಿರದ ಯಶಸ್ಸಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭ ವೇದಿಕೆಯ ಅಧ್ಯಕ್ಷ ಎ.ಟಿ. ರಂಗಸ್ವಾಮಿ, ಜಿಲ್ಲಾ ನಿರ್ದೇಶಕ ವಿಠಲ ಸಾಲಿಯಾನ್, ಸ್ಥಾಪಕ ಅಧ್ಯಕ್ಷ ಪಿ. ಅಭಿಮನ್ಯು ಕುಮಾರ್, ನಿಕಟಪೂರ್ವ ಅಧ್ಯಕ್ಷ ಅರುಣ್…
ಸೋಮವಾರಪೇಟೆ, NEWS DESK ಸೆ. 18: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 20ರ ಭಾನುವಾರ ಪೂರ್ವಾಹ್ನ 10 ಗಂಟೆಗೆ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಿ.ಬಿ. ಸೋಮಯ್ಯ ತಿಳಿಸಿದ್ದಾರೆ. ಸಂಘವು ಜನಸೇವೆಯಲ್ಲಿ ಸಾರ್ಥಕ 106 ವರ್ಷಗಳನ್ನು ಪೂರೈಸಿದ್ದು, ಸಂಘದ ಏಳಿಗೆಗೆ ಸಹಕರಿಸುತ್ತಿರುವ ಸರ್ವ ಸದಸ್ಯರು, ಠೇವಣಿದಾರರು ಹಾಗೂ ಗ್ರಾಹಕರು ಅಭಿನಂದನಾರ್ಹರು. ಸಂಘವು 31–03–2026ಕ್ಕೆ ರೂ. 531 ಕೋಟಿಗಳ ವ್ಯವಹಾರ ನಡೆಸಿ ಲಾಭದತ್ತ ಸಾಗಿದೆ ಎಂದು ಅವರು ತಿಳಿಸಿದರು. ಸಂಘವು ತಾಲೂಕಿನ ಅಬ್ಬೂರುಕಟ್ಟೆ ಹಾಗೂ ಬಳಗುಂದ ಶಾಖೆಗಳನ್ನು ಹೊಂದಿದ್ದು, ಗ್ರಾಮೀಣ ಭಾಗದ ರೈತರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ. ಸಂಘದಲ್ಲಿ ಜಾಮೀನು ಸಾಲ ವಿಮಾ ಯೋಜನೆ ಹಾಗೂ ಪಿಗ್ಮಿ ಓವರ್‌ಡ್ರಾಫ್ಟ್ ಸಾಲದ ವಿಮಾ ಯೋಜನೆ ಜಾರಿಯಲ್ಲಿದೆ. ಯಶಸ್ವಿನಿ ರೈತರ ವಿಮಾ ಯೋಜನೆಯೂ ಜಾರಿಯಲ್ಲಿದ್ದು, 2,084 ಸದಸ್ಯರು ಸದರಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದರು. 2025–26ನೇ ಸಾಲಿನಲ್ಲಿ 7ನೇ ತರಗತಿ, ಎಸ್‌ಎಸ್‌ಎಲ್‌ಸಿ ಹಾಗೂ…
ಮಡಿಕೇರಿ, NEWS DESK ಸೆ.18: ವಿದ್ಯಾರ್ಥಿ ಜೀವನವು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಮಹತ್ತರವಾದ ಸಮಯವಾಗಿದ್ದು, ವಿದ್ಯಾರ್ಥಿಗಳು ತಮಗೆ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮದ್ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದ ಮಹತ್ವ, ದೊರೆಯುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ವಿಧಾನ ಹಾಗೂ ವಿದ್ಯಾರ್ಥಿ ಸಂಘದ ಪಾತ್ರದ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿ ಸಂಘದ ಚಟುವಟಿಕೆಗಳ ಮೂಲಕ ನಾಯಕತ್ವ, ಸಂಘಟನಾ ಸಾಮರ್ಥ್ಯ ಹಾಗೂ ಸಾಮಾಜಿಕ ಜವಾಬ್ದಾರಿಯ ಗುಣಗಳನ್ನು ಬೆಳೆಸಿಕೊಳ್ಳಬಹುದು ಎಂದು ಅವರು ತಿಳಿಸಿದರು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ನವೀನ್ ಅಂಬೆಕಲ್ಲು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟೇಶ ಪ್ರಸನ್ನ ಪಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ…
ಮಡಿಕೇರಿ, NEWS DESK ಸೆ. 18: ಪ್ರತಿಭಟನೆಗಳು ಅಥವಾ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ನಗರದ ಹೃದಯ ಭಾಗದಲ್ಲಿರುವ ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಅಗೌರವವಾಗದಂತೆ ಎಚ್ಚರ ವಹಿಸಬೇಕು ಎಂದು ಕಾಲೂರು ಗ್ರಾಮದ ಮುತ್ತ್ ನಾಡ್ ಕೊಡವ ಸಮಾಜದ ಅಧ್ಯಕ್ಷ ಅಯಲಪಂಡ ಮಿಟ್ಟು ಉತ್ತಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಹೆಮ್ಮೆಯ ಸೇನಾನಿ, ಕೊಡಗಿನ ವೀರಪುತ್ರ ಜನರಲ್ ಕೊಡಂದೇರ ಸುಬ್ಬಯ್ಯ ತಿಮ್ಮಯ್ಯ ಅವರ ಸ್ಮರಣಾರ್ಥ ನಗರದಲ್ಲಿ ಪ್ರತಿಷ್ಠಾಪಿಸಿರುವ ಜನರಲ್ ತಿಮ್ಮಯ್ಯ ಪ್ರತಿಮೆಯ ಆವರಣಕ್ಕೆ ಪ್ರತಿಭಟನೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಪಾದರಕ್ಷೆ ಧರಿಸಿ ಪ್ರವೇಶಿಸುವುದು, ತ್ಯಾಜ್ಯ ವಸ್ತುಗಳನ್ನು ಹಾಕುವುದು ಅಥವಾ ಅಗೌರವವಾಗುವಂತೆ ನಡೆದುಕೊಳ್ಳುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು. ಕೊಡಗಿನ ಜನತೆ ಹೆಮ್ಮೆಯಿಂದ ಕಾಣುವ ವೀರ ಸೇನಾನಿಯ ಪ್ರತಿಮೆಯನ್ನು ಗೌರವದಿಂದ ಸಂರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ನಗರದಲ್ಲಿ ನಡೆಯುವ ಕೆಲವು ಪ್ರತಿಭಟನೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಪ್ರತಿಮೆಯ ಆವರಣದ ಕಟ್ಟೆಯ ಮೇಲೆ ಪಾದರಕ್ಷೆ ಧರಿಸಿ ಏರುವುದು, ಘೋಷಣೆ…
ಮಡಿಕೇರಿ, NEWS DESK ಸೆ. 18: ಭಾರತ ಸರ್ಕಾರದ ರಾಷ್ಟ್ರೀಯ ಯುವ ಜನೋತ್ಸವವಾದ **“ವಿಕಸಿತ ಭಾರತ್ ಯಂಗ್ ಲೀಡರ್ಸ್ ಡೈಲಾಗ್” (VBYLD)**ನ ಆನ್‌ಲೈನ್ ಕಾರ್ಯಕ್ರಮದಡಿ “ವಿಕಸಿತ ಭಾರತ್ ರಸಪ್ರಶ್ನೆ” ಆರಂಭಗೊಂಡಿದ್ದು, ಯುವ ಸಮೂಹ ಇದರಲ್ಲಿ ತೊಡಗಿಸಿಕೊಳ್ಳುವಂತೆ ಕೊಡಗು ಜಿಲ್ಲಾ ಮೈ ಭಾರತ್‌ನ ಜಿಲ್ಲಾ ಯುವಜನ ಅಧಿಕಾರಿ ಪಿ. ಅಖಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರವ್ಯಾಪಿ 15ರಿಂದ 29 ವರ್ಷದೊಳಗಿನ ಯುವ ಸಮೂಹವನ್ನು ಒಗ್ಗೂಡಿಸಿ, ಅವರ ಚಿಂತನೆಗಳನ್ನು ಅರಿತು, ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಕಸಿತ ಭಾರತ್ ಯಂಗ್ ಲೀಡರ್ಸ್ ಡೈಲಾಗ್ ಯುವ ಜನೋತ್ಸವವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು. ವಿಕಸಿತ ಭಾರತ್ ಯಂಗ್ ಲೀಡರ್ಸ್ ಡೈಲಾಗ್‌ನಲ್ಲಿ ಪ್ರಮುಖವಾಗಿ ವಿಕಸಿತ ಭಾರತ್ ಚಾಲೆಂಜ್ ಟ್ರ್ಯಾಕ್, ಸಾಂಸ್ಕೃತಿಕ ಟ್ರ್ಯಾಕ್, ಡಿಸೈನ್ ಫಾರ್ ಭಾರತ್, ಹ್ಯಾಕ್ ಫಾರ್ ಸೋಶಿಯಲ್ ಕಾಸ್, ಯುವ ಉದ್ಯಮಿಗಳ ಸವಾಲು ಹಾಗೂ ಯುವ ಸಂಸತ್ ಎಂಬ ಆರು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಈ ಮೂಲಕ ಪ್ರತಿಭಾವಂತ ಯುವ ಸಮೂಹವನ್ನು ಗುರುತಿಸಿ, ಪ್ರಧಾನಮಂತ್ರಿಗಳೊಂದಿಗೆ…
ಗೋಣಿಕೊಪ್ಪ, NEWS DESK ಸೆ.18: ಸಂಸ್ಕೃತಿ ಮತ್ತು ಸಂಸ್ಕಾರವನ್ನು ಮರೆಯುತ್ತಿದ್ದೇವೆ ಎಂಬ ಆತಂಕದ ನಡುವೆಯೂ ಗಣೇಶೋತ್ಸವ ಸಮಿತಿಗಳು ನೆಲದ ಸಂಸ್ಕೃತಿ, ಪರಂಪರೆ ಹಾಗೂ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ವಿರಾಜಪೇಟೆ ಉಪ ಪೊಲೀಸ್ ಅಧೀಕ್ಷಕ ಮಹೇಶ್ ಕುಮಾರ್ ಹೇಳಿದರು. ಗೋಣಿಕೊಪ್ಪದ ಒಂದನೇ ವಿಭಾಗದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನ ಗಣಪತಿ ಸೇವಾ ಸಂಘದ ವತಿಯಿಂದ ನಡೆಯುತ್ತಿರುವ 15ನೇ ವರ್ಷದ ಗೌರಿ–ಗಣೇಶೋತ್ಸವದ ನಾಲ್ಕನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಾಗಟೆ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಗಣೇಶೋತ್ಸವಗಳು ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ ಸಮಾಜದ ಒಗ್ಗಟ್ಟನ್ನು ಬಲಪಡಿಸುವ ವೇದಿಕೆಗಳಾಗುತ್ತಿವೆ. ಸ್ಥಳೀಯ ಸಂಘಟನೆಗಳು ಸಮಾಜದಲ್ಲಿ ಸಂಘಟನಾತ್ಮಕ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದರು. ಸ್ಥಳೀಯ ಸಾಧಕ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಮಹೇಶ್ ಕುಮಾರ್, ತಮ್ಮದೇ ಊರಿನಲ್ಲಿ ತಮ್ಮ ಜನರ ಮಧ್ಯೆ ಸಾಧಕರನ್ನು ಗುರುತಿಸಿ ಗೌರವಿಸುವುದು ಸಂತಸದ ವಿಚಾರ. ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಅವರ ಸಾಧನೆಗೆ ಪ್ರೋತ್ಸಾಹ ನೀಡುವುದರ ಜತೆಗೆ,…
ಮಡಿಕೇರಿ, NEWS DESK ಸೆ. 18: ಮಡಿಕೇರಿ ದಸರಾ ಪ್ರಯುಕ್ತ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಅಕ್ಟೋಬರ್ 16ರಂದು ನಗರದ ಗಾಂಧಿ ಮೈದಾನದಲ್ಲಿ 13ನೇ ವರ್ಷದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್. ರಾಜೇಶ್ ಹಾಗೂ ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಮಕ್ಕಳ ದಸರಾ ಸ್ಪರ್ಧೆಗಳು ಅಕ್ಟೋಬರ್ 16ರಂದು ಶುಕ್ರವಾರ ಬೆಳಗ್ಗೆ 9.30ರಿಂದ ಗಾಂಧಿ ಮೈದಾನದಲ್ಲಿ ಆರಂಭವಾಗಲಿವೆ. ಮಕ್ಕಳ ಸಂತೆ ಮತ್ತು ಮಕ್ಕಳ ಅಂಗಡಿ: ಎಸ್‌ಎಸ್‌ಎಲ್‌ಸಿ ಒಳಗಿನ ವಿದ್ಯಾರ್ಥಿಗಳಿಗಾಗಿ ಮಕ್ಕಳ ಸಂತೆ ಆಯೋಜಿಸಲಾಗಿದ್ದು, ಒಂದು ತಂಡದಲ್ಲಿ ಗರಿಷ್ಠ ಐವರು ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಸಂತೆಯಲ್ಲಿ ಗ್ರಾಮೀಣ ಪದಾರ್ಥಗಳ ಮಾರಾಟಕ್ಕೆ ಆದ್ಯತೆ ನೀಡಲಾಗಿದೆ. ಮಕ್ಕಳ ಅಂಗಡಿ ಸ್ಪರ್ಧೆಯಲ್ಲಿ ಗರಿಷ್ಠ ಇಬ್ಬರು ಸ್ಪರ್ಧಿಗಳಿಗೆ ಅವಕಾಶವಿದೆ. ಮಕ್ಕಳ ಮಂಟಪ: 10 ನಿಮಿಷಗಳ ಪ್ರದರ್ಶನಾವಧಿಯ ಮಂಟಪ ಸ್ಪರ್ಧೆಯಲ್ಲಿ ಒಂದು ತಂಡದಲ್ಲಿ ಆರು ಮಕ್ಕಳು ಪಾಲ್ಗೊಳ್ಳಬಹುದು. ಯಾವುದೇ ಕಾರಣಕ್ಕೂ ಮಂಟಪದಲ್ಲಿ ವಿದ್ಯುತ್ ಮತ್ತು ಬೆಂಕಿಯಂತಹ ಅಪಾಯಕಾರಿ ವಸ್ತುಗಳನ್ನು…
ಮಡಿಕೇರಿ NEWS DESK ಸೆ.18 : ಮಡಿಕೇರಿ ಗುಡ್ಮಿಂಟನ್ ಗ್ರೂಪ್ ವತಿಯಿಂದ “ಮಡಿಕೇರಿ ಗುಡ್ಮಿಂಟನ್ ಕಪ್ 2026” ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಸೆ.26ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಡಿಕೇರಿ ಗುಡ್ಮಿಂಟನ್ ಗ್ರೂಪ್ ಅಧ್ಯಕ್ಷ ಶಮ್ಮಿ ಸುಬ್ಬಯ್ಯ ಹಾಗೂ ಗೌರವಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ತಿಳಿಸಿದ್ದಾರೆ. “ಸ್ವಾತಂತ್ರ್ಯವನ್ನು ಆಚರಿಸಿ, ಬ್ಯಾಡ್ಮಿಂಟನ್ ಆಡಿ, ಫಿಟ್ ಆಗಿರಿ” ಎಂಬ ಆಶಯದೊಂದಿಗೆ ನಡೆಯಲಿರುವ ಪಂದ್ಯಾವಳಿ ಬೆಳಿಗ್ಗೆ 8 ಗಂಟೆಯಿoದ ಆರಂಭವಾಗಲಿದೆ. ಪoದ್ಯಾವಳಿಯಲ್ಲಿ ಪುರುಷರ ಡಬಲ್ಸ್ ಮುಕ್ತ ಹಾಗೂ ಪುರುಷರ ಡಬಲ್ಸ್ ಜಂಬಲ್ಸ್ 90+ ಎಂಬ ಎರಡು ವಿಭಾಗಗಳಿವೆ. ಜಂಬಲ್ಸ್ 90+ ವಿಭಾಗದಲ್ಲಿ ಕನಿಷ್ಠ 40 ವರ್ಷ ವಯಸ್ಸಿನ ಒಬ್ಬ ಆಟಗಾರರಿದ್ದು, ಇಬ್ಬರು ಆಟಗಾರರ ಒಟ್ಟು ವಯಸ್ಸು 90 ವರ್ಷ ಅಥವಾ ಅದಕ್ಕಿಂತ ಹೆಚ್ಚಿರಬೇಕು. ಪ್ರತಿ ವಿಭಾಗದಲ್ಲಿ ಮೊದಲ 32 ತಂಡಗಳ ನಮೂದನ್ನು ಮಾತ್ರ ಪರಿಗಣಿಸಲಾಗುತ್ತದೆ. ಸ್ಪರ್ಧಿಗಳು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಪ್ರತಿ ತಂಡಕ್ಕೆ ಪ್ರವೇಶ ಶುಲ್ಕ ರೂ.1 ಸಾವಿರ ನಿಗದಿಪಡಿಸಲಾಗಿದೆ. ಹೆಸರು…






