ಸೋಮವಾರಪೇಟೆ NEWS DESK ಡಿ.18 : ಐಗೂರು ಗ್ರಾಮದಲ್ಲಿ ಫೆ.9ರಂದು ಆಯೋಜಿಸಿರುವ 9ನೇ ಸೋಮವಾರಪೇಟೆ ತಾಲೂಕು ಸಮ್ಮೇಳನಕ್ಕೆ ಅಗತ್ಯ ಸಿದ್ಧತೆಗಳ ಕುರಿತು ವಿವಿಧ ಸಮಿತಿಯ ಪದಾಧಿಕಾರಿಗಳೊಂದಿಗೆ ಐಗೂರಿನ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಸಮ್ಮೇಳನದ ಅಧ್ಯಕ್ಷರ ಆಯ್ಕೆ, ಹೋಬಳಿ ಮಟ್ಟದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕುರಿತು ಸದಸ್ಯರುಗಳು ಸಲಹೆ ನೀಡಿದರು. ಸ್ಮರಣ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭ ಹಣಕಾಸು ಸಮಿತಿಯ ಅಧ್ಯಕ್ಷ ಕೆ.ಪಿ.ರಾಯ್ ಅವರಿಗೆ ರಶೀದಿ ಪುಸ್ತಕಗಳನ್ನು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ್ ಹಸ್ತಾಂತರಿಸಿದರು. ಸಭೆಯ ಅಧ್ಯಕ್ಷತೆಯನ್ನು ವಿಜೇತ್ ವಹಿಸಿದ್ದರು. ಕಾರ್ಯದರ್ಶಿ ಜ್ಯೋತಿ ಅರುಣ್, ಖಜಾಂಚಿ ಕೆ.ಪಿ.ದಿನೇಶ್ ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.
ಲೇಖಕ: admin
ಸೋಮವಾರಪೇಟೆ NEWS DESK ಡಿ.18 : ರಾಜ್ಯ ಹೆದ್ದಾರಿ ಪ್ರಾಧಿಕಾರದಿಂದ 20 ಕೋಟಿ ರೂ. ವೆಚ್ಚದಲ್ಲಿ ಕೂಡುರಸ್ತೆ, ತೋಳೂರುಶೆಟ್ಟಳ್ಳಿ, ಕೂತಿ ಗ್ರಾಮದ 10 ಕಿ.ಮೀ ವ್ಯಾಪ್ತಿಯ ಸಂಪರ್ಕ ರಸ್ತೆ ಕಾಮಗಾರಿ ಕಳಪೆಯಾಗುತ್ತಿದೆ ಎಂದು ಆರೋಪಿಸಿ ಕೂತಿ ಗ್ರಾಮಸ್ಥರು ಕೂಡುರಸ್ತೆ ಜಂಕ್ಷನ್‌ನಲ್ಲಿ ಲೋಕೂಪಯೋಗಿ ಇಲಾಖೆ ಅಧಿಕಾರಿಗಳನ್ನು ರಸ್ತೆಯಲ್ಲಿ ತಡೆದು ತರಾಟೆಗೆ ತೆಗೆದುಕೊಂಡರು. ಮಾಗಡಿ, ಜಾಲ್ಸೂರು ಎಸ್.ಎಚ್. 85 ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕಲ್ಕಂದೂರು, ಹೊಸಬೀಡು, ತೋಳೂರುಶೆಟ್ಟಳ್ಳಿ, ಹರಪಳ್ಳಿ, ಇನಕನಹಳ್ಳಿ, ಕೂತಿ, ಎಡದಂಟೆ ಸೇರಿದಂತೆ ಇನ್ನಿತರ ಗ್ರಾಮಗಳ ಜನರ ಹತ್ತಾರು ವರ್ಷಗಳ ರಸ್ತೆ ಕನಸು ನನಸಾಗುವ ಹಂತದಲ್ಲಿರುವಾಗ, ಗುತ್ತಿಗೆದಾರರು ಕಾಮಗಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗುಣಮಟ್ಟದ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಕೂತಿ ಗ್ರಾಮಸ್ಥರು ದೂರಿದರು. ರಸ್ತೆ ಕಾಮಗಾರಿ ಸಂದರ್ಭ ಗ್ರಾಮಸ್ಥರು ತಮ್ಮ ಜಾಗದಲ್ಲಿದ್ದ ಮರದ ರೆಂಬೆಗಳನ್ನು ತೆಗೆದುಕೊಟ್ಟು ಸಹಕಾರ ನೀಡಿದ್ದಾರೆ. ಆದರೂ ಬೇಕಾಬೆಟ್ಟಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಕೂತಿ ಗ್ರಾಮದ ಉಪಾಧ್ಯಕ್ಷ ಕೆ.ಡಿ.ಗಿರೀಶ್ ದೂರಿದರು. ಹೆಚ್ಚಿನ ರಸ್ತೆ ಕಾಮಗಾರಿಗಳು ಕಳಪೆಯಾಗುತ್ತಿರುವುದರಿಂದ…
ಸೋಮವಾರಪೇಟೆ NEWS DESK ಡಿ.18 : ಸೋಮವಾರಪೇಟೆ ಮೀಸಲು ಅರಣ್ಯದಲ್ಲಿ ತೇಗ ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದು ಸಾಗಿಸುತ್ತಿದ್ದ ಆರೋಪದಡಿ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದು, ತಲೆ ಮರೆಸಿಕೊಂಡಿರುವವರ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ. ಸೋವವಾರಪೇಟೆ ವಲಯದ ಹುದುಗೂರು ಶಾಖಾ ವ್ಯಾಪ್ತಿಯ ಐಗೂರು ಗ್ರಾಮದ ಕಾಜೂರು ಅರಣ್ಯ ಪ್ರದೇಶದಲ್ಲಿ ತೇಗದ ಮರಗಳನ್ನು ಕಡಿದು ನಾಟಗಳಾನ್ನಾಗಿ ಪರಿವರ್ತಿಸಿ ಸಾಗಿಸಲು ಬೊಲೆರೋ ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದ ಸಂದರ್ಭ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದರು. ಅರೋಪಿಗಳು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿಗೆ ಪ್ರಯತ್ನಿಸಿದ ಸಂದರ್ಭ, ಆತ್ಮರಕ್ಷಣೆಗಾಗಿ ಸಿಬ್ಬಂದಿಗಳು ಗುಂಡು ಹಾರಿಸಿದ್ದಾರೆ. ಎಡವಾರೆ ಗ್ರಾಮದ ಓರ್ವ ಆರೋಪಿಯನ್ನು ಸ್ಥಳದಲ್ಲೇ ಬಂಧಿಸಿ ತೇಗದ ನಾಟಗಳನ್ನು ವಶಪಡಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ಐವರು ಆರೋಪಿಗಳ ಬಂಧನಕ್ಕೆ ಆರ್‌ಎಫ್‌ಒ ಶೈಲೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಿಸಿಎಫ್ ಸೋನಾಲ್, ಡಿಎಫ್‌ಒ ಅಭಿಷೇಕ್, ಎಸಿಎಫ್ ಎ.ಎ.ಗೋಪಾಲ್, ಅರಣ್ಯ ಸಂಚಾರಿ ದಳದ ಎಸಿಎಫ್ ಗಾನಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ವಿರಾಜಪೇಟೆ ಡಿ.17 NEWS DESK : ಕೊಡಗು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಮಹಿಳೆಯರ ಫುಟ್ಬಾಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಮತ್ತು ಅಧ್ಯಾಪಕ ವರ್ಗದವರು ಅಭಿನಂದಿಸಿದ್ದಾರೆ.
ಮಡಿಕೇರಿ ಡಿ.17 NEWS DESK : ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾದ ಕೇಂದ್ರಕಾಯ೯ಕಾರಿ ಸಮಿತಿ ಸದಸ್ಯರಾಗಿ ಮಡಿಕೇರಿಯ ಎಸ್ ಎಸ್ ಸಂಪತ್ ಕುಮಾರ್ ನೇಮಕಗೊಂಡಿದ್ದಾರೆ. ಕೊಡಗು ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿಯ ನಿದೇ೯ಶಕರಾಗಿಯೂ ಕಾಯ೯ನಿವ೯ಹಿಸಿದ್ದ ಸಂಪತ್ ಕುಮಾರ್ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕೊಡಗು ಜಾನಪದ ಪರಿಷತ್ ನ ಖಜಾಂಜಿಗಳೂ ಆಗಿದ್ದಾರೆ. ಸಂಪತ್ ಕುಮಾರ್ ಅವರನ್ನು ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾದ ಕೇಂದ್ರಕಾಯ೯ಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಿ ಮಹಾಸಭಾದ ಅಧ್ಯಕ್ಷರಾದ ಎಸ್ ರಘುನಾಥ್ ಆದೇಷ ಹೊರಡಿಸಿದ್ದಾರೆ.
ಮಡಿಕೇರಿ ಡಿ.17 NEWS DESK : ಕೊಡಗು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮುಕೋಡ್ಲು ಹಾಗೂ ಹಮ್ಮಿಯಾಲ ಗ್ರಾಮಸ್ಥರಿಗೆ ಅರಿವು ಕಾರ್ಯಕ್ರಮ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಮಾತನಾಡಿ, ಪ್ರತಿ ಗ್ರಾಮ ದಿಂದ ಹೆಣ್ಣುಮಕ್ಕಳ ರಕ್ಷಣೆಯಾಗಬೇಕು ಹಾಗೂ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣವಂತರಾಗಬೇಕು, ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗೆ ಸಹಕರಿಸಲು ಇಲಾಖೆ ಮತ್ತು ಸಮುದಾಯ ಒಂದಾಗಿ ಶ್ರಮಿಸಬೇಕು ಎಂದು ತಿಳಿಸಿದರು. ಸಖಿ ಓನ್ ಸ್ಟಾಫ್ ಸೆಂಟರ್ ಕುರಿತು ಮಾಹಿತಿ ನೀಡಿ, ಸಖಿ ಕೇಂದ್ರವು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ನೆರವು, ಕಾನೂನು ನೆರವು, ಆಪ್ತ ಸಮಾಲೋಚನೆ, ತಾತ್ಕಾಲಿಕ ಆಶ್ರಯ ಹಾಗೂ ಪೊಲೀಸ್ ನೆರವು ನೀಡುತ್ತದೆ , ಮಕ್ಕಳ ಸಹಾಯವಾಣಿ 1098, ಮಹಿಳಾ ಸಹಾಯವಾಣಿ 181 ರ ಸಹಕಾರದೊಂದಿಗೆ ಇಲಾಖೆಯನ್ನು ಮಹಿಳೆಯರು ಮತ್ತು ಮಕ್ಕಳು ದಿನದ 24 ಗಂಟೆಗಳು ವಾರದ ಏಳು ದಿನಗಳು ಉಚಿತವಾಗಿ ಸಂಪರ್ಕಿಸಬಹುದಾಗಿ ತಿಳಿಸಿದರು. ಕರ್ನಾಟಕ…
ಮಡಿಕೇರಿ ಡಿ.17 NEWS DESK : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 2024-25 ನೇ ಸಾಲಿನ ಬೇಸಿಗೆ ಋತುವಿನ ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಬೆಳೆ ಸಮೀಕ್ಷೆ ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ನೀಡುವುದು, 11 ನೇ ಕೃಷಿ ಗಣತಿಯ ಮೂರನೇ ಹಂತದ ಬಗ್ಗೆ ಮಾಹಿತಿ ಒದಗಿಸುವುದು ಹಾಗೆಯೇ ಪ್ರಸಕ್ತ ಸಾಲಿನ ಬೆಳೆ ಕಟಾವು ಸಂಬಂಧಿಸಿದಂತೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಿ.ನಾರಾಯಣ ಅವರು 2024-25ನೇ ಸಾಲಿನ ಬೇಸಿಗೆ ಋತುವಿನ ಸಿಎಸ್‍ಎಸ್‍ಟಿ ವರದಿಯಂತೆ ಗ್ರಾಮಾವಾರು, ಹೋಬಳಿವಾರು ಪರಿಶೀಲಿಸಿ ವೆಬ್ ತಂತ್ರಾಂಶದಲ್ಲಿ ಮರು…
ಮಡಿಕೇರಿ ಡಿ.17 NEWS DESK : ಭಾರತದ ‘ಮೇಕಿಂಗ್ ಇಂಡಿಯಾ’ ಎನ್ನುವ ವಿಶಾಲ ಚಿಂತನೆಯ ಪ್ರಯತ್ನಗಳನ್ನು ಮುರಿಯುವ ಮೂಲಕ ರಾಷ್ಟ್ರದ ಏಕತೆ ಮತ್ತು ಅಖಂಡತೆಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಎಸ್. ಅವರು ಆರೋಪಿಸಿದ್ದಾರೆ. ನಗರದ ಕೊಡಗು ಗೌಡ ಸಮಾಜದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ದಕ್ಷಿಣ ಪ್ರಾಂತದ 45ನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ‘ರಾಷ್ಟ್ರ’ ಪ್ರಥಮ ಎನ್ನುವ ಉದಾತ್ತ ಚಿಂತನೆಯನ್ನು ಮೈಗೂಡಿಸಿಕೊಂಡ ಯುವ ಸಮೂಹವು, ಪಾಶ್ಚಿಮಾತ್ಯ ಶಕ್ತಿಗಳ ಒತ್ತಡಗಳನ್ನು ಮೀರಿ ಭಾರತದ ಅಭ್ಯುದಯಕ್ಕೆ ಶ್ರಮಿಸುತ್ತಿದೆ. ಇಂದಿನ ಯುವ ಸಮೂಹ ಸನಾತನ ಸಂಸ್ಕøತಿಯ ಮಹತ್ವವನ್ನು ಅರಿತು, ಅದರ ತಳಹದಿಯ ಮೇಲೆ ರಾಷ್ಟ್ರದ ಪುನರ್ ನಿರ್ಮಾಣಕ್ಕೆ ತÀನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಇದಕ್ಕೆ ಬೆನ್ನೆಲುಬಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯನಿರ್ವಹಿಸುತ್ತಿದೆ ಎಂದರು. ವಿಶ್ವದ ಬಲಾಢ್ಯ ದೇಶಗಳೆಂದು…
ಮಡಿಕೇರಿ, ಡಿ.17 NEWS DESK : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ಆಯೋಜಿಸಲಾಗುತ್ತಿರುವ ‘ವಿಪ್ರ ಕ್ರೀಡೋತ್ಸವ’ದ ಭಾಗವಾಗಿ ಡಿ.21 ರಂದು ನಗರದಲ್ಲಿ ಮಡಿಕೇರಿ ತಾಲ್ಲೂಕು ಮಟ್ಟದ ಒಳಾಂಗಣ ಕ್ರೀಡಾ ಸ್ಪರ್ಧೆಗಳು ನಡೆಯಲಿದೆಯೆಂದು ನಿಧಿಯ ಅಧ್ಯಕ್ಷರಾದ ರಾಮಚಂದ್ರ ಮೂಗೂರು ಮತ್ತು ಕಾರ್ಯದರ್ಶಿ ಬಿ.ಕೆ. ಜಗದೀಶ್ ತಿಳಿಸಿದ್ದಾರೆ. ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಡಿ.21 ರಂದು ಮಧ್ಯಾಹ್ನ 2 ಗಂಟೆಗೆ ತಾಲ್ಲೂಕು ವ್ಯಾಪ್ತಿಯ ವಿಪ್ರ ಬಾಂಧವರಿಗಾಗಿ ಚೆಸ್, ಕೇರಂ ಹಾಗೂ ಪುರುಷರಿಗೆ, ಮಹಿಳೆಯರಿಗೆ, ಬಾಲಕ, ಬಾಲಕಿಯರಿಗೆ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆಯೆಂದು ತಿಳಿಸಿದ್ದಾರೆ. ಚೆಸ್ ಹಾಗೂ ಕೇರಂ ಸಿಂಗಲ್ಸ್‍ನಲ್ಲಿ ಗೆದ್ದಂತಹ ಸ್ಪರ್ಧಿಗಳು ಜನವರಿ ತಿಂಗಳಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಳ್ಳಲಿದ್ದಾರೆ. ಸ್ಪರ್ಧೆಯಲ್ಲಿ ವಿಪ್ರಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿಕೊಂಡಿದ್ದಾರೆ.
ಕುಶಾಲನಗರ ಡಿ.17 NEWS DESK : ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ ಮತ್ತು ದೇಶಭಕ್ತಿಯ ಮನೋಭಾವವನ್ನು ಉತ್ತೇಜಿಸುವ ನಿಮಿತ್ತ ಕೊಡಗು ಸೈನಿಕ ಶಾಲೆಯಲ್ಲಿ 2025-26ನೇ ಸಾಲಿನ ಬ್ರಹ್ಮಗಿರಿ ಸಹೋದಯ ಕ್ಲಸ್ಟರ್ ಮಟ್ಟದ ಅಂತರ ಶಾಲಾ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಶಾಲೆಯ ಕುವೆಂಪು ವಿವಿದೊದ್ಧೇಶ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜಿತ್‍ಸಿಂಗ್ ಅವರು ಉದ್ಘಾಟಿಸಿದರು. ಈ ಸಂದರ್ಭ ಶಾಲೆಯ ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪ್ರಕಾಶ್ ರಾವ್, ಉಪ ಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಹಿರಿಯ ಶಿಕ್ಷಕರಾದ ದಿವ್ಯಾಸಿಂಗ್ ಸೇರಿದಂತೆ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಒಟ್ಟು 58 ವಿದ್ಯಾರ್ಥಿಗಳು ಭಾರತದ ವಿವಿಧ ಭಾಗಗಳ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಮನಮೋಹಕ ಜನಪದ ನೃತ್ಯ ಹಾಗೂ ಸಮೂಹ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿದರು. ಕಾರ್ಯಕ್ರಮಕ್ಕೆ ಏಕತೆ ಮತ್ತು ರಾಷ್ಟ್ರಭಕ್ತಿಯ ಭಾವನೆಯನ್ನು ತುಂಬುವ ಉದ್ದೇಶದಿಂದ ಎಲ್ಲಾ ತಂಡಗಳು ಒಟ್ಟಾಗಿ ಒಂದು ಕನ್ನಡ ದೇಶಭಕ್ತಿ…






