ಲೇಖಕ: admin

ಮಡಿಕೇರಿ ಡಿ.17 NEWS DESK : ವಿಧಾನಸಭೆಯ ಅಧಿವೇಶನದಲ್ಲಿ ಭೂಕಂದಾಯ ತಿದ್ದುಪಡಿ ವಿಧೇಯಕವನ್ನು ಮಂಡಿಸುವ ಸಂದರ್ಭ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ‘ಕೊಡವ ಪಟ್ಟೆದಾರರನ್ನು ಏಜೆಂಟರು’ ಎಂದು ಸಂಭೋಧಿಸುವ ಮೂಲಕ ಕೊಡವರನ್ನು ಅವಮಾನಿಸಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಚಿವರು ತಕ್ಷಣ ಕೊಡವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕೊಡವರ ಒಂದು ಕುಟುಂಬದ (ಒಕ್ಕ) ಹಿರಿಯ ಸದಸ್ಯರನ್ನು ಕೊಡವರು ‘ಪಟ್ಟೆದಾರ’ ಎಂದು ಕರೆಯುತ್ತಾರೆ. ಇದರ ಅರಿವಿಲ್ಲದಿದ್ದರೆ ಸಚಿವರು ಇತಿಹಾಸವನ್ನು ಓದಿ ತಿಳಿದುಕೊಳ್ಳುವುದು ಉತ್ತಮ. ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ‘ಏಜೆಂಟರು’ ಪದ ಬಳಕೆ ಮಾಡುವ ಸಂದರ್ಭ ಕೊಡಗಿನ ಶಾಸಕರು ಯಾವುದೇ ಆಕ್ಷೇಪ ವ್ಯಕ್ತಪಡಿಸದೇ ಇರುವುದು ಮತ್ತು ಸರಿಯಾದ ಮಾಹಿತಿಯನ್ನು ಒದಗಿಸದೇ ಇರುವುದು ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

ಮಂಗಳೂರು ಡಿ.17 NEWS DESK : ಕ್ರಿಯೆಟಿವ್ ಪುಸ್ತಕ ಮನೆ ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟನೆ, ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರ ಸಂಶೋಧನಾ ಕೃತಿ ‘ಭೂತಾರಾಧನೆ- ಮಾಯದ ನಡೆ ಜೋಗದ ನುಡಿ’ ಲೋಕಾರ್ಪಣೆ ಕಾರ್ಯಕ್ರಮವು ಡಿ.20 ರಂದು ನಡೆಯಲಿದೆ. ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿವಿಯ ಎಲ್‍ಎಫ್ ರಸ್ಕಿನ್ಹ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿಗಳು, ಜಾನಪದ ವಿದ್ವಾಂಸರಾದ ಪ್ರೊ.ಬಿ.ಎ.ವಿವೇಕ್ ರೈ ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ. ಸಾಹಿತಿ ಡಾ.ರಾಜಶೇಖರ್ ಹಳೆಮನೆ ಕೃತಿಯ ಕುರಿತು ಅವಲೋಕನ ಮಾಡಲಿದ್ದಾರೆ. ಅಲೋಶಿಯಸ್ ಪರಿಗಣಿತ ವಿವಿಯ ಕುಲಪತಿ ಡಾ.ಪ್ರವೀಣ್ ಮಾರ್ಟಿಸ್ ಎಸ್‍ಜೆ, ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ.ನಾಗಪ್ಪ ಗೌಡ, ಲೇಖಕರು, ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾರ್ಕಳಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ವಹಿಸಲಿದ್ದಾರೆ. ಇದೇ…

Read More

ಮೂರ್ನಾಡು ಡಿ.17 NEWS DESK : ಶ್ರೀ ಯೋಗಿ ನಾರೇಯಣ ಕೊಡಗು ಜಿಲ್ಲಾ ಬಲಿಜ ಸಂಘದ ವತಿಯಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಮೂರ್ನಾಡು ಶ್ರೀ ಅಯ್ಯಪ್ಪ ದೇವಾಲಯದಲ್ಲಿ ನಡೆಯಿತು. ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮದ ಮೂಲಕ ಕ್ಯಾಲೆಂಡರ್ ಅನ್ನು ಬಲಿಜ ಸಮಾಜದ ಹಿರಿಯರಾದ ಟಿ.ಎಲ್.ಲೋಕನಾಥ್ ಅವರು ಬಿಡುಗಡೆ ಮಾಡಿ ಮಾತನಾಡಿ, ಮುಂಬರುವ ದಿನಗಳಲ್ಲಿ ಸರ್ವರಿಗೂ ಅನುಕೂಲವಾಗುವಂತೆ ದೇವರು ಅನುಗ್ರಹಿಸಲಿ. ಬಲಿಜ ಸಮಾಜ ಇನ್ನಷ್ಟು ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳಲಿ ಎಂದು ಆಶಿಸಿದರು. ಕೊಡಗು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾದ ಗಣೇಶ್ ನಾಯ್ಡು ಅವರು ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಬಲಿಜ ಸಮೂಹದ ಅಭ್ಯುದಾಯಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಆರ್.ಸುಬ್ರಮಣಿ, ಖಜಾಂಚಿ ಟಿ. ಎ.ಪ್ರಕಾಶ್, ನಿರ್ದೇಶಕರಾದ ಟಿ.ಎಸ್.ರಮಿತಾ, ಯಶ್ವಂತ್ ಕುಮಾರ್ ನಾಯ್ಡು, ಟಿ.ಜಿ.ಹರ್ಷ, ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Read More

ಮಡಿಕೇರಿ ಡಿ.17 NEWS DESK : ಮಂಜಿನ ನಗರಿ, ದಕ್ಷಿಣದ ಕಾಶ್ಮೀರ ಎಂದೆಲ್ಲ ಕರೆಯಲ್ಪಡುವ ಕೊಡಗಿನ ರಾಜಧಾನಿ ಮಡಿಕೇರಿ ನಗರವು ಶಕ್ತಿ ದೇವತೆಗಳ ನೆಲೆವೀಡು, ಅಂತೆಯೇ ಊರಿನ ರಾಜ ಬೀದಿಯಂತಿರುವ ಮಹದೇವಪೇಟೆಯಲ್ಲಿ ಸದ್ಭಕ್ತರ ಶ್ರದ್ಧಾ ಕೇಂದ್ರವಾಗಿ ಆರಾಧಿಸಲ್ಪಡುತ್ತಾ ಎಲ್ಲರ ಇಷ್ಟಾರ್ಥವನ್ನು ಸಿದ್ಧಿಸುತ್ತಾ ಅನುಗ್ರಹಿಸುತ್ತಿರುವ ಆರಾದ್ಯ ದೇವತೆಯೇ ಶ್ರೀ ಚೌಡೇಶ್ವರಿ ಅಮ್ಮನವರು. ಐತಿಹಾಸಿಕ ಹಿನ್ನೆಲೆ ಇರುವ ಶ್ರೀ ಚೌಡೇಶ್ವರಿ ದೇವಾಲಯವು ಮಹಾರಾಜರ ಆಳ್ವಿಕೆಯ ಕಾಲಘಟ್ಟದಲ್ಲಿ ಅಂದರೆ ಸುಮಾರು 250 ವರ್ಷಗಳ ಹಿಂದೆಯೇ ನಿರ್ಮಾಣವಾಗಿರುವ ದಾಖಲೆ ಇದ್ದು, ಅಲ್ಲಿಂದಲೂ ದೇವಿಯನ್ನು ನಂಬಿ ಒಳಿತನ್ನು ಕಂಡ ಭಕ್ತ ಸಮೂಹವೇ ಇದೆ. ಶಂಕರಿ ಗುಡಿ ಎಂದು ಪ್ರಸಿದ್ದಿಯಾಗಿದ್ದ ದೇವಾಲಯ ಕಾಲ ಕ್ರಮೇಣ ನವೀಕರಣಗೊಳ್ಳುತ್ತಾ ದಿನಾಂಕ 17-05-1968 ರಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದ ಆಗಮಿಕರಾದ, ಕ್ಷೇತ್ರದ ತಂತ್ರಿಗಳಾದ ಆಗಮಾಚಾರ್ಯ ಶ್ರೀ ನಾರಾಯಣ ದೀಕ್ಷಿತರ ನೇತೃತ್ವದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಶಿಲಾಬಿಂಬದ ಜೊತೆಗೆ ಪರಿವಾರದ ದೇವತಾ ಸಾನಿದ್ಯವನ್ನು ಪ್ರತಿಷ್ಠಾಪಿಸಲಾಯಿತು. ವಾರ್ಷಿಕವಾಗಿ ಹಬ್ಬ ಹರಿದಿನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ನವರಾತ್ರಿಯಲ್ಲಿ ನಡೆಯುವ…

Read More

ಮಡಿಕೇರಿ ಡಿ.17 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಡಿ.ನಾಣಯ್ಯ ಅವರು ಮುಂದುವರೆಯಲಿದ್ದಾರೆ ಎಂದು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ಸ್ಥಾಪಕಾಧ್ಯಕ್ಷೆ ಕೆ.ಎಸ್.ಮುತ್ತಮ್ಮ ಕೋಟಿ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ಸದಸ್ಯರಾಗಿ, ಖಜಾಂಚಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿರುವ ಎಂ.ಡಿ.ನಾಣಯ್ಯ ಅವರು ಕಳೆದ 7 ವರ್ಷಗಳಿಂದ ಅಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಅಲ್ಲದೆ ಸಹಕಾರ ಸಂಘದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಡಿ.ನಾಣಯ್ಯ ಅವರೇ ಮುಂದುವರೆಯಬೇಕು ಎನ್ನುವ ಅಭಿಲಾಷೆಯನ್ನು ನಾನು ಹಾಗೂ ಸದಸ್ಯರು ವ್ಯಕ್ತಪಡಿಸಿದ್ದೇವೆ. ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಮನವಿ ಮಾಡಿಕೊಂಡಿದ್ದೇವೆ, ಇದಕ್ಕೆ ನಾಣಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ. ಆದ್ದರಿಂದ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನದಲ್ಲಿ ಎಂ.ಡಿ.ನಾಣಯ್ಯ ಅವರೇ ಮುಂದುವರೆಯಲಿದ್ದು, ಸದಸ್ಯರು ಎಂದಿನಂತೆ…

Read More

ಮಡಿಕೇರಿ ಡಿ.17 NEWS DESK : ಕೊಡಗು ಜಿಲ್ಲೆಯ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆಯು ನಗರದ ಖಾಸಾಗಿ ಸಭಾಂಗಣದಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಜರುಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಭೆಯಲ್ಲಿ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೆಲವು ಸುತ್ತೋಲೆಗಳಿಂದ ಖಾಸಗಿ ಶಾಲೆಗಳಿಗೆ ಆಗುತಿರುವ ಅನಾನುಕೂಲದ ಬಗ್ಗೆ ಚರ್ಚಿಸಲಾಯಿತು. ಹಾಗೂ ಜಿಲ್ಲೆಯ ಶಾಸಕರ ಮುಖಾಂತರ ಖಾಸಗಿ ಶಾಲೆಗಳ ಎಲ್ಲಾ ಸಮಸ್ಯೆಗಳನ್ನು ಸರ್ಕಾರದ ಮೂಲಕ ಬಗೆ ಹರಿಸಿಕೊಳ್ಳಲು ತಿರ್ಮಾನಿಸಲಾಯಿತು. ಖಾಸಗಿ ಶಾಲೆಗಳ ನಿಯಮಾನುಸಾರ, ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ನಿಕಟ ಸಂಪರ್ಕ ಇಟ್ಟುಕೊಂಡು ಸರ್ಕಾರದೊಂದಿಗೆ ರಾಜ್ಯಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿರ್ಮಾನಿಸಲಾಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ತಿಮ್ಮಯ್ಯ ಕೋಟ್ರಂಗಡ ಅವಿರೋದವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಣಿ ಮೊಹಮ್ಮದ್,  ಪ್ರಧಾನ ಕಾರ್ಯದರ್ಶಿಯಾಗಿ ಲಿಕಿತ್…

Read More

ಮೈಸೂರು ಡಿ.17 NEWS DESK : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಡಿಸೆಂಬರ್‌ 18ರಿಂದ ಮೂರು ದಿನಗಳ ಕಾಲ “ಆಸ್ಪೈರಿಂಗ್‌ ಮೈಸೂರು” ಎಂಬ ಮೆಗಾ ಪ್ರದರ್ಶನ ನಡೆಯಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನೇತೃತ್ವದಲ್ಲಿ ಈ ಮೆಗಾ ಪ್ರದರ್ಶನ ಆಯೋಜನೆಗೊಂಡಿದೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ಸಾರ್ವಜನಿಕ ವಲಯದ ಉದ್ಯಮಗಳು, ವಿಕಸಿತ ಭಾರತ 2047 ಕುರಿತು ಜಾಗೃತಿ, ನಾವೀನ್ಯತೆ ಹಾಗೂ ಕೊಡುಗೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ದೊರೆಯಲಿದೆ. ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಮೈದಾನದಲ್ಲಿ ಈ ಬೃಹತ್‌ ಪ್ರದರ್ಶನ ನಡೆಯಲಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಿದ ಆಯೋಜಕರಾದ ವನೀಶ ಗುಪ್ತಾ, ಮೈಸೂರಿನ ನಾಗರಿಕರಿಗೆ ಇದೊಂದು ಸಮೃದ್ಧ ಮತ್ತು ಸಂವಾದಾತ್ಮಕ ವೇದಿಕೆಯಾಗಲಿದೆ ಎಂದರು. ವಿಜ್ಞಾನ-ತಂತ್ರಜ್ಞಾನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ, ಪರಿಸರ, ಅರಣ್ಯ, ಹವಾಮಾನ ಬದಲಾವಣೆ, ಆರೋಗ್ಯ, ಬಂದರು, ಗಣಿಗಾರಿಕೆ, ಕರಕುಶಲ, ಜವಳಿ ಕ್ಷೇತ್ರದಲ್ಲಿನ ಪ್ರಗತಿ, ಯೋಜನೆಗಳ ಬಗ್ಗೆ ಸಮಗ್ರ…

Read More

ಬೆಳಗಾವಿ ಡಿ.17 NEWS DESK : ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ ‘ದ್ವೇಷ ರಾಜಕೀಯ’ ನಡೆಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್  ಬೃಹತ್ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ ಸೌಧದ ಗಾಂಧಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.

Read More

ವಿರಾಜಪೇಟೆ ಡಿ.17 NEWS DESK : ಜನಸಾಮಾನ್ಯರು ಹಾಗೂ ರೈತರ ಸಮಸ್ಯೆಗಳನ್ನು ಅರಿತು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಹೋರಾಟಗಳನ್ನು ರೂಪಿಸಲು ಸಿಪಿಐ(ಎಂ) ಪಕ್ಷ ಮುಂದಾಗಿದೆ ಎಂದು ಪಕ್ಷದ ಕಾರ್ಯದರ್ಶಿ ಹೆಚ್.ಬಿ.ರಮೇಶ್ ತಿಳಿಸಿದರು. ವಿರಾಜಪೇಟೆಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪಕ್ಷದ ವತಿಯಿಂದ ಡಿ.21ರಂದು ಹಮ್ಮಿಕೊಂಡಿರುವ ಹೋರಾಟದ ಕುರಿತು ಡಿ.15ರ ವರೆಗೆ ಮನೆ ಮನೆಗೆ ಭೇಟಿ ಮತ್ತು ಸಹಿ ಸಂಗ್ರಹ ಕಾರ್ಯಕ್ರಮ ಮಾಡಲಾಗಿದೆ. ಜನಸಾಮಾನ್ಯರು, ರೈತರ ಸಮಸ್ಯೆಗಳನ್ನು ಆಲಿಸಿ, ಅವರ ಬೇಡಿಕೆಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರದ ಮುಂದೆ ಇಡಬೇಕು ಎಂದು ಪಕ್ಷ ತೀರ್ಮಾನಿಸಿದೆ. ಡಿ.21 ರಂದು 50 ಸಾವಿರಕ್ಕೂ ಹೆಚ್ಚು ಜನರು ಸೇರಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ಬಹಿರಂಗ ಸಭೆ ಮೂಲಕ ಸರಕಾರಕ್ಕೆ ಬೇಡಿಕೆಗಳ ಪಟ್ಟಿ ಸಲ್ಲಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡರು. ಕಾಫಿ ಬೆಳೆಯುವ ಕೊಡಗಿನಲ್ಲಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಜಿಲ್ಲೆಯ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸುವ ದೃಷ್ಟಿಯಿಂದ ಕೊಡಗು ಜಿಲ್ಲೆಗೆ ರೈಲು…

Read More

ವಿರಾಜಪೇಟೆ ಡಿ.17 NEWS DESK : ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ಹಾಗೂ ಬರಹಗಳು ನಮ್ಮನ್ನು ಹೃದಯಕ್ಕೆ ಇಳಿಸುತ್ತವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಅಭಿಪ್ರಾಯಪಟ್ಟರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಕನ್ನಡ ವಿಭಾಗ, ನುಡಿ ಉತ್ಸವ ಸಮಿತಿ ಕೊಡಗು ಜಿಲ್ಲೆ, ದಸಾಪ ಕೊಡಗು ಜಿಲ್ಲೆ ಸಹಯೋಗದಲ್ಲಿ ನುಡಿ ಸಾಹಿತ್ಯ ಲಹರಿ ಪ್ರಯುಕ್ತ ನಡೆದ ಮೊಗಳ್ಳಿ ಗಣೇಶ್ ಅವರ ಬದುಕು-ಬರಹ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು. ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ಸಾರ್ವಕಾಲಿಕವಾಗಿವೆ. ಸಾಹಿತ್ಯ ಹಾಗೂ ಬರಹಗಳು ಲೋಕಾಂತವಾಗಬೇಕು. ಮಾತ್ರವಲ್ಲದೆ ಸಾಹಿತ್ಯದ ದಾಖಲೀಕರಣವನ್ನು ಮಾಡಬೇಕು. ಮನುಷ್ಯನು ತನ್ನನ್ನು ತಾನು ಪ್ರಶ್ನಿಸುತ್ತಲೆ ಬದುಕಬೇಕು. ಕಥೆ, ಕಾದಂಬರಿಗಳು ವಿಶ್ವಾವ್ಯಾಪಿಯಾಗಬೇಕು ಎಂದು ಹೇಳಿದರು. ಕಲಿಕೆ, ಬದುಕು, ಅನುಭವ, ಸುತ್ತ ಮುತ್ತಲಿನ ಪರಿಸರವು ನಮಗೆ ಪ್ರೇರಣೆಯಾಗಿದೆ ಎಂದರು. ಹೊಸ ಚಿಂತನೆಗಳು ಮೂಡಿದಾಗ ಮಾತ್ರ ಬರಹಗಳಿಗೆ ಅರ್ಥ ಬರಲು ಸಾಧ್ಯವಾಗುತ್ತದೆ. ಅಂತೆಯೇ ಮೊಗಳ್ಳಿ ಗಣೇಶ್ …

Read More