ಲೇಖಕ: admin

ಮಡಿಕೇರಿ NEWS DESK ಮಾ.6 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17 ನೇ ಬಜೆಟ್ ಮಂಡಿಸಿ ದಾಖಲೆ ಮಾಡಿದ್ದಾರೆ, ಅದೇ ರೀತಿ ರಾಜ್ಯದ ಜನರನ್ನು ಸಾಲದ ಶೂಲಕ್ಕೆ ತಳ್ಳಿದ ದಾಖಲೆಯನ್ನೂ ಬರೆದಿದ್ದಾರೆ. ಈ ಬಜೆಟ್ ನಲ್ಲಿ ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳು 1.32 ಲಕ್ಷ ಕೋಟಿ ರೂ. ಸಾಲ ಮಾಡುವ ಕುರಿತು ಬಜೆಟ್ ನಲ್ಲಿ ಘೋಷಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ಸರಕಾರÀ ರಾಜ್ಯದ ಜನರನ್ನು ಸಾಲಗಾರರನ್ನಾಗಿ ಮಾಡಿದೆ. ಸರಕಾರಕ್ಕೆ ಕಾವೇರಿ ತವರು ಜಿಲ್ಲೆ ಕೊಡಗಿನ ಅಭಿವೃದ್ಧಿಯ ಬಗ್ಗೆ ಯಾವುದೇ ಕಾಳಜಿ ಕಾಣುತ್ತಿಲ್ಲ. ಜಿಲ್ಲೆಗೆ ಹೊಸ ಯೋಜನೆಗಳನ್ನೇ ಘೋಷಿಸಿಲ್ಲ, ಪ್ರವಾಸೋದ್ಯಮದ ಅಭಿವೃದ್ಧಿಯ ಬಗ್ಗೆ ಉಲ್ಲೇಖವಿಲ್ಲ. ಮುಖ್ಯಮಂತ್ರಿಗಳಿಗೆ ಆತ್ಮೀಯರಾಗಿರುವ ವಿರಾಜಪೇಟೆ ಕ್ಷೇತ್ರದ ಶಾಸಕರು ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ತಂದು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಾರೆ ಎನ್ನುವ ನಿರೀಕ್ಷೆ ಜನರಲ್ಲಿತ್ತು. ಆದರೆ ನಿರೀಕ್ಷೆಗಳು ಹುಸಿಯಾಗಿದೆ, ವನ್ಯಜೀವಿಗಳ ದಾಳಿ ತಡೆಗೆ ವಿಶೇಷ ಅನುದಾನ…

Read More

ಗುವಾಹಟಿ/ನವದೆಹಲಿ, ಮಾರ್ಚ್ 6, 2026: ಭಾರತೀಯ ವಾಯುಪಡೆಯ (IAF) ಹೆಮ್ಮೆಯ ಸುಖೋಯ್-30 ಎಂಕೆಐ (Su-30MKI) ಯುದ್ಧ ವಿಮಾನವು ಅಸ್ಸಾಂನಲ್ಲಿ ಪತನಗೊಂಡಿದ್ದು, ಇಬ್ಬರು ಯುವ ಪೈಲಟ್‌ಗಳನ್ನು ದೇಶ ಕಳೆದುಕೊಂಡಿದೆ. ಗುರುವಾರ ಸಂಜೆ ರಾಡಾರ್ ಸಂಪರ್ಕ ಕಡಿತಗೊಂಡು ನಾಪತ್ತೆಯಾಗಿದ್ದ ಈ ವಿಮಾನವು ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ ಎಂದು ವಾಯುಪಡೆ ಶುಕ್ರವಾರ ಅಧಿಕೃತವಾಗಿ ತಿಳಿಸಿದೆ. ಘಟನೆಯ ವಿವರ: ಗುರುವಾರ ಸಂಜೆ ಜೋರ್ಹತ್ ವಾಯುನೆಲೆಯಿಂದ ತರಬೇತಿ ಹಾರಾಟಕ್ಕಾಗಿ ಈ ಸುಖೋಯ್ ವಿಮಾನವು ಟೇಕ್ ಆಫ್ ಆಗಿತ್ತು. ಆದರೆ ಸಂಜೆ 7:42 ರ ಸುಮಾರಿಗೆ ವಿಮಾನದೊಂದಿಗಿನ ರಾಡಾರ್ ಸಂಪರ್ಕವು ಹಠಾತ್ ಕಡಿತಗೊಂಡಿತು. ಜೋರ್ಹತ್‌ನಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ ಕರ್ಬಿ ಆಂಗ್ಲಾಂಗ್ ಗುಡ್ಡಗಾಡು ಪ್ರದೇಶದಲ್ಲಿ ವಿಮಾನ ಪತನಗೊಂಡಿರುವುದು ಪತ್ತೆಯಾಗಿದೆ. ವೀರಮರಣ ಅಪ್ಪಿದ ಪೈಲಟ್‌ಗಳು: ಈ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕ್ವಾಡ್ರನ್ ಲೀಡರ್ ಅನುಜ್ (Sqn Ldr Anuj) ಮತ್ತು ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. “ಈ ಅತ್ಯಂತ…

Read More

ನವದೆಹಲಿ, ಮಾರ್ಚ್ 6, 2026: ಜಾಗತಿಕವಾಗಿ ತೈಲ ಪೂರೈಕೆಯ ನಾಡಿಮಿಡಿತ ಎಂದೇ ಕರೆಯಲ್ಪಡುವ ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚಿದ್ದರೂ, ಭಾರತದ ಕಚ್ಚಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲ್‌ಪಿಜಿ ಸರಬರಾಜಿನ ಮೇಲೆ ಯಾವುದೇ ಗಂಭೀರ ಪರಿಣಾಮ ಬೀರದು ಎಂದು ಕೇಂದ್ರ ಸರ್ಕಾರಿ ಮೂಲಗಳು ಸ್ಪಷ್ಟಪಡಿಸಿವೆ. ಭಾರತವು ಪ್ರಸ್ತುತ ಇಂಧನ ಪೂರೈಕೆಯ ವಿಷಯದಲ್ಲಿ “ಅತ್ಯಂತ ಆರಾಮದಾಯಕ ಮತ್ತು ಸುರಕ್ಷಿತ ಸ್ಥಾನದಲ್ಲಿದೆ” ಎಂದು ಶುಕ್ರವಾರ ತಿಳಿಸಲಾಗಿದೆ. ಸರ್ಕಾರ ನೀಡಿದ ಪ್ರಮುಖ ಭರವಸೆಗಳು: ವೈವಿಧ್ಯಮಯ ಮೂಲಗಳು: ಕಳೆದ ಕೆಲವು ವರ್ಷಗಳಿಂದ ಭಾರತವು ತನ್ನ ತೈಲ ಆಮದು ಬುಟ್ಟಿಯನ್ನು ಕೇವಲ ಕೊಲ್ಲಿ ರಾಷ್ಟ್ರಗಳಿಗೆ ಸೀಮಿತಗೊಳಿಸದೆ, ರಷ್ಯಾ ಸೇರಿದಂತೆ ವಿವಿಧ ಭೌಗೋಳಿಕ ಪ್ರದೇಶಗಳಿಗೆ ವಿಸ್ತರಿಸಿದೆ. ಇದರಿಂದಾಗಿ ಹಾರ್ಮುಜ್ ಜಲಸಂಧಿಯ ಮೇಲಿನ ಅವಲಂಬನೆ ಕಡಿಮೆಯಾಗಿದೆ. ದಾಸ್ತಾನು ಲಭ್ಯತೆ: ದೇಶದಲ್ಲಿ ಪ್ರಸ್ತುತ ಇರುವ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದಾಸ್ತಾನು ದೇಶೀಯ ಬೇಡಿಕೆಯನ್ನು ಪೂರೈಸಲು ಸಂಪೂರ್ಣವಾಗಿ ಸಾಕಾಗುತ್ತದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಪರ್ಯಾಯ ಯೋಜನೆ: ಒಂದು ವೇಳೆ ಹಾರ್ಮುಜ್ ಮಾರ್ಗದಲ್ಲಿ…

Read More

ಬೆಂಗಳೂರು, ಮಾರ್ಚ್ 6, 2026: ರಾಜ್ಯದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಿದರು. ಈ ಬಾರಿಯ ಬಜೆಟ್ ಗಾತ್ರವು ಗಮನಾರ್ಹವಾಗಿ ಏರಿಕೆಯಾಗಿದ್ದು, ಸಾಮಾಜಿಕ ಭದ್ರತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ವಿಶೇಷವಾಗಿ ಶಿಕ್ಷಣ ಇಲಾಖೆಗೆ ದಾಖಲೆಯ 47,224 ಕೋಟಿ ರೂ. ಅನುದಾನ ಮೀಸಲಿಡುವ ಮೂಲಕ ಕಲಿಕೆಗೆ ಹೊಸ ವೇಗ ನೀಡಲು ಸರ್ಕಾರ ಮುಂದಾಗಿದೆ. ವಲಯವಾರು ಅನುದಾನ ಹಂಚಿಕೆ ಪಟ್ಟಿ: ಈ ಬಾರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿರುವ ಅನುದಾನದ ವಿವರ ಇಲ್ಲಿದೆ: ಇಲಾಖೆ/ವಲಯ ಅನುದಾನ (ಕೋಟಿ ರೂ.ಗಳಲ್ಲಿ) ಶಿಕ್ಷಣ ಇಲಾಖೆ 47,224 ಮಹಿಳಾ ಮತ್ತು ಮಕ್ಕಳ ಕಲ್ಯಾಣ 34,929 ಇಂಧನ ಇಲಾಖೆ 29,947 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ 26,559 ಲೋಕೋಪಯೋಗಿ ಮತ್ತು ಸಾರಿಗೆ 23,100 ನೀರಾವರಿ ವಲಯ 22,436 ನಗರಾಭಿವೃದ್ಧಿ ಮತ್ತು ವಸತಿ 22,203 ಕಂದಾಯ ಇಲಾಖೆ 19,843 ಸಮಾಜ ಕಲ್ಯಾಣ 18,612 ಆರೋಗ್ಯ…

Read More

ಬೆಂಗಳೂರು, ಮಾರ್ಚ್ 6, 2026: ಹೆಚ್ಚುತ್ತಿರುವ ಮೊಬೈಲ್ ವ್ಯಾಮೋಹ ಮತ್ತು ಸಾಮಾಜಿಕ ಜಾಲತಾಣಗಳ ಅಡ್ಡ ಪರಿಣಾಮಗಳಿಂದ ಮಕ್ಕಳನ್ನು ರಕ್ಷಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ವಿಧಾನ ಸಭೆಯಲ್ಲಿ ಇಂದು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಘೋಷಿಸಿದ್ದಾರೆ. ನಿಷೇಧಕ್ಕೆ ಕಾರಣಗಳೇನು? ಬಜೆಟ್ ಭಾಷಣದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಮೊಬೈಲ್ ಫೋನ್‌ಗಳ ಅತಿಯಾದ ಬಳಕೆ ಮಕ್ಕಳ ಮಾನಸಿಕ ಆರೋಗ್ಯ, ದೈಹಿಕ ಬೆಳವಣಿಗೆ ಮತ್ತು ವಿದ್ಯಾಭ್ಯಾಸದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಅಡ್ಡ ಪರಿಣಾಮಗಳ ತಡೆ: ಸಾಮಾಜಿಕ ಜಾಲತಾಣಗಳಲ್ಲಿನ ಅನಗತ್ಯ ವಿಷಯಗಳು ಮಕ್ಕಳ ದಾರಿ ತಪ್ಪಿಸುತ್ತಿರುವುದನ್ನು ತಡೆಗಟ್ಟಲು ಈ ಕಠಿಣ ಕ್ರಮ ಅನಿವಾರ್ಯವಾಗಿದೆ. ಕೇಂದ್ರದ ವರದಿ ಬೆಂಬಲ: ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಯಂತ್ರಿಸುವ ಬಗ್ಗೆ ಶಿಫಾರಸು ಮಾಡಲಾಗಿತ್ತು. ಇದನ್ನು ಆಧರಿಸಿ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ…

Read More

ಮಡಿಕೇರಿ, NEWS DESK ಮಾಚ್೯ 6 –  ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ  ಹೆಚ್.ಎಸ್.ಚೇತನ್   ಅವಿರೋಧವಾಗಿ ಪುನರಾಯ್ಕೆಗೊಂಡಿದ್ದು, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ 16ರಂದು ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆದು 17 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು.ಅಧ್ಯಕ್ಷ ಹಾಗೂ ಉಪಾಧಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು.  ಅಧ್ಯಕ್ಷ ಸ್ಥಾನಕ್ಕೆ  ಹೆಚ್.ಎಸ್.ಚೇತನ್ ಹಾಗೂ  ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಬಿ.ಸ್ವಾತಿ ನಾಮಪತ್ರ ಸಲ್ಲಿಸಿದರು. ಅಧ್ಯಕ್ಷ ಸ್ಥಾನಕ್ಕೆ  ನಾಮಪತ್ರ ಸಲ್ಲಿಸಿದ ಹೆಚ್.ಎಸ್.ಚೇತನ್ ಅವರ ಹೆಸರನ್ನು ಟಿ.ಕೆ.ಬಸವರಾಜ್ ಸೂಚಿಸಿದರು. ಡಿ.ಕೆ.ರೇಖಾ ಕುಮಾರಿ ಅನುಮೋದಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಿ.ಬಿ.ಸ್ವಾತಿ ಅವರ ಹೆಸರನ್ನು ದೇವಾನಂದ ಎಂ.ಸಿ. ಅವರು ಸೂಚಿಸಿದರೇ,  ಡಿ.ಎಂ.ರೇವತಿ ಅನುಮೋದಿಸಿದರು. ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ  ಹೆಚ್.ಎಸ್.ಚೇತನ್ ಹಾಗೂ ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಉಪನಿಬಂಧಕರಾದ ಪಿ.ಬಿ.ಮೋಹನ್ ಕುಮಾರ್ ಕಾರ್ಯನಿರ್ವಹಿಸಿದರು. ಇದೇ ಸಂದರ್ಭ ಫೆಬ್ರವರಿ 16 ರಂದು ನಡೆದ ಚುನಾವಣೆಯಲ್ಲಿ…

Read More

ಮಡಿಕೇರಿ NEWS DESK ಮಾ.6 : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಮಡಿಕೇರಿ ನಗರದಲ್ಲಿರುವ ಪೊಲೀಸ್ ವಸತಿ ಗೃಹಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿದರು. ವಸತಿ ಗೃಹದಲ್ಲಿರುವ ಸಮಸ್ಯೆಗಳನ್ನು ಅವಲೋಕಿಸಿದರು. ಇದಕ್ಕೂ ಮೊದಲು ಜಿಲ್ಲಾ ಕವಾಯತು ಮೈದಾನದಲ್ಲಿ ವಾರದ ಕವಾಯತು ನಡೆಸಲಾಯಿತು.

Read More

ಮಡಿಕೇರಿ NEWS DESK  ಮಾ.6 :  ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ಮಾ.9 ರಂದು ಸೋಮವಾರ ಮಹಿಳೆಯರಿಗಾಗಿ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಆಯೋಜಿಸಲಾಗಿದೆ. ವೈವಿಧ್ಯಮಯ ಕಾಯ೯ಕ್ರಮಗಳೊಂದಿಗೆ ಮಹಿಳಾ ದಿನಾಚರಣೆಯ ಸಂಭ್ರಮಾಚರಣೆ ಜರುಗಲಿದೆ ಎಂದು ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಬಿ.ಕೆ. ರವೀಂದ್ರ ರೈ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ರವಿಂದ್ರರೈ, ಮಾ.9 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ, ಮತ್ತು ಮಹಿಳಾ ದಿನಾಚರಣೆಯನ್ನು ರೆಡ್ ಕ್ರಾಸ್ ಜಿಲ್ಲಾಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ಮಡಿಕೇರಿ ನಗರಸಭಾ ಅಧ್ಯಕ್ಷೆ ಕಲಾವತಿ ಉದ್ಘಾಟಿಸಲಿದ್ದಾರೆ.  ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವಯ೯ ಆಶಯ ಭಾಷಣ ಮಾಡಲಿದ್ದಾರೆ.  ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಬಿಂದುಮಣಿ, ವಿಧಾನಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ರಾಷ್ಟ್ರಪ್ರಶಸ್ತಿ ಪಡೆದ ಕೊಟ್ಟುಕೊತ್ತೀರ ಯಶೋಧ ಪ್ರಕಾಶ್, ಮಹಿಳಾ ಮತ್ತು ಮಕ್ಕಳ…

Read More

ನಾಪೋಕ್ಲು NEWS DESK ಮಾ.6 : ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಮೊದಲ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ ಮಾ.8ರಂದು ಅದ್ದೂರಿಯಾಗಿ ನಡೆಯಲಿದೆ. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಅವರು ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ವೈವಿಧ್ಯಮಯ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಭಾನುವಾರ ಬೆಳಿಗ್ಗೆ 10.30ಗಂಟೆಗೆ ಕಾರುಗುಂದ ಗೌಡ ಸಮಾಜದಲ್ಲಿ ಸಮಾರಂಭವನ್ನು ಆಯೋಜಿಸಲಾಗಿದೆ. ಚೆಟ್ಟಿಮಾನಿಯ ನಿವೃತ್ತ ಪ್ರಾಧ್ಯಾಪಕಿ ಸುಳ್ಯಕೋಡಿ ಶಿವದೇವಿ ಅವನಿಶ್ಚಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಕಾರ್ಯಕ್ರಮ ಉದ್ಘಾಟಿಸುವರು. ಬೆಂಕಿ ಇಲ್ಲದ ಅಡುಗೆ ಪದಾರ್ಥಗಳ ಪ್ರದರ್ಶನವನ್ನು ಕೊಡಗು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಸ್ಥಾಪಕ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್ ಉದ್ಘಾಟಿಸುವರು. ಕರಕುಶಲ ವಸ್ತು ಪ್ರದರ್ಶನವನ್ನು ಕುಶಾಲನಗರದ ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಕಲಾ ಆನಂದ್ ಕರಂದ್ಲಾಜೆ ಉದ್ಘಾಟಿಸುವರು. ಮಹಿಳೆಯರು ಸಿದ್ಧಪಡಿಸಿದ ಕರಕುಶಲ ವಸ್ತುಗಳ ಮತ್ತು ಖಾದ್ಯ ಪದಾರ್ಥಗಳ ಮಾರಾಟ ಮಳಿಗೆಗಳನ್ನು ಮಡಿಕೇರಿ…

Read More

ಮಡಿಕೇರಿ ಮಾ.5 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್, 06 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಅಪೋಲೋ ಫಾರ್ಮಸಿ ಮೈಸೂರು, ಜಾಯ್ ಆಲುಕಾಸ್ ಜ್ಯುವೆಲ್ಲರಿ ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋರೂಂ, ಮಡಿಕೇರಿ, ಕೂರ್ಗ್ ಕ್ಲಿಪ್ಸ್ ರೆಸಾರ್ಟ್ ಸಿದ್ದಾಪುರ, ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ, ಆಲ್ಫಾ ಟೆಕ್ನಾಲಜಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ…

Read More