ಲೇಖಕ: admin

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆ ಗರ್ವಾಲೆ ಗ್ರಾಮದ ಓಡಿಯಂಡ ಕುಟುಂಬದ ಮನೆಯಿಂದ ದೇವರ ಭಂಡಾರ ತಂದು ಪೂಜೆ ಸಲ್ಲಿಸಲಾಯಿತು. ನಂತರ ಮಹಾಮಂಗಳಾರತಿ, ಒಪ್ಪಿಸುವುದು, ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ಗ್ರಾಮಸ್ಥರಿಂದ ಸಾಂಪ್ರದಾಯಿಕ ಬೊಳಕಾಟ್ ನೃತ್ಯ ಪ್ರದರ್ಶನ ನಡೆಯಿತು. ದೇವಸ್ಥಾನ ಸಮಿತಿ ವತಿಯಿಂದ ಭಕ್ತಾದಿಗಳಿಗೆ ಅನ್ನದಾನದ ನೆರವೇರಿತು. ತಕ್ಕ ಮುಖ್ಯಸ್ಥರಾದ ಸೋಮಯ್ಯ, ಐಮುಡಿಯಂಡ ಭೀಮಯ್ಯ, ಆರುಡ ರಾಜಪ್ಪ, ತಾಚಮಂಡ ಈರಪ್ಪ, ಪಾಸುರ ಗಣಪತಿ ನೇತೃತ್ವದಲ್ಲಿ ಸಾಂಪ್ರದಾಯಿಕ ಆಚರಣೆಗಳು ಜರುಗಿತು.

Read More

ಮಡಿಕೇರಿ ಮಾ.5 NEWS DESK : ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಹೊರತು ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಅಭ್ಯಾಸ ಮಾಡಬೇಕು ಎಂದು ಜಿಲ್ಲೆಯ ಹಿರಿಯ ದಾನಿ ಕೈಬುಲಿರ ಪಾರ್ವತಿ ಬೋಪಯ್ಯ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಲಿಟಲ್ ಫ್ಲವರ್ಸ್ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಕೈಬುಲಿರ ಬೋಪಯ್ಯ ಸ್ಮಾರಕ ದತ್ತಿ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನ ಕೊಡಗು ಜಿಲ್ಲೆಯ 10ನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಸೋಮವಾರಪೇಟೆ ತಾಲೂಕಿನ ನೀಡ್ತಾ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜೆ.ಎಸ್.ಪೂರ್ವಿಕ ಅವರನ್ನು ಸನ್ಮಾನಿಸಿ ಮಾತನಾಡಿದರು. ವಿದ್ಯಾರ್ಥಿಗಳ ಪಾಲಿಗೆ ಅಧ್ಯಾಪಕರು ಶಿಲ್ಪಿಗಳಂತೆ. ಪೋಷಕರು ಒಂದು ಕಲ್ಲಿನ ರೀತಿಯಲ್ಲಿರುವ ವಿದ್ಯಾರ್ಥಿಯನ್ನು ಶಾಲೆಗೆ ಒಪ್ಪಿಸಿದ ಸಂದರ್ಭದಲ್ಲಿ ಅಧ್ಯಾಪಕರು ಅವರನ್ನು ತಿದ್ದಿ ತೀಡಿ ಉತ್ತಮವಾದ ಶಿಲ್ಪವನ್ನಾಗಿ ಮಾಡುತ್ತಾರೆ. ಅಧ್ಯಾಪಕರ ಈ ಸೇವೆ ವಿದ್ಯಾರ್ಥಿಗಳು ಮರೆಯಕೂಡದು ಎಂದರು.…

Read More

ಸೋಮವಾರಪೇಟೆ ಮಾ.5 NEWS DESK : ಹಿಂದೂ ಸಂಗಮ ಹಿಂದೂಗಳ ಐಕ್ಯತೆಯ, ಒಗ್ಗಟ್ಟಿನ, ಸಂಘಟನೆಯ ಬಲವನ್ನು ಹೆಚ್ಚಿಸುವ ಮಂತ್ರವಾಗಿದೆ ಎಂದು ಬೆಂಗಳೂರು ಉತ್ತರ ಜಿಲ್ಲೆಯ ಸಂಘ ಪ್ರಚಾರಕ್ ಸುಧಾಕರ್ ಅಭಿಪ್ರಾಯಿಸಿದರು. ಚೌಡ್ಲು ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ಪಟ್ಟಣದ ಆರ್‍ಎಂಸಿ ಆವರಣದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತ ದೇಶ ತನ್ನದೇ ಆದ ವಿಶಿಷ್ಟ ಪರಂಪರೆಯನ್ನು ಹೊಂದಿದೆ. ಈ ಕಾರಣದಿಂದಲೇ ಪ್ರಪಂಚಕ್ಕೆ ಭಾರತ ಧಾರ್ಮಿಕತೆಯ ಮಾದರಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಇಂದಿನ ಮಕ್ಕಳಿಗೆ ದೇಶಪ್ರೇಮದ ಪಾಠವನ್ನು ಪ್ರಾರಂಭಿಕ ಹಂತದಲ್ಲಿಯೇ ಕಲಿಸಿಕೊಡುವ ಮಹತ್ಕಾರ್ಯ ಪೋಷಕರಿಂದ ಆಗಬೇಕಿದೆ ಎಂದರು. ಮಾರಿಯಮ್ಮ ದೇವಾಲಯದಿಂದ ನಡೆದ ಮೆರವಣಿಗೆಯಲ್ಲಿ ಭಜನಾ ನೃತ್ಯ, ಚಂಡೆ ಮದ್ದಳೆ, ಛದ್ಮವೇಶಗಳು, ಶ್ರೀ ರಾಮನ ಘೋಷಣೆಗಳು, ಬಾಬಾ ಸಾಹೇಬ್ ಅಂಬೇಡ್ಕರ್ ಸ್ಥಬ್ದಚಿತ್ರ ಹಾಗು ದೇಶ ಪ್ರೇಮವನ್ನು ಪ್ರತಿಬಿಂಬಿಸುವ ವಿವಿಧ ಕಲಾ ಕೃತಿಗಳು ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ, ಯಸಳೂರು ತೆಂಕಲಗೂಡು ಬೃಹನ್ಮಠದ ಪೀಠಾಧ್ಯಕ್ಷರಾದ ಚೆನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮಿ ಮಾತನಾಡಿ, ಹಿಂದೂ ರಾಷ್ಟ್ರದ…

Read More

ಸೋಮವಾರಪೇಟೆ ಮಾ.5 NEWS DESK : ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕಂದೂರು ಗ್ರಾಮದ ಶಾಸ್ತ ಯುವಕ ಸಂಘದ ವತಿಯಿಂದ ರುದ್ರಭೂಮಿಯಲ್ಲಿ ಶ್ರಮದಾನ ನಡೆಯಿತು. ಗ್ರಾಮದ ಶಾಸ್ತ ಯುವಕ ಸಂಘದ ಸದಸ್ಯರು ತಲಾ 1 ಸಾವಿರ ರೂಪಾಯಿ ರೂ. ನೆರವು ಒದಗಿಸಿ, ಜೆಸಿಬಿ ಯಂತ್ರದ ಮೂಲಕ ಕಾಡು, ಗಿಡಗಂಟಿಗಳನ್ನು ತೆರವುಗೊಳಿಸಿದರು. ಕೂಲಿ ಕಾರ್ಮಿಕ ಕುಟುಂಬಗಳು ನೆಲೆಸಿರುವ ಕಲ್ಕಂದೂರು ಬಾಣೆ ಗ್ರಾಮದಲ್ಲಿ ಯಾರಾದರೂ ಮೃತರಾದರೆ ಇದೇ ಸ್ಮಶಾನ ಜಾಗದಲ್ಲಿ ಶವಸಂಸ್ಕಾರ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಸೌದೆಗಳಿಗೂ ಸಮಸ್ಯೆಯಾಗುತ್ತಿದೆ. ಮಳೆಗಾಲದಲ್ಲಿ ಶವಸಂಸ್ಕಾರಕ್ಕೆ ಪರದಾಡುವ ಸ್ಥಿತಿಯಿದೆ. ಈ ಬಗ್ಗೆ ಶಾಸಕ ಡಾ.ಮಂತರ್ ಗೌಡ ಅವರ ಗಮನ ಸೆಳೆದು ಸ್ಮಶಾನದಲ್ಲಿ ಸಿಲಿಕಾನ್ ಚೇಂಬರ್ ಅಳವಡಿಸಲು ಅನುದಾನ ಕಲ್ಪಿಸುವಂತೆ ಮನವಿ ಮಾಡಲಾಗುವುದು ಎಂದು ಶಾಸ್ತ ಯುವಕ ಸಂಘದ ಕಾರ್ಯದರ್ಶಿ ಲೋಕೇಶ್ ತಿಳಿಸಿದ್ದಾರೆ. ಶ್ರಮದಾನದಲ್ಲಿ ಸಂಘದ ಅಧ್ಯಕ್ಷ ಕೃಷ್ಣಕುಮಾರ್, ಖಜಾಂಚಿ ಸುರೇಶ್, ಪದಾಧಿಕಾರಿಗಳಾದ ಹರೀಶ್, ರಮೇಶ್, ಲಿಂಗರಾಜು, ಶಿವಕುಮಾರ್, ದೀಕ್ಷಿತ್, ಮಹೇಶ್, ಚೆನ್ನ, ಪ್ರಜ್ವಲ್, ಸ್ವಾಮಿಗೌಡ, ಅನಿಲ್ ಸೇರಿದಂತೆ ಇತರರು…

Read More

ಮಡಿಕೇರಿ, NEWS DESK ಮಾ.5 : ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಿಂಭಾಗದ ಬಡಾವಣೆ ರಸ್ತೆಯಲ್ಲಿ ನಡೆದಿದೆ. ಗುತ್ತಿಗೆದಾರ ಅಮೆಮನೆ ದೇವಿ ಪ್ರಸಾದ್(43) ಮೃತ ವ್ಯಕ್ತಿಯಾಗಿದ್ದಾರೆ. ಒಂಟಿ ನಳಿಕೆ ಬಂದೂಕು ಸಹಿತ ಮನೆಯಿಂದ ಹೊರ ಬಂದ ದೇವಿ ಪ್ರಸಾದ್ ರಸ್ತೆ ಬದಿಯಲ್ಲೇ ಎದೆಯ ಭಾಗಕ್ಕೆ ಗುಂಡು ಹೊಡೆದುಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನಾರೋಗ್ಯ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಮಡಿಕೇರಿ ಡಿವೈಎಸ್‌ಪಿ ಸೂರಜ್, ವೃತ್ತ ನಿರೀಕ್ಷಕ ಪಿ.ಕೆ.ರಾಜು, ಠಾಣಾಧಿಕಾರಿ ಅನ್ನಪೂರ್ಣ, ಸಿಬ್ಬಂದಿಗಳು ಹಾಗೂ ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಘಟನೆ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ, NEWS DESK ಮಾ.5 : ಕೊಡಗು ಮುಸ್ಲಿಂ ಸ್ಟೋಟ್ಸ್ ಟ್ರಸ್ಟ್ ವತಿಯಿಂದ 21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಮೇ 2ರಿಂದ 10 ರವರೆಗೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆದಂ ಎಸ್.ಕುಶಾಲನಗರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಶಾಲನಗರದ ಗುಂಡುರಾವ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಹಾಗೂ ಮೊದಲನೇ ವರ್ಷದ ಪುರುಷರ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದೆ ಎಂದರು. ಈ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟವನ್ನು ಕೊಡಗು ಮುಸ್ಲಿಂ ಸ್ಪೋಟ್ಸ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿದೆ. ಕ್ರೀಡಾಕೂಟದಲ್ಲಿ ಸುಮಾರು 150 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಕ್ರಿಕೆಟ್ ಪಂದ್ಯಾಟದ ಪ್ರಥಮ ನಗದು ಬಹುಮಾನ ರೂ.1,11,111/- ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 66,666/- ಹಾಗೂ ಆಕರ್ಷಕ ಟ್ರೋಫಿ, ತೃತೀಯ ಬಹುಮಾನ 33,333/-ಹಾಗೂ ಆಕರ್ಷಕ ಟ್ರೋಫಿ, ಚತುರ್ಥ ಬಹುಮಾನ 22,222/- ಹಾಗೂ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುತ್ತದೆ. ಪುರುಷರ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ…

Read More

ಮಡಿಕೇರಿ, NEWS DESK ಮಾ.5 : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಬಳಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿದ್ದ 39 ಸಾವಿರ ಕೋಟಿ ರೂ.ಗಳನ್ನು ಹಿಂದಿರುಗಿಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೋರ್ಚಾ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ರಾಜ್ಯದ ಕಾಂಗ್ರೆಸ್ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜಾತಿ ಉಪ ಯೋಜನೆಗಳಿಗೆ ಮೀಸಲಾಗಿದ್ದ ಹಣವನ್ನು ಪಂಚ ಗ್ಯಾರಂಟಿಗಳಿಗೆ ಬಳಕೆ ಮಾಡಿದೆ. ಅಲ್ಲದೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ಮೀಸಲಾಗಿದ್ದ ಹಣದಲ್ಲಿ ಉಳಿಕೆಯಾಗಿರುವ 15 ಸಾವಿರ ಕೋಟಿ ರೂ.ಗಳನ್ನು ಬಳಸಿಕೊಳ್ಳಲು ಮುಂದಾಗುತ್ತಿದೆ ಎನ್ನುವ ಮಾಹಿತಿ ಇದೆ. ಯಾವುದೇ ಕಾರಣಕ್ಕೂ ಶೋಷಿತ ಸಮುದಾಯದ ಕಲ್ಯಾಣಕ್ಕೆ ಮೀಸಲಾದ ಹಣವನ್ನು ದುರ್ಬಳಕೆ ಮಾಡಬಾರದು. ಬಜೆಟ್ ಗೂ…

Read More

ಮಡಿಕೇರಿ, NEWS DESK ಮಾ.05:-ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ಶಾಲಾ ಕಾಲೇಜು ಹಂತದಲ್ಲಿ ಮತ್ತಷ್ಟು ಹೆಚ್ಚಿನ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು. ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್, ಡೆಂಟಲ್ ಸೇರಿದಂತೆ ಪದವಿ ಮತ್ತು ಸ್ಮಾತಕೋತ್ತರ ಕಾಲೇಜುಗಳಲ್ಲೂ ಸಹ ಅರಿವು ಮೂಡಿಸಬೇಕು. ರಜೆ ಅವಧಿಯಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ವಾರಕ್ಕೆ ಮೂರು ದಿನವಾದರೂ ವಿವಿಧ ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಬೇಕು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೂ ಮಾಹಿತಿ ನೀಡಿ ಅವರ ಸಲಹೆ ಮಾರ್ಗದರ್ಶನ ಪಡೆಯುವಂತಾಗಬೇಕು ಎಂದು…

Read More

ಮಡಿಕೇರಿ ಮಾಚ್೯ 05 – ನಗರದ ಶ್ರೀ ಕೋದಂಡ ರಾಮದೇವಾಲಯ ಸಮಿತಿ ವತಿಯಿಂದ ಮಾಚ್೯ 28 ರಂದು ಶನಿವಾರ ಆಯೋಜಿತ ಶ್ರೀ ರಾಮನವಮಿ ಮಹೋತ್ಸವದ ಅಂಗವಾಗಿನ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಸಕ್ತ ಕಲಾತಂಡಗಳಿಂದ ಅಜಿ೯ ಆಹ್ವಾನಿಸಲಾಗಿದೆ. ನಗರದ ಗಾಂಧಿ ಮೈದಾನದಲ್ಲಿ ಮಾಚ್೯ 28 ರಂದು ಶನಿವಾರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಆಯೋಜಿತ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಜಿಲ್ಲೆಯ ಕಲಾವಿದರು, ಕಲಾತಂಡಗಳು ಪ್ರದಶ೯ನಕ್ಕೆ ಅಜಿ೯ ಸಲ್ಲಿಸಬಹುದು. ಭಕ್ತಿ ಮತ್ತು ದೇಶ ಪ್ರೇಮ ಸಂಬಂಧಿತ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆದ್ಯತೆ. 1 ತಂಡಕ್ಕೆ ಕನಿಷ್ಟ 10 ನಿಮಿಷಗಳು ಮಾತ್ರ ಪ್ರದಶ೯ನಕ್ಕ ಅವಕಾಶ ಇರುತ್ತದೆ.  ಸಾಂಸ್ಕೖತಿಕ ಸಮಿತಿಯ ಆಯ್ಕೆಯೇ ಅಂತಿಮವಾಗಿದ್ದು, ಅಜಿ೯ ಸಲ್ಲಿಸಲು ಮಾಚ್೯ 12 ಕೊನೇ ದಿನವಾಗಿದೆ. ಅಜಿ೯ಗಳನ್ನು ಶ್ರೀ ರಾಮೋತ್ಸವ ಸಾಂಸ್ಕೖತಿಕ ಕಾಯ೯ಕ್ರಮ ಸಮಿತಿ , ಕೇರಾಫ್ ಅಮೂಲ್ಯ ಎಂಟರ್ ಪ್ರೈಸರ್, ಶ್ರೀ ಓಂಕಾರೇಶ್ವರ ದೇವಾಲಯ ರಸ್ತೆ ಮಡಿಕೇರಿ – 571201 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್…

Read More

ಮಡಿಕೇರಿ, NEWS DESK ಮಾ.05:-ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಅಧ್ಯಕ್ಷರಾದ ಪರಶುರಾಮ್ ಸಂಪತ್ ಕುಮಾರ್ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ನಗರದ ಹೊರವಲಯದಲ್ಲಿರುವ ದಿ ಕ್ಯಾಪಿಟಲ್ ವಿಲೇಜ್ ರೆಸಾರ್ಟ್‍ನಲ್ಲಿ ಗುರುವಾರ ಚಿತ್ರ ಬಿಡಿಸುವ ಮೂಲಕ ಚಾಲನೆ ನೀಡಿದರು. ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ಮಾರ್ಚ್, 08 ರವರೆಗೆ ನಡೆಯುವ ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಅಧ್ಯಕ್ಷರಾದ ಪ.ಸ.ಕುಮಾರ್ ಅವರು ಮುಂಬಯಿ ಅಲ್ಲಿರುವ ಜೆ.ಜೆ.ಚಿತ್ರಕಲೆ ಶಾಲೆಯ ಮಾದರಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಕಲಾ ಗ್ಯಾಲರಿ’ ಆರಂಭಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಮಹಾರಾಷ್ಟ್ರದ ಜೆಜೆ ಟಾಟಾ ಕಲಾಶಾಲೆಯಲ್ಲಿ ಕಲಿತಿರುವ ಕಲಾವಿದರ ಭಾವಚಿತ್ರ ರಚನಾ ಕ್ರಮವನ್ನು ರಾಜ್ಯದಲ್ಲಿಯೂ ಸಹ ಅಳವಡಿಸುವಂತಾಗಬೇಕು ಎಂದು ಅವರು ಕೋರಿದರು. ರಾಷ್ಟ್ರ ಮತ್ತು ಅಂತರರಾಷ್ಟ್ರ ಮಟ್ಟದಲ್ಲಿ ಚಿತ್ರಕಲೆಗಳಲ್ಲಿ ಆಸಕ್ತರು ತೊಡಗಿಸಿಕೊಳ್ಳುವಂತಾಗಬೇಕು. ಇದರಿಂದ ಪ್ರಾಚೀನದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಚಿತ್ರಕಲೆಗಳ ಮೂಲಕ…

Read More