ಮಡಿಕೇರಿ ನ.14 NEWS DESK : ಕಳೆದ 25 ವರ್ಷಗಳಿಂದ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ಮಡಿಕೇರಿ-ಗಾಳಿಬೀಡು-ಕಡಮಕಲ್ಲು ರಸ್ತೆ ದುರಸ್ತಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಗಾಳಿಬೀಡು ಗ್ರಾಮದ ಕೋಳಿಗೂಡು ಎಂಬಲ್ಲಿ ಶಾಸಕರು ಭೂಮಿಪೂಜೆ ನೆರವೇರಿಸಿ, ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು. ಈ ಸಂದರ್ಭ ಗಾಳಿಬೀಡು ವಲಯ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ಸುಭಾಷ್ ಆಳ್ವ, ಮಾಜಿ ಅಧ್ಯಕ್ಷ ಕೋಳುಮುಡಿಯನ ಅನಂತಕುಮಾರ್, ಜಿಲ್ಲಾ ಕಾಂಗ್ರೆಸ್ ಸದಸ್ಯ ಐಲಪಂಡ ಪುಷ್ಪ ಪೂಣಚ್ಚ, ಅಕ್ರಮ ಸಕ್ರಮ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ, ವಲಯ ಕಾಂಗ್ರೆಸ್ ಸದಸ್ಯರುಗಳಾದ ಮದನ್ ಕೊಂಬಾರನ ಹಾಗೂ ಗಣಪತಿ, ಪ್ರಮುಖರಾದ ತೆನ್ನಿರಾ ಮೈನ, ಹೆಚ್.ಎ.ಹಂಸ ಅಪ್ರು ರವೀಂದ್ರ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು. ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ಮಡಿಕೇರಿ-ಗಾಳಿಬೀಡು-ಕಡಮಕಲ್ಲು ರಸ್ತೆ ದುರಸ್ತಿಗೆ ಶಾಸಕ ಡಾ.ಮಂತರ್ ಗೌಡ ಅವರ ಪ್ರಯತ್ನದ ಫಲವಾಗಿ ರೂ.3.50 ಕೋಟಿ ಬಿಡುಗಡೆಯಾಗಿತ್ತು.
ಲೇಖಕ: admin
ಮಡಿಕೇರಿ ನ.14 NEWS DESK : ವಿರಾಜಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಇಂದೇ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಹಾರೈಸಿದರು. ಪಂಡಿತ್ ಜವಾಹರ್ ಲಾಲ್ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಶಾಲೆಯ ಪ್ರಾಧ್ಯಾಪಕರೊಂದಿಗೆ ಮಾತನಾಡುತ್ತಾ ಮಕ್ಕಳಿಗೆ ದೊರಕುತ್ತಿರುವ ಎಲ್ಲಾ ಸೌಲತ್ತುಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್, ಪಕ್ಷದ ಮುಖಂಡರು ಜೋಕಿಮ್, ಸೂರಜ್ ಹೊಸೂರು,ಮಂಜುನಾಥ್, ನರೇಂದ್ರ ಕಾಮತ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ, ಶಬೀರ್, ಸಫನ್, ಹಾಗೂ ಶಿಕ್ಷಕ ವೃಂದದವರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಬೆಂಗಳೂರು ನ.14 NEWS DESK : ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ಇಂದು(ನ.14) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಭಾರತದ ಪರಿಸರ ಇತಿಹಾಸದಲ್ಲಿ ‘ಸಾಲುಮರದ ತಿಮ್ಮಕ್ಕ’ ಎಂಬ ಹೆಸರು ಎಂದಿಗೂ ಅಜರಾಮರ. 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್ ಗ್ರಾಮದ ಚಿಕ್ಕಯ್ಯ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಒಬ್ಬ ಕೂಲಿ ಕಾರ್ಮಿಕೆಯಾಗಿ ತಮ್ಮ ಜೀವನವನ್ನು ಆರಂಭಿಸಿದ ಈ ಮಹಾತಾಯಿಗೆ ಮಕ್ಕಳಿರಲಿಲ್ಲ. ಹಾಗಾಗಿ, ಆ ನೋವಿನಿಂದ ಹೊರಬರಲು ಮತ್ತು ಭೂಮಿಗೆ ಪ್ರಕೃತಿಯ ಕೊಡುಗೆ ನೀಡಲು, ಸುಮಾರು ನಾಲ್ಕು ಕಿ.ಮೀ. ಉದ್ದದ ರಸ್ತೆಯುದ್ದಕ್ಕೂ 400ಕ್ಕೂ ಹೆಚ್ಚು ಆಲದ ಮರಗಳನ್ನು (Banyan Trees) ನೆಟ್ಟು, ಅವಕ್ಕೆ ನೀರು ಹಾಕಿ ಪೋಷಿಸಿದರು. ಗಿಡಮರಗಳನ್ನೇ ಮಕ್ಕಳಂತೆ ಸಾಕಿದರು. ಅದೇ ಕಾರಣಕ್ಕೆ, ಅವರಿಗೆ ‘ಸಾಲುಮರದ’…
ಶಿವಮೊಗ್ಗ ನ.14 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆವರಣದಲ್ಲಿ ಸಹಕಾರಿ ಧುರೀಣ ಬಿ.ಎಸ್.ವಿಶ್ವನಾಥ್ ಅವರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿ.ಎಸ್.ವಿಶ್ವನಾಥ್ ಅವರು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸಹಕಾರಿ ಮುಖಂಡರಾಗಿ ಬೆಳೆದದ್ದು ನಮಗೆಲ್ಲ ಹೆಮ್ಮೆಯ ವಿಷಯ. ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು. ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿರುವ ಬಿ.ಎಸ್.ವಿಶ್ವನಾಥ್ ಅವರ ಪುತ್ಥಳಿಯನ್ನು ಇಂದು ಅತ್ಯಂತ ಸಂತೋಷದಿಂದ ಅನಾವರಣಗೊಳಿಸಿದ್ದೇನೆ. ಇಂದಿನ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಸಹಕಾರಿ ಧುರೀಣರಾದ ಜಿ.ಟಿ.ದೇವೇಗೌಡರು, ಸೋಮಶೇಖರ್, ಷಡಕ್ಷರಿ, ಹೆಚ್.ಎಂ.ರೇವಣ್ಣನವರು ಸೇರಿದಂತೆ ಎಲ್ಲ ಸಹಕಾರಿಗಳು ಬಹಳಷ್ಟು ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಈ ಎಲ್ಲಾ ಗಣ್ಯರಿಗೆ ಅಭಿನಂದನೆ ಸಲ್ಲಿಸಿದರು.
ಬೆಂಗಳೂರು ನ.14 NEWS DESK : ಮಾಜಿ ಪ್ರಧಾನಿ ಪಂಡಿತ್ ಜವಾಹಾರಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಆವರಣದಲ್ಲಿರುವ ನೆಹರೂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಕ್ಕಳ ದಿನಾಚರಣೆಯ ಶುಭ ಕೋರಿದರು.
ಮಡಿಕೇರಿ ನ.14 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ಹಾಗೂ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ದಿನಾಚರಣೆಯು ನ.14 ರಂದು ಬೆಳಗ್ಗೆ 10.30 ಗಂಟೆಗೆ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೆ.ಪಿ.ಗಣಪತಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ಪಿ.ಯು.ರಾಬಿನ್ ದೇವಯ್ಯ, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಪೆರಾಜೆ ಗ್ರಾ.ಪಂ. ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ, ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ನ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು, ವಿವಿಧ ಆದಿವಾಸಿ ಬುಡಕಟ್ಟು ಸಂಘಗಳು ಇವರ ಸಹಯೋಗದೊಂದಿಗೆ ಶ್ರೀ ಭಗವಾನ್ ಬಿರ್ಸಾಮುಂಡಾರವರ 151 ನೇ ಜಯಂತಿಯ ಪ್ರಯುಕ್ತ ಜನಜಾತೀಯ ಗೌರವ ದಿವಸ್ ಆಚರಣಾ ಸಮಾರಂಭವು ನವೆಂಬರ್, 15 ರಂದು ಬೆಳಗ್ಗೆ 10.30 ಗಂಟೆಗೆ ತಿತಿಮತಿ, ಸಮುದಾಯ ಭವನ ಸಭಾಂಗಣದಲ್ಲಿ ನಡೆಯಲಿದೆ. ನವೆಂಬರ್, 15 ರಂದು ಬೆಳಗ್ಗೆ 10 ಗಂಟೆಗೆ ಮರೂರು, ತಿತಿಮತಿ ಶಾಲೆಯ ಮುಂಭಾಗದಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವರೆಗೆ ಮೆರವಣೆಗೆ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ…
ಮಡಿಕೇರಿ ನ.14 NEWS DESK : ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡೂರು- ಕಲ್ಲುಕಂಡಿ ರಸ್ತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ಸೋಮವಾರಪೇಟೆ ತಾಲ್ಲೂಕು ಹಾನಗಲ್ ಪಂಚಾಯಿತಿ ವ್ಯಾಪ್ತಿಯ ಯಡೂರು ಗ್ರಾಮದ ಕಲ್ಲುಕಂಡಿ – ದೊಡ್ಡದಿಣ್ಣೆ ಪ್ರದೇಶದ ನಡುವೆ ಸಂಪರ್ಕ ರಸ್ತೆ ಇಲ್ಲದೆ ಅನಾನುಕೂಲವಾಗುತ್ತಿರುವುದನ್ನು ಗಮನಿಸಿದ ಶಾಸಕ ಡಾ.ಮಂತರ್ ಗೌಡ ಈ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ರೈತರು ಹಾಗೂ ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸಿದ ಶಾಸಕರು ಕಲ್ಲುಕಂಡಿ – ಯಡೂರು ಗ್ರಾಮದ ದೊಡ್ಡದಿಣೆ ನಡುವೆ ಸಂಪರ್ಕ ರಸ್ತೆಯನ್ನು ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಕೆ.ಎಂ.ಲೋಕೇಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ.ಸತೀಶ್, ಹಾನಗಲ್ ವಲಯ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಪ್ರದೀಪ್, ಬೂತ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ, ಗ್ರಾಮ ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಮತ್ತು ಸಮಿತಿ…
ನಾಪೋಕ್ಲು ನ.14 NEWS DESK : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಮಡಿಕೇರಿ ತಾಲ್ಲೂಕು ಸಮೂಹ ಸಂಪನ್ಮೂಲ ವ್ಯಕ್ತಿ ಚಿತ್ರಾಪುರ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಎಮ್ಮೆಮಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳ ಸಂಯುಕ್ತ ಆಶಯದಲ್ಲಿ ಎಮ್ಮೆಮಾಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾಪೋಕ್ಲು ಕ್ಲಸ್ಟರಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಸೂಕ್ತ ಪ್ರತಿಭೆಗಳ ಪ್ರದರ್ಶನ ಮಾಡಲಿದ್ದು, ಶಿಕ್ಷಕರು ನಿಷ್ಪಕ್ಷಪಾತದಿಂದ ತೀರ್ಪು ನೀಡಬೇಕು. ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲಾ ಹಂತಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಹೊರತರಲು…
ಮಡಿಕೇರಿ ನ.13 NEWS DESK : ಕೊಡಗು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಗೋಣಿಕೊಪ್ಪ ಮತ್ತು ದ ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಚೆಪ್ಪುಡೀರ ಅರುಣ್ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಗೋಣಿಕೊಪ್ಪ ಹರಿಶ್ಚಂದ್ರಪುರದಲ್ಲಿರುವ ಗೋಣಿಕೊಪ್ಪ ಟ್ರೇಡರ್ಸ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅರುಣ್ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಶಾಸಕರು, ಈಗಾಗಲೇ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ತನ್ನ ಪ್ರಯತ್ನದಿಂದಾಗಿ ವಿರಾಜಪೇಟೆ ಕ್ಷೇತ್ರಾದ್ಯಂತ ಕ್ರೀಡಾ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ತರಲಾಗಿದೆ. ನೂತನ ಕ್ರೀಡಾ ವಸತಿ ನಿಲಯಗಳು ತರಬೇತಿ ಕೇಂದ್ರಗಳು ನೂತನ ಮೈದಾನಗಳು ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದು, ಅರುಣ್ ಮಾಚಯ್ಯನವರು ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಕ್ಷೇತ್ರದ ಹಾಗೂ ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ…






