ಮಡಿಕೇರಿ ಫೆ.28 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯ-ಸಂಸ್ಕೃತಿ, ಭಾಷೆಯ ರಕ್ಷಣೆ ಮುಖ್ಯವಾದ ಜವಾಬ್ದಾರಿಯಾಗಿದ್ದು, ಸತ್ಕಾರಣಕ್ಕಾಗಿ ಸರ್ಕಾರ ಅಕಾಡೆಮಿ ಗಳನ್ನು ರಚಿಸಿದೆ. ಇದಕ್ಕೆ ಪೂರಕವಾಗಿ ಕೊಡವ ಸಾಹಿತ್ಯ ಅಕಾಡೆಮಿಯು ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯರವರ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಯಶಸ್ಸಾಗಿ ನಡೆಸುತ್ತಿದ್ದು, ಸರ್ವ ಸದಸ್ಯರ ಸಹಕಾರ ಎದ್ದು ಕಾಣುತ್ತಿದೆ. ಎಲ್ಲಾರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಯಶಸ್ಸು ಖಂಡಿತಾ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಕುಟ್ಟ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ, “2026ನೆ ಕಾಲತ್‌ರ ಗೌರವ ಪ್ರಶಸ್ತಿ ಮತ್ತು ಕೊಡವ ಸಾಹಿತ್ಯ-ಸಂಸ್ಕೃತಿರ ಅಂದೋಳ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರವು ಸಾಹಿತ್ಯ, ಸಂಸ್ಕೃತಿ, ಭಾಷೆಯ ರಕ್ಷಣೆ ಹಾಗೂ ಬೆಳವಣಿಗೆಯ ಉದ್ದೇಶದಿಂದ ಅಕಾಡೆಮಿಯನ್ನು ಸ್ಥಾಪಿಸಿದ್ದು, ಅದರಂತೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿದೆ. ಕೊಡವ…
ಲೇಖಕ: admin
ಸುಂಟಿಕೊಪ್ಪ ಫೆ.28 NEWS DESK : ಕಂಬಿಬಾಣೆಯ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಾಲಯದ ಸಭಾಭವನ ನಿರ್ಮಾಣಕ್ಕೆ ಚಾಲನೆ ದೊರೆಯಿತು. ದೇವಾಲಯದ ಆವರಣದಲ್ಲಿ ಅಂದಾಜು 10 ಲಕ್ಷ ವೆಚ್ಚದ ಸಭಾಭವನ ನಿರ್ಮಾಣಕ್ಕೆ ಕಾಫಿ ಬೆಳೆಗಾರರು ಹಾಗೂ ದಾನಿಗಳಾದ ಟಿ.ಕೆ.ಸಜೀವ ಅವರು ಭೂಮಿ ಪೂಜೆ ನೇರವೇರಿಸಿದರು. ದೇವಾಲಯದ ಆರ್ಚಕ ಪ್ರಭಾಕರ್‍ಭಟ್ ಪೂಜೆಯನ್ನು ನೇರವೇರಿಸಿದರು. ಈ ಸಂದರ್ಭ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಡಾ.ಶಶಿಕಾಂತ ರೈ, ಕಾರ್ಯದರ್ಶಿ ಗಣೇಶ್, ಖಜಾಂಚಿ ಅಜಿತ್, ಸಾಬು ಪಳಂಗಪ್ಪ, ಜಯಂತ್, ಗಂಗಾಧರ್, ರವಿಕುಮಾರ್, ಮಾತೃಮಂಡಳಿ ಸದಸ್ಯರಾದ ಪೂರ್ಣಿಮಾ, ಮೀನಾ ಹರೀಶ್, ರಮಣಿ, ಸುಧಾ ಹಾಗೂ ಭಕ್ತಾಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗೋಣಿಕೊಪ್ಪ ಫೆ.28 NEWS DESK : ಮನುಷ್ಯನ ಅಂತಕರಣ ಭಾಷೆಯ ಒಳ ಮಿಡಿತಗಳು ತಿಳಿದಾಗ ವಿರಳವಾದ ಮತ್ತು ಸರಳವಾದ ಕಾವ್ಯ ಸೃಷ್ಟಿಯಾಗುವುದು ಎಂದು ಕವಿ ಮತ್ತು ಪತ್ರಕರ್ತ ಜಗದೀಶ್ ಜೋಡುಬಿಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ನಡೆದ ಜಿಲ್ಲಾ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಧುನಿಕ ಭಾವನೆಗಳನ್ನು ಪೂರಣಗಳ ಅನುಭವದಲ್ಲಿ ಕರಗಿಸಿ ಅಭಿವ್ಯಕ್ತಿ ಪಡಿಸಿಕೊಂಡಾಗ ಸ್ಥಿರವಾದ ನೆಲೆಯಲ್ಲಿ ಕಾವ್ಯ ನಿಲ್ಲುತ್ತದೆ. ಕ್ಷಿತಿಜದ ದಾಚೆಗೂ ಒಂದು ಕಣ್ಣೋಟ ನೆಟ್ಟಾಗ ಕವಿತೆಗಳು ಪ್ರಬುದ್ಧತೆಯಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಕಾವ್ಯಕಟ್ಟುವುದು ಒಂದು ಕಸುಬುಗಾರಿಕೆ. ಬಿಡಿಯಾದ ಮಲ್ಲಿಗೆಯ ಮೊಗ್ಗನು ಮಾಲೆಯಾಗಿಸುವ ಕುಸುರಿ ಪದಗಳು ಎದೆಯೊಳಗಿನ ಲಾಲಿತ್ಯದ ಗಿಲಿಕಿ ಯಾಗಬೇಕು. ಕವಿತೆಕಟ್ಟುವುದುಧ್ಯಾನಸ್ಥ ಸ್ಥಿತಿಯ ಅವಲಂಬನೆ. ಆಧ್ಯಾತ್ಮದತಪಸ್ಸು, ಮತ್ತು ಹೊನಪು ಎಂದರು. ಕವಿತೆಯನ್ನು ಕಟ್ಟುವುದಲ್ಲ ಅದನ್ನು ಕೆತ್ತಬೇಕು.…
ಮಡಿಕೇರಿ ಫೆ.28 NEWS DESK : ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾಪೋಕ್ಲು ಕಾರೆಕಾಡು ನಿವಾಸಿ ಪಿ.ಹೆಚ್.ಸುಹೈಲ್(24), ಬೇತು ಗ್ರಾಮದ ನಿವಾಸಿ ಕೆ.ಇ.ಸಿದ್ದಿಕ್(20), ಇಂದಿರಾನಗರದ ನಿವಾಸಿ ನಾಫಿ(19) ಹಾಗೂ ರಾಶೀದ್ ಪಿ.ಎ.(30) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ ಕುರಿತು ಕರವಂಡ ಲವ ನಾಣಯ್ಯ ಎಂಬುವವರು ನೀಡಿದ ದೂರನ್ನು ಆಧರಿಸಿ ಆರೋಪಿಗಳನ್ನು ಬಂಧಿಸಿ ವಿರಾಜಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಲ್ಲಮಾವಟಿ ಸಹಿತ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ಆಯೋಜನೆಗೊಂಡಿದ್ದ ಕಾರಣ ನಾಪೋಕ್ಲು ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಕೂಡ ಸ್ಥಳದಲ್ಲಿ ಮೊಕಾಂ ಹೂಡಿದ್ದು, ಪರಿಸ್ಥಿಯನ್ನು ಅವಲೋಕಿಸುತ್ತಿದ್ದಾರೆ. ನಾಪೋಕ್ಲು ಸಹಿತ ಸೂಕ್ಷ್ಮ ಮತ್ತು ಆಯಕಟ್ಟಿನ ಪ್ರದೇಶದಲ್ಲಿ ಕೆಎಸ್‍ಆರ್‍ಪಿ, ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ ಮತ್ತು ಜಿಲ್ಲೆಯ ವಿವಿಧ ಠಾಣೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಿ ಅಹಿತಕರ ಘಟನೆಗಳು ನಡೆಯದಂತೆ…
ಮಡಿಕೇರಿ ಫೆ.28 NEWS DESK : ಸಂವಿಧಾನ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಾಜದ ಒಳಿತಿಗಾಗಿ ಮಾಧ್ಯಮಗಳು ಬಳಸಿಕೊಳ್ಳುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕರೆ ನೀಡಿದರು. ನಗರದ ಡಾ.ಅಂಬೆಡ್ಕರ್ ಭವನದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಆಯೋಜಿತ ಸಂವಿಧಾನ ಮತ್ತು ಪತ್ರಿಕೋದ್ಯಮದ ಕುರಿತ ವಿಚಾರ ಸಂಕಿರಣ, ಫ್ಯಾಕ್ಟ್ ಚೆಕ್ ಮತ್ತು ನ್ಯೂಸ್ ರೂಂನಲ್ಲಿ ಎಐ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಕುರಿತು ತರಬೇತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ರಾಜಕಾರಣಿಯೂ ತಪ್ಪುಗಳನ್ನು ಮಾಡಿಯೇ ಮಾಡುತ್ತಾನೆ. ಇಂತಹ ಸಂದರ್ಭಗಳಲ್ಲಿ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿ, ಅವರಿಗೆ ತಿಳಿಹೇಳುವ ಕೆಲಸವನ್ನು ಮಾಡಬೇಕು. ಈ ಹಂತದಲ್ಲಿ ವ್ಯಕ್ತಿಯ ಗೌರವಕ್ಕೆ ಕುಂದುಂಟಾಗುವಂತೆ ಮಾಡಬಾರದೆಂದು ಸಲಹೆಯನ್ನಿತ್ತ ಅವರು, ಮಾಧ್ಯಮ ಕ್ಷೇತ್ರವನ್ನು ಒಳಗೊಂಡಂತೆ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳು ಒಟ್ಟಾಗಿ ಮುನ್ನಡೆದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗಬಲ್ಲುದೆಂದು ದೃಢವಾಗಿ ನುಡಿದರು. ರಾಜಕಾರಣಿಗಳ ನಡೆಗಳನ್ನು ಟೀಕಿಸುವ ಹಂತದಲ್ಲಿ…
ಮಡಿಕೇರಿ ಫೆ.28 NEWS DESK : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೊಡಗು ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಂಯುಕ್ತಾಶ್ರಯದಲ್ಲಿ “ಎಂಎಸ್‍ಎಂಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು” ಆರ್‍ಎಎಂಪಿ ಕಾರ್ಯಕ್ರಮದಡಿ ಝಡ್ ಇ.ಡಿ ಮತ್ತು ಲೀನ್ ಯೋಜನೆ ಕುರಿತಂತೆ ಒಂದು ದಿನದ ಅರಿವು ಕಾರ್ಯಕ್ರಮವನ್ನು ಮಾ.4ರಂದು ಕುಶಾಲನಗರದ ಹೊಟೇಲ್ ಕನ್ನಿಕಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾಸಿಯಾ ಉಪಾಧ್ಯಕ್ಷ ನಿಂಗಣ್ಣ ಎಸ್.ಬಿರಾದರ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಸಂಜೆ 5 ರವರೆಗೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸೋಮಶೇಖರ್ ಎಸ್.ಜೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಸಿಯಾ ಅಧ್ಯಕ್ಷ ಗಣೇಶ್ ರಾವ್ ಬಿ.ಆರ್, ಗೌರವಾನ್ವಿತ ಅತಿಥಿಗಳಾಗಿ ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಕೊಡಗು ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಸುದೀಪ್ ಕುಮಾರ್ ಬಿ.ಕೆ, ಎಸ್.ಎಲ್.ಎನ್ ಎಕ್ಸ್ ಪೋರ್ಟ್ ನ ಕೊಡಗು ಘಟಕದ ವ್ಯವಸ್ಥಾಪಕ ನಿರ್ದೇಶಕ ಎನ್.ವಿಶ್ವನಾಥನ್, ಕುಶಾಲನಗರ ಕೈಗಾರಿಕಾ…
ಮಡಿಕೇರಿ ಫೆ.28 NEWS DESK : ಗಂಭೀರ ಆರೋಪ ಎದುರಿಸುತ್ತಿರುವ ಜೆಫ್ರಿ ಎಪ್ಸ್ಟೀನ್ ನೊಂದಿಗೆ ಸಂಪರ್ಕ ಹೊಂದಿರುವ ಟೀಕೆಗೆ ಗುರಿಯಾಗಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವ ಹಾಗೂ ಬಿಜೆಪಿ ಮುಖಂಡ ಹರ್ ದೀಪ್ ಸಿಂಗ್ ಪುರಿ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಶುಕ್ರವಾರ ಸಂಜೆ ಮಡಿಕೇರಿ ನಗರದ ಇಂದಿರಾಗಾಂಧಿ ವೃತ್ತದಿಂದ ಮೊಂಬತ್ತಿ ಹಿಡಿದು ಹಳೆ ಖಾಸಗಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಹರ್ ದೀಪ್ ಸಿಂಗ್ ಪುರಿ, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜಿ.ಆರ್.ಪುಷ್ಪಲತಾ ಮಾತನಾಡಿ ಬಾಲಕಿಯರನ್ನು ಅಪಹರಿಸಿ ಪ್ರಭಾವಿಗಳನ್ನು ಅಪರಾಧ ಕೃತ್ಯದಲ್ಲಿ ಭಾಗಿಯಾಗುವಂತೆ ಮಾಡಿದ ಆರೋಪ ಎದುರಿಸುತ್ತಿರುವ ಜೆಫ್ರಿ ಎಪ್ಸ್ಟೀನ್ ನೊಂದಿಗೆ ಕೇಂದ್ರ ಸಚಿವ ಹರ್ ದೀಪ್ ಸಿಂಗ್ ಪುರಿ ಸಂಪರ್ಕ ಹೊಂದಿರುವುದು ಬಹಿರಂಗವಾಗಿದ್ದರೂ ಪ್ರಧಾನಿ…
ಮಡಿಕೇರಿ ಫೆ.28 NEWS DESK : ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದಿರುವ ಹಲ್ಲೆ ಪ್ರಕರಣ ಖಂಡನೀಯವಾಗಿದ್ದು, ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಎಂ.ಪಿ.ಸುನಿಲ್ ಸುಬ್ರಮಣಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಗಲಿನ ವೇಳೆಯಲ್ಲೇ ರಾಜಾರೋಷವಾಗಿ ಹಲ್ಲೆ ಮಾಡಲಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಈ ರೀತಿಯ ಘಟನೆಗಳು ನಡೆಯುತ್ತಿರುತ್ತದೆ ಎಂದು ಆರೋಪಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆ ಎಲ್ಲರೂ ಸೇರಿ ಪೀತಿ ಮತ್ತು ಶಾಂತಿಯಿಂದ ಹಿಂದೂ ಸಂಗಮ ಕಾರ್ಯಕ್ರಮವನ್ನು ರಾಜ್ಯವ್ಯಾಪಿ ಮಾಡಲಾಗುತ್ತಿದೆ. ಬಲ್ಲಮಾವಟಿಯಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದ ಹಿನ್ನೆಲೆ ಗೌತಮ್ ಪಿಕ್ ಅಪ್ ವಾಹನದಲ್ಲಿ ತೆರಳುತ್ತಿದ್ದರು, ಧ್ವನಿವರ್ಧಕವನ್ನು ಕೂಡ ಬಳಸಿರಲಿಲ್ಲ. ಈ ಹಂತದಲ್ಲಿ ದಾಳಿ ಮಾಡಲಾಗಿದ್ದು, ಹಲ್ಲೆ ಮಾಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.…
ಮಡಿಕೇರಿ ಫೆ.28 NEWS DESK : ಬಡವರ ಮತಗಳಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಇಲ್ಲಿಯವರೆಗೆ ಬಡವರಿಗೆ ನಿವೇಶನ ಮತ್ತು ವಸತಿ ಸೌಲಭ್ಯವನ್ನು ನೀಡದೆ ವಂಚಿಸಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ಹಾಗೂ ಎಐಟಿಯುಸಿಯ ಕೊಡಗು ಜಿಲ್ಲಾ ಘಟಕಗಳು ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿವೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು 2007 ರಿಂದ ನಮ್ಮ ಸಂಘಟನೆ ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ನಿವೇಶನ ಮತ್ತು ವಸತಿ ರಹಿತ ಬಡವರಿಗೆ, ದಲಿತರಿಗೆ, ಕಾರ್ಮಿಕರಿಗೆ, ಸರ್ವ ದುಡಿಯುವ ವರ್ಗಕ್ಕೆ ನಿವೇಶನ ಹಾಗೂ ವಸತಿಯನ್ನು ನೀಡಬೇಕೆಂದು ಹೋರಾಟ ನಡೆಸುತ್ತಲೇ ಬಂದಿದೆ. ಆದರೆ ಇಲ್ಲಿಯವರೆಗೆ ಅಧಿಕಾರಕ್ಕೆ ಬಂದ ಯಾವುದೇ ಸರಕಾರಗಳು ಬಡವರ ಈ ಬೇಡಿಕೆಗಳನ್ನು ಈಡೇರಿಸಿಲ್ಲ. ರಾಜಕೀಯ ಪಕ್ಷಗಳಿಗೆ ಬಡವರ ಮತಗಳು ಬೇಕು, ಆದರೆ ಬಡವರಿಗೆ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಬೇಕು ಎನ್ನುವ ಜವಾಬ್ದಾರಿ ಇಲ್ಲದಾಗಿದೆ. ಪ್ರಸ್ತುತ ಇರುವ ಕಾಂಗ್ರೆಸ್ ಸರಕಾರ ಕೂಡ ಶೋಷಿತರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ…
ಮಡಿಕೇರಿ NEWS DESK ಫೆ.28 : ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೌತಮ್ ಅವರನ್ನು ಭೇಟಿಯಾದ ಅವರು ಸಾಂತ್ವನ ಹೇಳಿ ಧೈರ್ಯ ತುಂಬಿದರು. ನಂತರ ಮಾತನಾಡಿದ ಎನ್.ಯು.ನಾಚಪ್ಪ ನಾಪೋಕ್ಲು ಘಟನೆ ಅತ್ಯಂತ ದುರದೃಷ್ಟಕರ, ಮುಗ್ಧ ಕೊಡವ ಯುವಕನ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಕೃತ್ಯವಾಗಿದೆ. ತನ್ನದೇ ತಾಯ್ನಾಡಿನಲ್ಲಿ ಸೂಕ್ಷ್ಮಾತಿ ಸೂಕ್ಷ್ಮ ಅಲ್ಪಸಂಖ್ಯಾತ ಆದಿಮಸಂಜಾತ ಕೊಡವ ಯುವಕನ ಮೇಲೆ ನಡೆದ ಈ ದೌರ್ಜನ್ಯ ಆತಂಕಕಾರಿ ಬೆಳವಣಿಗೆಯಾಗಿದೆ. ಇದು ತಮ್ಮದೇ ನೆಲದಲ್ಲಿ ಆದಿಮಸಂಜಾತ ಕೊಡವರಿಗೆ ಇರುವ ಸಾಮಾಜಿಕ ಅಭದ್ರತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಎನ್.ಯು.ನಾಚಪ್ಪ, ಈ ಹಿಂದೆ ಕೂಡ ಆರೋಪಿಗಳು ಅಮಾಯಕರ ಮೇಲೆ ಹಲ್ಲೆ ನಡೆಸಿರುವ ಕುರಿತು ಮಾಹಿತಿ ಇದ್ದು, ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಪೊಲೀಸ್ ಇಲಾಖೆ…






