ಗೋಣಿಕೊಪ್ಪ ಫೆ.27 NEWS DESK : ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. 2025-26ನೇ ಸಾಲಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡುವ ಶಾಲೆ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯವೈಖರಿಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಮಕ್ಕಳ ಭವಿಷ್ಯವನ್ನು ಸೃಷ್ಟಿಸುತ್ತಿರುವ ಶಾಲೆ 1916ರಲ್ಲಿ ಪ್ರಾರಂಭವಾದರೂ 1927ರಲ್ಲಿ ಸರಕಾರದ ಮಾನ್ಯತೆಯೊಂದಿಗೆ ಶಾಲೆ ನಡೆದು ಬಂದು. ಕಳೆದ ಅವಧಿಯಲ್ಲಿ ಶತಮಾನೋತ್ಸವವನ್ನು ಆಚರಿಸಿಕೊಂಡಿದೆ. ಶಾಲೆ ಪ್ರಾರಂಭದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲೆ ಹೊಂದಿತ್ತು. ಪ್ರಸ್ತುತ ಒಂದರಿಂದ ಎಂಟನೇತರಗತಿಯನ್ನು ಉನ್ನತೀಕರಿಸಿದ ಶಾಲೆಯಾಗಿ 324 ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಮುಖ್ಯ ಶಿಕ್ಷಕ ಸೇರಿದಂತೆ ಸುಮಾರು 15 ಸಹ ಶಿಕ್ಷಕರು ಇದ್ದಾರೆ. ಶಾಲೆಯಲ್ಲಿ ಸುಸಜ್ಜಿತವಾದ 28 ಕೊಠಡಿಗಳನ್ನು ಹೊಂದಿದೆ. 2.40 ಎಕರೆ ವಿಸ್ತೀರ್ಣದಲ್ಲಿ ಮಕ್ಕಳ ಕಲಿಗೆ ಅನುಕೂಲಕರವಾದ ವಾತಾವರಣವನ್ನುಕಟ್ಟಿಕೊಡಲಾಗಿದೆ. 2015 ರಿಂದಎಲ್‍ಕೆಜಿ, ಯುಕೆಜಿ ಪ್ರಾರಂಭಿಸಲಾಗಿದ್ದು, ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಯುಕೋಕ್ಲಬ್, ಚಿತ್ರಕಲಾ ಸಂಘ, ವಿಜ್ಞಾನ…
ಲೇಖಕ: admin
ಮಡಿಕೇರಿ ಫೆ.27 NEWS DESK : ಶ್ರೀ ಯೋಗಿ ನಾರೇಯಣಿ ಬಲಿಜ ಸಂಘ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಾ.3ರಂದು ನಗರದಲ್ಲಿ ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಯೋಗಿ ನಾರೇಯಣಿ ಬಲಿಜ ಸಂಘದ ಜಿಲ್ಲಾಧ್ಯಕ್ಷ ಟಿ.ಜಿ.ಗಣೇಶ್ ನಾಯ್ಡು ಅವರು, ಅಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಶ್ರೀ ಯೋಗಿ ನಾರೇಯಣಿ ಯತೀಂದ್ರರ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ವ್ಯಾಪ್ತಿಯ ಸರ್ವ ಬಲಿಜ ಜನಾಂಗ ಬಾಂಧವರು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಜಿಲ್ಲೆಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದಾರೆ. ಬಲಿಜ ಸಂಘದ ಪ್ರಮುಖರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಆರ್.ಸುಬ್ರಮಣಿ, ಸಹ ಕಾರ್ಯದರ್ಶಿ ಯಶ್ವಂತ್ ಕುಮಾರ್ ಹಾಗೂ…
ನವದೆಹಲಿ: ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ನರ್ಸಿಂಗ್ ಪದವೀಧರರಿಗೆ ಏಮ್ಸ್ (AIIMS) ಸುವರ್ಣಾವಕಾಶ ನೀಡಿದೆ. ನರ್ಸಿಂಗ್ ಅಧಿಕಾರಿ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ (NORCET-10) ಅಡಿಯಲ್ಲಿ ಒಟ್ಟು 2,551 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ನೇಮಕಾತಿಯ ಪ್ರಮುಖ ವಿವರಗಳು: ಹುದ್ದೆಯ ಹೆಸರು: ನರ್ಸಿಂಗ್ ಅಧಿಕಾರಿ (Nursing Officer) ಒಟ್ಟು ಹುದ್ದೆಗಳು: 2,551 ಸೇವೆ ಸಲ್ಲಿಸುವ ಸ್ಥಳಗಳು: ದೇಶಾದ್ಯಂತ ಇರುವ ವಿವಿಧ ಏಮ್ಸ್ (AIIMS) ಸಂಸ್ಥೆಗಳು, ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆ (SJH) ಮತ್ತು ಇಎಸ್‌ಐಸಿ (ESIC) ಆಸ್ಪತ್ರೆಗಳು. ವಿದ್ಯಾರ್ಹತೆ ಮತ್ತು ವಯೋಮಿತಿ: ಶಿಕ್ಷಣ: ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಎಸ್ಸಿ ನರ್ಸಿಂಗ್ ಅಥವಾ ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಪದವಿ ಹೊಂದಿರಬೇಕು. ಅಥವಾ ಜಿಎನ್‌ಎಂ (GNM) ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷದ ಒಳಗಿರಬೇಕು (ಸರ್ಕಾರಿ ನಿಯಮಗಳಂತೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ). ಪರೀಕ್ಷಾ ವಿಧಾನ ಮತ್ತು ದಿನಾಂಕಗಳು: ಆಯ್ಕೆ ಪ್ರಕ್ರಿಯೆಯು…
ಮಡಿಕೇರಿ, NEWS DESK ಫೆ.27 : ಮಡಿಕೇರಿ ನಗರದ ಜ್ಯೋತಿ ನಗರ ಬಡಾವಣೆಯ ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ತಂತ್ರಿ ಬ್ರಹ್ಮಶ್ರಿ ಶ್ರೀಕಾಂತ್ ಭಟ್ಟತಿರಿ ಚಾಲೋಡ್ ಅವರ ನೇತೃತ್ವದಲ್ಲಿ ನಡೆದ ಬ್ರಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ನೂರಾರು ಭಕ್ತರು ಸಾಕ್ಷಿಯಾದರು. ನಗರದ ಗಾಂಧಿ ಮೈದಾನದಿಂದ ದೇವಾಲಯದವರೆಗೆ ದೀಪಾಲಂಕೃತ ಮಂಟಪದಲ್ಲಿ ಭವ್ಯ ಕಳಸ ಮೆರವಣಿಗೆ ಸಾಗಿತು. ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ, ಪ್ರಸಾದ ಶುದ್ಧಿ, ವಾಸ್ತುಬಲಿ, ಭಗವತಿ ಸೇವೆ, ಮಹಾಗಣಪತಿ ಹೋಮ, ಉಷಾ ಪೂಜೆ, ಅನುಜ್ಞಾಕಲಶಾಭಿಷೇಕ, ಪ್ರಾರ್ಥನೆ, ಪ್ರಾಸಾದ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ಬಿಂಭಪ್ರತಿಷ್ಠೆ, ಕಲಾಭಿಷೇಕ ಪೂಜೆ, ಮಹಾಪೂಜೆ ನೆರವೇರಿತು. ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು.
ಬೆಂಗಳೂರು, ಫೆಬ್ರವರಿ 27, 2026: ಸಿಲಿಕಾನ್ ಸಿಟಿಯ ಸಾಂಸ್ಕೃತಿಕ ಅಸ್ಮಿತೆಯಂತಿರುವ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಮತ್ತು ಮುಜರಾಯಿ ಇಲಾಖೆಯು ಈ ಬಾರಿಯ ಉತ್ಸವದ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಬಾರಿಯ ವಿಶೇಷತೆಗಳೇನು? 16ನೇ ಬಾರಿಗೆ ಕರಗ ಹೊರುವ ಜ್ಞಾನೇಂದ್ರ ಸ್ವಾಮಿ: ದೇವಾಲಯದ ಪೂಜಾರಿ ಎ. ಜ್ಞಾನೇಂದ್ರ ಸ್ವಾಮಿ ಅವರು ಈ ಬಾರಿಯೂ ಕರಗ ಹೊರಲು ಆಯ್ಕೆಯಾಗಿದ್ದಾರೆ. ಇದು ಅವರು ಸತತವಾಗಿ ಹೊರುತ್ತಿರುವ 16ನೇ ಕರಗ ಎಂಬುದು ವಿಶೇಷ. 11 ದಿನಗಳ ಉತ್ಸವ: ಈ ಬಾರಿಯ ಕರಗ ಮಹೋತ್ಸವವು ಒಟ್ಟು 11 ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಪ್ರಮುಖ ದಿನಾಂಕಗಳು ಮತ್ತು ಕಾರ್ಯಕ್ರಮಗಳು: ಮಾರ್ಚ್ 24: ಧ್ವಜಾರೋಹಣದ ಮೂಲಕ ಅಧಿಕೃತವಾಗಿ ಕರಗ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಮಾರ್ಚ್ 30: ಮುಂಜಾನೆ 4:00 ಗಂಟೆಗೆ ಪವಿತ್ರ ‘ಹಸಿಕರಗ’ ಆಚರಣೆ ನಡೆಯಲಿದೆ. ಆದಿಶಕ್ತಿ ದ್ರೌಪದಿ ದೇವಿಯು ಈ…
ಮಡಿಕೇರಿ, NEWS DESK ಫೆ.27 : ಸ್ಕೂಟರ್ ಡಿಕ್ಕಿಯಾದ ಪರಿಣಾಮ ರಸ್ತೆಗೆ ಬಿದ್ದ ವ್ಯಕ್ತಿಯ ಮೇಲೆ ಕಾರು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಮ್ಮತ್ತಿ ಸಮೀಪದ ಆನಂದಪುರದಲ್ಲಿ ಗುರುವಾರ ರಾತ್ರಿ ನಡೆದಿದೆ. ಆನಂದಪುರದ ನಿವಾಸಿ ಏನೋಸ್ ಮನೋಹರ್ ಮನು (43) ಎಂಬುವವರೇ ಮೃತ ದುರ್ದೈವಿಯಾಗಿದ್ದು, ಸ್ಕೂಟರ್ ಚಾಲಕ ನೆಲ್ಯಹುದಿಕೇರಿ ಗ್ರಾಮದ ಹಂಸ ತೀವ್ರವಾಗಿ ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಏನೋಸ್ ಮನೋಹರ್ ಮನು ಅವರಿಗೆ ಸ್ಕೂಟರ್ ಡಿಕ್ಕಿಯಾಗಿದೆ. ಈ ಸಂದರ್ಭ ರಸ್ತೆಗೆ ಬಿದ್ದ ಅವರ ಮೇಲೆ ಕಾರು ಹರಿದಿದೆ ಎಂದು ಹೇಳಲಾಗಿದೆ. ಕಾರಿನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ರಾಜು, ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿರಾಜಪೇಟೆ, NEWS DESK ಫೆ.27: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಮಾರ್ಚ್ 4 ರಿಂದ ಮಾರ್ಚ್ 10 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗಲಿದೆ. ಮಾರ್ಚ್ 4 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು ಉದ್ಘಾಟನೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ರವರು ನೆರವೇರಿಸಲಿದ್ದಾರೆ.ಬಿಟ್ಟಂಗಾಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮೂಕಚಂಡ ಪ್ರಸನ್ನ ಸುಬ್ಬಯ್ಯ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ಸಜೇಶ್ ರವರು ಹಾಗೂ ಶಾಲಾ ಸ್ಥಳದಾನಿಗಳಾದ ಕುಪ್ಪಂಡ ಗೋಪಾಲ್ ಬೋಪಯ್ಯ ರವರು ಉಪಸ್ಥಿತರಿರುವರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ. ಫಾ. ಜೇಮ್ಸ್ ಡೊಮಿನಿಕ್ ಸಾನಿಧ್ಯವನ್ನು ವಹಿಸಲಿದ್ದಾರೆ. ಸೆಂಟ್ ಆನ್ಸ್ ಪದವಿ ಕಾಲೇಜಿನ…
ನವದೆಹಲಿ/ಹೈದರಾಬಾದ್: ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಟರಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ, ವಿವಾಹವಾದ ಮರುದಿನವೇ ದೆಹಲಿಗೆ ತೆರಳಿ ದೇಶದ ಉನ್ನತ ಗಣ್ಯರನ್ನು ಭೇಟಿ ಮಾಡಿದ್ದಾರೆ. ಮಾರ್ಚ್ 4 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ತಮ್ಮ ವಿವಾಹದ ಆರತಕ್ಷತೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನವಜೋಡಿ ಖುದ್ದಾಗಿ ಆಹ್ವಾನ ನೀಡಿದ್ದಾರೆ. ಪ್ರಧಾನಿ ಮೋದಿಗೆ ಮದುವೆಯ ಆಮಂತ್ರಣ ಫೆಬ್ರವರಿ 26 ರಂದು ಉದಯಪುರದ ಐಷಾರಾಮಿ ಐಟಿಸಿ ರೆಸಾರ್ಟ್‌ನಲ್ಲಿ ವಿವಾಹವಾದ ಈ ಜೋಡಿ, ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪತ್ರದ ಮೂಲಕ ಶುಭಕೋರಿದ್ದ ಮೋದಿ: ಅಸಲಿಗೆ, ವಿಜಯ್ ಮತ್ತು ರಶ್ಮಿಕಾ ಮದುವೆಗೆ ಮುಂಚೆಯೇ ಪ್ರಧಾನಿ ಮೋದಿ ಅವರು ಪತ್ರದ ಮೂಲಕ ಶುಭಾಶಯ ತಿಳಿಸಿದ್ದರು. ವಿಜಯ್ ಅವರ ತಂದೆ ಕಳುಹಿಸಿದ್ದ ಆಹ್ವಾನ ಪತ್ರಿಕೆಗೆ ಪ್ರತಿಕ್ರಿಯೆಯಾಗಿ ಮೋದಿ ಅವರು ಪತ್ರ ಬರೆದು ವಧು-ವರರಿಗೆ ಆಶೀರ್ವದಿಸಿದ್ದರು. ಆರತಕ್ಷತೆಗೆ ಆಹ್ವಾನ: ಇಂದು…
ಚೆನ್ನೈ, ಫೆಬ್ರವರಿ 27, 2026: ಕಾಲಿವುಡ್‌ನ ‘ದಳಪತಿ’ ಎಂದೇ ಖ್ಯಾತರಾಗಿರುವ ನಟ ವಿಜಯ್ ಅವರ ವೈವಾಹಿಕ ಜೀವನದಲ್ಲಿ ಭಾರಿ ಬಿರುಕು ಮೂಡಿದೆ. ವಿಜಯ್ ಅವರ ಪತ್ನಿ ಸಂಗೀತ ಅವರು ಚೆಂಗಲ್‌ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಇಂದು (ಫೆಬ್ರವರಿ 27) ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮೂಲಕ ತಮಿಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಅಂತ್ಯ? ವಿಜಯ್ ಮತ್ತು ಸಂಗೀತ ಅವರು 27 ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಷ್ಟು ವರ್ಷಗಳ ಕಾಲ ಸುಖಮಯವಾಗಿದ್ದ ಇವರ ಸಂಸಾರದಲ್ಲಿ ಈಗ ಬಿರುಕು ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಭಾರಿ ಶಾಕ್ ನೀಡಿದೆ. ನಟಿಯ ಜೊತೆ ಅನೈತಿಕ ಸಂಬಂಧದ ಗಂಭೀರ ಆರೋಪ ವಿಜಯ್ ಅವರ ಪತ್ನಿ ಸಂಗೀತ ಅವರು ವಿಚ್ಛೇದನಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಪತಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ: ಅನೈತಿಕ ಸಂಬಂಧ: ನಟ ವಿಜಯ್ ಅವರು ಖ್ಯಾತ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಸಂಗೀತ ಆರೋಪಿಸಿದ್ದಾರೆ. ಹೊರಬರಲಿದೆಯೇ ನಟಿಯ ಹೆಸರು? ವಿಜಯ್ ಅವರ…
ಮಡಿಕೇರಿ, NEWS DESK ಫೆ.27:-33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್5 ಹೊದ್ದೂರು ಫೀಡರ್‍ನಲ್ಲಿ ಮಾರ್ಚ್, 01 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.






