ಮಡಿಕೇರಿ ನ.12 NEWS DESK : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ಮಿಸಿ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿರುವ ‘ಉಮ್ಮತ್ತಾಟ್’ ಕೊಡವ ಸಾಕ್ಷ್ಯಚಿತ್ರ ಇಂಡಿಯನ್ ಪನೋರಮಾಗೆ ಆಯ್ಕೆಯಾಗಿದೆ. ಗೋವಾದಲ್ಲಿ ನಡೆಯುವ 56ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನ.27ರಂದು ‘ಉಮ್ಮತ್ತಾಟ್’ ಪ್ರದರ್ಶನಗೊಳ್ಳಲಿದೆ. ‘ಉಮ್ಮತ್ತಾಟ್’ ಕೊಡವ ಜಾನಪದ ನೃತ್ಯ ಪ್ರಕಾರವಾಗಿದ್ದು, ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕಲೆಯ ಮೇಲೆ ಸಾಕ್ಷ್ಯಚಿತ್ರ ಬೆಳಕು ಚೆಲ್ಲಿದೆ. ಒಟ್ಟು 13 ನೃತ್ಯ ಪ್ರಕಾರಗಳನ್ನು ಚಿತ್ರೀಕರಿಸಲಾಗಿದ್ದು, 153 ಕಲಾವಿದರು ನೃತ್ಯ ಮಾಡಿದ್ದಾರೆ. ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ದೇಶನದ ಸಾಕ್ಷ್ಯಚಿತ್ರಕ್ಕೆ ‘ಉಮ್ಮತ್ತಾಟ್’ ತರಬೇತುದಾರರಾದ ಕಲಾವಿದೆ ಬೊಳ್ಳಜಿರ ಯಮುನಾ ಅಯ್ಯಪ್ಪ ಅವರ ಸಹ ನಿರ್ದೇಶನವಿದ್ದು, ನಿರೂಪಣೆಯನ್ನು ಕೂಡ ಮಾಡಿದ್ದಾರೆ. ವಸ್ತ್ರ ವಿನ್ಯಾಸ ಮತ್ತು ನೃತ್ಯ ಪ್ರದರ್ಶನಕ್ಕೆ ಸಹಕಾರ ನೀಡಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತೆ, ನೃತ್ಯ ಮತ್ತು ನೃತ್ಯ ಸಂಗೀತ ಭರತನಾಟ್ಯದ ಕುರಿತು ಮಂಡಿಸಿದ ಪ್ರಬಂಧಕ್ಕೆ ಕೇಂದ್ರ ಸರಕಾರದ ಜೂನಿಯರ್ ಫೆಲೋಶಿಪ್ ಪಡೆದಿರುವ ಅಂತರರಾಷ್ಟ್ರೀಯ ಮಟ್ಟದ…
ಲೇಖಕ: admin
ವಿರಾಜಪೇಟೆ ನ.12 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಯಮುಡಿ ಕಾರ್ಯಕ್ಷೇತ್ರ, ಪೊನ್ನಪ್ಪಸಂತೆ ಸರ್ಕಾರಿ ಅನುದಾನಿತ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಅಧ್ಯಕ್ಷ ಸೀನ ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯರಾದ ಡಾ. ಗಾನಶ್ರೀ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ಹದಿ ಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಅಲ್ಲದೆ ತಮ್ಮ ಓದಿನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳಾದ ಗುಟ್ಕಾ ಸೇವನೆ ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಮಾತ್ರ ಹಾನಿಕಾರವಲ್ಲದೆ ನಮ್ಮ ಪರಿವಾರಕ್ಕೂ ಹಾನಿಯನ್ನು ಉಂಟುಮಾಡುತ್ತದೆ. ಈ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆಗಳು ಬರಬಹುದು. ಒಂದು ವೇಳೆ ಯಾರಾದರೂ ವ್ಯಸನಕ್ಕೆ ಒಳಗಾದಲ್ಲಿ ಅಥವಾ ಈ ರೀತಿಯ ಅಮಲು ಪದಾರ್ಥಗಳ ಸೇವನೆಯನ್ನು ಕಂಡಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳು ಏಕಾಗ್ರತೆ ಕೊರತೆ ಹಾಗೂ ಕಲಿಕೆಯ ಮೇಲಿನ…
ಮಡಿಕೇರಿ ನ.12 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನ.14 ರಿಂದ 20 ರವರೆಗೆ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿರುವ ಪೊನ್ನಂಪೇಟೆಯ ಚಿರಿಯಪಂಡ ಕೆ. ಉತ್ತಪ್ಪ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ, ಸೋಮವಾರಪೇಟೆ ತಾಲೂಕಿನ ಶುಂಠಿ ಗ್ರಾಮದ ಎಚ್.ಎಸ್. ಮುದ್ದಪ್ಪ, ಮಡಿಕೇರಿ ತಾಲೂಕು ಅರುವತ್ತೋಕ್ಲು ಗ್ರಾಮದ ತಳೂರು ಎ. ಕಿಶೋರ್ ಅವರಿಗೆ ‘ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಮತ್ತು ಶನಿವಾರಸಂತೆಯ ನಿವಾಸಿ ದೇವಾಂಬಿಕ ಮಹೇಶ್ ಅವರಿಗೆ ‘ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ‘ಉನ್ನತಿ ಭವನ’ದ ಸಭಾಂಗಣದಲ್ಲಿ ನ.20 ರಂದು ಏರ್ಪಡಿಸಲಾಗಿದೆ. :: ಚಿರಿಯಪಂಡ ಕೆ. ಉತ್ತಪ್ಪ – ಕೊಡಗು ಸಹಕಾರ ರತ್ನ :: ಜಿಲ್ಲೆಗೊಬ್ಬರಂತೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ…
ಕುಶಾಲನಗರ ನ.12 NEWS DESK : ಕ್ರೀಡೆ ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯವನ್ನು ರೂಪಿಸುತ್ತದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ಹಾಗೂ ಫಾತಿಮಾ ವಿದ್ಯಾ ಸಂಸ್ಥೆ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಎರಡು ದಿನ ಇಲ್ಲಿನ ಜಂಪ್ ಸ್ಮ್ಯಾಶ್ ಒಳಾಂಗಣದಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗ ಮಟ್ಟದ 14 ಮತ್ತು 17 ವಯೋಮಿತಿಯ ಬಾಲಕ, ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು. ಕ್ರೀಡಾ ಸಾಧನೆಗೆ ನಮ್ಮ ಸರ್ಕಾರದ ಉದ್ಯೋಗ ನೇಮಕಾತಿಯಲ್ಲಿ ಶೇ.2 ಅವಕಾಶ ನೀಡಲಾಗಿದೆ.ಈ ಅವಕಾಶವನ್ನು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯೆಸ್.ಪಲ್ಲೇದ್ ಮಾತನಾಡಿ,ಮೈಸೂರು ವಿಭಾಗದ ಎಲ್ಲಾ ಎಂಟು ಜಿಲ್ಲೆಗಳಿಗೆ ಊಟ,ಉಪಾಹಾರ ಮತ್ತು ವಸತಿ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಹಾಗೆ ಜಂಪ್ ಸ್ಮ್ಯಾಶ್ ಅಕಾಡೆಮಿಯ ವ್ಯವಸ್ಥಾಪಕರಾದ ವಕೀಲ ಶರತ್ ಉಚಿತವಾಗಿ ಅಂಕಣದ ವ್ಯವಸ್ಥೆ…
ಸುಂಟಿಕೊಪ್ಪ ನ.12 NEWS DESK : ಎಷ್ಟೇ ದೊಡ್ಡ ಪದವಿಗಳನ್ನು ಪಡೆದುಕೊಂಡರೇ ದೊಡ್ಡವರಾಗುವುದಿಲ್ಲ. ಜೀವನದಲ್ಲಿ ಸಂಸ್ಕಾರ ಹಾಗೂ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ನಡೆದುಕೊಳ್ಳುವವರೇ ನಿಜವಾದ ಪದವಿಧರರು ಎಂದು ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸತೀಶ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್‍ಬೈಲ್ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಂಘದ ಸದಸ್ಯರಿಗೆ ಮಂಜಿಕೆರೆ ಸಮುದಾಯ ಭವನದಲ್ಲಿ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಪೋಷಕರೆ ಶಿಕ್ಷಕರು. ಮಕ್ಕಳು 14 ವರ್ಷದವರೆಗೆ ಪೋಷಕರನ್ನು ಅನುಸರಿಸಿಕೊಂಡು ಮುನ್ನಡೆಯುತ್ತಾರೆ ಆ ಸಂದರ್ಭದಲ್ಲಿ ಪೋಷಕರು ಮನೆಗಳಲ್ಲಿ ಅನ್ಯೋನ್ಯತೆ, ಉತ್ತಮ ವಾತವರಣವನ್ನು ನಿರ್ಮಿಸಿಕೊಡಲ್ಲಿ ಮಾತ್ರ ಮಕ್ಕಳಿಂದ ಭವಿಷ್ಯವನ್ನು ಎದುರು ನೋಡಬಹುದಾಗಿದೆ. ಮನೆಯೇ ಮೊದಲ ಗುರುವಾಗಿದ್ದು ಶಿಕ್ಷಕರಲ್ಲಾವೆಂದು ಅವರು ಬಣ್ಣಿಸಿದರು. ಮಕ್ಕಳು ಪ್ರೌಢಶಾಲೆಯನ್ನು ಮುಗಿಸಿ ಪದವಿ ಕಾಲೇಜುಗಳಿಗೆ ಸೇರಿಸುವ ಮುನ್ನ ಪೋಷಕರು ಮಕ್ಕಳೊಂದಿಗೆ ಚರ್ಚಿಸಿ ಮಕ್ಕಳ ಆಸಕ್ತಿ ಮತ್ತು ಅಭಿರುಚಿಯ ಬಗ್ಗೆ ಆರಿತು ಅಂತಹ ಶಿಕ್ಷಣಗಳಿಗೆ ಪ್ರೋತ್ಸಾಹಿಸಬೇಕು ಇದಿರಂದ ಮಕ್ಕಳು ಸಂಪನ್ಮೂಲ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವೆಂದು…
ಮಡಿಕೇರಿ ನ.12 NEWS DESK : ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಈ ಕಚೇರಿಯು ಕೊಡಗು ಜಿಲ್ಲಾ ಪಂಚಾಯತ್ ಕಟ್ಟಡದಿಂದ ನಗರದ ಕಾನ್ವೆಂಟ್ ಜಂಕ್ಷನ್ ಸಮೀಪ, ಲೋಕೋಪಯೋಗಿ ಇಲಾಖೆಯ ಕಟ್ಟಡದ ಹತ್ತಿರ ನೂತನವಾಗಿ ನಿರ್ಮಾಣವಾಗಿರುವ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ ಇವರ ಕಚೇರಿಗೆ ಸ್ಥಳಾಂತರವಾಗಿದೆ. ಇನ್ನು ಮುಂದೆ ಪತ್ರ ವ್ಯವಹಾರವನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕಾನ್ವೆಂಟ್ ಜಂಕ್ಷನ್ ಸಮೀಪ, ಲೋಕೋಪಯೋಗಿ ಇಲಾಖೆ ಕಟ್ಟಡ ಹತ್ತಿರ ಕೊಡಗು ಜಿಲ್ಲೆ, ಮಡಿಕೇರಿ ವಿಳಾಸಕ್ಕೆ ತಲುಪಿಸಲು ಹಾಗು ಸಾರ್ವಜನಿಕರು/ ಪರಿಶಿಷ್ಟ ಪಂಗಡದವರು ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ಕೋರಿದ್ದಾರೆ.
ಮಡಿಕೇರಿ ನ.11 NEWS DESK : ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ನ.13 ರಂದು ಪೊನ್ನಂಪೇಟೆಯಿಂದ ಗೋಣಿಕೊಪ್ಪದವರೆಗೆ ನಡೆಯುವ ‘ಏಕತಾ ಯಾತ್ರೆ’ ಯಲ್ಲಿ ಬಿಜೆಪಿ ಭಾಗಿಯಾಗಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 9.30 ಗಂಟೆಗೆ ಪೊನ್ನಂಪೇಟೆಯಿಂದ ಏಕತಾ ಪಾದಯಾತ್ರೆ ಆರಂಭಗೊಂಡು ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನವರೆಗೆ ಸಾಗಲಿದೆ. ‘ಏಕತಾ ಯಾತ್ರೆ’ ಮೂಲಕ ರಾಷ್ಟ್ರದ ಏಕತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಬಿಜೆಪಿ ಸ್ಮರಿಸುತ್ತದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತದೆ ಎಂದು ಹೇಳಿದ್ದಾರೆ. ಮೈಸೂರು, ಕೊಡಗು ಸಂಸದರಾದ ಯದುವೀರ್ ಒಡೆಯರ್ ಅವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರುಗಳು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ಘಟಕಗಳ ಪ್ರಮುಖರು ಏಕತಾ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ…
ಮಡಿಕೇರಿ ನ.11 NEWS DESK : ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವರು ರಾಜ್ಯಾದ್ಯಾದಂತ ದರಖಾಸ್ ಪೋಡಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ಮಂಜೂರಾದ ಜಮೀನನ್ನು ಅನುಬಂಧ-1 ರಡಿ ಸರ್ವೆ ಮಾಡಲಾಗುತ್ತಿದೆ. ಮನೆ ಮನೆಗೆ ತೆರಳಿ ಮಾಹಿತಿ ಪಡೆದು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ 2344 ದರಖಾಸ್ ಪೋಡಿ ಅಭಿಯಾನಡಿ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 1500ಕ್ಕೂ ಹೆಚ್ಚು ಕಡತ ವಿಲೇವಾರಿ ಮಾಡಲಾಗಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ 42 ಲಕ್ಷ ಜಮೀನು ಮೃತರ ಹೆಸರಿನಲ್ಲಿದ್ದು, ಇದನ್ನು ಸಹ ಪಟ್ಟಿ ಮಾಡಲಾಗಿದೆ. ಈ ಪೌತಿ ಖಾತೆ ಆಂದೋಲನಡಿ ರೈತರ ಮನೆ ಬಾಗಿಲಿಗೆ ಹೋಗಿÀ್ಕುಟುಂಬದವರ ಹೆಸರಿಗೆ ಖಾತೆ ಮಾಡುವ ಕಾರ್ಯ…
ಮಡಿಕೇರಿ ನ.11 NEWS DESK : ಕೊಡವ ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (ಎಐಎಂಎಲ್) ವಿಭಾಗದ ವಿದ್ಯಾರ್ಥಿ ಸಂಘ “ಅವಿನ್ಯಂ” ವತಿಯಿಂದ “ಇನ್ಸ್‌ಪೈರ್-2025” ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿ.ಟಿ.ಯು. ಶೈಕ್ಷಣಿಕ ಸಭಾ ಸದಸ್ಯರು ಹಾಗೂ ಮಂಗಳೂರು ಕ್ಯಾನರಾ ಎಂಜಿನಿಯರಿಂಗ್ ಕಾಲೇಜಿನ ಉಪಪ್ರಾಚಾರ್ಯರಾದ ಡಾ.ಡೆಮಿಯನ್ ಆಂಟೋನಿ ಡಿ’ಮೆಲ್ಲೊ ಪಾಲ್ಗೊಂಡು ಮಾತನಾಡಿ, “ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಕೇಂದ್ರೀಕರಿಸಿ, ಜೀವನದಲ್ಲಿ ಶಿಸ್ತನ್ನು ಪಾಲಿಸುವುದು ಯಶಸ್ಸಿನ ಮೂಲ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪ್ರಾಚಾರ್ಯರಾದ ಡಾ. ಎಂ.ಬಸವರಾಜ್ ಮಾತನಾಡಿ, ವಿದ್ಯಾರ್ಥಿಗಳು ಪ್ರಸ್ತುತ ತಂತ್ರಜ್ಞಾನಗಳ ನವೀಕರಣದೊಂದಿಗೆ ಸದಾ ಹೊಸ ವಿಷಯಗಳನ್ನು ಕಲಿಯಲು ಸಿದ್ಧರಾಗಿರಬೇಕು ಎಂದು ಕರೆ ನೀಡಿದರು. ಮಂಗಳೂರು ಕ್ಯಾನರಾ ಎಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಡಾ. ಸುನೀಲ್ ಕುಮಾರ್, ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯ ಪ್ರೊಫೆಸರ್ ಡಾ. ರಾಜು ಹಾಗೂ ನವಿಗೊ ಸೊಲ್ಯೂಷನ್ಸ್, ಮಂಗಳೂರುನ ಸಿನಿಯರ್ ಸಾಫ್ಟ್‍ವೇರ್ ಇಂಜಿನಿಯರ್ ಮತ್ತು ಟೀಮ್…
ಮಡಿಕೇರಿ ನ.11 NEWS DESK : ಜ್ಞಾನೋದಯ ಆಂಗ್ಲ ಮಾದ್ಯಮ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಲವು ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಹೆಚ್.ಆರ್.ಪ್ರಜ್ಞಾ ಪ್ರಥಮ, ಕ್ಲೇ ಮಾಡಲಿಂಗ್ ಬಿ.ಆರ್.ಚಂದನ್ ಪ್ರಥಮ, ಮಿಮಿಕ್ರಿ ಎ.ಜೆ.ದಿಲನ್ ಪ್ರಥಮ, ರಸಪ್ರಶ್ನೆ ಸ್ಪರ್ಧೆಯಲ್ಲಿ ರೋಷನ್ ದೇಶ್ ಪ್ರೇಮ್ ಮತ್ತು ಚಂದ್ರಶೇಖರ್ ಪಟೇಲ್ ಪ್ರಥಮ, ಅಭಿನಯ ಗೀತೆಯಲ್ಲಿ ನೇಹಾಶ್ರೀ ಪ್ರಥಮ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪಿ.ಎಲ್.ಹಿತಾಶ್ರೀ ದ್ವಿತೀಯ, ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪಿ.ಎಂ.ಡಯಾನ ದ್ವಿತೀಯ, ಭಾವಗೀತೆ ಬಿ.ಡಿ.ಪೃಥ್ವಿ ದ್ವಿತೀಯ, ಜಾನಪದ ನೃತ್ಯ ಕೀರ್ತಿ ಮತ್ತು ತಂಡ ದ್ವಿತೀಯ, ರಂಗೋಲಿ ಸ್ಪರ್ಧೆಯಲ್ಲಿ ಲಕ್ಷ್ಮಿ ದ್ವಿತೀಯ, ಜಾನಪದ ಗೀತೆ ಸ್ಪರ್ಧೆಯಲ್ಲಿ ಸಿಂಚನ ತೃತೀಯ, ಆಶುಭಾಷಣ ಸ್ಪರ್ಧೆಯಲ್ಲಿ ಹೆಚ್.ಪಿ.ದೇವಿಕಾ ತೃತೀಯ, ಕಥೆ ಹೇಳುವುದು ನೇಹಾಶ್ರೀ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಸಹಕಾರ ಹಾಗೂ ಮಾರ್ಗದರ್ಶನ ನೀಡಿದ ಎಲ್ಲಾ ಶಿಕ್ಷಕರಿಗೆ, ಬೋಧಕೇತರ ಮತ್ತು…






