ಮಡಿಕೇರಿ ನ.11 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ “ನನ್ನ ಕಲ್ಪನೆಯ ಸ್ವಚ್ಛ ಕೊಡಗು” ಎಂಬ ವಿಚಾರವಾಗಿ ಪ್ರಬಂಧ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಆಯೋಜಿಸುತ್ತಿದ್ದು, ಜಿಲ್ಲೆಯಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಬಹುದೆಂದು ಕೋರಲಾಗಿದೆ. ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು, ಐದರಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಕೈ ಬರಹ ಅಥವಾ ಡಿಟಿಪಿ ಮಾಡಿ ಕಳುಹಿಸಬೇಕು. ಕಡ್ಡಾಯವಾಗಿ ಕನ್ನಡದಲ್ಲಿಯೇ ಬರೆಯಬೇಕು. ಪ್ರಬಂಧವು 200 ವಾಕ್ಯಗಳನ್ನು ಮೀರಬಾರದು. ಯಾವುದೇ ರೀತಿಯ ಕೃತಕ ಬುದ್ದಿ ಮತ್ತೆಯನ್ನು(ಎ.ಐ) ಉಪಯೋಗಿಸುವಂತಿಲ್ಲ. ದಿನಾಂಕ 30/11/2025ರ ಒಳಗೆ ಕೆಳಗಿನ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು, ವಿದ್ಯಾರ್ಥಿಯ ಹೆಸರು, ತರಗತಿ, ವ್ಯಾಸಂಗ ಮಾಡುತ್ತಿರುವ ಶಾಲೆ, ಸಂಪರ್ಕ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಭಾಗವಹಿಸಿದ ಎಲ್ಲರಿಗೂ ಅಭಿನಂದನಾ ಪತ್ರ ನೀಡಲಾಗುವುದು. ಆಯ್ದ ಪ್ರಬಂಧಗಳನ್ನು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟಿಸಲಾಗುವುದು. ಆಯ್ದ ಸಲಹೆಗಳನ್ನು,…
ಲೇಖಕ: admin
ಮಡಿಕೇರಿ ನ.11 NEWS DESK : ಕೊಡಗಿನಲ್ಲಿ ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೇದಾರ ಸಮಸ್ಯೆಯ ಕುರಿತು ಕಳೆದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕೋರಿಕೆ ಮೇರೆಗೆ ರಚಿತವಾದ, ಕರ್ನಾಟಕ ವಿಧಾನಸಭೆ ಪರಿಶೀಲನ ಸಮಿತಿಯ 2ನೇ ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆಯಿತು. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಹಲವು ಮಹತ್ವದ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಲಾಯಿತು.
ವಿರಾಜಪೇಟೆ ನ.11 NEWS DESK : ವಿರಾಜಪೇಟೆ ತಾಲೂಕಿನ ಕಣ್ಣಂಗಾಲ ಒಕ್ಕಲಿಗರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೆ.ಎಸ್. ಗೋಪಾಲ ಕೃಷ್ಣ (ಗೋಪಿ ) ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ .ವಿ. ಜಿ. ಪಾರ್ಥ, ಗೌ :ಕಾರ್ಯದರ್ಶಿ. ವಿ.ವಿ. ಮಹಾಲಕ್ಷ್ಮಿ ಖಜಾಂಚಿ ವಿ. ಬಿ ಮಧು, ಸಾಮಾಜಿಕ ಜಾಲತಾಣದ ಸಂಯೋಜಕಿ, ಪಂಚಮಿ ಅಭಿಷೇಕ್, ನಿರ್ದೇಶಕರಾಗಿ ವಿ. ಪಿ. ಜೀವನ್ ಕುಮಾರ್, ಕೆ. ಪಿ. ಅಜಿತ್, ವಿ. ಟಿ. ರಾಕೇಶ್, ವಿ. ಕೆ. ರಂಜು, ಸೌ ಮ್ಯ, ವಿ. ಸಿ. ಕಿರಣ್, ನಮೃತ ಗೌರಿ ಶಂಕರ್ ಆಯ್ಕೆಯಾಗಿದ್ದಾರೆ ಎಂದು ಅಧ್ಯಕ್ಷ ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.
ಮಡಿಕೇರಿ NEWS DESK ನ.10 : ಕೊಡವರು ರಾಷ್ಟ್ರೀಯ ಜನಗಣತಿಯ ಸಂದರ್ಭ ಸ್ವತಂತ್ರ್ಯವಾಗಿ ‘ಕೊಡವ’ ಎಂದು ಗುರುತಿಸಿಕೊಳ್ಳುವಂತೆ ಸಿಎನ್‌ಸಿ ಕರೆ ನೀಡಿದೆ. ಆದರೆ ಈ ಕರೆಗೆ ವಿರುದ್ಧವಾಗಿ ಕೆಲವು ಪಟ್ಟಭದ್ರಹಿತಾಸಕ್ತಿಗಳು ಈ ರೀತಿ ಪ್ರತ್ಯೇಕವಾಗಿ ಗುರುತಿಸಿಕೊಂಡರೆ ಕೊಡವರಿಗೆ ರಕ್ಷಣೆ ಇರುವುದಿಲ್ಲ ಎಂದು ಅಪಪ್ರಚಾರ ಮಾಡುವ ಮೂಲಕ ಕೊಡವರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುದಿಕೇರಿಯಲ್ಲಿ ಸಿಎನ್‌ಸಿ ವತಿಯಿಂದ ನಡೆದ 19ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊಡವರನ್ನು ನಿರಂತರವಾಗಿ ವಂಚಿಸುತ್ತಿರುವ ಕೆಲವು ಕೂಟಗಳ ಬಗ್ಗೆ ಕೊಡವರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು. ಕೊಡವರು ಸಂವಿಧಾನದ ಭದ್ರತೆ ಬೇಕೆಂದು ಕೇಳುವ ಸಂದರ್ಭ ಕೆಲವು ಕೂಟ ಕೊಡವರನ್ನು ಸದಾಕಾಲ ವಂಚಿಸಲು ತೊಡಗಿದೆ. ಅವರ ಕಾರ್ಯಾಸೂಚಿ ಕೊಡವರಿಗೆ ಏನೇನು ದೊರಕಬಾರದು ಎಂಬುದಾಗಿದೆ. ನೀವು ದೇಶವನ್ನು ರಕ್ಷಣೆ ಮಾಡಿದ ಜನ, ಶೂರರು, ಧೀರರು ಎಂದು ಹೊಗಳಿ ಹೊನ್ನಶೂಲಕ್ಕೇರಿಸಿ…
ಮಡಿಕೇರಿ NEWS DESK ನ.10 : ಕಾಡಾನೆ ದಾಳಿಗೆ ಸಿಲುಕಿ ತೋಟದ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಸಮೀಪದ ಕಾಫಿ ತೋಟವೊಂದರಲ್ಲಿ ನಡೆದಿದೆ. ತೋಟದ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕ ಹನುಮಂತ (57) ಎಂಬುವವರೇ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಜೊತೆಯಲ್ಲಿದ್ದ ಮತ್ತೋರ್ವ ಕಾರ್ಮಿಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ಮತ್ತು ಸೂಕ್ತ ಕ್ರಮದ ಭರವಸೆ ನೀಡಿದರು. ಕಾಡಾನೆ ದಾಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವಲ್ಲಿ ಅರಣ್ಯ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಾರ್ಮಿಕ ಸಂಘಟನೆಯ ಮುಖಂಡ ಹೆಚ್.ಎಂ.ಸೋಮಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಡಾನೆ ದಾಳಿಯ ಆತಂಕದಿಂದ ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದು, ಈ ಸಮಸ್ಯೆಯನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಜಿ.ಪಂ ಮಾಜಿ ಸದಸ್ಯ ವಿಜು ಸುಬ್ರಮಣಿ ಮಾತನಾಡಿ ಸರಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾಡಾನೆ ಉಪಟಳ ಹೆಚ್ಚಾಗಲು ಕಾರಣ ಎಂದು ಆರೋಪಿಸಿದರು.
ಮಡಿಕೇರಿ NEWS DESK ನ.10 : ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯದಲೋಪದ ಪರಿಣಾಮ ಕಾಡಾನೆ ದಾಳಿಯಿಂದ ಮತ್ತೊಂದು ಜೀವ ಬಲಿಯಾಗಿದೆ. ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಕಾಡಾನೆಗಳ ದಾಳಿಯಾಗುತ್ತಿದ್ದು, ಬೆಳೆ ನಾಶದೊಂದಿಗೆ ಜೀವ ಬಲಿಯಾಗುತ್ತಿದೆ. ಆದರೆ ಈ ಸಮಸ್ಯೆಯನ್ನು ಅರಣ್ಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲವೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆನೆ, ಮಾನವ ಸಂಘರ್ಷಕ್ಕೆ ಕೊನೆ ಇಲ್ಲದಾಗಿದೆ, ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಅರಣ್ಯ ಇಲಾಖೆಗೆ ಸರಕಾರಗಳು ಸೂಚಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸರಕಾರದ ಆದೇಶವನ್ನು ಪಾಲಿಸದ ಅರಣ್ಯ ಅಧಿಕಾರಿಗಳು ಕರ್ತವ್ಯಲೋಪ ಎಸಗಿದಂತ್ತಾಗಿದ್ದು, ಇವರುಗಳ ವಿರುದ್ಧ ನಿರ್ದಾಕ್ಷ್ಯಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಧಿಕಾರಿಗಳು ಜೀವ ಹೋದ ಮೇಲೆ ಸ್ಥಳಕ್ಕೆ ಬಂದು ಮೌನಕ್ಕೆ ಶರಣಾಗುವ ಬದಲು ಇಂತಹ ಸಂಘರ್ಷ ಮರುಕಳಿಸದಂತೆ ಯೋಜನೆ ರೂಪಿಸಬೇಕು. ಅರಣ್ಯ ಇಲಾಖೆ ಎದುರು ಜನರು ನಡೆಸುವ…
ಮಡಿಕೇರಿ ನ.10 NEWS DESK : ನ.11, 12 ಮತ್ತು 13 :: ಮೂರ್ನಾಡು 33/11 ಕೆ.ವಿ. ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್5 ಹೊದ್ದೂರು ಫೀಡರ್‍ನಲ್ಲಿ ನವೆಂಬರ್, 11, 12 ಮತ್ತು 13 ರಂದು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲ್ಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. :: ಮಡಿಕೇರಿ :: 66/11 ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ರಾಜಾಸೀಟ್, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಕುಂಡಾಮೇಸ್ತ್ರಿ, ಗಾಳಿಬೀಡು, ಓಂಕಾರೇಶ್ವರ, ಜಿ.ಟಿ ರಸ್ತೆ,…
ಮಡಿಕೇರಿ ನ.10 NEWS DESK : ಮಡಿಕೇರಿ ನಗರದ ಮಹದೇವಪೇಟೆಯ ಎಸ್‍ಎಸ್ ಆಸ್ಪತ್ರೆ ಮತ್ತು ಆರ್‍ಕೆ ಲ್ಯಾಬ್ ವತಿಯಿಂದ ವಿದ್ಯಾರ್ಥಿಗಳಿಗಾಗಿ 3ನೇ ವರ್ಷದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ನ.16ರಂದು ನಡೆಯಲಿದೆ. ಮಹದೇವಪೇಟೆಯ ಎಎಲ್‍ಜಿ ಕ್ರೆಸೆಂಟ್ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ 9.30 ರಿಂದ 11.30ರವರೆಗೆ ಸ್ಪರ್ಧೆಗಳು ಮೂರು ವಿಭಾಗಗಳಲ್ಲಿ ನಡೆಯಲಿವೆ. ಅಂದು ಬೆಳಿಗ್ಗೆ 8.30ರಿಂದ ಸ್ಪರ್ಧಿಗಳು ಉಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಎಸ್‍ಎಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಶಿಲ್ಪಾ ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿ ವಿಭಾಗಕ್ಕೆ ಮೂರು ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನವನ್ನು ನೀಡಲಾಗುತ್ತದೆ. *ಮೊದಲನೇ ವಿಭಾಗ* ಎಲ್‍ಕೆಜಿಯಿಂದ 1 ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸಲು ವಿಷಯ ‘ನಮ್ಮ ಶಾಲೆಯ ಆಟದ ಮೈದಾನ’. *2ನೇ ವಿಭಾಗ* 2ನೇ ತರಗತಿಯಿಂದ 6ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ವಿಷಯ ‘ಮಳೆಗಾಲದಲ್ಲಿ ಕೊಡಗು’. *3ನೇ ವಿಭಾಗ* 7ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ವಿಷಯ ‘ನೀರಿಗಾಗಿ ಹಾಹಾಕಾರ’. ಚಿತ್ರಕಲಾ ಸ್ಪರ್ಧೆಯ ನಂತರ…
ಸೋಮವಾರಪೇಟೆ ನ.10 NEWS DESK : ರಕ್ತದಾನ ಮಾಡಿ ಜೀವ ಉಳಿಸಿ ಎಂದು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಜಮೀರ್ ತಿಳಿಸಿದರು. ತಥಾಸ್ತು ಸಾತ್ವಿಕ ಸಂಸ್ಥೆ,ಅಬಕಾರಿ ನಿರೀಕ್ಷಕರ ಕಚೇರಿ ಮೈಸೂರು, ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪದವಿಕಾಲೇಜು ಸಂಯುಕ್ತಾಶ್ರಯದಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಇಂದು ಜನಸಾಮಾನ್ಯರಲ್ಲಿ ರಕ್ತ ದಾನದಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.ತುರ್ತು ಸಂದರ್ಭಗಳಲ್ಲಿ ರಕ್ತ ಅತ್ಯವಶ್ಯಕವಾಗಿ ಬೇಕಾಗಿದೆ ಅಗತ್ಯ ಸಮಯದಲ್ಲಿ ಸಿಕ್ಕಿದರೆ ಜೀವ ಉಳಿಸಬಹುದು ಆದ್ದರಿಂದ ರಕ್ತದಾನಕ್ಕೆ ಮುಂದಾಗಬೇಕೆಂದರು. ಮೈಸೂರು ಅಬಕಾರಿ ನಿರೀಕ್ಷಕರಾದ ಲೋಕೇಶ್ ರವರು ಮಾತನಾಡಿ ಕಳೆದ 3ವರ್ಷಗಳಿಂದ ಅಬಕಾರಿ ಇಲಾಖೆ ತಥಾಸ್ತು ಸಂಸ್ಥೆ ಜೊತೆಸೇರಿ ಶಿಬಿರಗಳನ್ನು ಆಯೋಜಿಸುತ್ತಿದೆ ಜನರ ಸಹಕಾರವಿದೆ ಎಂದ ಅವರು ರಕ್ತದಾನ ಮಹಾದಾನವೆಂದರು. ಬಿ.ಟಿ.ಸಿ.ಜಿ.ಕಾಲೇಜಿನ ಪ್ರಾಂಶುಪಾಲ ಹರ್ಷ ಮಾತನಾಡಿ ರಕ್ತದಾನದ ಬಗ್ಗೆ ಯುವಕರು,ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಆನಿಟ್ಟಿನಲ್ಲಿ ನಮ್ಮ ಕಾಲೇಜು ತಥಾಸ್ತು ಸಂಸ್ಥೆ ಜೊತೆ ಸೇರಿ ರಕ್ತದಾನ ಶಿಬಿರ ಆಯೋಜಿಸಲು ಸಹಕರಿಸಲಾಗುತಿದೆಯೆಂದರೂ. ಮಡಿಕೇರಿ ರಕ್ತನಿಧಿ ಘಟಕದ ವೈದ್ಯರಾದ…
ಮಡಿಕೇರಿ ನ.10 NEWS DESK : ರಾಷ್ಟ್ರೀಯ ಮಟ್ಟದ ಭಾರತೀಯ ನೌಕಾಪಡೆ ಕ್ವಿಜ್ “ಥಿನ್ಕ್ಯೂ-2025”ನಲ್ಲಿ ಕೊಡಗಿನ ಸೈನಿಕ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಫೈನಲ್ ಹಂತವನ್ನು ತಲುಪಿ ತಮ್ಮ ಶಾಲೆಗೆ ಕೀರ್ತಿ ತಂದಿದ್ದಾರೆ. ಕೇರಳದಲ್ಲಿದ ಎಝಿಮಲಾದಲ್ಲಿರುವ ಭಾರತೀಯ ನೌಕಾ ಅಕಾಡೆಮಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಕೊಡಗಿನ ಸೈನಿಕ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಧ್ರುವ ವಿ.ಭಾರದ್ವಾಜ್ ಹಾಗೂ ಅಚಲ್ ಥೇನುವಾ ಸ್ಪರ್ಧಿಸಿದ್ದರು. ವಿದ್ಯಾರ್ಥಿಗಳ ಪ್ರದರ್ಶನವು ತೀಕ್ಷ್ಣ ಬುದ್ಧಿಮತ್ತೆ, ತಂಡದ ಮನೋಭಾವ ಮತ್ತು ನಿಜವಾದ ಸ್ಪರ್ಧಾ ಮನೋಭಾವವನ್ನು ಪ್ರತಿಬಿಂಬಿಸಿತು. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ನೌಕಾ ಅಕಾಡೆಮಿಯ ಕಮಾಂಡಂಟ್ ವೈಸ್ ಅಡ್ಮಿರಲ್ ಮನೀಷ್ ಚಡ್ಡಾ, ಎ ವಿ ಎಸ್ ಎಂ, ವಿ ಎಸ್ ಎಂ ಅವರಿಂದ ಗೌರವ ಹಾಗೂ ಬಹುಮಾನ ನೀಡಲಾಯಿತು. ಈ ಯುವ ಸಾಧಕರು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ.ತ್ರಿಪಾಠಿ, ಪಿ ವಿ ಎಸ್ ಎಂ, ಎ ವಿ ಎಸ್ ಎಂ, ಎನ್ ಎಂ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಅಪರೂಪದ…






