ಲೇಖಕ: admin

ಮಡಿಕೇರಿ ನ.10 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 15 ನಿರ್ದೇಶಕ ಸ್ಥಾನಕ್ಕೆ ನಗರದ ಪತ್ರಿಕಾ ಭವನದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು.  ಅಧ್ಯಕ್ಷರಾಗಿ ಬಾಚರಣಿಯಂಡ ಅನು ಕಾರ್ಯಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜೆ. ರಾಕೇಶ್, ರಾಜ್ಯ ಸಮಿತಿ ಸದಸ್ಯರಾಗಿ ಬಿ.ಆರ್. ಸವಿತಾ ರೈ, ಉಪಾಧ್ಯಕ್ಷರಾಗಿ ವನಿತಾ ಚಂದ್ರಮೋಹನ್, ಎ.ಎನ್. ವಾಸು, ನವೀನ್ ಸುವರ್ಣ, ಕಾರ್ಯದರ್ಶಿಯಾಗಿ ರಿಜ್ವಾನ್ ಹುಸೈನ್, ಮಲ್ಲಿಕಾರ್ಜುನ್, ಚೆರಿಯಮನೆ ಸುರೇಶ್ ಅವಿರೋಧವಾಗಿ ಆಯ್ಕೆಗೊಂಡಿದ್ದರು.  ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಆರ್. ಪ್ರಜ್ವಲ್, ಆನಂದ್ ಕೊಡಗು, ಸುನಿಲ್ ಪೊನ್ನೆಟ್ಟಿ, ಪ್ರಭುದೇವ್, ಜಗದೀಶ್ ಜೋಡುಬೀಟಿ, ವಿಷ್ಮಾ ಪೆಮ್ಮಯ್ಯ, ರಂಗಸ್ವಾಮಿ, ಎಂ.ಎಂ. ಅಬ್ದುಲ್ಲಾ, ಜೈರುಸ್ ಥೋಮಸ್ ಅಲೆಗ್ಸಾಂಡರ್, ಎಂ.ಕೆ. ರವಿಕುಮಾರ್, ಬಿ.ವೈ. ಚಿತನ್ ಕುಮಾರ್, ಸಂತೋಷ್ ರೈ, ಆರ್. ಸುಬ್ರಮಣಿ, ಗೋಪಾಲ್ ಸೋಮಯ್ಯ, ಕೆ.ಎಂ. ಇಸ್ಮಾಯಿಲ್ ವಿಜಯಿಯಾದರು. ಚುನಾವಣಾಧಿಕಾರಿಯಾಗಿ ಅಜ್ಜಿಕುಟ್ಟಿರ ಗಿರೀಶ್, ಸಹಾಯಕ ಚುನಾವಣಾಧಿಕಾರಿಯಾಗಿ ಸುನಿತಾ ಗಿರೀಶ್ ಕಾರ್ಯನಿರ್ವಹಿಸಿದರು.

Read More

ಮಡಿಕೇರಿ ನ.10 NEWS DESK : ಸಾಹಿತ್ಯಕ್ಕೆ ಉತ್ತಮ ಮಾನವನನ್ನಾಗಿ ರೂಪಿಸುವ ಶಕ್ತಿಯಿದ್ದು ಸಾಹಿತ್ಯಾಭಿರುಚಿ ಇಲ್ಲದವನು ಪ್ರಾಣಿಗಳಿಗೆ ಸಮಾನ ಎಂದು ವೈದ್ಯ ಸಾಹಿತಿ ಡಾ. ನಡಿಬೈಲು ಉದಯಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಓಂಕಾರಸದನದಲ್ಲಿ ಸಮಥ೯ ಕನ್ನಡಿಗರು ಸಂಸ್ಥೆಯ ಕೊಡಗು ಘಟಕದ ವತಿಯಿಂದ ಆಯೋಜಿತ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಡಾ. ಉದಯಶಂಕರ್, ಸಾಹಿತ್ಯ ಪ್ರೀತಿಯಿಂದ ಉತ್ತಮ ಗುಣಗಳನ್ನು ಹೊಂದಲು ಸಾಧ್ಯವಿದೆ. ಹೀಗಾಗಿ ಸಾಹಿತ್ಯಾಸಕ್ತಿಯುಳ್ಳವನು ಸಮಾಜದಲ್ಲಿ ಉತ್ತಮ ಪ್ರಜೆಯಾಗುತ್ತಾನೆ ಎಂದರು. ಶ್ರೀಮಂತ ಸಂಸ್ಕೖತಿ, ಸಾಹಿತ್ಯವನ್ನು ಹೊಂದಿರುವ ಕನ್ನಡ ಭಾಷೆಯಲ್ಲಿ ಪರಿಣಿತಿ ಹೊಂದಿದ ಅನೇಕರು ವಿಶ್ವವ್ಯಾಪಿ ಗಣ್ಯ ಸ್ಥಾನ ಹೊಂದಿದ್ದಾರೆ. ಕನ್ನಡ ನಾಡಿನ ಸಮಥ೯ರು ಸಾಹಿತ್ಯ, ಕ್ರೀಡೆ, ರಾಜಕೀಯ, ಸಾಮಾಜಿಕ, ಸಾಂಸ್ಕೖತಿಕ ರಂಗದಲ್ಲಿಯೂ ಖ್ಯಾತಿ ಪಡೆದಿದ್ದಾರೆ ಎಂದು ಹೇಳಿದರು. ಸಾಹಿತ್ಯದ ಗೊಡವೆ ಹೊಂದಿಲ್ಲದಿದ ಮುಂದಿನ ಪೀಳಿಗೆ ಬಗ್ಗೆ ಆತಂಕವಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಕರುನಾಡಿನ ಸಾಹಿತ್ಯ, ಸಾಂಸ್ಕೖತಿಕ ಮಹತ್ವ ತಿಳಿಸುವಲ್ಲಿ ಇಂಥ ಸಾಂಸ್ಕೖತಿಕ ಪ್ರತಿಭಾ ವೇದಿಕೆಗಳು ಅಗತ್ಯ…

Read More

ನಾಪೋಕ್ಲು ನ.10 NEWS DESK : ಕ್ರೀಡೆ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ. ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕರಾದ ಎ.ಎಸ್ ಪೊನ್ನಣ್ಣ ಹೇಳಿದರು. ನಾಪೋಕ್ಲು ಚೆರಿಯಪರಂಬುವಿನ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿಶಾಲೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 14 ಮತ್ತು 17 ವರ್ಷದ ಒಳಗಿನ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಎಂದರೆ ಕ್ರೀಡೆ. ಕ್ರೀಡಾ ಜಿಲ್ಲೆಯ ನಾಪೋಕ್ಲು ವ್ಯಾಪ್ತಿಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿರುವುದು ಸಂತಸದ ವಿಷಯ .ಶಿಕ್ಷಣ ಇಲಾಖೆ ಆಯೋಜಿಸುವ ಕ್ರೀಡಾಕೂಟ ಶಿಸ್ತುಬದ್ಧವಾಗಿ ನಡೆಯುತ್ತದೆ. ಕ್ರೀಡೆ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ. ಮಕ್ಕಳಲ್ಲಿ ಕ್ರೀಡೆಗೆ ಶಿಕ್ಷಣ ಇಲಾಖೆ ಹೆಚ್ಚಿನ ಪೋತ್ಸಾಹವನ್ನು ನೀಡುತ್ತಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಸೋಲು ಗೆಲುವು ಎಂದು ಯೋಚಿಸದೇ ಶಿಸ್ತು ಬದ್ಧವಾಗಿ ಪಾಲ್ಗೊಳ್ಳಬೇಕು. ಸರಕಾರ ಮಕ್ಕಳ…

Read More

ಕುಶಾಲನಗರ, ನ.10 NEWS DESK : ದಾಸಶ್ರೇಷ್ಠರೆಂದೇ ಕರೆಯಲಾಗುವ ಭಕ್ತ ಕನಕದಾಸರು ಓರ್ವ ಮಹಾನ್‌ ಹರಿದಾಸ ಸಂತ, ತತ್ವಜ್ಞಾನಿ ಹಾಗೂ ಕೀರ್ತನಾಗಾರರಾಗಿದ್ದರು.  ಕನಕದಾಸರ ಜೀವನ ಬೋಧನೆಗಳು, ಕೀರ್ತನೆಗಳು ಇಂದಿಗೂ ಲಕ್ಷಾಂತರ ಜನರಿಗೆ ಮಾರ್ಗದರ್ಶನ ಹಾಗೂ ಸ್ಪೂರ್ತಿಯಾಗಿದೆ ಎಂದು ‌ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಕನ್ನಡ‌ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ ಹೇಳಿದರು. ಕುಶಾಲನಗರ ತಾಲ್ಲೂಕಿನ ‌ಕೂಡಿಗೆ ಕ್ಲಸ್ಟರ್ ನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಕನ್ನಡ ಭಾಷಾ ಸಂಘದ ವತಿಯಿಂದ ಶಾಲೆಯ ಎನ್ನೆಸ್ಸೆಸ್ ಮತ್ತು ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಘಟಕದ ಸಹಯೋಗದೊಂದಿಗೆ ಏರ್ಪಡಿಸಿದ್ದ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಜೀವನ ಮತ್ತು ಅವರ ವಿಚಾರಧಾರೆಗಳ ಕುರಿತು ಮಾತನಾಡಿದರು. ಭಕ್ತ ಕನಕದಾಸರು ಕರ್ನಾಟಕದಲ್ಲಿ ಭಕ್ತಿ ಚಳುವಳಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರಗಳಿಗೆ ವಹಿಸಿದ್ದಾರೆ. ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಜರ ಬೋಧನೆಗಳಿಂದ ಪ್ರೇರಿತರಾದ ಕನಕದಾಸರು ತಮ್ಮ ಎಲ್ಲಾ ಭೌತಿಕ ಅನ್ವೇಷಣೆಗಳನ್ನು ತೊರೆದು ಭಕ್ತಿಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಗೋಪಾಲಕೃಷ್ಣ ಬಣ್ಣಿಸಿದರು.…

Read More

ಮಡಿಕೇರಿ ನ.10 NEWS DESK : ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಯಾದ ಮುಖ್ಯಶಿಕ್ಷಕಿ ಡಿ.ಎಂ. ಸುಜಾತ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸುಜಾತ ಅವರ ಸೇವೆಯನ್ನು ಗೌರವಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯಲ್ಲಿ 11 ವರ್ಷ ಕಾಲ ಮುಖ್ಯಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ ಸುಜಾತ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಜೊತೆಗೆ ಶಾಲೆಯ ಅಭಿವೃದ್ಧಿ ವಿಚಾರದಲ್ಲೂ ಯಾವುದೇ ರೀತಿಯಲ್ಲಿ ರಾಜೀಯಾಗದೆ ಶ್ರಮಿಸಿದರು ಎಂದು ಪೋಷಕರು ನೆನಪಿಸಿಕೊಂಡರು.ಗೌರವ ಸ್ವೀಕರಿಸಿ ಮಾತನಾಡಿದ ಸುಜಾತ, ತನಗೆ ಆರಂಭದಿಂದಲೂ ಗ್ರಾಮಸ್ಥರು ಹಾಗೂ ಪೋಷಕರಿಂದ ಉತ್ತಮ ಸಹಕಾರ ಸಿಕ್ಕಿತು. ಅದರ ಪರಿಣಾಮವಾಗಿ ಶಾಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಪರಿಚಯಿಸಲು ಸಾಧ್ಯವಾಯಿತು. ಮಕ್ಕಳಿಗೆ ಪಠ್ಯ ಕಲಿಕೆ ಜೊತೆಗೆ ಕ್ರೀಡಾಕೂಟ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಅನೇಕ ಹೆಚ್ಚಿನ ಪ್ರೋತ್ಸಾಹ ನೀಡಿದ್ದೇವೆ. ಜೊತೆಗಿದ್ದ ಸಹಶಿಕ್ಷಕರ ಸಹಕಾರದಿಂದ ಎಲ್ಲವೂ ಸಾಧ್ಯವಾಯಿತು ಎಂದು ಸ್ಮರಿಸಿದರು. ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಆಚಾರ್ಯ, ಕೆ.ಕೆ. ಬಾಲಕೃಷ್ಣ, ಹಳೆ…

Read More

ಕಾರ್ಕಳ ನ.10 NEWS DESK : ಜಿಲ್ಲಾಮಟ್ಟದ ಯೋಗ ಸ್ಪರ್ಧೆಯು ಉಡುಪಿಯ ವಿದ್ಯೋದಯ ಪಿ.ಯು ಕಾಲೇಜಿನಲ್ಲಿ 7-11-2025ರಂದು ಜರುಗಿತು. ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅರ್ಥಮ್ ಎ. ಶೆಟ್ಟಿ ಹಾಗೂ ರಕ್ಷಕ್ ಎಸ್. ಗೌಡ ಇವರು ಕಲಾತ್ಮಕ ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಂಪ್ರದಾಯಿಕ ಯೋಗ ಸ್ಪರ್ಧೆಯಲ್ಲಿ ಜಾಹ್ನವಿ ಜೆ. ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಹಾಗೂ ಅರ್ಥಮ್ ಎ. ಶೆಟ್ಟಿ ರವರು ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ವಿಜೇತರಾಗಿದ್ದಾರೆ. ಪ್ರಥಮ ಸ್ಥಾನಿಗಳಾದ ಅರ್ಥಮ್ ಎ. ಶೆಟ್ಟಿ ಹಾಗೂ ರಕ್ಷಕ್ ಎಸ್. ಗೌಡರವರು ಹಾವೇರಿಯಲ್ಲಿ ನಡೆಯುವ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.

Read More

ವಿರಾಜಪೇಟೆ ನ.10 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಿರಾಜಪೇಟೆ, ಮೂರ್ನಾಡು ವಲಯದ “ಪಾರಾಣೆ ಕಾರ್ಯಕ್ಷೇತ್ರದ ಪಾರಾಣೆ ಗ್ರಾಮದ ಸರಕಾರಿ ಪ್ರೌಢಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಆಯುಷ್ಮಾನ್ ಇಲಾಖೆಯ ವೈದ್ಯರಾದ ಡಾ. ಚಂದನ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಹದಿಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ಕಾಯಿಲೆಗೆ ಒಳಗಾಗುತ್ತಿದ್ದಾರೆ ಹಾಗೂ ತಮ್ಮ ಓದಿನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳಾದ ಗುಟ್ಕಾ ಸೇವನೆ ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಮಾತ್ರ ಹಾನಿಕಾರವಲ್ಲದೆ ನಮ್ಮ ಪರಿವಾರಕ್ಕೂ ಹಾನಿಯನ್ನು ಉಂಟುಮಾಡುತ್ತದೆ. ಈ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆಗಳು ಬರಬಹುದು. ಒಂದು ವೇಳೆ ಯಾರಾದರೂ ವ್ಯಸನಕ್ಕೆ ಒಳಗಾದಲ್ಲಿ ಅಥವಾ ಈ ರೀತಿಯ ಅಮಲು ಪದಾರ್ಥಗಳ ಸೇವನೆಯನ್ನು ಕಂಡಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು. ವಲಯ ಮೇಲ್ವಿಚಾರಕರದ ಪ್ರತಾಪ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳು…

Read More

ಮಡಿಕೇರಿ ನ.10 NEWS DESK : ಚೆಟ್ಟಳ್ಳಿಯ ಚೇರಳ ಶ್ರೀಮಂಗಲ ಗ್ರಾಮ (ಬಕ್ಕ)ದವರಾದ ಪರ್ಲಕೋಟಿ ಪ್ರವೀಣ್(ಅಪ್ಪು -60 ) ಇಂದು ನಿಧನರಾದರು. ನ.10 ರಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಪ್ರವೀಣ್ ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Read More

ಕುಶಾಲನಗರ NEWS DESK ನ. 9: ರಾಜ್ಯ ಚುನಾವಣಾ ಆಯೋಗದ ಪ್ರಕರಣಗಳಿಗೆ ಉಚ್ಚ ‌ನ್ಯಾಯಾಲಯದಲ್ಲಿ ವಕೀಲರಾಗಿ ಹಾಜರಾಗಲು ಯಡವನಾಡು ಗ್ರಾಮದ ಕೆ.ಸಿ.ಪ್ರತೀಪ್ ಅವರನ್ನು ನಿಯೋಜಿಸಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಪ್ರತೀಪ್ ಅವರು ಯಡವನಾಡು ಗ್ರಾಮದ ಕೆ.ಪಿ.ಚಲುವೇಗೌಡ ಲಕ್ಷ್ಮಮ್ಮ ದಂಪತಿಗಳ ಪುತ್ರ. 2006 ರಿಂದ ಉಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಕರ್ತವ್ಯ‌ ನಿರ್ವಹಿಸುತ್ತಿದ್ದಾರೆ.

Read More

ಮಡಿಕೇರಿ NEWS DESK ನ.9 : ಮಡಿಕೇರಿಯ ಕರ್ನಾಟಕ ಇನ್ಸ್ ಟ್ಯೂಟ್ ಆಫ್ ಕೋಆಪರೇಟಿವ್ ಮ್ಯಾನೇಜ್ ಮೆಂಟ್ ನ ಪ್ರಾಂಶುಪಾಲರಾದ ಡಾ.ರೇಣುಕಾ ಆರ್.ಎಸ್ ಅವರು ನಿರ್ದೇಶಕರು, ಸಂಶೋಧನೆ ಮತ್ತು ಮೌಲೀಕರಣ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಡಾ.ರೇಣುಕಾ ಆರ್.ಎಸ್ ಅವರನ್ನು ಮಡಿಕೇರಿ ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಆತ್ಮೀಯವಾಗಿ ಬೀಳ್ಕೊಟ್ಟರು.

Read More