ಲೇಖಕ: admin

ಕುಶಾಲನಗರ, ಜ.12 NEWS DESK : ಕುಶಾಲನಗರದ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ‌ ಎನ್.ಎಸ್.ಎಸ್. ಘಟಕ, ಸಮಾಜ ಸಂಘ, ವಿದ್ಯಾರ್ಥಿ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಾಲಾ ಘಟಕ, ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ ಮತ್ತು ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ವತಿಯಿಂದ  ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನ: 2026 ವನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಸ್ವಾಮಿ ವಿವೇಕಾನಂದ ಅವರ ಬದುಕು ಮತ್ತು ದೂರದೃಷ್ಠಿ ವ್ಯಕ್ತಿತ್ವ” ಕುರಿತು ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ತತ್ವಶಾಸ್ತ್ರ ಮತ್ತು ಇತಿಹಾಸದ ಬಗ್ಗೆ ಅಪಾರ ಜ್ಞಾನವನ್ನು ಪಡೆದು ವಿಶ್ವದ ಗಮನ ಸೆಳೆದ ಆಧ್ಯಾತ್ಮಿಕ ಚಿಂತಕರೂ ಆದ ಯುವ ಜನಾಂಗದ ಕಣ್ಮಣಿಯಾಗಿದ್ದ ಸ್ವಾಮಿ ವಿವೇಕಾನಂದರ ಆದರ್ಶಗಳು ಮತ್ತು ತತ್ವಗಳು ಭಾರತೀಯ ಯುವಕರ ವ್ಯಕ್ತಿತ್ವ ನಿರ್ಮಾಣಕ್ಕೆ ಅತ್ಯುತ್ತಮ ಮಾರ್ಗದರ್ಶಕವಾಗಿವೆ ಎಂದರು. ಸ್ವಾಮಿ ವಿವೇಕಾನಂದರ ಆದರ್ಶಗಳು ಯುವ…

Read More

ಮಡಿಕೇರಿ ಜ.12 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್‍ಪರಂಬ್ ಕೊಡವ ನರಮೇಧ ಸ್ಥಳಕ್ಕೆ ಭೇಟಿ ನೀಡಿ 1785ರ ದುರಂತ ಹತ್ಯಾಕಾಂಡದಲ್ಲಿ ಮೃತಪಟ್ಟ ಹಿರಿಯರಿಗೆ ಗೌರವ ನಮನ ಸಲ್ಲಿಸಿತು.  ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಗುರು ಹಿರಿಯರನ್ನು ಸ್ಮರಿಸಿ ದುರಂತ ಇತಿಹಾಸದ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಆದಿಮಂಜಾತ ಏಕ-ಜನಾಂಗೀಯ, ಅನಿಮಿಸ್ಟಿಕ್ ಕೊಡವ ಜನರ ವಿರುದ್ಧದ ಈ ದೌರ್ಜನ್ಯಕ್ಕೆ ನ್ಯಾಯ ಮತ್ತು ಅಂತರರಾಷ್ಟ್ರೀಯ ಮನ್ನಣೆಯನ್ನು ಪಡೆಯುವ ಸಿಎನ್‍ಸಿಯ ಬದ್ಧತೆಯನ್ನು ಪುನರುಚ್ಚರಿಸುವುದಾಗಿ ತಿಳಿಸಿದರು.   ದೇವಟ್‍ಪರಂಬ್ ದುರಂತ ಕೊಡವ ನರಮೇಧವು 1785ರ ಡಿಸೆಂಬರ್ 12 ರ ದುರದೃಷ್ಟಕರ ದಿನದಂದು ಸಂಭವಿಸಿತು. ಸಾವಿರಾರು ಮುಗ್ಧ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಯೋಧರು ಮತ್ತು ಅವರ ಕುಟುಂಬಗಳನ್ನು ಟಿಪ್ಪು ಸುಲ್ತಾನನ ನೇತೃತ್ವದ ಮೈಸೂರು ಸುಲ್ತಾನರ ಸೈನ್ಯವು ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರೊಂದಿಗೆ ಸೇರಿಕೊಂಡು ಕ್ರೂರವಾಗಿ ಹತ್ಯೆ ಮಾಡಿತು. ಕೊಡವ ಯೋಧರಿಂದ 31 ಬಾರಿ ಸೋಲಿಸಲ್ಪಟ್ಟ ಟಿಪ್ಪು, ಮೋಸಗೊಳಿಸುವ ಶಾಂತಿ ಒಪ್ಪಂದವನ್ನು ರೂಪಿಸಿ ಕೊಡವ ಜನರನ್ನು…

Read More

ಮಡಿಕೇರಿ ಜ.12 NEWS DESK : ಕೊಡಗು ಜಿಲ್ಲೆಯ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿ ‘ಜಿಲ್ಲಾ ಮುಸ್ಲಿಂ ಭವನ’ ನಿರ್ಮಾಣಕ್ಕೆ ಸೂಕ್ತ ಸರಕಾರಿ ಜಾಗವನ್ನು ಮಂಜೂರು ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಹನೀಫ್ ಪಿ.ಎ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗ ಅಲ್ಪಸಂಖ್ಯಾತರ ಪಕ್ಷ ನಿಷ್ಠೆಯನ್ನು ವಿವರಿಸಿದರು. ಕೊಡಗು ಜಿಲ್ಲೆಯ ಮುಸ್ಲಿಂ ಮತದಾರರು ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಪಕ್ಷಕ್ಕಾಗಿ ತೋರಿದ ನಿಷ್ಠೆಗೆ ಯಾವುದೇ ರೀತಿಯಲ್ಲೂ ಬೆಲೆ ಕಲ್ಪಿಸಲು ಸಾಧ್ಯವಿಲ್ಲ. ಆದರೆ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರೂ ಕೊಡಗು ಜಿಲ್ಲೆಯ ಕಾಂಗ್ರೆಸ್ ನ ಮುಸ್ಲಿಂ ಮುಖಂಡರಿಗೆ ಸೂಕ್ತ ರಾಜಕೀಯ ಸ್ಥಾನಮಾನ ದೊರೆಯಲಿಲ್ಲ ಎನ್ನುವ ಕೊರಗು ನಮ್ಮನ್ನು ನಿರಂತರವಾಗಿ ಕಾಡುತ್ತಿದೆ ಎಂದು ಹನೀಫ್ ಪಿ.ಎ ತಿಳಿಸಿದರು. ಕೊಡಗಿನ ಕಾಂಗ್ರೆಸ್ ಮುಸ್ಲಿಂ ಪ್ರಮುಖರೊಬ್ಬರನ್ನು ಕರ್ನಾಟಕ ವಿಧಾನ ಪರಿಷತ್…

Read More

ಮಡಿಕೇರಿ ಜ.12 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ದಿನಾಂಕ: 17.01.2026 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ನವೀನ್ ಕುಮಾರ್ ಎಸ್.ಕೆ.ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಜ.12 NEWS DESK : ಕಳೆದ ಬಾರಿಯಂತೆ ಈ ಬಾರಿಯೂ ಸಹ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯು ಸಹ ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವಿವಿಧ ಉಪ ಸಮಿತಿಗಳು ವಹಿಸಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು. ಗಣರಾಜ್ಯೋತ್ಸವವನ್ನು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಅಥವಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಮಾಹಿತಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಶಾಲೆಗಳ ವಿವರ ತಿಳಿಸಬೇಕು. ಜೊತೆಗೆ ರಿಹರ್ಸಲ್‍ನ್ನು ಮಾಡಿಕೊಳ್ಳಬೇಕು. ಶಾಲೆಯಲ್ಲಿಯೇ ಅಗತ್ಯ ತರಬೇತಿ ಪಡೆದು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಸರ್ಕಾರದ ಗ್ಯಾರಂಟಿ…

Read More

ಮಡಿಕೇರಿ ಜ.12 NEWS DESK : ಕೊಡಗು ಪ್ರೆಸ್ ಕ್ಲಬ್‍ನ ನಿರ್ದೇಶಕರಾಗಿ ಹೆಚ್.ಸಿ.ಜಯಪ್ರಕಾಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

Read More

ವಿರಾಜಪೇಟೆ ಜ.12 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆಯ ಮಾಯಮುಡಿ ವಲಯದ ವತಿಯಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ವಲಯದ ಸದಸ್ಯರು ಹಾಗೂ ಗ್ರಾಮಸ್ಥರು ಮಾಯಮುಡಿ ಶ್ರೀ ರಾಮ ಮಂದಿರ ದೇವಾಲಯದ ಆವರಣದಲ್ಲಿದ್ದ ಕಸಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಪ್ರವೀಣ್, ವಲಯ ಮೇಲ್ವಿಚಾರಕ ವಸಂತ, ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ, ಸೇವಾ ಪ್ರತಿನಿಧಿ ಪುಷ್ಪಾ, ಪದಾಧಿಕಾರಿಗಳಾದ ಕೃಷಿನ, ಗೀತಾ, ಜಲಜ ಸಂಘದ ಸದಸ್ಯರು ಊರಿನ ಗ್ರಾಮಸ್ಥರು ಇದ್ದರು.

Read More

ಸುಂಟಿಕೊಪ್ಪ ಜ.12 NEWS DESK : ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್‍ಶೂಟ್ ವಿತರಿಸಲಾಯಿತು. ಸುಂಟಿಕೊಪ್ಪದ ಸಮಾಜ ಸೇವಕ ಇಬ್ರಾಹಿಂ (ಬಾಪ್ಪು) ಶಾಲೆಯ 94 ವಿದ್ಯಾರ್ಥಿಗಳಿಗೆ ಟ್ರ್ಯಾಕ್‍ಶೂಟ್ ವಿತರಿಸಿದರು. ಈ ಸಂದರ್ಭ ಶಾಲಾ ಉಪಪ್ರಾಂಶುಪಾಲ ಬಾಲಕೃಷ್ಣ ಅವರು ಮಾತನಾಡಿ, ಕೇವಲ ಒಂದು ಮಾತಿಗೆ ಇಬ್ರಾಹಿಂ ಬಾಪ್ಪು ಅವರು ನಮ್ಮ ಶಾಲೆಯ ಬಹುಮುಖ್ಯ ಅವಶ್ಯಕತೆಯೊಂದನ್ನು ಈಡೇರಿಸಿಕೊಟ್ಟಿದ್ದಾರೆ. ಹಣವನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದರು. ವಿದ್ಯಾರ್ಥಿಗಳು ಶೇ.100 ರಷ್ಟು ಫಲಿತಾಂಶ ಪಡೆಯುವ ಮೂಲಕ ಶಾಲೆಗೆ ಉತ್ತಮ ಹೆಸರು ತರಬೇಕು ಎಂದರು. ಹಿರಿಯ ಪತ್ರಕರ್ತರಾದ ಬಿ.ಡಿ.ರಾಜು ರೈ ಮಾತನಾಡಿ, ಇಬ್ರಾಹಿಂ ಬಾಪ್ಪು ಅವರು 2018 ರಿಂದ ಎಲೆಮರೆ ಕಾಯಿಯಂತೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ತನ್ನ ಆದಾಯದಿಂದ ಏನಾನದರೂ ಸಮಾಜಕ್ಕೆ ನೀಡಬೇಕೆಂಬ ಬಹುದೊಡ್ಡ ಇರಾದೆಯನ್ನು ಇರಿಸಿಕೊಂಡಿರುವುದು ಶ್ಲಾಘನೀಯ ಕಾರ್ಯವೆಂದು ಅವರು ಬಣ್ಣಿಸಿದರು. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅವರಿಗೆ ಧನ ಸಹಾಯವನ್ನು ಮಾಡುತ್ತಿರುವುದು ಸಮಾಜ ಸೇವೆಗೆ ಹಿಡಿದಿರುವ ಕನ್ನಡಿಯಾಗಿದೆ ಎಂದು ಪ್ರಶಂಸಿದರು. ಸುಂಟಿಕೊಪ್ಪ…

Read More

ಮಡಿಕೇರಿ ಜ.12 NEWS DESK : ಶ್ರೀ ಕಾವೇರಮ್ಮೆ ಮತ್ತು ಅಮ್ಮ ಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ.15 ರಂದು  ಭಾಗಮಂಡಲದಲ್ಲಿ 13ನೇ ವರ್ಷದ ‘ಚಂಡಿಕಾ ಹೋಮ’ ಮತ್ತು ವಿವಿಧ ಪೂಜಾ ಕಾರ್ಯಗಳನ್ನು ಆಯೋಜಿಸಲಾಗಿದೆಯೆಂದು ಟ್ರಸ್ಟ್ ಅಧ್ಯಕ್ಷರಾದ ಮುದ್ದಂಡ ಬಿ. ದೇವಯ್ಯ ತಿಳಿಸಿದ್ದಾರೆ. ನಗರದಲ್ಲಿ  ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಮುಂಭಾಗದ ಟ್ರಸ್ಟ್‌ನ ಜಾಗದಲ್ಲಿ ಲೋಕ ಕಲ್ಯಾಣಕ್ಕಾಗಿ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 7 ಗಂಟೆಯಿಂದ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಶತರುದ್ರಾಭಿಷೇಕ ಹಾಗೂ ಚಂಡಿಕಾ ಹೋಮ ನಡೆಯಲಿದೆ ಎಂದು ತಿಳಿಸಿದರು. ಪೂಜಾ ಕಾರ್ಯದ ನಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದೆ. ಧನ ಸಹಾಯ ಮಾಡುವವರು ಆಡಳಿತ ಮಂಡಳಿ ಸದಸ್ಯರಿಗೆ ನೀಡಬಹುದು ಅಥವಾ ಟ್ರಸ್ಟ್‌ನ ಬ್ಯಾಂಕ್ ಖಾತೆಗೆ ಜಮೆ ಮಾಡಿ ತಮ್ಮ ಹೆಸರು ಮತ್ತು ವಿಳಾಸವನ್ನು ಟ್ರಸ್ಟ್ ಗೆ ತಿಳಿಸಬೇಕೆಂದು ಮನವಿ ಮಾಡಿದರು. ಧನ ಸಹಾಯ ಮಾಡುವವರು…

Read More

  ವಿರಾಜಪೇಟೆ ಜ.12 NEWS DESK : ಸಮಾಜದಲ್ಲಿ ತಂಬಾಕು ಸೇವನೆ ಪ್ರತಿಷ್ಠೆ ಹಾಗೂ ಗೌರವದ ಪ್ರತಿಕವೆಂಬಂತೆ ಬಿಂಬಿತವಾಗುತ್ತಿರುವುದರಿಂದ ಯುವ ಜನತೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಕಡೆ ಆಕರ್ಷಿತರಾಗುತ್ತಿರುವುದು ಕಳವಳಕಾರಿ ಎಂದು ಆಶೀರ್ವಾದ ಆಸ್ಪತ್ರೆಯ ವೈದ್ಯರಾದ ಡಾ.ಚೇಂದಿರ ಬೋಪಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ವತಿಯಿಂದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಸಭಾಭವನದಲ್ಲಿ ನಡೆದ ತಂಬಾಕು ಮುಕ್ತ ಸಮಾಜ ಜಾಗೃತಿ ಕಾರ್ಯಕ್ರಮ ಹಾಗೂ ಕೃತಕ ಕಾಲು ಜೋಡಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಜೀವನವು ವ್ಯಥೆಯಿಂದ ಕೂಡಿದ ಕಥೆಯಾಗಬಾರದು. ಪ್ರಸ್ತುತ ಸಮಾಜದಲ್ಲಿ ಒತ್ತಡದ ಜೀವನ, ಹೊಸತನ ಮುಂತಾದ ಕಾರಣದಿಂದಾಗಿ ವಿವಿಧ ರೀತಿಯ ತಂಬಾಕು ಉತ್ಪನ್ನಗಳ ಸೇವನೆ ಆರಂಭಿಸುತ್ತಿದ್ದಾರೆ. 18 ರಿಂದ 25 ವರ್ಷದೊಳಗಿನ ಯುವ ಜನತೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ತಂಬಾಕು ಸೇವನೆಯಿಂದ ತಮ್ಮ ಆರೋಗ್ಯವನ್ನು ಕೆಡಿಸಿಕೊಳ್ಳುವುದರೊಂದಿಗೆ ಜೀವನವನ್ನು ಕೂಡ ಹಾಳು ಮಾಡಿಕೊಳ್ಳುವುದರತ್ತ ಸಾಗುತ್ತಿದ್ದಾರೆ. ಧೂಮಪಾನ ಮಾಡುವುದರಿಂದ ಕೇವಲ ಧೂಮಪಾನಿಗೆ ಮಾತ್ರ ಹಾನಿಯಲ್ಲ ಧೂಮಪಾನದಿಂದ…

Read More