ವಿರಾಜಪೇಟೆ ಸೆ.17 NEWS DESK : ಐತಿಹಾಸಿಕ ಗಣೇಶೋತ್ಸವದ ಅಂಗವಾಗಿ ಪಂಜರಪೇಟೆಯ 32ನೇ ವರ್ಷದ ಶ್ರೀ ವಿನಾಯಕ ಸೇವಾ ಸಮಿತಿಯ ವತಿಯಿಂದ ನಿರ್ಮಿಸಲಾಗಿರುವ ದೇವಾಲಯದ ಮಾದರಿಯ ವಿಶಿಷ್ಟ ಮಂಟಪ ಹಾಗೂ ಆಕರ್ಷಕ ಕಾರಂಜಿ ಸಜ್ಜಿಕೆ ಸಾರ್ವಜನಿಕರ ವಿಶೇಷ ಗಮನ ಸೆಳೆಯುತ್ತಿದೆ. ದೇವಾಲಯದ ಸ್ವರೂಪವನ್ನು ಹೋಲುವಂತೆ ಅತ್ಯಂತ ಕಲಾತ್ಮಕವಾಗಿ ಹಾಗೂ ವಿಭಿನ್ನ ವಿನ್ಯಾಸದೊಂದಿಗೆ ಈ ಮಂಟಪವನ್ನು ನಿರ್ಮಿಸಲಾಗಿದ್ದು, ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದಿದೆ. ಮಂಟಪದ ಜೊತೆಗೆ ಸುಂದರವಾಗಿ ಅಲಂಕರಿಸಲಾಗಿರುವ ಕಾರಂಜಿ ವೀಕ್ಷಕರನ್ನು ಸಮ್ಮೋಹನಗೊಳಿಸುತ್ತಿದ್ದು, ನಗರದಲ್ಲಿ ಹಬ್ಬದ ವಾತಾವರಣವನ್ನು ಕಳೆಗಟ್ಟಿಸಿದೆ. ಸೃಜನಶೀಲ ಪರಿಕಲ್ಪನೆಯೊಂದಿಗೆ ರೂಪುಗೊಂಡಿರುವ ಈ ಮಂಟಪವನ್ನು ವೀಕ್ಷಿಸಲು ಪ್ರತಿದಿನ ನೂರಾರು ಸಾರ್ವಜನಿಕರು ಹಾಗೂ ಭಕ್ತಾದಿಗಳು ಆಗಮಿಸುತ್ತಿದ್ದು, ಕಲಾತ್ಮಕ ವಿನ್ಯಾಸ ಮತ್ತು ನಿರ್ಮಾಣ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. :: ಯುವಕರ ಶ್ರಮಕ್ಕೆ ಪ್ರಶಂಸೆ : : ಈ ವಿಶಿಷ್ಟ ಮಂಟಪ ಹಾಗೂ ಕಾರಂಜಿ ಸಜ್ಜಿಕೆಯ ಸುಂದರ ನಿರ್ಮಾಣ ಕಾರ್ಯದಲ್ಲಿ ಮುದ್ದಿಯಡ ಕರಣ್ ಕಾವೇರಪ್ಪ, ಅನುಷ್, ಧನು ರೈ, ಶಿಜೋ, ದೀಪಕ್ ಹಾಗೂ…
ಲೇಖಕ: admin
ಮಡಿಕೇರಿ ಸೆ.17 NEWS DESK : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಸೆ.19 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಅದರಂತೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್, 19 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.
ಮಡಿಕೇರಿ ಸೆ.17 NEWS DESK : ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಗೆ ಅರ್ಹರಾಗಿರುವ ಎಲ್ಲಾ ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರನ್ನು ಗುರುತಿಸಿ, ಶೇ.100ರಷ್ಟು ಅರ್ಹ ಫಲಾನುಭವಿಗಳ ನೋಂದಣಿಯನ್ನು ಖಚಿತಪಡಿಸುವ ಉದ್ದೇಶದಿಂದ ‘ಪೋಷಣೆಯೊಂದಿಗೆ ಮಾತೃ ವಂದನ’ ವಿಶೇಷ ನೋಂದಣಿ ಹಾಗೂ ನಾಗರಿಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಸುಮಂಗಲ ಜಿ. ಹಿರೇಮನಿ ತಿಳಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಅರ್ಹ ಫಲಾನುಭವಿಗಳು ಯೋಜನೆಯ ಸೌಲಭ್ಯದಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ಪ್ರತಿಯೊಬ್ಬರೂ ಪ್ರತಿದಿನ ಸರಿಯಾದ ಸಮಯಕ್ಕೆ ಪ್ರೋಟೀನ್‌ಯುಕ್ತ ಹಾಗೂ ಪೌಷ್ಟಿಕ ಆಹಾರ ಸೇವಿಸುವಂತೆ ಕರೆ ನೀಡಿದರು. ಇಲಾಖೆಯ ನಿರೂಪಣಾಧಿಕಾರಿ ಪ್ರಸನ್ನ ಕುಮಾರ್ ಅವರು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಅರ್ಹತಾ ಮಾನದಂಡಗಳು, ಯೋಜನೆಯ ಪ್ರಯೋಜನಗಳು, ಕಂತುಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಕುರಿತು ವಿವರಿಸಿದರು. ಫಲಾನುಭವಿಗಳ ಅನುಭವಗಳು ಮತ್ತು ಯಶೋಗಾಥೆಗಳನ್ನು ಸಾಮಾಜಿಕ ಹಾಗೂ ಸಮುದಾಯ ಮಾಧ್ಯಮಗಳ ಮೂಲಕ…
ಮಡಿಕೇರಿ ಸೆ.17 NEWS DESK : ಕೊಡವರು ಮೂಲತಃ ಕೃಷಿಕರಾಗಿದ್ದು, ಕೃಷಿಯೇ ಜೀವನಾಧಾರ, ಕೃಷಿಯೇ ಸಂಸ್ಕೃತಿಗೆ ಮೂಲವಾಗಿದ್ದು, ಕೈಲ್‍ಪೊವ್ದ್, ಕಾವೇರಿ ಚಂಗ್ರಾಂದಿ ಹಾಗೂ ಪುತ್ತರಿ ಹಬ್ಬಗಳು ಕೃಷಿಯಾಧಾರಿತವಾಗಿದೆ. ಕೊಡವರ ಮದುವೆಗಳಲ್ಲಿ ‘ಸಮ್ಮಂದ ಅಡ್‍ಕುವ’ ಪದ್ಧತಿಗೆ ಬಹಳ ಪ್ರಾಮುಖ್ಯತೆ ಹಾಗೂ ಪ್ರಾಶಸ್ತ್ಯವಿದೆ. ಇದರಲ್ಲಿ ಬರುವ ಪದ ಸಾಲುಗಳೆಲ್ಲವೂ ಕೃಷಿಯನ್ನು ಉಲ್ಲೇಖಿಸುತ್ತದೆ. ‘ಕ್ರೋಡದೇಶ’ದ ಆರಂಭವೇ ಕೃಷಿಗೆ ಹೊಂದಿಕೊಂಡಿದ್ದು, ಆ ಯುಗದ ಕೊಡವ ಹಿರಿಯರು ಸ್ವತಃ ಕೈಯ್ಯಾರೆ ಭೂಮಿಯನ್ನು ಉಳುಮೆ ಮಾಡಿ ಕೃಷಿಗೆ ತಕ್ಕಂತೆ ಹದಗೊಳಿಸಿದ್ದು ಉಲ್ಲೇಖವಾಗಿದೆ. ಹೀಗಿರುವಾಗ ಕೊಡವ ಸಂಸ್ಕೃತಿಗೆ ಕೃಷಿಯೇ ಜಿವಂತಿಕೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಣಿಕೊಪ್ಪ ಶ್ರೀ ಇಗ್ಗುತಪ್ಪ ಕೊಡವ ಅಸೋಸಿಯೇಶನ್‍ನಲ್ಲಿ ಅಕಾಡೆಮಿಯ 21ನೇ ಕೊಡವ ಪುಸ್ತಕ ಪತ್ತಾಯ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಸಂಘದ ವಾರ್ಷಿಕ ಕೈಲ್‍ಪೊವ್ದ್ ಕ್ರೀಡಾಕೂಟದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಇವರು, ಕೊಡಗಿನ ಕೃಷಿಭೂಮಿಗಳು ಇತ್ತೀಚಿನ ವರ್ಷಗಳಲ್ಲಿ ಪರಭಾರೆಗೊಳ್ಳುತ್ತಿರುವುದು ಆತಂಕ ಮೂಡಿಸುತ್ತಿದ್ದು, ಇಲ್ಲಿನ…
ಮಡಿಕೇರಿ ಸೆ.17 NEWS DESK : ವಿಶ್ವಕರ್ಮರು ಕೇವಲ ಒಂದು ವ್ಯಕ್ತಿಯಲ್ಲ, ಇಡೀ ಬ್ರಹ್ಮಾಂಡದ ಸೃಷ್ಟಿಗೆ ರೂಪ ನೀಡಿದ ಶಕ್ತಿ. ಆದ್ದರಿಂದ ವಿಶ್ವಕರ್ಮ ಜಯಂತಿಯನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ, ವಿಶ್ವಕರ್ಮರ ಆರಾಧನೆಯನ್ನು ಸಾರ್ವತ್ರಿಕವಾಗಿ ಪೂಜಾ ಮಹೋತ್ಸವದ ರೂಪದಲ್ಲಿ ಆಚರಿಸಬೇಕು ಎಂದು ಕುಶಾಲನಗರದ ನಿವೃತ್ತ ಪ್ರಾಂಶುಪಾಲರಾದ ಎಚ್.ಬಿ.ಲಿಂಗಮೂರ್ತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಶ್ವಕರ್ಮರು ಇಡೀ ಜಗತ್ತಿನ ಹಾಗೂ ಬ್ರಹ್ಮಾಂಡದ ಸೃಷ್ಟಿಕರ್ತರೆಂದು ಭಾರತೀಯ ಪರಂಪರೆಯಲ್ಲಿ ನಂಬಲಾಗಿದೆ. ಜಗತ್ತಿನಲ್ಲಿ ಏನೂ ಇಲ್ಲದ ಶೂನ್ಯ ಸ್ಥಿತಿಯಿಂದ ಸೃಷ್ಟಿ ಕಾರ್ಯವನ್ನು ಆರಂಭಿಸಿ, ರಸತತ್ವದಿಂದ ಜಲತತ್ವವನ್ನು ರೂಪಿಸಿ, ಅದನ್ನು ಪೃಥ್ವಿ ತತ್ವಕ್ಕೆ ತಂದವರು ವಿಶ್ವಕರ್ಮ ಎಂಬ ನಂಬಿಕೆಯಿದೆ ಎಂದು ಹೇಳಿದರು. ವಿಶ್ವಕರ್ಮರು ನಿರ್ದಿಷ್ಟ ವ್ಯಕ್ತಿಗೆ ಅಥವಾ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಇಡೀ ಜಗತ್ತಿನ ಸೃಷ್ಟಿಶಕ್ತಿಯ ಪ್ರತೀಕವಾಗಿರುವುದರಿಂದ ಎಲ್ಲರೂ…
ಸೋಮವಾರಪೇಟೆ, NEWS DESK ಸೆ.17: ಬಿಜೆಪಿ ಜಿಲ್ಲಾ ಯುವಮೋರ್ಚಾ ವತಿಯಿಂದ ರಕ್ತನಿಧಿ ಕೇಂದ್ರ ಮಡಿಕೇರಿ ಹಾಗೂ ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಗುರುವಾರ ಕೊಡವ ಸಮಾಜದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಯುವಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ವತಿಯಿಂದ ಸೆ.17ರಿಂದ ಅ.17ರವರೆಗೆ ಸೇವಾ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ರಕ್ತದಾನ ಪವಿತ್ರವಾದ ಸೇವೆಯಾಗಿದ್ದು, ಒಂದು ಯೂನಿಟ್ ರಕ್ತದಾನದಿಂದ ಅಗತ್ಯವಿರುವ ಹಲವು ಮಂದಿಯ ಜೀವ ಉಳಿಸಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರ ಹುಟ್ಟುಹಬ್ಬವನ್ನು ಸೇವಾ ಚಟುವಟಿಕೆಗಳ ಮೂಲಕ ಆಚರಿಸಲು ಪಕ್ಷ ನಿರ್ಧರಿಸಿದೆ ಎಂದರು. ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿ ಗುರುವಾರ ಬೆಳಿಗ್ಗೆ ಬಿಜೆಪಿ ಕಾರ್ಯಕರ್ತರು…
ಮಡಿಕೇರಿ, NEWS DESK ಸೆ.17: “ಸಿಐಎಸ್‌ಸಿಇ ಮಂಡಳಿ”ಯು ನಡೆಸಿದ “ರಾಷ್ಟ್ರೀಯ ಹಾಕಿ ಪಂದ್ಯಾವಳಿ–2026”ರಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಮಡಿಕೇರಿಯ ಹತ್ತನೇ ತರಗತಿ ವಿದ್ಯಾರ್ಥಿನಿಯರಾದ ಮುಖ್ಯ ಆಟಗಾರ್ತಿ ಆದಾದೇಚ್ಚಮ್ಮ (ಆ/ಒ ಶ್ರೀಮತಿ ವಿನಾ ಉತ್ತಪ್ಪ, ಮಡಿಕೇರಿ) ಹಾಗೂ ಮೇಧಾ ಜಾಹ್ನವಿ (ಆ/ಒ ಶ್ರೀ ಅಶ್ವಥ್ ಮತ್ತು ಡೈನ ಅಶ್ವಥ್, ಕಕ್ಕೇಟುಪರಂಬು) ಅವರು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಾರ್ಖಂಡ್‌ನ ರಾಂಚಿಯ ಸೇಂಟ್ ಕ್ಸೇವಿಯರ್ಸ್ ಶಾಲೆ, ದೋರಂಡದಲ್ಲಿ ದಿನಾಂಕ 12/09/2026ರಂದು ನಡೆದ ಅಂತಿಮ ಪಂದ್ಯಾವಳಿಯಲ್ಲಿ ಕರ್ನಾಟಕ–ಗೋವಾ ವಲಯವನ್ನು ಪ್ರತಿನಿಧಿಸಿ, “ಹಾಕಿ – ಅಂಡರ್–17 ಬಾಲಕಿಯರ” ವಿಭಾಗದಲ್ಲಿ ಅದ್ಭುತ ಸಾಧನೆಯೊಂದಿಗೆ ವಿಜೇತರಾಗಿದ್ದಾರೆ. ಈ ಪಂದ್ಯಾವಳಿಯಲ್ಲಿ ಕರ್ನಾಟಕದ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಈ ಇಬ್ಬರು ವಿದ್ಯಾರ್ಥಿನಿಯರು ಗಮನಾರ್ಹವಾಗಿ ಪಾಲ್ಗೊಂಡು ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯರೊಂದಿಗೆ ಶಾಲೆಯ ದೈಹಿಕ ಶಿಕ್ಷಕಿ ಶ್ರೀಮತಿ ಸೀಮಾ ಪ್ರವೀಣ್ ಅವರು ಕೂಡ ತೆರಳಿದ್ದರು. ವಿದ್ಯಾರ್ಥಿನಿಯರ ಈ ಅವಿಸ್ಮರಣೀಯ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗಳು.
ಮಡಿಕೇರಿ, NEWS DESK ಸೆ.17: ಕೊಡಗಿನಲ್ಲಿ ಕೊಡವ ಸ್ವಾಯತ್ತ ಮಂಡಳಿ ಹಾಗೂ ‘ಕೊಡವ ಲ್ಯಾಂಡ್’ ಭೌಗೋಳಿಕ ಮತ್ತು ರಾಜಕೀಯ ಸ್ವಾಯತ್ತ ಪ್ರದೇಶ ರಚನೆಗೆ ಸಂಬಂಧಿಸಿದ ಬೇಡಿಕೆಯನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕ ತೀವ್ರವಾಗಿ ವಿರೋಧಿಸಿದೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ವಿ. ಶಿವಪ್ಪ, ಸಿಎನ್‌ಸಿ ವತಿಯಿಂದ ಕೊಡವ ಸ್ವಾಯತ್ತ ಮಂಡಳಿ ಹಾಗೂ ‘ಕೊಡವ ಲ್ಯಾಂಡ್’ ಭೌಗೋಳಿಕ ಮತ್ತು ರಾಜಕೀಯ ಸ್ವಾಯತ್ತ ಪ್ರದೇಶ ರಚಿಸಿ, ಆಂತರಿಕ ಸ್ವಯಂ ನಿರ್ಣಯದ ಹಕ್ಕು ಮತ್ತು ಅಧಿಕಾರ ನೀಡಬೇಕೆಂಬ ಬೇಡಿಕೆ ಮುಂದಿಟ್ಟಿರುವುದನ್ನು ಉಲ್ಲೇಖಿಸಿದರು. ಈ ಬೇಡಿಕೆಗಳಿಗೆ ಕೊಡಗಿನಲ್ಲಿ ವಾಸವಿರುವ ವಿವಿಧ ಸಮುದಾಯಗಳಿಂದ ವಿರೋಧ ವ್ಯಕ್ತವಾಗಿದ್ದು, ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕವೂ ವಿರೋಧ ವ್ಯಕ್ತಪಡಿಸುತ್ತಿದೆ. ಈ ಸಂಬಂಧ ನ್ಯಾಯಾಲಯದಲ್ಲಿಯೂ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು. ಕೊಡಗಿನಲ್ಲಿ ನೂರಾರು ವರ್ಷಗಳಿಂದ ವಿವಿಧ ಸಮುದಾಯಗಳು ಶಾಂತಿ ಮತ್ತು ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿವೆ. ಒಂದು ಜನಾಂಗದ ಹಕ್ಕುಗಳನ್ನು ರಕ್ಷಿಸುವ ಹೆಸರಿನಲ್ಲಿ…
ಮಡಿಕೇರಿ, NEWS DESK ಸೆ.17: ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರಾಥಮಿಕ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡದ ವಿಶ್ಮಿತ್, ತೇಜಸ್ ಹಾಗೂ ದೈವಿಕ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅದೇ ರೀತಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ತಂಡಗಳು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಲಿತೇಶ್.ಕೆ, ಸಾಫನ್, ಲಿಪಿಕಾ.ಕೆ ಹಾಗೂ ಧೃತಿ ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಲಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರಾದ ಪ್ರಮೋದ್ ಗೌಡ ಹಾಗೂ ಯೋಗೇಶ್ ತರಬೇತಿ ನೀಡಿರುತ್ತಾರೆ.
ಚೆಟ್ಟಳ್ಳಿ, NEWS DESK ಸೆ.17: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಚೆಟ್ಟಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘದ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಚೆಟ್ಟಳ್ಳಿಯ ವಿಶ್ವಗುರು ಪ್ರಧಾನಿ ಶ್ರೀ ಮೋದಿ ರೈತ ಸಹಕಾರ ಭವನದಲ್ಲಿ ಕೇಕ್ ಕತ್ತರಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಸಲ್ಲಿಸಲಾಯಿತು. ಬಿಜೆಪಿ ಕಾರ್ಯಕರ್ತರು ಹಾಗೂ ಯುವಕ ಸಂಘದ ಸದಸ್ಯರು ಒಟ್ಟಾಗಿ ಸೇರಿ ಹುಟ್ಟುಹಬ್ಬ ಆಚರಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶದ ಅಭಿವೃದ್ಧಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಭಾರತ ಸಾಧಿಸಿರುವ ಪ್ರಗತಿಯನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮವಾರಪೇಟೆ ಬಿಜೆಪಿ ಮಂಡಲ ವಕ್ತಾರ ಹಾಗೂ ವಕೀಲ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದರು. ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆ ಗಳನ್ನು ಜಾರಿಗೊಳಿಸುವ ಮೂಲಕ ವಿಶ್ವಮಟ್ಟದಲ್ಲಿ ಭಾರತದ ಗಮನ ಸೆಳೆದಿದ್ದಾರೆ. ಅವರ ನಾಯಕತ್ವ ಹಾಗೂ ಕಾರ್ಯ…






