ಮಡಿಕೇರಿ ಜ.12 NEWS DESK : ಭಾರತದ ಸ್ಕಾಟ್ಲೆಂಡ್’ ಎಂದೇ ಖ್ಯಾತಿಯಾದ ಮಡಿಕೇರಿಯ ಹಸಿರು ರಾಶಿಯ ನಡುವೆ ಇಂದು ಮದ್ಯದ ಬಾಟಲಿಗಳ ರಾಶಿ ಕಂಡುಬಂದಿದೆ. ನಗರದ ಸೌಂದರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆ ಹಮ್ಮಿಕೊಂಡಿದ್ದ ಶ್ರಮದಾನವು, ನಗರದ ನಾಗರಿಕ ಪ್ರಜ್ಞೆ ಎಷ್ಟು ಅಧೋಗತಿಗೆ ಇಳಿದಿದೆ ಎಂಬುದನ್ನು ಬೆತ್ತಲೆ ಮಾಡಿದೆ. : ಶ್ರಮದಾನ: ಸಮಾಜ ಸೇವೆಗೆ ಮಿಡಿದ ಮನಸ್ಸುಗಳು ಮಡಿಕೇರಿಯ ಗೌಡ ಸಮಾಜದ ಬಳಿಯಿರುವ ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯ ಸದಸ್ಯರು ರವಿವಾರ ಬೆಳಿಗ್ಗೆಯೇ ಸ್ವಚ್ಛತಾ ಕಾಯಕಕ್ಕೆ ಮುಂದಾದರು. ಗೌಡ ಸಮಾಜದಿಂದ ಆರಂಭಿಸಿ ರಾಘವೇಂದ್ರ ದೇವಾಲಯದ ಜಂಕ್ಷನ್ ವರೆಗಿನ ಮುಖ್ಯ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದಿದ್ದ ಪೊದೆಗಳನ್ನು ತೆರವುಗೊಳಿಸುವುದು ಇವರ ಉದ್ದೇಶವಾಗಿತ್ತು. ಆದರೆ, ಕಸ ತೆಗೆಯಲು ಹೋದ ಇವರಿಗೆ ಎದುರಾಗಿದ್ದು ಮಾತ್ರ ಭೀಕರ ದೃಶ್ಯ. :: ‘ಬಾಟಲಿ’ಗಳ ಸಾಮ್ರಾಜ್ಯ: ಒಂದು ಯಕ್ಷಪ್ರಶ್ನೆ! :: ಕೇವಲ ಅರ್ಧ ಕಿಲೋಮೀಟರ್ ವ್ಯಾಪ್ತಿಯಲ್ಲಿ ಸ್ವಚ್ಛತೆ ನಡೆಸಿದಾಗ ಸಿಕ್ಕ ಕಸದ ಪ್ರಮಾಣ ಬೆಚ್ಚಿಬೀಳಿಸುವಂತಿದೆ : : ನೂರಾರು…
ಲೇಖಕ: admin
ಮಡಿಕೇರಿ NEWS DESK ಜ.11 : ಜಮ್ಮಾಬಾಣೆ ತಿದ್ದುಪಡಿ ವಿಧೇಯಕದ ಕುರಿತು ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾಜಿ ಶಾಸಕದ್ವಯರಿಗೆ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚುರಂಜನ್ ಅವರುಗಳು ರಾಜಕೀಯ ಕಾರಣಕ್ಕಾಗಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಜಮ್ಮಾ ಹಿಡುವಳಿದಾರರು ಎದುರಿಸುತ್ತಿರುವ ಸಮಸ್ಯೆಯನ್ನು ಇತ್ಯರ್ಥಪಡಿಸಲು ನಾನು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿದ್ದುಪಡಿ ವಿಧೇಯಕದ ಮಂಡನೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರು ಸೇರಿದಂತೆ ಎಲ್ಲರ ನೆರವನ್ನು ಪಡೆದಿದ್ದೇವೆ ಎಂದರು. ಕೊಡಗಿನ ಜಮ್ಮಾಬಾಣೆ ಸಮಸ್ಯೆಯ ವಿವರಗಳನ್ನು ಕಲೆ ಹಾಕಿ ಚಕ್ಕೆರ ಪೂವಯ್ಯ ಹಾಗೂ ಕರ್ನಾಟಕ ಸರಕಾರದ ನಡುವಿನ ಕೇಸ್ ನಲ್ಲಿ ಎ.ಕೆ.ಸುಬ್ಬಯ್ಯ ಅವರು ವಾದ ಮಂಡನೆ ಮಾಡಿದ ಪರಿಣಾಮ 1993 ರಲ್ಲಿ…
ಮಡಿಕೇರಿ NEWS DESK ಜ.11 : ಕೊಡಗು ಜಿಲ್ಲಾ ಬಂಟರ ಸಂಘದ ಮುಂದಿನ ಸಾಲಿನ ಅಧ್ಯಕ್ಷರಾಗಿ ಬಿ.ಡಿ. ಜಗದೀಶ್ ರೈ ಅವಿರೋಧವಾಗಿ ಪುನಾರಾಯ್ಕೆಯಾಗಿದ್ದಾರೆ. ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಜಗದೀಶ್ ರೈ ಅವರನ್ನು ಸಭೆಯಲ್ಲಿದ್ದ ಸರ್ವ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿದರು. ಬಳಿಕ ಮಾತನಾಡಿದ ಅಧ್ಯಕ್ಷ ಜಗದೀಶ್ ರೈ, ಶೀಘ್ರದಲ್ಲಿ ನೂತನ ಕಾರ್ಯಕಾರಿ ಮಂಡಳಿಯನ್ನು ರಚಿಸುವುದಾಗಿ ತಿಳಿಸಿದರು. ಬಂಟರ ಭವನ ನಿರ್ಮಾಣಕ್ಕಾಗಿ ಬೇಕಾದ ಎಲ್ಲಾ ತೊಡಕುಗಳನ್ನು ನಿವಾರಿಸಿ, ಕಟ್ಟಡ ನಿರ್ಮಾಣಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಸಮುದಾಯ ಬಾಂಧವರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸಂಘದ ಸದಸ್ಯತ್ವ ಹೆಚ್ಚಳಕ್ಕೆ ಸಹಕರಿಸುವಂತೆ ಕೋರಿದರು. ಅಂದಾಜು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭವನದ ನೀಲ ನಕ್ಷೆಯನ್ನು ಸಭೆಯಲ್ಲಿ ಅನಾವರಣ ಮಾಡಲಾಯಿತು. ಭವನದ ವಿನೂತನ ಶೈಲಿಯ ನಕ್ಷೆಗೆ ಸಭೆ ಅನುಮೋದನೆ ನೀಡಿತು. ಕಾರ್ಯದರ್ಶಿ ರವೀಂದ್ರ ವಿ. ರೈ ವಾರ್ಷಿಕ ವರದಿ, ಲೆಕ್ಕಪತ್ರ ವರದಿಯನ್ನು ಖಜಾಂಚಿ ರತ್ನಾಕರ…
ಮಡಿಕೇರಿ NEWS DESK ಜ.11 : ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಮೀಸಲಿಡಬೇಕೆಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ಮೂಲಕ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿರುವ ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಕಳೆದ ಬಜೆಟ್ ನಲ್ಲಿ ಜಿಲ್ಲೆಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಅಲ್ಪ ಪ್ರಮಾಣದ ಅನುದಾನ ನೀಡಲಾಗಿದೆ. ಈ ಬಾರಿ ಹೆಚ್ಚಿನ ಅನುದಾನವನ್ನು ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕೆಂದು ಕೋರಿದ್ದಾರೆ. ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸುರಿದ ಅತಿ ಮಳೆಯಿಂದ ಕೃಷಿ ಫಸಲು ನಾಶವಾಗಿ ರೈತರಿಗೆ ನಷ್ಟವಾಗಿದೆ. ಆದರೆ ಇಲ್ಲಿಯವರೆಗೆ ಬೆಳೆಹಾನಿ ಪರಿಹಾರ ಘೋಷಣೆಯಾಗಿಲ್ಲ. ಇದನ್ನು ಈ ಬಾರಿಯ ಬಜೆಟ್ ನಲ್ಲಿ ಬಿಡುಗಡೆ ಮಾಡಬೇಕು. ಅತಿವೃಷ್ಟಿಯಿಂದ ರಸ್ತೆಗಳು ಹದಗೆಟ್ಟಿದ್ದು, ಸರ್ವಋತು ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ಶಾಲೆಯಲ್ಲಿ ಶಿಕ್ಷಕರು, ಪಶು ಚಿಕಿತ್ಸಾಲಯದಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ಈ ಇಲಾಖೆಗಳಿಗೆ…
ಮಡಿಕೇರಿ NEWS DESK ಜ.11 : ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಪಿ.ಕೆ.ರಾಮಕೃಷ್ಣ ಅವರು ರೋಟರಿ ಮಡಿಕೇರಿಗೆ ಅಧಿಕೃತ ಭೇಟಿ ನೀಡಿದರು. ರೋಟರಿಯ ಹಿರಿಯ ಪ್ರತಿನಿಧಿಗಳನ್ನು ಸನ್ಮಾನಿಸಿ ಗೌರವಿಸಿದ ಅವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸಿದರು. ನಗರದ ರೋಟರಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರೋಟರಿ ಮೂಲಕ ಸಮಾಜ ಸೇವೆಗಾಗಿ ನಮ್ಮನ್ನು ತೊಡಗಿಸಿಕೊಳ್ಳಬೇಕು. ಸೇವೆಯಲ್ಲಿ ಉತ್ಸಾಹ ತೋರಬೇಕು, ಸೇವೆಗಾಗಿ ಇತರರನ್ನೂ ಪ್ರೇರೇಪಿಸಬೇಕು ಎಂದು ಕರೆ ನೀಡಿದರು. ಅಪಾರ ಸಾಮಾಜಿಕ ಕಳಕಳಿಯನ್ನು ಹೊಂದಿರುವ ರೋಟರಿ ಸಂಸ್ಥೆ ರಕ್ತ ಸಂಗ್ರಹ ಘಟಕ ಮತ್ತು ಚರ್ಮಗಳ ಶಿಥಿಲೀಕರಣ ಘಟಕಗಳ ಸ್ಥಾಪನೆಗೆ ಯೋಜನೆ ರೂಪಿಸಿದೆ. ವಿಶ್ವದೆಲ್ಲಡೆ ಪೋಲಿಯೋ ಲಸಿಕೆ ಅಭಿಯಾನವನ್ನು ನಿಭಾಯಿಸುವ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದೆ. ತನ್ನ ನಿಸ್ವಾರ್ಥ ಸೇವೆಯ ಮೂಲಕವೇ ರೋಟರಿ ಸಂಸ್ಥೆ ಎಲ್ಲರ ಗಮನ ಸೆಳೆದಿದೆ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರೋಟರಿಯ ಸಹಾಯಕ ಗವರ್ನರ್ ದಿಲನ್ ಚಂಗಪ್ಪ ಅವರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹೆಚ್ಚಿಸುವ ಕುರಿತು ಮಾಹಿತಿ ನೀಡಿದರು.…
ಮಡಿಕೇರಿ NEWS DESK ಜ.11 : ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ಉಳಿಯಲು ಮತ್ತು ಆರ್ಥಿಕ ಕ್ಷೇತ್ರ ಬಲಗೊಳ್ಳಲು ಸಹಕಾರಿ ಸಂಸ್ಥೆಗಳ ಕೊಡುಗೆ ದೊಡ್ಡ ಪ್ರಮಾಣದಲ್ಲಿ ಸಹಕಾರಿಯಗಿದೆ ಎಂದು ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ತಿಳಿಸಿದ್ದಾರೆ. ಮಡಿಕೇರಿಯ ಗೌಡ ಸಮಾಜದಲ್ಲಿ ನಡೆದ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ‘ಶತಸಂಭ್ರಮ’ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರಿ ಸಂಸ್ಥೆಯೊಂದು ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ದೊಡ್ಡ ಮೈಲಿಗಲ್ಲಾಗಿದೆ. ಸಂಘದ ಸ್ಥಾಪಕ ಅಧ್ಯಕ್ಷ ಪಟ್ಟಡ ಎಂ.ಉತ್ತಪ್ಪ ಹಾಗೂ ಸ್ಥಾಪಕ ಕಾರ್ಯದರ್ಶಿ ತೇಲಂಪಡ ಎಂ.ಕಾರ್ಯಪ್ಪ ಅವರುಗಳನ್ನು ಸ್ಮರಿಸಿ ಗೌರವ ಅರ್ಪಿಸಲೇಬೇಕಾಗಿದೆ. ಸಂಸ್ಥೆಯ ಯಶಸ್ಸಿಗೆ ಈ ಹಿಂದಿನ ಮತ್ತು ಈಗಿನ ಆಡಳಿತ ಮಂಡಳಿಯ ಕೊಡುಗೆಯೂ ಇದೆ. ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಅರ್ಥಿಕ ಬಲ ಮುಖ್ಯವಾಗುತ್ತದೆ, ಸಹಕಾರಿ ಸಂಸ್ಥೆಗಳು ಆರ್ಥಿಕ ಶಕ್ತಿಯನ್ನು ಹೆಚ್ಚಿಸುತ್ತಾ ಬಂದಿವೆ. ಇಂದಿನ ಆಧುನಿಕ ಕಾಲದಲ್ಲೂ ಕೊಡಗಿನ ಸಹಕಾರಿ ಕ್ಷೇತ್ರ ಇತರರಿಗೆ ಮಾದರಿಯಾಗಿದೆ, ಇಲ್ಲಿನ…
ಮಡಿಕೇರಿ ಜ.10 NEWS DESK : ಭೂ ದಾಖಲೆಗಳ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಗೊಂಡಿರುವ ನಿರ್ಗಮಿತ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಹಾಗೆಯೇ ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ನಿರ್ಗಮಿತ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರಿಗೆ ಶಾಲು, ಫಲ ತಾಂಬೂಲ ಹಾಗೂ ವಿಶೇಷ ಉಡುಗೊರೆ ನೀಡಿ ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಗಮಿತ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಒಳ್ಳೆಯ ಅನುಭವ ಆಗಿದೆ. ಜತೆಗೆ ಆತ್ಮ ತೃಪ್ತಿಯೂ ಇದೆ ಎಂದು ತಿಳಿಸಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆತ್ಮ ತೃಪ್ತಿಯಿಂದ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು. ಆದರೆ ಒತ್ತಡ ಮಾಡಿಕೊಂಡು ಕಾರ್ಯ ನಿರ್ವಹಿಸಬಾರದು ಎಂದು ವೆಂಕಟ್ ರಾಜಾ ಅವರು ಸಲಹೆ ಮಾಡಿದರು. ಕಂದಾಯ, ಪಂಚಾಯತ್ ರಾಜ್, ಪೊಲೀಸ್, ಅರಣ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಸಿದ್ದರಿಂದ ಎಲ್ಲರೂ ಒಳ್ಳೆಯ…
ವಿರಾಜಪೇಟೆ ಜ.10 NEWS DESK : ಬಾಳುಗೋಡು ಗ್ರಾಮದ ಕಂಡಿಮಕ್ಕಿ ಎಂಬಲ್ಲಿ ಅತ್ಯಂತ ಬಡ ಕುಟುಂಬವೊಂದರ ಮನೆಯ ಕನಸನ್ನು ಸಮಾಜಸೇವಕ ಬಿ.ಎಂ.ಗಣೇಶ್ ಮುಂದೆ ನಿಂತು ನನಸು ಮಾಡಿದ್ದಾರೆ. ಕಂಡಿಮಕ್ಕಿಯ ದಿವಂಗತ ಸನ್ನಿ ಎಂಬುವವರ ಪತ್ನಿ ಮಂಜುಳಾ ತಮ್ಮ ಇಬ್ಬರು ಮಕ್ಕಳೊಂದಿಗೆ ತೀರ ದುರ್ಬಲ ಮನೆಯಲ್ಲಿ ವಾಸವಿದ್ದರು. ಪುಟ್ಟ ಜೋಪಡಿಯಲ್ಲಿ ವಾಸಿಸುತ್ತಿದ್ದ ಇವರನ್ನು ಕಂಡು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ.ಗಣೇಶ್ ಸೂರು ಒದಗಿಸಿಕೊಡುವ ಭರವಸೆ ನೀಡಿದ್ದರು. ಕುಟುಂಬದ ದಯಾನೀಯ ಸ್ಥಿತಿಯನ್ನು ಸ್ಥಳೀಯರಾದ ಮಧು ಅವರ ಮೂಲಕ ತಿಳಿದುಕೊಂಡ ಗಣೇಶ್ ತಮ್ಮ ಸ್ವಂತ ಹಣದಲ್ಲಿ ಎರಡು ಲಕ್ಷ ವೆಚ್ಚದ ಮೂರು ಕೋಣೆಗಳುಳ್ಳ ಮನೆಯನ್ನು ನಿರ್ಮಿಸಿಕೊಟ್ಟಿದ್ದಾರೆ. ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದ್ದ ಬಡ ಕುಟುಂಬಗಳಿಗೆ ಈಗಾಗಲೇ 5 ಮನೆಗಳನ್ನು ನಿರ್ಮಿಸಿ ಕೊಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬದಂದು ಹೊಸಬೆಳಕು ಎಂದು ಮನೆಗೆ ಫಲಕ ಅಳವಡಿಸಿ ಮಂಜುಳಾ ಅವರಿಗೆ ಮನೆಯ ಕಿಲಿಕೈಯನ್ನು ಹಸ್ತಾಂತರ ಮಾಡಿದ್ದಾರೆ. ಬಳಿಕ ಮಾತನಾಡಿದ ಬಿ.ಎಂ. ಗಣೇಶ್ ಮಾತನಾಡಿ, ಕುಟುಂಬ ವಾಸಿಸುತ್ತಿರುವ ಗುಡಿಸಲು…
ಮಡಿಕೇರಿ ಜ.10 NEWS DESK : ಕೊಡಗಿನ ವಿವಿಧೆಡೆ ವ್ಯಾಘ್ರನ ಉಪಟಳ ಹೆಚ್ಚಾಗಿದ್ದು, ಜಾನುವಾರುಗಳನ್ನು ಕೊಂದು ಹಾಕಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಕಾಫಿ ತೋಟ ಮತ್ತು ಭತ್ತದ ಗದ್ದೆಗಳಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಬಿಟ್ಟಂಗಾಲ ಸಮೀಪದ ಕಂಡಂಗಾಲ ಗ್ರಾಮದ 1ನೇ ರುದ್ರಗುಪ್ಪೆಯ ರೈತ ಬಲ್ಲಡಿಚಂಡ ಲೋಕನಾಥ್ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಕಳೆದ 15 ದಿನಗಳಲ್ಲಿ ಈ ಭಾಗದಲ್ಲಿ 3 ಜಾನುವಾರುಗಳು ನಾಪತ್ತೆಯಾಗಿದ್ದು, ಕಾರ್ಮಿಕರು ತೋಟಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. *ಗ್ರಾಮಸ್ಥರ ಅಸಮಾಧಾನ* ಹುಲಿ ಸೆರೆಗೆ ಆಗ್ರಹಿಸಿ ಹಲವು ಬಾರಿ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆಯದ ಕಾರಣ ರೈತ ಸಂಘದ ಪ್ರಮುಖರು ಸ್ಥಳಕ್ಕೆ ಆಗಮಿಸಿ ಅರಣ್ಯ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹುಲಿ ಸೆರೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೀಗ ಘಟನಾ ಸ್ಥಳದಲ್ಲಿ ಹುಲಿ ಸೆರೆಗೆ ಬೋನನ್ನು ಅಳವಡಿಸಿರುವ ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿ ಕೂಂಬಿಂಗ್ ಕಾರ್ಯಾಚರಣೆಯನ್ನು…
ಸುಂಟಿಕೊಪ್ಪ ಜ.10 NEWS DESK : ಮಕ್ಕಳು ಕಷ್ಟಪಟ್ಟು ವಿದ್ಯೆಯನ್ನು ಕಲಿಯುವುದಕ್ಕಿಂತ ಇಷ್ಟಪಟ್ಟು ಕಲಿಯುವ ಮೂಲಕ ತಾವು ಕಲಿತ ಶಾಲೆಗೆ ಮತ್ತು ಶಿಕ್ಷಕ ವೃಂದಕ್ಕೆ ಗೌರವ ತರುವ ಮಾಡಬೇಕೆಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕರೆ ನೀಡಿದರು. ಸುಂಟಿಕೊಪ್ಪ ಸಂತ ಅಂತೋಣಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ನೀಡಲಾಗುತ್ತಿರುವ ಸ್ವಟರ್ ವಿತರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶೈಕ್ಷಣಿಕ ವರ್ಷದಲ್ಲಿ 30 ಸಾವಿರ ಸ್ವೆಟರ್‍ಗಳ ವಿತರಣೆಯನ್ನು ಹಮ್ಮಿಕೊಂಡಿದ್ದು, ಮೊದಲ ಹಂತದಲ್ಲಿ ಸರಕಾರಿ ಶಾಲೆಗಳನ್ನು ಆಯ್ದುಕೊಂಡಿದ್ದೇವೆ. ನಂತರ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೂ ವಿತರಣೆ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಬ್ಯಾಗ್‍ಗಳನ್ನು ಕೂಡ ವಿತರಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಅಪ್ಪಚ್ಚು ರಂಜನ್ ತಿಳಿಸಿದರು. ಸರಕಾರಿ ಶಾಲೆಗಳಲ್ಲಿ ಕಲಿತು ಬದುಕು ಕಟ್ಟಿಕೊಂಡವರು ನಾವು ಕಲಿತ ಶಾಲೆಯನ್ನು ಮರೆಯಬಾರದೆಂದು ಹೇಳಿದÀರು. ಸಾಧ್ಯವಾದಷ್ಟು ಸಹಾಯ ಮಾಡಬೇಕೆಂದು ಸಲಹೆ ನೀಡಿದರು. ನಂತರ ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆ, 7ನೇ ಹೊಸಕೋಟೆಯ ದೀಪ್ತಿ ಶಾಲೆಗೆ ಸ್ವೆಟರ್ ವಿತರಣೆ ಮಾಡಿದರು. ಈ ಸಂದರ್ಭ…






