ಮೂರ್ನಾಡು ಡಿ.25 NEWS DESK : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ನ್ಯಾಯಯುತವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೇ ಆ ಗುರಿಯನ್ನು ತಲುಪಲು ಅದಮ್ಯ ಪ್ರಯತ್ನ ಇದ್ದಾಗ ಮಾತ್ರ ಸಾಧನೆಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ಚರ್ಯ ಹೇಳಿದರು. ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿದ್ಯಾಸಂಸ್ಥೆಯ 26ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರಹೊಮ್ಮಿಸುವ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಪ್ರಮುಖವಾದದ್ದು, ಈಗಿನ ಮಕ್ಕಳು ಸಣ್ಣ ಸಣ್ಣ ವಿಚಾರಗಳಿಗೆ ಬದುಕನ್ನು ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಇವರಲ್ಲಿ ಧೈರ್ಯವನ್ನು ತುಂಬುವ ಕಾರ್ಯವಾಗಬೇಕು ಎಂದು ತಿಳಿಸಿದರು. ಇಂತಹ ಶಾಲೆಗಳಿಂದಲೆ ದೇಶವನ್ನು ಮುನ್ನೆಡುಸುವಂತಹ ಪ್ರತಿಭಾವಂತ ವ್ಯಕ್ತಿಗಳು ರೂಪುಗೊಳ್ಳುತ್ತಾರೆ ಎಂದು ಹೇಳಿದರು. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಜೀವನದ ಮೌಲ್ಯಗಳು, ಸಂಸ್ಕಾರಗಳನ್ನು ರೂಢಿಸಿಕೊಳ್ಳಬೇಕು. ಈಗಿನ ಮಕ್ಕಳು ಆರೋಗ್ಯಕರವಲ್ಲದ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು…
ಲೇಖಕ: admin
ನವದೆಹಲಿ NEWS DESK ಡಿ.25 : ಥಾಯ್ಲೆಂಡ್ ಮತ್ತು ಕಾಂಬೋಡಿಯಾ ದೇಶಗಳ ನಡುವಿನ ಗಡಿ ಸಂಘರ್ಷ ವಿವಾದಿತ ಪ್ರದೇಶದಲ್ಲಿರುವ ಪ್ರಸಕ್ತ ಕಾಂಬೋಡಿಯಾ ಗಡಿಯೊಳಗೆ ಬರುವ 9 ಮೀಟರ್ (ಸುಮಾರು 30 ಅಡಿ) ಎತ್ತರದ ವಿಷ್ಣುವಿನ ವಿಗ್ರಹವನ್ನು ಥಾಯ್ಲೆಂಡ್ ಸೇನೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿದೆ. ಇದು ಇತ್ತೀಚಿನ ದಿನಗಳಲ್ಲಿ ಹಿಂದೂ ಮತ್ತು ಬೌದ್ಧರ ಪ್ರಮುಖ ಪ್ರಾರ್ಥನಾ ಸ್ಥಳವಾಗಿ ಹೊರಹೊಮ್ಮಿತ್ತು. ಆದರೆ ಈ ಪ್ರದೇಶ ತನಗೆ ಸೇರಿದ್ದೆಂದು ವಾದಿಸುತ್ತಿರುವ ಥಾಯ್ಲೆಂಡ್ ಸೇನೆ ವಿಗ್ರಹವನ್ನು ಬೀಳಿಸಿದೆ. ಈ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ.
ಮಡಿಕೇರಿ ಡಿ.25 NEWS DESK : ಕನಾ೯ಟಕ ಶಾಸ್ತ್ರೀಯ ಸಂಗೀತದ ಸೀನಿಯರ್ ವಿಭಾಗದಲ್ಲಿ ತೇಗ೯ಡೆಯಾಗಿರುವ ಮಡಿಕೇರಿಯ ಪ್ರತಿಭಾವಂತ ವಿದ್ಯಾಥಿ೯ ತಾಪಂಡ ಹಷಿ೯ತ್ ಪೊನ್ನಪ್ಪ ಕಲಾಪ್ರತಿಭೋತ್ಸವದಲ್ಲಿ ರಾಜ್ಯಮಟ್ಟಕ್ಕೂ ಆಯ್ಕೆಯಾಗಿ ಸಾಧನೆ ತೋರಿದ್ದಾರೆ. 2025ನೇ ಸಾಲಿನಲ್ಲಿ ಕನಾ೯ಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದಶ೯ನ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ವತಿಯಿಂದ ನಡೆಸಲಾದ ಕನಾ೯ಟಕ ಶಾಸ್ತ್ರೀಯ ಸಂಗೀತದ ಸೀನಿಯರ್ ವಿಭಾಗದಲ್ಲಿ ಕೊಡಗಿನಿಂದ ಪರೀಕ್ಷೆ ಬರೆದಿದ್ದ ಏಕೈಕ ವಿದ್ಯಾಥಿ೯ ತಾಪಂಡ ಹಷಿ೯ತ್ ಪೊನ್ನಪ್ಪ, 500 ಅಂಕಗಳಿಗೆ 285 ಅಂಕ ಪಡೆದು ದ್ವಿತೀಯ ದಜೆ೯ಯಲ್ಲಿ ತೇಗ೯ಡೆಯಾಗಿದ್ದಾರೆ. ಇವರು ಮಡಿಕೇರಿಯ ದೇಚೂರು ನಿವಾಸಿ ತಾಪಂಡ ಲೋಕೇಶ್ ಮತ್ತು ಶುಭಾ ದಂಪತಿಯ ಪುತ್ರರಾಗಿದ್ದು ನಗರದ ಸಂಗೀತ ಶಿಕ್ಷಕಿ ಸರೋಜಾ ಸುಧಾಕರ್ ಬಳಿ ಸಂಗೀತಾಭ್ಯಾಸ ಮಾಡುತ್ತಿದ್ದಾನೆ. ಮಡಿಕೇರಿಯ ಸಂತ ಜೋಸೇಫರ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವಿದ್ಯಾಥಿ೯ಯಾಗಿದ್ದಾನೆ. ಕನ್ನಡ ಮತ್ತು ಸಂಸ್ಕೖತಿ ಇಲಾಖೆಯು ಮಡಿಕೇರಿಯಲ್ಲಿ ನಡೆಸಿದ ಕಲಾ ಪ್ರತಿಭೋತ್ಸವದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ತಾಪಂಡ ಹಷಿ೯ತ್ ಪೊನ್ನಪ್ಪ, ಕಿಶೋರ ಪ್ರತಿಭೆಯಲ್ಲಿ ಪ್ರಥಮ ಸ್ಥಾನ…
ಮಡಿಕೇರಿ ಡಿ.25 NEWS DESK : ಚಿಕ್ಕಮಂಗಳೂರಿನ ಬಾಳೆ ಹೊನ್ನೂರಿನಲ್ಲಿ ನಡೆಯುತ್ತಿರುವ ಕಾಫಿ ಸಂಶೋಧನಾ ಕೇಂದ್ರದ ಶತಮಾನೋತ್ಸವ ಎರಡನೇಯ ದಿನದ ಕಾರ್ಯಕ್ರಮದಲ್ಲಿ ಮಡಿಕೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ವತಿಯಿಂದ ಉಮ್ಮತಾಟ್ ಪ್ರದರ್ಶನ ನಡೆಯಿತು. ಮೂವೆರ ಸರಿತ ಹರೀಶ್, ಚೊಟ್ಟೆಯಂಡ ಮಿಥಿಲ ಸಂಜು, ಓಡಿಯಂಡ ಜಾನ್ಸಿ ರಾಜ,ಪೊನ್ನಚೆಟ್ಟೀರ ಡಾಟಿ ಅರುಣ್, ಕನ್ನಂಡ ಶೀತಲ್ ರಿವಿನ್, ಐಚೆಟ್ಟೀರ ಸುನಿತ ಮಾಚಯ್ಯ, ಮಿನ್ನಂಡ ಜಾನ್ಸಿ ಮಾದಪ್ಪ,ತಾಪಂಡ ಶುಭಾ ಲೋಕೇಶ್, ಕನ್ನಂಡ ಪ್ರಮಿತ ಉತ್ತಪ್ಪ ಭಾಗವಹಿಸಿದರು.
ಮಡಿಕೇರಿ ಡಿ.25 NEWS DESK : ಏಸು ಕ್ರಿಸ್ತ ಜನನದ ಸಂಕೇತವಾದ ಕ್ರಿಸ್‍ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಿದರು. ವಿವಿಧ ಚರ್ಚ್‍ಗಳಲ್ಲಿ ರಾತ್ರಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಏಸು ಧರೆಗಿಳಿದನೆಂದು ಗೋದಲಿಯಲ್ಲಿ ಬಾಲಯೇಸುವಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾಭಕ್ತಿಯನ್ನು ಮೆರೆದರು. ಮಡಿಕೇರಿಯ ಸಂತ ಮೈಕಲರ ಚರ್ಚ್ ಆವರಣದಲ್ಲಿ ನಿರ್ಮಿಸಲಾಗಿದ್ದ ಗೋದಲಿಯಲ್ಲಿ ಬಾಲ ಏಸುವಿನ ಪ್ರತಿಕೃತಿಯನ್ನಿರಿಸಿ ಪೂಜಿಸಲಾಯಿತು. ಧರ್ಮಗುರು ಜಾರ್ಜ್ ದೀಪಕ್ ಪೂಜೆ ಸಲ್ಲಿಸಿ, ಏಸುವಿನ ಸಂದೇಶವನ್ನು ಸಾರಿದರು. ಸಂತ ಮೈಕಲರ ಸಂಸ್ಥೆಯ ಪ್ರತಿನಿಧಿ ಸಂಜಯ್ ಹಾಗೂ ಪ್ರಮುಖರು ಇದ್ದರು.
ವಿರಾಜಪೇಟೆ ಡಿ.25 NEWS DESK : ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಅವಶ್ಯ. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಮೂಲಸೌಕರ್ಯ ಒದಗಿಸಲು ಅಗತ್ಯ ಸಹಕಾರ ನೀಡುವುದಾಗಿ ದಾನಿಗಳು ಹಾಗೂ ಮಾಜಿ ಸೈನಿಕ ಕ್ಯಾಪ್ಟನ್ ಬಾಚುರ ಎಸ್ ಪೂಣಚ್ಚ ಭರವಸೆ ನೀಡಿದರು. ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಟಿ ಶರ್ಟ್ ಹಾಗೂ ಜೆರ್ಸಿ ವಿತರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ತನಗೆ ವಿದ್ಯೆ ನೀಡಿದ ಶಾಲೆಗೆ ಏನಾದರೊಂದು ಕೊಡುಗೆ ನೀಡಬೇಕು ಎನ್ನುವ ನಿಟ್ಟಿನಲ್ಲಿ ಈ ಶಾಲೆಯಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ತನ್ನಿಂದ ಆದ ಸಹಾಯವನ್ನು ನೀಡಿದ್ದೇನೆ. ಮುಂದಿನ ದಿನಗಳಲ್ಲಿಯೂ ಸಾಧ್ಯವಾದಷ್ಟು ನೆರವು ನೀಡುತ್ತೇನೆ. ಇಲ್ಲಿಂದ ವಿದ್ಯೆ ಪಡೆದ 30 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಆಗಿ ನಿರ್ವಋತ್ತಿಗೊಂಡಿದ್ದೇನೆ. ಇದು ನನ್ನ ಮೈಲಿಗಲ್ಲು. ಸಮಾಜಕ್ಕೆ ನಾವು ಏನಾದರೊಂದು ಕೊಡುಗೆ ನೀಡಬೇಕು. ಇಲ್ಲಿನ ವಿದ್ಯಾರ್ಥಿಗಳು ಕೂಡ ಉನ್ನತ ವಿದ್ಯಾಭ್ಯಾಸ ಪಡೆದು ಸೇನೆಗೆ ಸೇರುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.…
ಬೆಂಗಳೂರು ಡಿ.24 NEWS DESK : ರಾಜ್ಯ ಸರ್ಕಾರಿ ನೌಕರರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಡುಗಡೆಗೊಳಿಸಿ ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭ ಕೋರಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಹಾಗೂ ಸಂಘದ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಡಿ.24 NEWS DESK : ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಆನೆಕಾಡು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಪ್ರವಾಸಿಗರು ಎಸೆದಿದ್ದ ಅನುಪಯುಕ್ತ ವಸ್ತುಗಳು, ತ್ಯಾಜ್ಯವನ್ನು ತೆರವುಗೊಳಿಸುವ ಕಾಯಕದಲ್ಲಿ ತೊಡಗಿಸಿಕೊಂಡ ಸುಂಟಿಕೊಪ್ಪ ಪರಿಸರ ಪ್ರೇಮಿ ಡೇವಿಡ್ ಡಿಸೋಜಾ ಅವರನ್ನು ಕುಶಾಲನಗರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ಅಣ್ಣಯ್ಯ ನೇತೃತ್ವದಲ್ಲಿ ಸಮೀಪದ ಕಿಂಗ್ಸ್ ವೇ ರೆಸಾರ್ಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನದಿಂದ ಪ್ರೇರಣೆಗೊಂಡ ಡೇವಿಡ್ ತಾನು ತೆರಳುವ ಮಾರ್ಗದಲ್ಲಿ ಆನೆಕಾಡು ಮೀಸಲು ಅರಣ್ಯ ಬಳಿ ಎಲ್ಲೆಂದರಲ್ಲಿ ಪ್ರವಾಸಿಗರು ಎಸೆದಿರುವ ತ್ಯಾಜ್ಯಗಳನ್ನು ಸತತ ನಾಲ್ಕು ದಿನಗಳ ಕಾಲ ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ. 7ನೇ ಹೊಸಕೋಟೆ ಮೆಟ್ನಳ್ಳ ಬಳಿಯಿಂದ ಆನೆಕಾಡು ವ್ಯಾಪ್ತಿಯ ಉದ್ದಕ್ಕೂ ಪ್ಲಾಸ್ಟಿಕ್ ಮತ್ತು ನಿರುಪಯುಕ್ತ ವಸ್ತುಗಳನ್ನು ಸಂಗ್ರಹಿಸಿ ನಂತರ ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಟ್ರ್ಯಾಕ್ಟರ್ ನಲ್ಲಿ ಸಾಗಿಸಿ ವಿಲೇವಾರಿ ಮಾಡಲು ಕ್ರಮ ಕೈಗೊಂಡಿದ್ದಾರೆ. ಸುಮಾರು…
ಮಡಿಕೇರಿ ಡಿ.24 NEWS DESK : ಕಾಳಸಂತೆಯಲ್ಲಿ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಮಾರಾಟವಾಗುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪ್ರಶಾಂತ್ ಸೂಚನೆ ನೀಡಿದ್ದಾರೆ. ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ನಡೆದ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಡವರ ಹಸಿವು ನೀಗಿಸುವುದಕ್ಕಾಗಿ ‘ಅನ್ನಭಾಗ್ಯ’ ಯೋಜನೆಯ ಮೂಲಕ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಕುರಿತು ಆರೋಪಗಳಿವೆ. ನ್ಯಾಯಬೆಲೆ ಅಂಗಡಿಗಳಲ್ಲಿ ಸೂಚನಾ ಫಲಕ ಅಳವಡಿಸಬೇಕೆನ್ನುವ ನಿಯಮವಿದ್ದರೂ ಅದನ್ನು ಪಾಲಿಸುತ್ತಿಲ್ಲ. ತಕ್ಷಣ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದರು. ಸರಕಾರದ ಯೋಜನೆಗಳು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲು ಸಭೆ ನಿರ್ಧರಿಸಿತು. ಚೆಸ್ಕಾಂ ಇಲಾಖೆಯಿಂದ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದಾರೆ ಎಂದು ಸಭೆಯಲ್ಲಿ ಸರ್ವಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಪೊನ್ನಂಪೇಟೆ ತಾಲ್ಲೂಕಿಗೆ…
ಸೋಮವಾರಪೇಟೆ ಡಿ.24 NEWS DESK : ಐಪಿಎಲ್‌ನಲ್ಲಿ ಬಾಂಗ್ಲಾದೇಶದ ಆಟಗಾರರನ್ನು ಒಳಪಡಿಸದಂತೆ ನಿರ್ಧಾರ ಕೈಗೊಳ್ಳುವಂತೆ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಅಪ್ಪಚ್ಚು ರಂಜನ್ ಪ್ರಧಾನಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇತ್ತೀಚಿನ ಅಂತರರಾಷ್ಟ್ರೀಯ ಬೆಳವಣಿಗೆಗಳು, ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ತರುವ ಘಟನೆಗಳು, ಆಂತರಿಕ ಭದ್ರತಾ ಸಂವೇದನಾಶೀಲತೆಗಳು ಹಾಗೂ ಭಾರತೀಯ ನಾಗರಿಕರ ಮನೋಭಾವಗಳನ್ನು ಪರಿಗಣಿಸಿ, ಐಪಿಎಲ್ನಂತಹ ಪ್ರಮುಖ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿದೇಶಿ ಆಟಗಾರರ ಪಾಲ್ಗೊಳ್ಳುವಿಕೆಗೆ ಸಂಬಂಧಿಸಿದ ಪ್ರಸ್ತುತ ನೀತಿಗಳನ್ನು ಸರ್ಕಾರವು ಪರಿಶೀಲಿಸಬೇಕಿದೆ. ರಾಷ್ಟ್ರೀಯ ಹಿತಾಸಕ್ತಿ, ಆಂತರಿಕ ಭದ್ರತಾ ಪರಿಗಣನೆಗಳು ಹಾಗೂ ಸಾರ್ವಜನಿಕ ಸಾಮರಸ್ಯದ ಆಧಾರದ ಮೇಲೆ ಕೈಗೊಳ್ಳುವ ಇಂತಹ ನಿರ್ಧಾರಗಳು ನಾಗರಿಕರಲ್ಲಿ ವಿಶ್ವಾಸವನ್ನು ಮೂಡಿಸಿ, ಭಾರತೀಯ ಕ್ರೀಡೆಯ ಗೌರವ ಹಾಗೂ ಅಖಂಡತೆಯನ್ನು ಕಾಪಾಡುತ್ತದೆ. ಈ ವಿಷಯದಲ್ಲಿ ಸ್ಪಷ್ಟ ಮಾರ್ಗಸೂಚಿಗಳು ಮತ್ತು ಪಾರದರ್ಶಕ ಸಂವಹನವನ್ನು ನೀಡುವಂತೆ ವಿನಂತಿಸಿದ್ದಾರೆ. ಭಾರತದ ಏಕತೆ, ಭದ್ರತೆ ಮತ್ತು ಮೌಲ್ಯಗಳನ್ನು ರಕ್ಷಿಸುವಲ್ಲಿ ನಿಮ್ಮ ನಾಯಕತ್ವ ಮತ್ತು ವಿವೇಕದ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದೂ ಅಪ್ಪಚ್ಚು ರಂಜನ್ ಪತ್ರದಲ್ಲಿ…






