ಲೇಖಕ: admin

ಕುಶಾಲನಗರ ನ.6 NEWS DESK : 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣ ಮತ್ತು ಬಸವಾದಿ ಶರಣರದು ನಡೆ- ನುಡಿ ಸಿದ್ಧಾಂತ. ನುಡಿದಂತೆ ನಡೆದು ತೋರಿದ ಸಾತ್ವಿಕ ಧೀಮಂತರು, ಕಾಯಕ ಯೋಗಿಗಳು. ಅವರದು ದಯಾಮೂಲವಾದ ಧರ್ಮವಾಗಿತ್ತು ಎಂದು ಕೊಡ್ಲಿಪೇಟೆ ಕಲ್ಮಠದ ಮಹಾಂತ ಸ್ವಾಮೀಜಿ ಹೇಳಿದರು. ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ ಹಾಗೂ ತೊರೆನೂರು ವಿರಕ್ತ ಮಠದ ವತಿಯಿಂದ ತೊರೆನೂರು ವಿರಕ್ತ ಮಠದಲ್ಲಿ ಬುಧವಾರ ಸಂಜೆ ನಡೆದ ಮಾಸಿಕ ಹುಣ್ಣಿಮೆ‌ ಪೂಜಾ ಮಹೋತ್ಸವ ಹಾಗೂ ಶಿವಾನುಭವ ಗೋಷ್ಠಿಯಲ್ಲಿ 12ನೇ ಶತಮಾನದ ಶರಣರ ಸಾಮಾಜಿಕ ಮೌಲ್ಯಗಳು ಕುರಿತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದರು. ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸುವ ಮೂಲಕ ಅವರನ್ನು ಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಇದೆ. ಇದರಲ್ಲಿ ತಾಯಂದಿರ ಪಾತ್ರ ಪ್ರಮುಖವಾಗಿದೆ ಎಂದರು. ‌‌‌‌‌‌ಅಂದು ಶರಣರು ಪೂಜೆಗಿಂತಲೂ ಹೆಚ್ಚಿನ ಮಹತ್ವವನ್ನು ದುಡಿಮೆಗೆ ಕೊಟ್ಟಿದ್ದರು. ಕಾಯಕ ಅವರ ಪಂಚಪ್ರಾಣವಾಗಿತ್ತು.…

Read More

ಮಡಿಕೇರಿ ನ.6 NEWS DESK :  ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಕುಶಾಲನಗರ ತಾಲೂಕಿನ ಹೇರೂರು ಗ್ರಾಮದಲ್ಲಿ ಬ್ಯಾಂಕ್ ನ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್ಥಿಕ ಸಮಲೋಚರಕ ನಬಿ ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ಹಾಗೂ ವಾರ್ಷಿಕವಾಗಿ 436 ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 400000 ರೂ ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ…

Read More

ನಾಪೋಕ್ಲು ನ.6 NEWS DESK : 2019-2022 ಅವಧಿಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತು ತಂಡ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಭೇಟಿ ಮಾಡಿದರು. ಚಿಕ್ಕಮಗಳೂರಿನ ಅವರ ಸ್ವಗೃಹದಲ್ಲಿ ಭೇಟಿಯಾದ ತಂಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವರಿಗೆ ಅಕಾಡೆಮಿ ಅವಧಿಯಲ್ಲಿ ಹಮ್ಮಿಕೊಂಡಿದ್ದ ಮಹತ್ತರ ಯೋಜನೆಗಳಾದ ಅರೆಭಾಷೆ ಪದಕೋಶ, ಅರೆಭಾಷೆ ವಿಶ್ವಕೋಶ, ಅರೆಭಾಷೆ ವಸ್ತುಕೋಶ, ಸಾಹೇಬ್ರು ಬಂದವೆ ನಾಟಕ ತಿರುಗಾಟ ಹಾಗೂ ಗ್ರಾಮ ವಾಸ್ತವ್ಯದ ಕಲಾಚಿತ್ರ ಮುಂತಾದ ಭಾಷೆ ಮತ್ತು ಸಂಸ್ಕೃತಿ ಅಭಿವೃದ್ಧಿ ಬಗೆಗೆ ಕಾಳಜಿ ವಹಿಸಿ ಮಾಡಿರುವ ಪ್ರಾದೇಶಿಕ ಮತ್ತು ಅರೆಭಾಷೆ ಸಮುದಾಯದ ಮೈಲಿಗಲ್ಲು ಹಾಗೂ ಹೆಮ್ಮೆಯ ಕೃತಿಗಳನ್ನು ನೀಡಿದರು. ಅಕಾಡೆಮಿಯ ಮಾಜಿ ಸದಸ್ಯರಾದ ಜಾನಕಿ ಬೆಳಿಯಪ್ಪ ಗೌಡ, ಪ್ರೇಮಾ ರಾಘವಯ್ಯ ಚೊಕ್ಕಾಡಿ, ಧನಂಜಯ ಅಗೋಳಿಕಜೆ, ಸ್ಮಿತಾ ಅಮೃತರಾಜ್, ದಂಬೆಕೋಡಿ ಆನಂದ ಗೌಡ, ಡಾ.ದಯಾನಂದ ಕೂಡಕಂಡಿ, ಕುಸುಮಾಧರ ಎ.ಟಿ., ಪುರುಷೋತ್ತಮ ಕಿರ್ಲಾಯ, ಜಯಪ್ರಕಾಶ ಮೊಂಟಡ್ಕ, ಡಾ.ವಿಶ್ವನಾಥ ಬದಿಕಾನ, ಡಾ.ಪುರುಷೋತ್ತಮ…

Read More

ಮಡಿಕೇರಿ ನ.6 NEWS DESK : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ 49ನೇ ವರ್ಷದ ದಸರಾ ಮಹೋತ್ಸವದ ಶೋಭಾಯಾತ್ರೆಯಲ್ಲಿದ್ದ ಮೂರ್ತಿಗಳ ಶಾಂತಿಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಆವರಣದಲ್ಲಿ ಸಂಜೆ ಶಾಂತಿಪೂಜೆ, ರಂಗಪೂಜೆ ಮತ್ತು ದೀಪಾರಾಧನೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ ಪ್ರಾರ್ಥನೆ ನೆರವೇರಿಸಿದರು. ಇದೇ ಸಂದರ್ಭ ದಶ ದೇವಾಲಯದ ಎಲ್ಲಾ ಅಧ್ಯಕ್ಷರುಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯು ಮುಂದಿನ ವರ್ಷ 50ನೇ ವರ್ಷದ ದಸರಾ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು, ಸರ್ವರು ಸಹಕಾರ ನೀಡಬೇಕೆಂದು ಸಮಿತಿಯ ಅಧ್ಯಕ್ಷ ವಿಘ್ನೇಶ್ ಸಿ.ಯು ಮನವಿ ಮಾಡಿದರು.

Read More

ನಾಪೋಕ್ಲು ನ.6  NEWS DESK  : ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ 171ನೇ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಓಣಂ ಆಚರಣೆಯನ್ನು ನ.23 ರಂದು ನಾಪೋಕ್ಲುವಿನ ಸರ್ಕಾರಿ ಮಾದರಿ ಪ್ರಾಥಮಿಕ  ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆಚರಣೆ ಸಮಿತಿ ಅಧ್ಯಕ್ಷ ಶ್ರೀಧರ್ ಹೇಳಿದರು. ನಾಪೋಕ್ಲುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಜಯಂತಿ ಹಾಗೂ ಓಣಂ ಆಚರಣೆಯ ಪ್ರಯುಕ್ತ ಕ್ರಿಕೆಟ್, ಹಗ್ಗಜಗ್ಗಾಟ ಹಾಗೂ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ನ.23 ರಂದು ಮಾರುಕಟ್ಟೆ ಆವರಣದಿಂದ ಬೆಳಿಗ್ಗೆ 10 ಗಂಟೆಗೆ ಗುರುವಿನ ಅಲಂಕೃತ ಮಂಟಪವನ್ನು ಚಂಡೆಮೇಳಗಳೊಂದಿಗೆ ಮೆರವಣಿಗೆ ಸಾಗಿ ಶಾಲಾ ಮೈದಾನಕ್ಕೆ ಬರಲಿದೆ ಎಂದರು. ನ.19 ರಂದು ಬೆಳಿಗ್ಗೆ 9.30 ಗಂಟೆಗೆ ಕ್ರೀಡಾಕೂಟವನ್ನು ಎಸ್‍ಎನ್‍ಡಿಪಿ ಕೊಡಗು ಯೂನಿಯನ್ ಸಿದ್ದಾಪುರ ಘಟಕದ ಅಧ್ಯಕ್ಷ ವಿ.ಕೆ.ಲೋಕೇಶ್ ಉದ್ಘಾಟಿಸುವರು. ನ.23 ರಂದು ಬೆಳಿಗ್ಗೆ 10 ಗಂಟೆಗೆ ಮೆರವಣಿಗೆಯನ್ನು  ಸಂಘಟನಾ ಕಾರ್ಯದರ್ಶಿ ಹಿತೇಶ್ (ಚಿನ್ನ) ಉದ್ಘಾಟಿಸಲಿದ್ದಾರೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ…

Read More

ನಾಪೋಕ್ಲು ನ.6 NEWS DESK : ಪಿಪಿ ಫೌಂಡೇಶನ್ ನೇತೃತ್ವದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್, ಹಿಂದೂ ಮಲೆಯಾಳಿ ಸಂಘ, ಆಟೋ ಚಾಲಕರ ಸಂಘ, ಎಸ್‍ಎನ್ಡಿಪಿ, ಟೌನ್ ಮುಸ್ಲಿಂ ಜಮಾತ್ ಸಹಯೋಗದೊಂದಿಗೆ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಪಿಪಿ ಫೌಂಡೇಶನ್ ಅಧ್ಯಕ್ಷರಾದ ಎಮ್ ಎಚ್ ಅಬ್ದುಲ್ಲ ಅವರು ಅಧ್ಯಕ್ಷತೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ತ ನಿಧಿ ವೈದ್ಯಾಧಿಕಾರಿ ಡಾ.ಕರುಂಬಯ್ಯ ಮಾತನಾಡಿ, ರಕ್ತದಾನ ಶ್ರೇಷ್ಠದಾನ ಇದರಿಂದ ಹಲವರ ಜೀವ ಉಳಿಸಬಹುದು. ಆರೋಗ್ಯವಂತ ವ್ಯಕ್ತಿಯು ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ರಕ್ತದಾನ ಮಾಡಬಹುದಾಗಿದೆ ಎಂದರು. ರಕ್ತದಾನದ ಬಗ್ಗೆ ಕೆಲವು ತಪ್ಪು ಅಭಿಪ್ರಾಯಗಳಿದ್ದು, ಇದು ಸರಿಯಲ್ಲ. ಒಂದು ಬಾರಿ ಶಿಬಿರಗಳನ್ನು ಏರ್ಪಡಿಸಿ ಹೆಚ್ಚು ರಕ್ತ ಸಂಗ್ರಹಿಸುವ ಬದಲು ರಕ್ತದ ಬೇಡಿಕೆಗೆ ಅನುಗುಣವಾಗಿ ತಿಂಗಳಿಗೆ ಒಂದು ಸಾರಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಒಳ್ಳೆಯದು ಎಂದರು. ರಕ್ತದಾನ ಶಿಬಿರಕ್ಕೆ ಸಂಘ ಸಂಸ್ಥೆಗಳು ನೆರವು ನೀಡಿವೆ. ಇಂತಹ ಸಂಘ ಸಂಸ್ಥೆಗಳಿಂದ ಪ್ರೇರಣೆಯಾಗಿ ಮತ್ತಷ್ಟು ಸಂಘ ಸಂಸ್ಥೆಗಳಿಂದ…

Read More

ಬೆಂಗಳೂರು ನ.6 NEWS DESK : ಸ್ಯಾಂಡಲ್‌ವುಡ್‌ನಲ್ಲಿ ಪೋಷಕ ನಟ ಹಾಗೂ ಖಳನಟರಾಗಿ ಖ್ಯಾತಿ ಪಡೆದಿದ್ದ ಹರೀಶ್ ರಾಯ್ ಇಂದು (ಗುರುವಾರ) ನಿಧನರಾಗಿದ್ದಾರೆ. ಅವರು ಬಹು ಕಾಲದಿಂದ ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್‌ ಕ್ಯಾನ್ಸರ್‌  ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಹೆಂಡತಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ತಮಿಳಿನಲ್ಲೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂಡರ್​ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್​ವುಡ್​ನ ಟಾಪ್ ಸಿನಿಮಾ ಕೆಜಿಎಫ್​​ ಚಾಪ್ಟರ್-1 ಹಾಗೂ ಕೆಜಿಎಫ್​​ ಚಾಪ್ಟರ್-2 ರಲ್ಲಿ ಅಭಿನಯಿಸಿದ್ದಾರೆ.

Read More

ಮಡಿಕೇರಿ ನ.6 NEWS DESK : ವಿರಾಜಪೇಟೆ ಕ್ಷೇತ್ರದ ಸಾರಿಗೆ ಸಮಸ್ಯೆಗಳು ಹಾಗೂ ಕೊಡಗು ಜಿಲ್ಲಾ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಾರಿಗೆ ಸಚಿವರ ಗಮನ ಸೆಳೆದರು. ಕೊಡಗಿನಲ್ಲಿ ಚಲಿಸುವ ಎಲ್ಲಾ ಆಟೋರಿಕ್ಷಾ ಗಳಿಗೆ ಜಿಲ್ಲಾ ಪರವಾನಿಗೆ ಅನುಮತಿ ನೀಡಬೇಕು. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಹಾಗೂ ಪೊನ್ನಂಪೇಟೆ ವಾಹನ ತಪಾಸಣೆ ಕ್ಯಾಂಪ್ ತೆರೆಯಲು ಹಾಗೂ ವಿರಾಜಪೇಟೆಯಲ್ಲಿ ಡಿಪೋ ಆರಂಭಿಸಲು ಮನವಿ ಸಲ್ಲಿಸಿದರು. ಈ ಬಗ್ಗೆ  ಸಚಿವರು ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಆಟೋ ಮಾಲೀಕರ ಮತ್ತು ಚಾಲಕರ ಸಂಘ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ನ.6 NEWS DESK : ತಿತಿಮತಿ ಸಮುದಾಯ ಭವನದಲ್ಲಿ ನಡೆದ  ದೇವರಪುರ ಹಾಗೂ ತಿತಿಮತಿ ಶಕ್ತಿಕೇಂದ್ರಗಳ ಕಾರ್ಯಕರ್ತರ ಸಭೆಯಲ್ಲಿ‌ ಸಂಸದ ಯದುವೀರ್ ಒಡೆಯರ್ ಅವರು ಪಾಲ್ಗೊಂಡರು. ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಉಪಾಧ್ಯಕ್ಷ ಅರುಣ್ ಭೀಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್, ನೆಲ್ಲೀರ ಚಲನ್, ವಿರಾಜಪೇಟೆ ಮಂಡಲ ಪ್ರ.ಕಾರ್ಯದರ್ಶಿಗಳಾದ ಅಜಿತ್ ಕರುಂಬಯ್ಯ, ಮುದ್ದಿಯಡ ಮಂಜು, ತಿತಿಮತಿ ಶಕ್ತಿ ಕೇಂದ್ರ ಅಧ್ಯಕ್ಷ ಅಪ್ಪಿ, ದೇವರಪುರ ಶಕ್ತಿ ಕೇಂದ್ರ ಅಧ್ಯಕ್ಷ ಮಂಜು ಭಾಗವಹಿಸಿದರು. ಈ ಸಂದರ್ಭ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

Read More

ಮಡಿಕೇರಿ NEWS DESK  ನ.5 : ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಸಂದೇಶಗಳನ್ನು ರವಾನಿಸಿರುವ ವ್ಯಕ್ತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಗೌಡ ಸಮಾಜಗಳ ಒಕ್ಕೂಟ ದೂರು ದಾಖಲಿಸಿದೆ. ಕಳೆದ ಅ.31 ರಂದು ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಫೇಸ್‌ಬುಕ್ ಖಾತೆಯಲ್ಲಿ ‘ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಸ್ಮರಿಸುವ’ ಎಂಬ ಪೋಸ್ಟ್ನಲ್ಲಿ ಹಲವಾರು ಪರ ವಿರೋಧ ಚರ್ಚೆ ನಡೆದಿದೆ. ಈ ಪೋಸ್ಟ್ನಲ್ಲಿ ಅರೆಯಡ ರಾಜ ಎಂಬ ವ್ಯಕ್ತಿ ಕೊಡಗಿನ ಇತಿಹಾಸವನ್ನು ತಿರುಚಿ ಹಾಲೇರಿ ರಾಜ ವಂಶಸ್ಥರನ್ನು ಹೀನಾಯವಾಗಿ ನಿಂದಿಸಿ, ಅಪ್ಪಯ್ಯಗೌಡರ ವಿರುದ್ಧ ಅವಹೇಳನಕಾರಿಯಾಗಿ ಸಂದೇಶಗಳನ್ನು ಹಾಕಿದ್ದಲ್ಲದೆ ಗೌಡ ಜನಾಂಗದವರನ್ನು ನಿಂದಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ. ಈ ರೀತಿಯ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟಿರುವ ರಾಜ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹಾಗೂ…

Read More