ಮಡಿಕೇರಿ ನ.5 NEWS DESK : ಮಿಷನ್ ವಾತ್ಸಲ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ಜಿಲ್ಲಾ ಮಟ್ಟದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಾದ ವಿಶೇಷ ಪಾಲನಾ ಯೋಜನೆ, ಪ್ರಾಯೋಜಕತ್ವ ಕಾರ್ಯಕ್ರಮ, ದತ್ತು ಕಾರ್ಯಕ್ರಮ, ಉಪಕಾರ ಯೋಜನೆ, ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಮತ್ತಿತರ ಯೋಜನೆಗಳ ಪ್ರಗತಿಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟಲು ಎಲ್ಲಾ ಇಲಾಖೆಗಳು ಆಧ್ಯತೆಯ ಮೇರೆಗೆ ಕ್ರಮವಹಿಸಿ ಕಳೆದ ಐದು ವರ್ಷಗಳ ಪ್ರಕರಣಗಳ ಅವಲೋಕನ ನಡೆಸಿ ಅತೀ ಹೆಚ್ಚು ಪ್ರಕರಣಗಳು ನಡೆಯುವ ಪ್ರದೇಶಗಳನ್ನು ಗುರುತಿಸಿ ಅಂತಹ ಪ್ರದೇಶದಲ್ಲಿ ಹೆಚ್ಚಿನ ಅರಿವು ಹಾಗೂ ಕಾನೂನುಗಳ ಕುರಿತು ಪ್ರಚಾರ ನಡೆಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಇವರು…
ಲೇಖಕ: admin
ಮಡಿಕೇರಿ ನ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಡೆದ ಕಲಾ ಪ್ರತಿಭೋತ್ಸವದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಒಂದು ಕಡೆ ಶಾಸ್ತ್ರೀಯ ನೃತ್ಯ, ಮತ್ತೊಂದು ಕಡೆ ಜನಪದ ಗೀತೆ, ಇನ್ನೊಂದು ಕಡೆ ಚಿತ್ರಕಲೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಹೀಗೆ ಕಲಾ ಪ್ರತಿಭೋತ್ಸವದಲ್ಲಿ ನೂರಾರು ವಿದ್ಯಾರ್ಥಿಗಳು ಲವಲವಿಕೆಯಿಂದ ಪಾಲ್ಗೊಂಡಿದ್ದು ಕಂಡುಬಂದಿತು. ನಗರದ ಗಾಂಧಿ ಭವನದಲ್ಲಿ ನಡೆದ ಕಲಾ ಪ್ರತಿಭೋತ್ಸವದಲ್ಲಿ ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆ ಹೀಗೆ ಸಮೂಹ ಸ್ಪರ್ಧೆಗಳು ನಡೆದಿದ್ದು ವಿಶೇಷವಾಗಿತ್ತು. :: ಬಾಲ ಪ್ರತಿಭೆ :: ಶಾಸ್ತ್ರೀಯ ನೃತ್ಯ, ಜನಪದ ಗೀತೆ, ಚಿತ್ರಕಲೆ, ಕರ್ನಾಟಕ/ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ/ಹಿಂದೂಸ್ತಾನಿ ವಾದ್ಯ ಸಂಗೀತ, ಸುಗಮ ಸಂಗೀತ. :: ಕಿಶೋರ ಪ್ರತಿಭೆ :: ಚಿತ್ರಕಲೆ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ, ಶಾಸ್ತ್ರೀಯ ನೃತ್ಯ, ಜನಪದ ಗೀತೆ, ಕರ್ನಾಟಕ/ ಹಿಂದೂಸ್ತಾನಿ ವಾದ್ಯ ಸಂಗೀತ ಮತ್ತು ಸುಗಮ ಸಂಗೀತ ::…
ಮಡಿಕೇರಿ ನ.4 NEWS DESK : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ 49ನೇ ವರ್ಷದ ದಸರಾ ಮಹೋತ್ಸವದ ಶೋಭಾಯಾತ್ರೆಯಲ್ಲಿದ್ದ ಮೂರ್ತಿಗಳ ಶಾಂತಿಪೂಜೆ ನ.5 ರಂದು ನಡೆಯಲಿದೆ. ಬುಧವಾರ ಸಂಜೆ 6.30 ಗಂಟೆಗೆ ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಆವರಣದಲ್ಲಿ ಶಾಂತಿಪೂಜೆ, ರಂಗಪೂಜೆ ಮತ್ತು ದೀಪಾರಾಧನೆ ಜರುಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿಯ ಅಧ್ಯಕ್ಷ ವಿಘ್ನೇಶ್ ಸಿ.ಯು ಮನವಿ ಮಾಡಿದ್ದಾರೆ. ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯು ಮುಂದಿನ ವರ್ಷ 50ನೇ ವರ್ಷದ ದಸರಾ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಸುವರ್ಣ ಮಹೋತ್ಸವ ಅತಿ ವಿಜೃಂಭಣೆ ಮತ್ತು ಸಂಭ್ರಮದಿಂದ ನಡೆಯಲಿದ್ದು, ಸರ್ವರು ಸಹಕಾರ ನೀಡಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿರಾಜಪೇಟೆ ನ.4 NEWS DESK : ಗೋಣಿಕೊಪ್ಪ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಾವೇರಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನೆಯಪಂಡ ಶಿಪ್ರಾ ಕಾಳಪ್ಪ ಚಿನ್ನದ ಪದಕದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅಲ್ಲದೆ, ಮೈಸೂರಿನಲ್ಲಿ ನಡೆದ 5ನೇ ಮುಕ್ತ ಕರಾಟೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಇವರು ವಿರಾಜಪೇಟೆಯ ಮನೆಯಪಂಡ ಎನ್.ಕಾಳಪ್ಪ, ಪುರಸಭೆ ಅಧ್ಯಕ್ಷೆ ದೇಚಮ್ಮ ದಂಪತಿ ಪುತ್ರಿ.
ಬಾಗಲಕೋಟೆ ನ.4 NEWS DESK : ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ ಇಂದು (ಮಂಗಳವಾರ) ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ ಕಾರಣ ಕೆಲ ದಿನಗಳಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹೆಚ್.ವೈ.ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ ಹೆಚ್.ವೈ.ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ…
ಮಡಿಕೇರಿ ನ.4 NEWS DESK : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗ ಅತ್ಯಂತ ಮಹತ್ವದ ಜವಾಬ್ದಾರಿಯನ್ನು ಹೊಂದಿರುವ ಅಂಗವಾಗಿದ್ದು, ಸಾಮಾಜಿಕ ವ್ಯವಸ್ಥೆಯ ಓರೆಕೋರೆಗಳನ್ನು ತಿದ್ದಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪತ್ರಕರ್ತರು ಕೆಲಸ ಮಾಡಬೇಕು ಎಂದು ಚಿಕ್ಕ ಅಳುವಾರ ಕೊಡಗು ವಿಶ್ವ ವಿದ್ಯಾನಿಲಯದ ಉಪಕುಲಪತಿ ಅಶೋಕ್ ಸಂಗಪ್ಪ ಆಲೂರ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಪತ್ರಿಕಾ ಭವನದಲ್ಲಿ ಆಯೋಜಿತ ಕೊಡಗು ಪತ್ರಿಕಾ ಭವನ ಟ್ರಸ್ಟ್‌ನ 24ನೇ ವಾರ್ಷಿಕೋತ್ಸವ ಸಮಾರಂಭವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಆಗುಹೋಗುಗಳನ್ನು ತಿಳಿಸಿ ಸಮಾಜವನ್ನು ಸರಿದಾರಿಗೆ ತರುವ ಕೆಲಸ ಪತ್ರಕರ್ತರಿಂದ ಆಗುತ್ತಿದೆ. ಗ್ರಾಮೀಣ ಭಾಗದ ಜನರ ಧ್ವನಿಯಾಗಿ ಕೆಲಸ ಮಾಡುವ ಹೆಚ್ಚಿನ ಜವಾಬ್ದಾರಿ ಪತ್ರಕರ್ತರ ಮೇಲಿದೆ. ಪತ್ರಕರ್ತರು ಜನರನ್ನು ಸನ್ಮಾರ್ಗದತ್ತ ಕೊಂಡೊಯ್ಯುವ ಚಿಂತನೆ ಹೊಂದಿರಬೇಕು ಎಂದರು. ಆಧುನಿಕ ಡಿಜಿಟಲ್ ಯುಗದಲ್ಲಿ ಪತ್ರಕರ್ತರು ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಇವುಗಳನ್ನು ಮೆಟ್ಟಿನಿಂತು ತಾಂತ್ರಿಕವಾಗಿ ಮುಂದುವರೆಯುವಂತೆ ಆಗಬೇಕು. ಹೊಸ ಪೀಳಿಗೆಯ ಪತ್ರಕರ್ತರನ್ನು ಬೆಳೆಸುವಂತಾಗಬೇಕು. ಈ ದಿಸೆಯಲ್ಲಿ ಚಿಕ್ಕ ಅಳವಾರದಲ್ಲಿ ಸಮೂಹ…
ಮಡಿಕೇರಿ ನ.4 NEWS DESK : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಮಿಲಿಟರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಗರಗoದೂರು ಗ್ರಾಮದವರಾದ ಲೆಫ್ಟಿನೆಂಟ್ ಜನರಲ್ ಸಿ ಪಿ ಕಾರ್ಯಪ್ಪ ( ನಿವೃತ್ತ) ಸಂಸ್ಥೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ತಮ್ಮ ಜೀವನದ ಅನುಭವ ಹಾಗೂ ಸಾಧನೆಗಳನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು. ಈ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ವಿದ್ಯಾರ್ಥಿಗಳು ದೈಹಿಕ , ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಕ್ರೀಡೆ ಮತ್ತು ಶಿಕ್ಷಣಕ್ಕೆ ಸಮಾನ ಆಸಕ್ತಿಯನ್ನು ಕೊಡಬೇಕು ಎಂದು ಅವರು ಕರೆ ನೀಡಿದರು. ಭಾರತವು ವಿಶ್ವದಲ್ಲಿಯೇ ಪ್ರಬಲ ಸೇನೆಯನ್ನು ಹೊಂದಿದ್ದು ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಯನ್ನು ಸೇರಿ ದೇಶ ಸೇವೆ ಮಾಡುವಂತೆಯೂ ಅವರು ಕರೆ ನೀಡಿದರು. ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಕರ್ನಲ್ ಬಿಜಿವಿ ಕುಮಾರ್, ಕಾರ್ಯದರ್ಶಿ ಎಂ.ಬಿ.ಬೋಪಣ್ಣ, ಪೋಷಕ ಸದಸ್ಯರಾದ ಖ್ಯಾತ ಅಂತಾರಾಷ್ಟ್ರೀಯ ಟೆನಿಸ್ ಪಟು ರೋಹನ್ ಬೋಪಣ್ಣ ಅವರ ತಂದೆ ಮಚ್ಚoಡ ಬೋಪಣ್ಣ, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲ ಮಂದಪ್ಪ, ಮುಖ್ಯ ಶಿಕ್ಷಕಿ…
ಮಡಿಕೇರಿ NEWS DESK ನ.4 : ನ್ಯಾಷನಲ್ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಚೆನೈಯಲ್ಲಿ ಅ.27 ರಿಂದ ನ.4 ರವರೆಗೆ ನಡೆದ 27ನೇ ರಾಷ್ಟ್ರೀಯ ಕುಮಾರ್ ಸುರೇಂದರ್ ಸಿಂಗ್ ಇಂಟರ್ ಸ್ಕೂಲ್ ಶೂಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕೊಡಗಿನ ಕಾನಡ್ಕ ಧನ್ವಿ 10 ಮೀ. ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಸಬ್ ಯೂತ್ ಮಹಿಳೆಯರ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾಳೆ. ರಾಷ್ಟ್ರದ ವಿವಿಧ ಭಾಗಗಳ 2500ಕ್ಕೂ ಹೆಚ್ಚು ಯುವ ಶೂಟರ್ ಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಕಾನಡ್ಕ ಧನ್ವಿ ಬೆಂಗಳೂರಿನ ಡೆಲ್ಲಿ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಅಂತರಾಷ್ಟ್ರೀಯ ಕೋಚ್ ಶರಣೇಂದ್ರ ಕೆ.ವೈ ಅವರ ಮಾರ್ಗದರ್ಶನದಲ್ಲಿ ಹಾಕ್ ಐ ಸ್ಪೋರ್ಟ್ಸ್ ರೈಫಲ್ ಮತ್ತು ಪಿಸ್ತೂಲ್ ಶೂಟಿಂಗ್ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾಳೆ. ಧನ್ವಿ ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದ ಕೃಷಿಕ ಕಾನಡ್ಕ ಹನೀಶ್ ಹಾಗೂ ಆಶಾ ದಂಪತಿಯ ಪುತ್ರಿ.
ಮಡಿಕೇರಿ ನ.4 NEWS DESK : ರಾಜ್ಯದ ಹಲವಾರು ಭಾಗಗಳಲ್ಲಿ ಪ್ರದರ್ಶನ ಕಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾದ ಪಾಡ್ದನ ಆಧಾರಿತ ಕನ್ನಡ ನಾಟಕ “ಪರಮಾತ್ಮ ಪಂಜುರ್ಲಿ” ನಾಟಕವು ನ.9 ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಗಾಂಧಿ ಮೈದಾನದಲ್ಲಿ ಸಂಜೆ 5.30 ರಿಂದ ರಾತ್ರಿ 9 ಗಂಟೆಯ ವರೆಗೆ ಆದ್ದೂರಿ ಸೆಟ್ಟಿಂಗ್‌ನಲ್ಲಿ ಪ್ರದರ್ಶನಗೊಳ್ಳುವ ಈ ನಾಟಕವು ಪಂಜುರ್ಲಿ ದೈವದ ಮೂಲಕಥೆಯನ್ನು ಒಳಗೊಂಡಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾಕುಂಭ ಕುಳಾಯಿ, ಮಂಗಳೂರು ತಂಡ ಈ ನಾಟಕವನ್ನು ನಡೆಸಿಕೊಡಲಿದೆ. ನಾಟಕ ಪ್ರಾರಂಭಕ್ಕೂ ಮುನ್ನ ಪಂಜುರ್ಲಿ ದೈವದ ಇತಿಹಾಸ ಮತ್ತು ಮಹತ್ವ ಕುರಿತು ಖ್ಯಾತ ವಾಗ್ಮಿ, ಜಾನಪದ ವಿದ್ವಾಂಸ ಹಾಗೂ ಪ್ರಸಿದ್ಧ ದೈವ ನರ್ತಕ ದಯಾನಂದ ಕತ್ತಲ್ ಸರ್ ಮಾಹಿತಿ ನೀಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪಿ.ಎಂ.ರವಿ – 9972073295, ವಸಂತ್ – 9448895870 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ನ.4 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಪರಕಾಡು ರಸ್ತೆ ಉದ್ಘಾಟನೆಗೊಂಡಿತು. ಕಳೆದ 20-25 ವರ್ಷಗಳಿಂದ ಅಭಿವೃದ್ಧಿ ಕಾಣದೆ ನೆನೆಗುಡಿಗೆ ಬಿದ್ದಿತ್ತು. ಸ್ಥಳೀಯರ ಬೇಡಿಕೆ ಮೇರೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದ 5 ಲಕ್ಷಗಳಲ್ಲಿ ಪೂರ್ಣಗೊಂಡಿದ್ದು, ಜನರಿಗೆ ಅನುಕೂಲವಾಗಿದೆ. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ, ಪಂಚಾಯಿತಿ ಸದಸ್ಯರುಗಳಾದ ಹೇಮಾವತಿ, ಆಮಿನ ಮೈದು, ಊರಿನ ಪ್ರಮುಖರಾದ ರಮ್ಮಿ ನಾಣಯ್ಯ, ಸುರೇಶ್, ಅಶ್ರಫ್, ಹ್ಯಾರೀಶ್ ಹಾಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ರಸ್ತೆ ಕಾಮಗಾರಿಗೆ ಸಹಕರಿಸಿದ ಶಾಸಕರಿಗೆ ಹಾಗೂ ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್ ಅವರಿಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದ್ದಾರೆ.






