ಮಡಿಕೇರಿ, NEWS DESK ಸೆ.17: ರಾಷ್ಟ್ರೀಯ ಕೆಡೆಟ್ ಕೋರ್ (ಎನ್‌ಸಿಸಿ)ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ ನಗರದ ಕೊಡಗು ವಿದ್ಯಾಲಯದ ವಿದ್ಯಾರ್ಥಿ ಗೋಲ್ಡನ್ ಸರ್ಜೆಂಟ್ ಜೆಸ್ಟಾ ಸುಬ್ಬಯ್ಯ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಕೊಡಗು ವಿದ್ಯಾಲಯದಲ್ಲಿಯೇ ಎನ್‌ಸಿಸಿ ಪಯಣ ಆರಂಭಿಸಿದ ಜೆಸ್ಟಾ ಸುಬ್ಬಯ್ಯ, ಏಳು ಹಂತದ ಕಠಿಣ ಆಯ್ಕೆ ಶಿಬಿರಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ನವದೆಹಲಿಯಲ್ಲಿ ನಡೆದ ಪ್ರತಿಷ್ಠಿತ **ಅಖಿಲ ಭಾರತ ಥಲ್ ಸೈನಿಕ್ ಶಿಬಿರ (AITSC)**ಕ್ಕೆ ಆಯ್ಕೆಯಾಗಿದ್ದರು. ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿ ಫೈರಿಂಗ್ ಸ್ಪರ್ಧೆಯ ಗ್ರೂಪಿಂಗ್ ವಿಭಾಗದಲ್ಲಿ ಭಾಗವಹಿಸಿದ ಅವರು, ಈ ವಿಭಾಗಕ್ಕೆ ಆಯ್ಕೆಯಾದ ನಾಲ್ವರು ಕೆಡೆಟ್‌ಗಳಲ್ಲಿ ಒಬ್ಬರಾಗಿದ್ದರು. ರಾಷ್ಟ್ರೀಯ ಶಿಬಿರದಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವು ಒಟ್ಟಾರೆ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿತು. ಕೊಡಗು ವಿದ್ಯಾಲಯದಲ್ಲಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿಯ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ಅವರು ಜೆಸ್ಟಾ ಸುಬ್ಬಯ್ಯ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ…
ಲೇಖಕ: admin
ಮಡಿಕೇರಿ, NEWS DESK ಸೆ.17 : ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾ ಜನೋತ್ಸವದ ಧಾರ್ಮಿಕ ಆಕರ್ಷಣೆಯಾದ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಶೋಭಾಯಾತ್ರೆ ವಿಜಯದಶಮಿಯ ದಿನವಾದ ಅ.21ರಂದು ನಡೆಯಲಿದೆ ಎಂದು ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿಯ ಗೌರವಾಧ್ಯಕ್ಷ ಜಿ.ವಿ.ರವಿಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಸ್ಥಾನದಲ್ಲಿ ಸೆ.16ರಂದು ಸಂಪ್ರದಾಯದAತೆ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನಾಲ್ಕು ಶಕ್ತಿ ದೇವತೆಗಳ ದೇವಸ್ಥಾನಗಳ ಅರ್ಚಕರು, ಗೌಳಿ ಸಮುದಾಯದ ಪ್ರಮುಖರು ಹಾಗೂ ಆಡಳಿತ ಮಂಡಳಿ ಸದಸ್ಯರು ಕರಗೋತ್ಸವದ ಶೋಭಾಯಾತ್ರೆಯ ಕುರಿತು ಚರ್ಚಿಸಿ ಈ ನಿರ್ಣಯ ಕೈಗೊಂಡಿದ್ದಾರೆ ಎಂದರು. ಸಭೆಯ ನಿರ್ಣಯದಂತೆ ಮಹಾಲಯ ಅಮಾವಾಸ್ಯೆಯ ಮರುದಿನವಾದ ಅ.11ರಂದು ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿಕಾಮಾಕ್ಷಿಯಮ್ಮ, ಶ್ರೀ ದಂಡಿನ ಮಾರಿಯಮ್ಮ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವಸ್ಥಾನಗಳಿಂದ ಸಂಪ್ರದಾಯದAತೆ ಕರಗಗಳು ಆರಂಭಗೊಳ್ಳಲಿವೆ. ಬಳಿಕ ಆಯುಧಪೂಜೆಯ ಮರುದಿನವಾದ ವಿಜಯದಶಮಿಯ ಅ.21ರಂದು ರಾತ್ರಿ ನಾಲ್ಕು ಕರಗಗಳ ಶೋಭಾಯಾತ್ರೆ ನಡೆಯಲಿದ್ದು, ಬನ್ನಿಮಂಟಪದ ಪಂಪ್ ಕೆರೆಗೆ ತೆರಳಿ…
ಗೋಣಿಕೊಪ್ಪ, NEWS DESK ಸೆ.17: ಭಾರತದ ಹಿಂದೂತ್ವದ ಪರಂಪರೆ, ಸಂಸ್ಕೃತಿ ಹಾಗೂ ಆಚಾರ–ವಿಚಾರಗಳನ್ನು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯುವುದೇ ನಿಜವಾದ ದೇಶಭಕ್ತಿಯ ಭಾಗವಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿಲನ್ ಗಣಪತಿ ಅಭಿಪ್ರಾಯಪಟ್ಟರು. ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನ ಗಣಪತಿ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ 15ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಮೂರನೇ ದಿನ ನಡೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಕ್ಕೆ ಡೋಲಕ್ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಗಣೇಶೋತ್ಸವವು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಜನರನ್ನು ಒಗ್ಗೂಡಿಸುವ ಉದ್ದೇಶದಿಂದ ರೂಪುಗೊಂಡ ಪ್ರಮುಖ ಆಚರಣೆಯಾಗಿದೆ. ಇದರ ಹಿಂದಿರುವ ಇತಿಹಾಸ, ಉದ್ದೇಶ ಹಾಗೂ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಹಿರಿಯರ ಮೇಲಿದೆ. ಮಕ್ಕಳಲ್ಲಿ ಭಕ್ತಿ, ದಯೆ, ಮಾನವೀಯತೆ ಹಾಗೂ ದೇಶಪ್ರೇಮದ ಭಾವನೆಗಳನ್ನು ಬೆಳೆಸುವ ಕೆಲಸ ಕುಟುಂಬದಿಂದಲೇ ಆರಂಭವಾಗಬೇಕು ಎಂದು ಹೇಳಿದರು. ಮಹಿಳೆಯರು ಕುಟುಂಬ ಮತ್ತು ಸಮಾಜದ ಪ್ರಮುಖ ಶಕ್ತಿಯಾಗಿದ್ದಾರೆ. ಅವರ ತಾಳ್ಮೆ, ಕೌಟುಂಬಿಕ ನಿರ್ವಹಣೆ, ಜವಾಬ್ದಾರಿತನ ಹಾಗೂ ಸಾಮಾಜಿಕ ಕಾಳಜಿಯು ಸಮಾಜವನ್ನು…
ಸುಂಟಿಕೊಪ್ಪ, NEWS DESK ಸೆ.17: ಸುಂಟಿಕೊಪ್ಪದ ಡಾ.ಬಿ.ಆರ್.ಅಂಬೇಡ್ಕರ್ ನಗರದ ಶ್ರೀ ವಿನಾಯಕ ಮಿತ್ರ ಮಂಡಳಿ ಸಮಿತಿಯ 2ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಉತ್ಸವ ಮೂರ್ತಿಯ ವಿಸರ್ಜನೋತ್ಸವ ಬುಧವಾರ ಅದ್ಧೂರಿಯಾಗಿ ನಡೆಯಿತು. ಪಂಪ್ ಹೌಸ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ನಗರದ ಶ್ರೀ ವಿನಾಯಕ ಮಿತ್ರ ಮಂಡಳಿ ಸಮಿತಿಯ ವತಿಯಿಂದ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ಸಂಜೆ ಮಹಾಪೂಜೆ ಹಾಗೂ ವಿವಿಧ ಪೂಜಾ ಕೈಂಕರ್ಯಗಳ ಬಳಿಕ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಹೆಚ್.ಡಿ.ಕೋಟೆಯ ನಗಾರು ಹಾಗೂ ಡಿಜೆ ಸಂಗೀತದೊಂದಿಗೆ ಪಂಪ್ ಹೌಸ್ ರಸ್ತೆಯಿಂದ ಅಯ್ಯಪ್ಪ ದೇವಾಲಯದವರೆಗೆ, ಅಲ್ಲಿಂದ ಮಾದಾಪುರ ರಸ್ತೆಯ ವೃಕ್ಷೋದ್ಭವ ಗಣಪತಿ ದೇವಾಲಯದವರೆಗೆ ಶೋಭಾಯಾತ್ರೆ ನಡೆಯಿತು. ಬಳಿಕ ಹರದೂರು ಹೊಳೆಯಲ್ಲಿ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ವಿಸರ್ಜಿಸಲಾಯಿತು. ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವವೂ ಬುಧವಾರ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಕೊಡಗರಹಳ್ಳಿಯಲ್ಲಿ ಶೋಭಾಯಾತ್ರೆ:ಕೊಡಗರಹಳ್ಳಿ ವಿಘ್ನೇಶ್ವರ ಸೇವಾ…
ಮಡಿಕೇರಿ NEWS DESK ಸೆ.17: ಕೊಡಗು ವಿಶ್ವವಿದ್ಯಾಲಯಕ್ಕೆ ಭಾರತದ ಮೊದಲ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಹೆಸರನ್ನೇ ನಾಮಕರಣ ಮಾಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ (CNC) ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯ ರೆಡ್ಡಿ ಅವರಿಗೆ CNC ಅಧ್ಯಕ್ಷ ಎನ್.ಯು. ನಾಚಪ್ಪ ಕೊಡವ ಅವರು ಮನವಿ ಸಲ್ಲಿಸಿದ್ದಾರೆ. ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಎಸ್. ಆಲೂರ್ ಅವರು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಹೆಸರನ್ನೂ ಒಳಗೊಂಡಂತೆ ಮೂರು ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆಂದು ತಿಳಿದುಬಂದಿದೆ. ಆದರೆ, ಎಲ್ಲ ಕಾಲಕ್ಕೂ ಅತ್ಯಂತ ಅರ್ಹ, ಯೋಗ್ಯ ಹಾಗೂ ಸ್ಫೂರ್ತಿದಾಯಕ ಹೆಸರು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರು ಮಿಲಿಟರಿ ಕ್ಷೇತ್ರದ ಅಪ್ರತಿಮ ಪ್ರತಿಭೆ ಹಾಗೂ ಕೊಡಗಿನ ಹೆಮ್ಮೆಯ ಪುತ್ರರಾಗಿದ್ದು, ದೇಶಕ್ಕೆ ನೀಡಿದ ಸೇವೆಗಾಗಿ ಅವರ ಹೆಸರನ್ನು ವಿಶ್ವವಿದ್ಯಾಲಯಕ್ಕೆ…

ಮಡಿಕೇರಿ ಸೆ.17 NEWS DESK : ಪ್ರೋಟೀನ್ ಸಮೃದ್ಧ ಆಹಾರದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಚೇರಂಬಾಣೆ ವೃತ್ತದಲ್ಲಿ ಪ್ರೋಟೀನ್ ಸಮೃದ್ಧ ಆಹಾರ ಅಭಿಯಾನ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಸುಮಂಗಲ ಜಿ. ಹಿರೇಮನಿ ಅವರು ಉದ್ಘಾಟಿಸಿ ಮಾತನಾಡಿ, ಸಮರ್ಪಕ ಪೋಷಣೆಯು ಪ್ರಾರಂಭಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣದ ಮೂಲಭೂತ ಅಂಶಗಳಾಗಿವೆ ಎಂದು ತಿಳಿಸಿದರು. ಮಗು ಏನು ತಿನ್ನುತ್ತದೆ ಮತ್ತು ಮಗು ಹೇಗೆ ಕಲಿಯುತ್ತದೆ ಎಂಬುದರ ನಡುವೆ ಅವಿಭಾಜ್ಯ ಸಂಬಂಧವಿದೆ ಎಂದು ಅವರು ಒತ್ತಿ ಹೇಳಿದರು. ಜೀವನದ ಮೊದಲ ಸಾವಿರ ದಿನಗಳಲ್ಲಿ ಉತ್ತಮ ಪೋಷಣೆ ಹಾಗೂ ಸ್ಪಂದನಾಶೀಲ ಆರೈಕೆ ಮಗುವಿನ ಮೆದುಳಿನ ಸಮರ್ಪಕ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದೆ. ಈ ನಿರ್ಣಾಯಕ ಅವಧಿಯಲ್ಲಿ ಉಂಟಾಗುವ ಅಪೌಷ್ಟಿಕತೆಯು ಮಕ್ಕಳ ಜ್ಞಾನಾತ್ಮಕ, ಚಲನಾತ್ಮಕ, ಸಾಮಾಜಿಕ ಹಾಗೂ ಭಾವನಾತ್ಮಕ ಬೆಳವಣಿಗೆಯ ಮೇಲೆ ದೀರ್ಘಕಾಲೀನ ಪರಿಣಾಮ ಬೀರಬಹುದು. ಆದ್ದರಿಂದ ಗರ್ಭಾವಸ್ಥೆಯಿಂದಲೇ ತಾಯಿ ಮತ್ತು ಮಗುವಿನ ಪೌಷ್ಟಿಕ ಆಹಾರ ಹಾಗೂ ಆರೋಗ್ಯದ ಬಗ್ಗೆ ವಿಶೇಷ…
ಮಡಿಕೇರಿ ಸೆ.16 NEWS DESK : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವು ಈ ಬಾರಿ ಅಕ್ಟೋಬರ್, 17 ರಂದು ರಾತ್ರಿ 07.50 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಸಂಭವಿಸಲಿದ್ದು, ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಕಿರಿಕಿರಿ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದ್ದಾರೆ. ಭಾಗಮಂಡಲದ ಭಗಂಡೇಶ್ವರ ದೇವಾಲಯದ ಹಳೇ ಮುಡಿ ಕಟ್ಟಡದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಸಹ ಪವಿತ್ರ ತೀರ್ಥೋದ್ಭವ ಜಾತ್ರೆಗೆ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಎಚ್ಚರವಹಿಸಬೇಕು. ವಿವಿಧ ಸಂಘ ಸಂಸ್ಥೆಗಳು ನೀಡಿರುವ ಸಲಹೆ, ಮಾರ್ಗದರ್ಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು. ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಪುಣ್ಯ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ…