ಲೇಖಕ: admin

ಮಡಿಕೇರಿ ಡಿ.1 NEWS DESK : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಹತ್ತಿರವಿರುವ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿ.7 ರಂದು ಬೆಳಗ್ಗೆ 10 ಗಂಟೆಗೆ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾದ ನಿವೃತ್ತ ಮೇಜರ್ ಜನರಲ್ ಕೆ.ಸಿ.ಕಾರ್ಯಪ್ಪ ಅವರು ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಇತರರು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಮಾಜಿ ಯೋಧರು ಅವರ ಕುಟುಂಬದವರು ಹಾಗೂ ಸಾರ್ವಜನಿಕರು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ಅವರು ತಿಳಿಸಿದ್ದಾರೆ.

Read More

ಗೋಣಿಕೊಪ್ಪ ಡಿ.1 NEWS DESK : ಗೋಣಿಕೊಪ್ಪ ರೋಟರಿ ಸಂಸ್ಥೆ ವತಿಯಿಂದ ಬೆಂಗಳೂರಿನ ಎಫ್‍ಕೆಸಿಸಿಐ ಸಂಸ್ಥೆ ಅತ್ಯುತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ ಪಡೆದುಕೊಂಡ ಚೇದಂಡ ಸುಮಿ ಸುಬ್ಬಯ್ಯ ಅವರನ್ನು ಸನ್ಮಾನಿಸಲಾಯಿತು. ಗೋಣಿಕೊಪ್ಪ ಕೂಕುನ್ ಸಭಾಂಗಣದಲ್ಲಿ ರೋಟರಿ ಸಂಸ್ಥೆ ಜಿಲ್ಲಾ ಗವರ್ನರ್ ಭೇಟಿ ಹಿನ್ನಲೆ ನಡೆದ ಸರ್ವ ಸದಸ್ಯರ ಸಮಾಲೋಚನ ಸಭೆಯಲ್ಲಿ ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಪಿ.ಕೆ.ರಾಮಕೃಷ್ಣ, ಗೋಣಿಕೊಪ್ಪ ರೋಟರಿ ಸಂಸ್ಥೆ ಅಧ್ಯಕ್ಷ ಪಿ.ಕೆ.ವಿಜಯಕುಮಾರ್ ಸನ್ಮಾನಿಸಿ, ಗೌರವಿಸಿದರು. ಸಹಾಯಕ ಗವರ್ನರ್, ದಿಲಾನ್ ಚಂಗಪ್ಪ, ಝೋನಲ್ ರೆಫ್ಟಿನೆಂಟ್ ಕೆ.ಹೆಚ್.ಆದಿತ್ಯ, ಗೋಣಿಕೊಪ್ಪ ರೋಟರಿ ಕಾರ್ಯದರ್ಶಿ ಪ್ರಮೋದ್ ಕಾಮತ್, ಖಜಾಂಚಿ ಜಪ್ಪೆಕೋಡಿ ಸುಭಾಷಿಣಿ, ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರುಗಳು ಇದ್ದರು.

Read More

ಮಡಿಕೇರಿ ಡಿ.1 NEWS DESK : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶಾಖಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಮಂಜುನಾಥ್‌ ಅವರನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್  ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.  

Read More

ಬೆಂಗಳೂರು ಡಿ.1 NEWS DESK : ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯ  ಅಂಗವಾಗಿ ವಿಧಾನಸೌಧದಲ್ಲಿರುವ ಹನುಮಂತಯ್ಯನವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿ, ಗೌರವ ಸಮರ್ಪಿಸಿದರು.  ಕೆಂಗಲ್ ಹನುಮಂತಯ್ಯನವರು ಒಬ್ಬ ದಕ್ಷ ಆಡಳಿತಗಾರರಾಗಿದ್ದು, ಕರ್ನಾಟಕದ ಎರಡನೇ ಮುಖ್ಯಮಂತ್ರಿಯಾಗಿದ್ದರು. ಸ್ವಾತಂತ್ರ್ಯನಂತರವಿದ್ದ ಸಮಸ್ಯೆಗಳನ್ನು ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಎದುರಿಸಿದರು. ವಿಧಾನಸೌಧದ ಭವ್ಯ ಕಟ್ಟಡ ನಿರ್ಮಾಣಕ್ಕೆ  ಅವರು ರೂವಾರಿಯಾಗಿದ್ದರೂ, ಕಟ್ಟಡದ ಉದ್ಘಾಟನೆಯ ವೇಳೆಗೆ ಅವರು ಅಧಿಕಾರದಲ್ಲಿರಲಿಲ್ಲ. ಜನಪ್ರತಿನಿಧಿಯಾಗಿ ಪ್ರಮಾಣಿಕ ಜನರ ಸೇವೆ ಸಲ್ಲಿಸುವುದು ಅತಿಮುಖ್ಯ ಎಂದು ವಿಧಾನಸೌಧದ ಕಟ್ಟಡದ ಪೂರ್ವಭಾಗದಲ್ಲಿ’ಜನರ ಕೆಲಸ ದೇವರ ಕೆಲಸ’ ಎಂದು ಕೆತ್ತಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಕೆಂಗಲ್ ಹನುಮಂತಯ್ಯ ಅವರ ಸೇವೆಯನ್ನು ಸರಕಾರ ಸ್ಮರಿಸುತ್ತಿದೆ. ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದರು. ಕೆಂಗಲ್ ಹನುಮಂತಯ್ಯನವರ ಮೊಮ್ಮಗನಾದ ಕೆಂಗಲ್ ಶ್ರೀಪಾದ ರೇಣು, ಸಚಿವರಾದ ಪ್ರಿಯಾಂಕ್…

Read More

ಬೆಂಗಳೂರು ಡಿ.1 NEWS DESK : ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದರು. ಹೀಗಾಗಿ ಇವತ್ತು ಶೇ.50ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ. ಇದನ್ನು ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯಸಭಾ ಸದಸ್ಯ ರಾಮಾಜೋಯಿಸ್. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಬಿಜೆಪಿಗೆ ಚಪ್ಪಾಳೆ ತಟ್ಟಬಾರದು ಎಂದರು. ಗ್ರಾಮದಿಂದಲೇ ಅಧಿಕಾರ, ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ  ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದರು. ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ರಾಜೀವ್ ಗಾಂಧಿಯವರು ಪ್ರಧಾನಿ ಆದಾಗ ಸಂವಿಧಾನ…

Read More

ಮಡಿಕೇರಿ ಡಿ.1 NEWS DESK : ಏಡ್ಸ್ ನಿಮೂರ್ಲನೆಗೆ ಯುವ ಜನತೆ ಪಾತ್ರ ಮುಖ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಲಯನ್ಸ್ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ, ಎಫ್‍ಎಂಕೆಎಂಸಿ ಕಾಲೇಜು, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಮಡಿಕೇರಿ, ಓಡಿಪಿ-ಸ್ನೇಹಾಶ್ರಯ ಸಮಿತಿ, ಚೈತನ್ಯ ನೆಟ್‍ವರ್ಕ್ ಕೊಡಗು ಹಾಗೂ ಆಶೋದಯ ಸಮಿತಿ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಏಡ್ಸ್ ದಿನ’ ಕಾರ್ಯಕ್ರಮ ನಡೆಯಿತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್‌ಐವಿ ಏಡ್ಸ್ ದೂರವಿರಲು ಸ್ವಯಂ ನಿಯಂತ್ರಣ ಹಾಗೂ ತಾಳ್ಮೆ ಅತೀ ಮುಖ್ಯ ಎಂದು ಅಭಿಪ್ರಾಯಪಟ್ಟರು. ಸ್ವಯಂ…

Read More

ಮೈಸೂರು ಡಿ.1 NEWS DESK : ಸಾಂಸ್ಕೃತಿಕ ರಾಜಧಾನಿ ಮೈಸೂರು ಕಳೆದ ಕೆಲವು ದಿನಗಳಿಂದ ಕ್ರೀಡಾ ರಾಜಧಾನಿಯಾಗಿದೆ. ನಮ್ಮ ಪ್ರಧಾನಮಂತ್ರಿಗಳ ಆಶಯದಂತೆ ನಿರಂತರವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸುತ್ತಿದ್ದು, ಇಂದು ನಡೆದ ಹಗ್ಗ- ಜಗ್ಗಾಟ ಕ್ರೀಡೆ ಭಾರಿ ಯಶಸ್ಸು ಕಂಡಿದೆ ಹಾಗೂ ಭಾರಿ ಆಕರ್ಷಣೆ ಪಡೆದಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಸಂಸದರ ಕ್ರೀಡಾ ಮಹೋತ್ಸವದ ಫಿಟ್‌ ಯುವ ಫಾರ್‌ ವಿಕಸಿತ್‌ ಭಾರತದ ಯೋಜನೆಯಡಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಹಗ್ಗ-ಜಗ್ಗಾಟ ಉದ್ಘಾಟನೆ ನಂತರ ಸಂಸದರು ಮಾತನಾಡಿದರು. ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಹಳ್ಳಿ ಸೊಗಡಿನ “ಹಗ್ಗ-ಜಗ್ಗಾಟ” ಸ್ಪರ್ಧೆಯಲ್ಲಿ ಇಷ್ಟೊಂದು ಜನರು ಭಾಗವಹಿಸಿದ್ದು ನಿಜಕ್ಕೂ ಖುಷಿ ತಂದಿದೆ ಎಂದರು. ಮೈಸೂರಿನ ವಿಶ್ವವಿದ್ಯಾಲಯದ ಓವಲ್‌ ಗ್ರೌಂಡ್‌ ನಿಜಕ್ಕೂ ಇಂದು ಕ್ರೀಡಾ ಸಂಗಮಕ್ಕೆ ಸಾಕ್ಷಿಯಾಗಿತ್ತು ಎಂದು ಯದುವೀರ್ ಒಡೆಯರ್ ತಿಳಿಸಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಚಂದ್ರಕಲಾ ಮಾತನಾಡಿ, ಈ ರೀತಿಯ ಪಂದ್ಯಗಳು ಆಯೋಜನೆಗೊಂಡಿದ್ದು ಖುಷಿ ತಂದಿದೆ ಎಂದು ಸಂತಸ ಹಂಚಿಕೊಂಡರು. ಮೈಸೂರು…

Read More

ನಾಪೋಕ್ಲು ಡಿ.1 NEWS DESK : ಕೊಡಗಿನ ಕ್ರೀಡಾಪಟುಗಳು ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಂಟ್ರನ್ಸ್ ಅಥ್ಲೆಟಿಕ್ ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಂಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಬಳ್ಳಾರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಯುಕ್ತ ಆಶ್ರಯದಲ್ಲಿ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಕೊಡಗಿನ ಮಹಿಳಾ ಕ್ರೀಡಾಪಟುಗಳು ಪಾಲ್ಗೊಂಡು ಅತ್ಯುತ್ತಮ ಸಾಧನೆಯೊಂದಿಗೆ ಬಹುತೇಕ ಪದಕಗಳನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನಾಂಗಾಲ ಬಿಟ್ಟಂಗಲ ಗ್ರಾಮದ ಚೇಮೀರ ಸೀತಮ್ಮ ಪ್ರೇಮ ಭಾರತದ ಗುಂಡು ಎಸೆತದಲ್ಲಿ ಪ್ರಥಮ, ತಟ್ಟೆ ಎಸೆತದಲ್ಲಿ ಪ್ರಥಮ, ಜವಾಲಿನ್ ಎಸೆತದಲ್ಲಿ ಪ್ರಥಮ, ಹ್ಯಾಮರ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಬಾಳೆಲೆಯ ಕೊಟ್ಟಗೇರಿ ಗ್ರಾಮದ ಅರಮಣಮಾಡ ಮಮತಾ ಮನು ಭಾರದ ಗುಂಡು ಎಸೆದ ಸ್ಪರ್ಧೆಯಲ್ಲಿ ಪ್ರಥಮ, ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಟಿ.ಶೆಟ್ಟಿಗೇರಿ ಪೆಮ್ಮಂಡ ಸಬಿತ ಕುಶಾಲಪ್ಪ ಡಿಸ್ಕಸ್ ಥ್ರೊ ಸ್ಪರ್ಧೆಯಲ್ಲಿ ಪ್ರಥಮ, ಭಾರದ ಗುಂಡು…

Read More

ಮಡಿಕೇರಿ ಡಿ.1 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಅಧ್ಯಕ್ಷ ಎಂ.ಡಿ.ನಾಣಯ್ಯ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದಲ್ಲಿ ಕಳೆದ 19 ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸಿದ್ದೇನೆ. ಸದಸ್ಯ, ಖಜಾಂಚಿ ಮತ್ತು ಅಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಕಳೆದ 7 ವರ್ಷಗಳಿಂದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ಸಂಘದ ಪದಾಧಿಕಾರಿಗಳ ಸಹಕಾರದಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದ್ದಾರೆ. ಪ್ರಸ್ತುತ ಅನಾರೋಗ್ಯದ ಕಾರಣ ಸಂಘದ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣದಿಂದ ಸಂಘದ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದೇನೆ. ಮುಂದಿನ ದಿನಗಳಲ್ಲಿ ಪದಾಧಿಕಾರಿಗಳು ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಲಿ ಎಂದು ಎಂ.ಡಿ.ನಾಣಯ್ಯ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಡಿ.1 NEWS DESK : ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಪುತ್ತೂರು ತಾಲ್ಲೂಕಿನ ಮಾಡನ್ನೂರ್ ನಲ್ಲಿರುವ ನೂರುಲ್ ಹುದಾ ಶಿಕ್ಷಣ ಸಂಸ್ಥೆ ದಶಮಾನೋತ್ಸವದ ಸಂಭ್ರಮದಲ್ಲಿದೆ. 10ನೇ ವಾರ್ಷಿಕೋತ್ಸವದ ಅಂಗವಾಗಿ ಡಿ.5, 6 ಮತ್ತು 7 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹುದವಿ ಬಿರುದು ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಶಿಕ್ಷಣ ಸಂಸ್ಥೆಯ ಸದಸ್ಯ ಸಿ.ಎಂ.ಹಮೀದ್ ಮೌಲಾವಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಮನ್ವಯ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನಮಾನ ಪಡೆದಿರುವ ಕೇರಳದ ಚಿಮ್ಮಾಡ್ ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯದ ಸಹ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ನೂರುಲ್ ಹುದಾ ಶಿಕ್ಷಣ ಸಂಸ್ಥೆ, 2015 ಆಗಸ್ಟ್ 19 ರಂದು ಪುತ್ತೂರು ತಾಲ್ಲೂಕಿನ ಮಾಡನ್ನೂರ್ ನಲ್ಲಿ ಆರಂಭಗೊಂಡಿತು. ಕೇವಲ ಹತ್ತು ವರ್ಷಗಳಲ್ಲಿ ಸಂಸ್ಥೆಯು ತನ್ನ ಗುರಿಯತ್ತ ಶ್ರದ್ಧೆಯಿಂದ ಹೆಜ್ಜೆಯಿಟ್ಟಿದ್ದು, ಪ್ರಸ್ತುತ 360ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಅರಬ್ಬಿ, ಇಂಗ್ಲೀಷ್, ಉರ್ದು, ಕನ್ನಡ, ಮಲಯಾಳಂ ಸೇರಿದಂತೆ ವಿವಿಧ ಅಂತರ ರಾಷ್ಟ್ರೀಯ ಭಾಷೆಗಳಲ್ಲಿ…

Read More