ಮಡಿಕೇರಿ ನ.29 NEWS DESK : ಶನಿವಾರಸಂತೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ F3-ಶನಿವಾರಸಂತೆ ಟೌನ್ ಫೀಡರ್‌ನಲ್ಲಿ ನ.30 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್‌ನಿಂದ ಹೊರಹೊಮ್ಮುವ ಶನಿವಾರಸಂತೆ ಪಟ್ಟಣ, ಗುಡುಗಳಲೆ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಲೇಖಕ: admin
ಕುಶಾಲನಗರ ನ.29 NEWS DESK : ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೂಡಲೇ ಮುಖ್ಯಮಂತ್ರಿಯಾಗಿ ಘೋಷಿಸಬೇಕೆಂದು ಒತ್ತಾಯಿಸಿ ಕುಶಾಲನಗರ ತಾಲ್ಲೂಕಿನ ಒಕ್ಕಲಿಗರ ಸಮಾಜದಿಂದ ಒಕ್ಕೊರಲಿನಿಂದ ಒತ್ತಾಯದೊಂದಿಗೆ ಜಯಕಾರಗಳು ಮೊಳಗಿದವು. ತೊರೆನೂರು ಒಕ್ಕಲಿಗರ ಸಮಾಜದ ಅಧ್ಯಕ್ಷ ಟಿ.ಪಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಗ್ರಾಮದ ಬಸವೇಶ್ವರ ದೇವಾಲಯದ ಬಳಿ ಜಮಾವಣೆಗೊಂಡ ಸಮಾಜ ಬಾಂಧವರು ಹಾಗೂ ಡಿಕೆಶಿ ಅಭಿಮಾನಿಗಳು ಡಿಕೆಶಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಭಾವಚಿತ್ರ ಹಿಡಿದು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸುವ ಮೂಲಕ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತಾಯಿ ಹರಸಲಿ. ಶೀಘ್ರದಲ್ಲಿಯೇ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಘೋಷಣೆಯಾಗಲಿ ಎಂದು ಒತ್ತಾಯಿಸಲಾಯಿತು. ಈ ಸಂದರ್ಭ ಮಾತನಾಡಿದ ಸಮಾಜದ ಅಧ್ಯಕ್ಷ ಸೋಮಶೇಖರ್, 2023 ರ ಚುನಾವಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರ ಅವಿರತ ಶ್ರಮದ ಫಲವಾಗಿ ರಾಜ್ಯದಲ್ಲಿ ಹಿಂದೆಂದು ಕೇಳಿರದಂತಹ 136 ಸೀಟುಗಳು ಬರುವ ಮೂಲಕ ಕಾಂಗ್ರೆಸ್ ಬಹುಮತಗಳಿಂದ ಅಧಿಕಾರಕ್ಕೆ ಬಂತು. ದೈವಭಕ್ತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಶ್ರಮದಿಂದಾಗಿ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿ ಇರುವ ಒಕ್ಕಲಿಗರು ಡಿ.ಕೆ.ಶಿವಕುಮಾರ್…
ಕುಶಾಲನಗರ ನ.29 NEWS DESK : ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಹೊಸದಾಗಿ ಜಾರಿಗೆ ತಂದಿರುವ ಪಠ್ಯಾಧಾರಿತ ಮೌಲ್ಯಾಂಕವನ್ನು ಚಾಚು ತಪ್ಪದೇ ಪರಿಪಾಲಿಸುವ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕರೆ ನೀಡಿದರು. ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ತಾಲ್ಲೂಕಿನ ಪ್ರೌಢಶಾಲಾ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಶಿಕ್ಷಕರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶವನ್ನು ಸುಧಾರಿಸುವ ಕುರಿತಂತೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಿರುವ ಪಠ್ಯಾಧಾರಿತ ಮೌಲ್ಯಾಂಕ( ಎಲ್.ಬಿ.ಎ.) ಬೋಧನೆ ಮೂಲಕ ಮಕ್ಕಳ ಕಲಿಕಾ ಪ್ರಗತಿಯ ಉನ್ನತೀಕರಣಕ್ಕೆ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು ಎಂದರು. ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ರಶ್ಮಿ ಮಹೇಶ್ ಅವರ…
ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನವು ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದಲ್ಲಿದೆ. ತೇತ್ರಾಯುಗದ ಕ್ಷತ್ರಿಯ ಸಂಹಾರಕ ಭಗವಾನ್ ಪರಶುರಾಮರು ತನ್ನ ಕೊಡಲಿಯನ್ನೆಸೆದು ಸೃಷ್ಟಿಸಿದ ಪವಿತ್ರ ಸ್ಥಳ. ಈ ತುಳು ನಾಡಿನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ದೇವರಗುಡ್ಡೆ ಎಂಬ ಎತ್ತರವಾದ ಗುಡ್ಡದಲ್ಲಿರುವ ಶ್ರೀ ಕ್ಷೇತ್ರದಲ್ಲಿ “ಅಂಬಾ(ಪಾರ್ವತಿ)ಗಣಪತಿ” ಸಮೇತರಾಗಿ ‘ಶಿವ ದೇವರು’ ನೆಲೆಸಿರುವುದರಿಂದ “ಸಾಂಬಸದಾಶಿವ” ಎಂಬ ಹೆಸರಿನಿಂದ ಆರಾಧಿಸಲ್ಪಡುತ್ತಿದ್ದು, ಶ್ರೀ ಕ್ಷೇತ್ರವು ಕಾರಣಿಕ ಹಿನ್ನಲೆಯುಳ್ಳ ಪರಮ ಪವಿತ್ರ ಕ್ಷೇತ್ರವಾಗಿದೆ. :: ಇತಿಹಾಸ :: ಸಾವಿರಾರು ವರ್ಷಗಳ ಹಿಂದೆ ಭಗವಾನ್ ಪರಶುರಾಮ ದೇವರು ಈ ಎತ್ತರವಾದ ಗುಡ್ಡ ಪ್ರದೇಶದಲ್ಲಿ ತಪಸ್ಸನ್ನಾಚರಿಸಿದರು. ತದನಂತರ ಋಷಿಮುನಿಗಳು ಈ ಪ್ರದೇಶದಲ್ಲಿ ಹಲವು ಕಾಲ ಯಾಗ, ಯಜ್ಞ, ತಪಸ್ಸುಗಳನ್ನು ಮಾಡಿದ ತಪೋಭೂಮಿಯಾಯಿತು. ನಂತರದ ಕಾಲದಲ್ಲಿ ಇಲ್ಲಿಯ ಮೂಲ ನಿವಾಸಿಗಳು ತಮಗೆ ಬಂದ ತೊಂದರೆಗಳನ್ನು ಕಂಡು, ಈ ಪ್ರದೇಶದಲ್ಲಿ ದೈವಿ ಶಕ್ತಿಯಿದೆಯೆಂದು ತಿಳಿದು ತಮ್ಮದೇ ರೀತಿಯಲ್ಲಿ ದೇವಿ ಶಕ್ತಿ/ಕಾಳಿಶಕ್ತಿಯನ್ನು ಪೂಜಿಸಿ ಆರಾಧಿಸಿಕೊಂಡು ಬಂದಿದ್ದರು. ತದನಂತರ ರಾಜ ಮಹಾರಾಜರ ಆಳ್ವಿಕೆಯ…
ಮಡಿಕೇರಿ ನ.29 NEWS DESK : ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಮಗ್ರ ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಚಳವಳಿಯ ಪಾತ್ರ’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಸಹಕಾರಿ ವ್ಯವಸ್ಥೆಯ ಸಾಧನೆ, ವೈಫಲ್ಯಗಳ ಪರಾಮರ್ಶೆಯಿಂದ ಮಾತ್ರವೇ ಸಹಕಾರಾಭಿವೃದ್ಧಿ ಬಲಗೊಳ್ಳಲು ಸಾಧ್ಯ’ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧವನ್ನು ಮಂಡಿಸಿದರು. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಚರ್ಚಾ ಸ್ಪರ್ಧೆ ಕಾಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಮಾತನಾಡಿ, ಸಹಕಾರ ಚಳುವಳಿಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರವಾಗಿದೆ. 1905 ರಲ್ಲಿ ರಾಜ್ಯದ ಗದಗ ಜಿಲ್ಲೆಯ ಕಣಗಿನಹಾಳ ಗ್ರಾಮದಲ್ಲಿ ಪ್ರಾರಂಭವಾದ ಕೃಷಿ ಪತ್ತಿನ ಸಹಕಾರ ಸಂಘ ದೇಶದಲ್ಲಷ್ಟೇ ಅಲ್ಲ ಏಷ್ಯಾ ಖಂಡದಲ್ಲಿಯೇ ಪ್ರಥಮ ಸಂಘವಾಗಿದೆ. ಕೊಡಗು ಜಿಲ್ಲೆಯು ತನ್ನದೇ ಆದ…
ಬೇಕಾಗುವ ಸಾಮಾಗ್ರಿಗಳು :: ದೋಸೆ ಅಕ್ಕಿ- 2 ಬಟ್ಟಲು, ಬೆಲ್ಲ- 1.5 ಬಟ್ಟಲು, ಕಪ್ಪು ಎಳ್ಳು- 2 ಚಮಚ, ಏಲಕ್ಕಿ- ಚಿಟಿಕೆ, ಮೈದಾ- 3 ಟೀ ಚಮಚ, ತುಪ್ಪ- 3 ಚಮಚ, ತೆಂಗಿನತುರಿ- 2 ಚಮಚ, ಉಪ್ಪು- ರುಚಿಗೆ ತಕ್ಕಷ್ಟು, ಅಡುಗೆ ಸೋಡಾ- ಚಿಟಿಕೆ. ಮಾಡುವ ವಿಧಾನ :: ಮೊದಲಿಗೆ ದೋಸೆ ಅಕ್ಕಿಯನ್ನು ಚೆನ್ನಾಗಿ ತೊಳೆದು, ನೀರು ಹಾಕಿ 5 ಗಂಟೆಗಳ ನೆನೆಯಲು ಬಿಡಿ. ನಂತರ ಮಿಕ್ಸಿ ಜಾರಿಗೆ ಅಕ್ಕಿ, ಸೋಸಿದ ಬೆಲ್ಲ, ಚಿಟಿಕೆ ಉಪ್ಪು ಹಾಗೂ ಏಲಕ್ಕಿ ಹಾಕಿ ರುಬ್ಬಿಕೊಳ್ಳಿ. ಬಳಿಕ ಈ ಹಿಟ್ಟಿಗೆ ಕಪ್ಪು ಎಳ್ಳು ಹಾಗೂ ಮೈದಾ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ತೆಂಗಿನತುರಿಯನ್ನು ತುಪ್ಪದಲ್ಲಿ ಹುರಿಯಿರಿ. ರುಬ್ಬಿದ ಹಿಟ್ಟಿಗೆ ತೆಂಗಿನ ತುರಿ ಹಾಕಿ ಮಿಶ್ರಣ ಮಡಿ, 7 ರಿಂದ 8 ಗಂಟೆ ಕಾಲ ಹಾಗೆ ಇಡಿ. ಹಿಟ್ಟು ದೋಸೆ ಹಿಟ್ಟಿನ ಹದಕ್ಕಿಂತ ಸ್ವಲ್ಪ ತೆಳ್ಳಗಿರಲಿ. ಒಂದು ಬಾಣಲೆಯನ್ನು ಒಲೆಯ ಮೇಲಿಟ್ಟು ಎಣ್ಣೆ ಹಾಕಿ ಈ ವೇಳೆ…
ಪಣಜಿ ನ.29 NEWS DESK : ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದ 550ನೇ ವರ್ಷಾಚರಣೆಯ ಅಂಗವಾಗಿ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗೋವಾದಲ್ಲಿ ವಿಶ್ವದ ಅತಿ ಎತ್ತರದ ಶ್ರೀರಾಮನ 77 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ದಕ್ಷಿಣ ಗೋವಾದ ಪರ್ತಗಲಿಯಲ್ಲಿರುವ ಮಠದ ದೇವಾಲಯಕ್ಕೂ ಪಧಾನಿ ಮೋದಿ ಭೇಟಿ ನೀಡಿದರು. ಈ ಮಠವು ಭಾರತದ ಅತ್ಯಂತ ಹಳೆಯ ಮಠಗಳಲ್ಲಿ ಒಂದಾಗಿದ್ದು, ಇದು ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕೊಡುಗೆಗಳಿಗೆ ಹೆಸರುವಾಸಿಯಾಗಿದೆ ಮತ್ತು ಸಾರಸ್ವತ ಸಮುದಾಯದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ಗುಜರಾತ್‌ನಲ್ಲಿ ಏಕತಾ ಪ್ರತಿಮೆ ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರೇ ಈ ಶ್ರೀರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ ಎಂದು ಗೋವಾ ಲೋಕೋಪಯೋಗಿ ಇಲಾಖೆ ಸಚಿವ ದಿಗಂಬರ ಕಾಮತ್ ಹೇಳಿದ್ದಾರೆ. ಇದು ಶ್ರೀರಾಮನ ವಿಶ್ವದ ಅತಿ ಎತ್ತರದ ಪ್ರತಿಮೆಯಾಗಿದೆ. ಗೋವಾ ರಾಜ್ಯಪಾಲ ಅಶೋಕ್ ಗಜಪತಿ ರಾಜು ಮತ್ತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಹಾವೇರಿ ನ.29 NEWS DESK : ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ನಡೆದಿದೆ. ಮೂರು ವರ್ಷದ ಚಿರತೆ ಮರಿ ರಸ್ತೆ ದಾಟುತ್ತಿದ್ದ ವೇಳೆ ಡಿಕ್ಕಿ ಹೊಡೆದಿದ್ದರಿಂದ ಚಿರತೆ ಮುಖಕ್ಕೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದೆ. ಘಟನೆಯ ಬಳಿಕ ಅಪರಿಚಿತ ವಾಹನದ ಪತ್ತೆಗಾಗಿ ಇಲಾಖೆ ಸಿಬ್ಬಂದಿ, ಪೊಲೀಸರು ಶೋಧ ಮಾಡುತ್ತಿದ್ದಾರೆ. ಸ್ಥಳಕ್ಕೆ ಶಿಗ್ಗಾಂವಿ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿರಾಜಪೇಟೆ ನ.29 NEWS DESK : ಮನುಷ್ಯನ ಅಂತರಾಳದಲ್ಲಿ ವಿಭಿನ್ನ ಭಾವನೆ ಗುಚ್ಛವಿದ್ದು, ಅದನ್ನು ಹೊರಗೆಡವಿ ಲೋಕ ಹಿತಕ್ಕೆ ಮುಡಿಸಿ ಮುಕ್ತಿ ಹೊಂದುವುದೇ ನಿಸ್ವಾರ್ಥ ಬದುಕು ಎಂದು ಕೂರ್ಗ್ ವ್ಯಾಲಿ ಶಾಲೆಯ ಪ್ರಾಂಶುಪಾಲರಾದ ಸುಮ ಚಿತ್ರಭಾನು ಹೇಳಿದರು. ವಿರಾಜಪೇಟೆಯ ಮೊಗರಗಲ್ಲಿಯಲ್ಲಿನ ಕಲಾ ಉತ್ಸವ ವೇದಿಕೆಯಲ್ಲಿ ನಡೆದ ವಿರಾಜಪೇಟೆಯ ಕೆದಮುಳ್ಳೂರು ಗ್ರಾಮದ ಯುವಕವಿ ಲವಿನ್ ಲೋಪೇಸ್ ಬರೆದಿರುವ ಮೌನದ ಮನಸ್ಸಿನಲ್ಲಿ ಚೊಚ್ಚಲ ಕೃತಿಯ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಲವಿನ್ ತಮ್ಮ ಕವನ ಸಂಕಲನದಲ್ಲಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಕವನಗಳು ಎಲ್ಲರಿಗೂ ಮನ ಮುಟ್ಟುವ ಹಾಗೆ ರಚಿಸಿದ್ದು, ನೆಲ, ಜಲ, ಪ್ರೀತಿ, ವ್ಯಾತ್ಸಲ್ಯ ಹಾಗೂ ರೈತರ ಬಗ್ಗೆ ಕವನಗಳನ್ನು ರಚಿಸಿದ್ದಾರೆ. ಕನ್ನಡ ಸಾಹಿತ್ಯದ ಲೋಕ ವಿಶಾಲವಾಗಿದ್ದು, ಈ ನೆಲ, ಕವಿಗಳ ಬೀಡು. ಇಂತಹ ನಾಡಿನೊಳಗೆ ಉದಯಿಸಿ ಕಾವ್ಯ ಲೋಕಕ್ಕೆ ತನ್ನ ಕೃತಿ ಕೊಟ್ಟಿದ್ದು ಶ್ರೇಷ್ಠ ಭಾವ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರಲ್ಲದೆ, ಮುಂದೆಯೂ ಕನ್ನಡದಲ್ಲೇ ಕವನ ರಚನೆ ಮಾಡುವಂತೆ ಹೇಳಿದರು. ಸಾಹಿತಿ ವಿ.ಎನ್.ರಜಿತ…
ಬೆಂಗಳೂರು ನ.29 NEWS DESK : ತೀವ್ರ ಕುತೂಹಲ ಕೆರಳಿಸಿದ ಇಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ನಂತರ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಿಎಂ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬ್ರೇಕ್ ಫಾಸ್ಟ್ ಚೆನ್ನಾಗಿತ್ತು, ನಾನು ಡಿ.ಕೆ.ಶಿವಕುಮಾರ್, ಪೊನ್ನಣ್ಣ ಬ್ರೇಕ್ ಫಾಸ್ಟ್ ಮಾಡಿದ್ವಿ. ಮೊನ್ನೆನೇ ಹೈಕಮಾಂಡ್ ಫೋನ್ ಮಾಡಿದ್ದರು. ಡಿ.ಕೆ.ಶಿವಕುಮಾರ್ ಇವತ್ತು ನಮ್ಮನೆಗೆ ಬಂದರು. ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆದಿದ್ದೆ. ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಯಿತು, ಅದನ್ನು ಬಗೆಹರಿಸಲು ಇಂದು ಕರೆದಿದ್ದೆ ಎಂದರು. ನಮ್ಮ ಉದ್ದೇಶ 2028ರ ವಿಧಾನಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು,ನನ್ನ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟ ಪಡಿಸಿದರು.






