ಬೆಂಗಳೂರು ನ.29 NEWS DESK : ತೀವ್ರ ಕುತೂಹಲ ಕೆರಳಿಸಿದ ಇಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ನಂತರ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಿಎಂ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬ್ರೇಕ್ ಫಾಸ್ಟ್ ಚೆನ್ನಾಗಿತ್ತು, ನಾನು ಡಿ.ಕೆ.ಶಿವಕುಮಾರ್, ಪೊನ್ನಣ್ಣ ಬ್ರೇಕ್ ಫಾಸ್ಟ್ ಮಾಡಿದ್ವಿ. ಮೊನ್ನೆನೇ ಹೈಕಮಾಂಡ್ ಫೋನ್ ಮಾಡಿದ್ದರು. ಡಿ.ಕೆ.ಶಿವಕುಮಾರ್ ಇವತ್ತು ನಮ್ಮನೆಗೆ ಬಂದರು. ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆದಿದ್ದೆ. ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಯಿತು, ಅದನ್ನು ಬಗೆಹರಿಸಲು ಇಂದು ಕರೆದಿದ್ದೆ ಎಂದರು. ನಮ್ಮ ಉದ್ದೇಶ 2028ರ ವಿಧಾನಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು,ನನ್ನ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಲೇಖಕ: admin
ಮಡಿಕೇರಿ ನ.29 NEWS DESK : ಸಮಸ್ತ ಉಲಮಾ ಸಂಘಟನೆಗೆ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಫೆ.4 ರಿಂದ 8ರ ವರೆಗೆ ‘ಆದರ್ಶ ಪರಿಶುದ್ಧತೆ ಶತಮಾನಗಳಿಂದ’ ಎಂಬ ಘೋಷಣೆಯೊಂದಿಗೆ ಕೇರಳದ ಕಾಸರಗೋಡುವಿನ ಕುಣಿಯಲ್ಲಿ 100ನೇ ಅಂತರರಾಷ್ಟ್ರೀಯ ಮಹಾ ಸಮ್ಮೇಳನ ನಡೆಯಲಿದೆ. ಇದರ ಪ್ರಚಾರಕ್ಕಾಗಿ ಕೊಡಗು ಜಿಲ್ಲಾ ಜಂಇಯ್ಯತುಲ್ ಉಲಮಾ ಒಕ್ಕೂಟದಿಂದ ಮಡಿಕೇರಿಯಲ್ಲಿ ‘ಸಮಸ್ತ ಶತಮಾನೋತ್ಸವ ಪ್ರಚಾರ ಮಹಾ ಸಮ್ಮೇಳನ’ವನ್ನು ಆಯೋಜಿಸಲಾಗಿದೆ. ನಗರದ ಗಾಂಧಿ ಮೈದಾನದಲ್ಲಿ ಪಿ.ಬಿ.ಇಸ್ಮಾಯಿಲ್ ಮುಸ್ಲಿಯಾರ್ ಕಲ್ಲುಬಾಣೆ ಅವರ ನೇತೃತ್ವದಲ್ಲಿ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಜೆ 4 ಗಂಟೆಗೆ ಕೊಡಗು ಜಿಲ್ಲಾ ಉಲಮಾ ಒಕ್ಕೂಟದ ಅಧ್ಯಕ್ಷÀ ಎಂ.ಎಂ.ಅಬ್ದುಲ್ಲಾ ಫೈಝಿ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಸಮಸ್ತ ಕೇಂದ್ರೀಯ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷರೂ ಹಾಗೂ ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನೇತಾರರಾದ ಸಯ್ಯಿದುಲ್ ಉಲಮಾ ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮಡಿಕೇರಿ ನ.29 NEWS DESK : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26ನೇ ಸಾಲಿನ ಸಾಮಾನ್ಯ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು Sevasindhu.karnataka.gov.in ಮುಖಾಂತರ ದಿನಾಂಕ: 01-12-2025 ರಿಂದ ದಿನಾಂಕ: 30-12-2025 ರ ವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ ಕಸಂವಾ 280 ಕಸಧ 2024 (ಭಾಗ-1) ದಿನಾಂಕ: 31-10-2025 ರಲ್ಲಿನ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್ ಸೈಟ್: www.kannadasiri. karnataka.gov.in ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ 08024410547, 8792662814, 8792662816, 08022213530, 9986837037, 9900337738, 9448436877, 9480197511, 9916600027, 08022241325 ಅನ್ನು ಹಾಗೂ…
ಮಡಿಕೇರಿ ನ.29 NEWS DESK : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 2025-26ನೇ ಸಾಲಿನ ಶಿಷ್ಯವೇತನಕ್ಕೆ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್/ ವಿಡಿಯೋ ಚಿತ್ರೀಕರಣದ ಮೂಲಕ ಈ ಕೆಳಕಂಡಂತೆ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದೆ. ಶಿಷ್ಯವೇತನ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಅಕಾಡೆಮಿ ಪೇಸ್ ಬುಕ್ (face book: com/ karnatakasangeetanrutyaacdemy) ಮೂಲಕ ಪಡೆದು ವೆಬ್ ಸೈಟ್ (sangeetanritya academy. karnataka.gov.in) ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಅರ್ಜಿಯನ್ನು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೆಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ. ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್/ ವಿಡಿಯೋ ಚಿತ್ರೀಕರಿಸಿ, ಪೆನ್‍ಡ್ರೈವ್‍ನಲ್ಲಿ ಅಳವಡಿಸಿ, ಪೆನ್‍ಡ್ರೈವ್‍ನೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ…
ಮಡಿಕೇರಿ ನ.29 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ವಿಭಾಗದಿಂದ ಮೂಡಿದ ಜನಸಾಮಾನ್ಯರ ಅದರಲ್ಲೂ ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾ ಉದ್ಯಮಗಳು ಹಾಗೂ ಉದ್ಯೋಗ ಸೃಷ್ಟಿಗೆ ಕಾರಣವಾದ ಅನುಕರಣೀಯ ಆವಿಷ್ಕಾರಗಳು, ಪರಿಹಾರಗಳನ್ನು ಪ್ರತಿ ವರ್ಷ ಗುರುತಿಸಿ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳ ಹಾಗೂ ಬೋಧಕರಿಗೆ ಮತ್ತು ಜನಸಾಮಾನ್ಯರಿಗೆ ಸ್ನಾತಕೋತ್ತರ ವಿದ್ಯಾರ್ಥಿಗಳ ಅತ್ಯುತ್ತಮ ಆವಿಷ್ಕಾರ/ ನಾವಿನ್ಯತೆಗೆ ಪ್ರೊ.ಯು.ಆರ್.ರಾವ್ ಪುರಸ್ಕಾರ, ಪದವಿ ವಿದ್ಯಾರ್ಥಿಗಳ ಅತ್ಯುತ್ತಮ ಆವಿಷ್ಕಾರ/ ನಾವಿನ್ಯತೆಗೆ ಡಾ.ಎಸ್.ಕೆ.ಶಿವಕುಮಾರ್ ಪುರಸ್ಕಾರ ಮತ್ತು ಬೋಧಕರು ಹಾಗೂ ಜನಸಾಮಾನ್ಯರ ಅತ್ಯುತ್ತಮ ಆವಿಷ್ಕಾರ/ನಾವಿನ್ಯತೆಗೆ ಪ್ರೊ.ಎಸ್.ಅಯ್ಯಪ್ಪನ್ ಪುರಸ್ಕಾರ ಈ ಆವಿಷ್ಕಾರ/ನಾವೀನ್ಯತೆಗೆ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಪುರಸ್ಕಾರಕ್ಕೆ ರೂ.10 ಸಾವಿಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು. ಆಸಕ್ತರು ಡಿಸೆಂಬರ್, 31 ರೊಳಗೆ ಅಕಾಡೆಮಿಯ ವೆಬ್‍ಸೈಟ್‍ನಲ್ಲಿ https://kstacademy.in ನೀಡಿರುವ ಮಾರ್ಗಸೂಚಿಯನ್ವಯ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಶ್ರೀನಿವಾಸು…
ಮಡಿಕೇರಿ ನ.29 NEWS DESK : ಕರಡ ಕೊಡವ ಕಲ್ಚರಲ್ ಮತ್ತು ರಿಕ್ರಿಯೇಶನ್ ಕ್ಲಬ್ ಆಯೋಜಿಸಿದ ತೃತೀಯ ವರ್ಷದ ಕಡಿಯತ್ ನಾಡ್ ಕಪ್ ಹಾಕಿ ಪಂದ್ಯಾವಳಿ-2025 ರ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭಾಗವಹಿಸಿ ಶುಭ ಕೋರಿದರು. ಬಳಿಕ ಮಾತನಾಡಿದ ಶಾಸಕರು, ಕೊಡಗು ಎಂದರೆ ಹಾಕಿಗೆ ಪ್ರಸಿದ್ಧವಾದ ನಾಡು. ಅದರಲ್ಲೂ ವಿಶೇಷವಾಗಿ ಕೊಡವ ಜನಾಂಗದವರು ಹಾಕಿ ಆಟವನ್ನು ಅತ್ಯಂತ ಹತ್ತಿರದಿಂದ ಬಲ್ಲವರಾಗಿದ್ದು, ಎಲ್ಲೆಡೆ ಕೊಡವರು ಎಂದರೆ ಹಾಕಿ ಎಂಬ ಭಾವನೆ ಮೂಡಿದೆ ಎಂದು ವಿಶ್ಲೇಷಣೆ ನೀಡಿದವರು. ಬಳಿಕ ಸಂಘಟಕರ ಮನವಿ ಸ್ವೀಕರಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಈ ಕ್ರೀಡಾಂಗಣದ ಅಭಿವೃದ್ಧಿಗೆ ಯಾವುದೆಲ್ಲ ಸವಲತ್ತು ಕಲ್ಪಿಸಬೇಕು ಅದನ್ನು ತಾನು ನಿರ್ವಹಿಸುವುದಾಗಿ ಹೇಳಿದರು. ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಉಪಾಧ್ಯಕ್ಷರು ಹಾಗೂ ವಲಯ ಅಧ್ಯಕ್ಷರು ಕೋಡಿರ ವಿನೋದ್ ನಾಣಯ್ಯ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಬಾನಂಡ…
ಸುಂಟಿಕೊಪ್ಪ ನ.29 NEWS DESK : ಮಹಿಳೆಯರು ವ್ಯಾಪಾರ ವಹಿವಾಟಿನಲ್ಲಿ ಒಂದಾಗಿ ಕಾರ್ಯನಿರ್ವಹಿಸುತ್ತಿರುವಂತೆ ಸಮಸ್ಯೆಗಳು ಕಂಡು ಬಂದಾಗ ಮಹಿಳೆಯರು ಸಂಘಟಿತರಾಗಿ ಹೋರಾಡಬೇಕೆಂದು ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಮಹಿಳಾ ಮುಖ್ಯ ಪೇದೆ ಎಂ.ಬಿ.ಸುಮತಿ ಹೇಳಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಖಾಸಗಿಬಸ್ ನಿಲ್ಧಾಣದಲ್ಲಿ ಮಹಿಳಾ ಗ್ರಾಮಸಭೆಯಲ್ಲಿ ಮಹಿಳೆಯ ರಕ್ಷಣೆ ಮತ್ತು ಹಕ್ಕು ಕಾನೂನುಗಳ ಬಗ್ಗೆ ಮಾಹಿತಿ ನೀಡಿದ ಅವರು ಮಾತನಾಡಿದರು. ಮಹಿಳೆಯರ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿರುವುದನ್ನು ನಿತ್ಯವು ನಾವು ಕಾಣುತ್ತಿದ್ದೇವೆ ಕೇಳಿಸಿಕೊಳ್ಳುತ್ತಿದ್ದೇವೆ ಅವುಗಳನ್ನು ತಡೆಯುವ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಸಾಕಷ್ಟು ಕಾನೂನುಗಳಲ್ಲಿ ಮಾರ್ಪಡುಗಳನ್ನು ಮಾಡುವ ಸುಲಲಿತವಾಗಿ ಕಾನೂನು ರಚಿಸಲಾಗಿದೆ. ತಮ್ಮ ಸುತ್ತ ಮುತ್ತಲಿನ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಸಂಭವಿಸಿದಾಗ ಮಹಿಳೆಯರು ಸುಮ್ಮನಿರದೆ ಸಂಘಟಿತರಾಗಿ ಎದುರಿಸುವ ಮೂಲಕ ದೌರ್ಜನ್ಯ ತಡೆಯಲು ಸಾಧ್ಯವೆಂದು ಅವರು ಹೇಳಿದರು. ಮಹಿಳೆಯರು ಇಂದಿನ ದಿನಗಳಲ್ಲಿ ಸ್ವಾಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಸಂಘಗಳಲ್ಲಿ ಸಂಘಟಿತರಾಗಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿಸಿಕೊಂಡಿರುವುದೇ ಸಾಕ್ಷಿಯಾಗಿದೆ. ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.…
ವಿರಾಜಪೇಟೆ ನ.29 NEWS DESK : ವಿರಾಜಪೇಟೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಕಾವೇರಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಎನ್.ಎಂ.ತರುಣ್ ವೈಯಕ್ತಿಕ ವಿಭಾಗದಲ್ಲಿ ವಿಜ್ಞಾನ ಮಾದರಿ ಪ್ರದರ್ಶಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ವಿಜ್ಞಾನ ವಿಭಾಗದ ಶಿಕ್ಷಕರಾದ ಶ್ರೀಮಾನ್ ಸುದೇಶ್ ಬಿ.ಎಸ್ ರವರು ಮಾರ್ಗದರ್ಶನ ನೀಡಿದ್ದಾರೆ. ಇವರ ಸಾಧನೆಗೆ ಶಾಲೆ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ,ಸಂಯೋಜಕಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಪೋಷಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಮಡಿಕೇರಿ ನ.28 NEWS DESK : ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಆದ್ದರಿಂದ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಕರೆ ನೀಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾಲಿಬಾಲ್, ಹಾಕಿ, ಬ್ಯಾಡ್ಮಿಂಟನ್ ಮುಂತಾದವುಗಳು ಅಂತರಾಷ್ಟ್ರೀಯ ಮಟ್ಟಕ್ಕೆ ತಲುಪುವುದು ಕೊಡಗು ಜಿಲ್ಲೆಯು ಒಂದಾಗಿದೆ. ಕೊಡಗು ಜಿಲ್ಲೆಯು ಕ್ರೀಡೆಯಲ್ಲಿ ಹೆಸರು ಮಾಡಿದೆ. ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದರು. ನಿರಂತರವಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಆರೋಗ್ಯವನ್ನು ಉತ್ತಮವಾಗಿಡಲು ಸಾಧ್ಯ. ಹಾಗೂ ಪೋಷಕರು ಮಕ್ಕಳಿಗೆ ಪ್ರೋತ್ಸಾಹ ನೀಡುವುದು ಮುಖ್ಯ ಎಂದರು. ಕ್ರೀಡೆಗಳನ್ನು ನಿರಂತರವಾಗಿ ಅಭ್ಯಾಸ…
ಮಡಿಕೇರಿ ನ.28 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ನಗರದ ಐಟಿಐ ಕಾಲೇಜು ಬಳಿ ಸುಮಾರು 379 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿ, ಜಿಲ್ಲಾ ನ್ಯಾಯಾಲಯ ಬಳಿ ಸುಮಾರು 448 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಲಕಿಯರ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣ ಬಳಿ ಸುಮಾರು 250 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು, ಇಲಾಖಾ ಅಧಿಕಾರಿಗಳು ಹಾಜರಿದ್ದರು.






