ಲೇಖಕ: admin

ಮಡಿಕೇರಿ NEWS DESK ಅ.31 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಸಂಸ್ಮರಣಾ ದಿನಾಚರಣೆ ನಗರದಲ್ಲಿ ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕಾರ್ಯದರ್ಶಿ ಪೇರಿಯನ ಉದಯಕುಮಾರ್, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ಲು, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಕರ್ನಾಟಕ…

Read More

ವಿರಾಜಪೇಟೆ NEWS DESK ಅ.31 : ಕೊಡಗು ಜಿಲ್ಲಾ ಪೊಲೀಸ್ ವಿರಾಜಪೇಟೆ ಉಪ ವಿಭಾಗ, ವಿರಾಜಪೇಟೆ ವೃತ್ತ, ವಿರಾಜಪೇಟೆ ನಗರ ಠಾಣೆ ಹಾಗೂ ವಿರಾಜಪೇಟೆ ಗ್ರಾಮಾಂತರ ಠಾಣೆ ಇವರ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆಯಲ್ಲಿ  ರಾಷ್ಟ್ರೀಯ ಏಕತಾ ದಿನಾಚರಣೆ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು “ಏಕತೆಗಾಗಿ ಓಟ 2025” ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಮೈದಾನದಿಂದ ವಿರಾಜಪೇಟೆ ನಗರದಾದ್ಯಂತ ಕಾಲ್ನಡಿಗೆ ಮೂಲಕ ಆಯೋಜಕರೊಂದಿಗೆ ಹೆಜ್ಜೆ ಹಾಕಿದ ಶಾಸಕರು ಏಕತೆಯ ಸಂದೇಶ ಸಾರಿದರು. ಭಾರತದ ಸಾರ್ವಭೌಮತೆ ಉಳಿಸಿಕೊಳ್ಳಲು ದೇಶದ ನಾಗರೀಕರಲ್ಲಿ ಏಕತಾ ಭಾವನೆ ಅತೀ ಮುಖ್ಯವಾಗಿದೆ. ಬ್ರಿಟಿಷರ ಕಪಿಮುಷ್ಠಿಯಿಂದ ಸ್ವಾತಂತ್ರ್ಯ ಹೋರಾಟಗಾರರು ನಮಗೆ ತಂದುಕೊಟ್ಟ ಸ್ವತಂತ್ರ ಭಾರತದ ಸ್ವರ್ಣ ಯುಗವನ್ನು ಮುಂದುವರಿಸಲು ಪ್ರತಿಯೊಬ್ಬ ಭಾರತೀಯನು ಒಗ್ಗಟ್ಟಾಗಿ ಇರುವುದು ಅತಿ ಅವಶ್ಯಕವಾಗಿದೆ. ದೇಶದ ವಿಷಯ ಬಂದ ಸಂದರ್ಭದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ದೇಶದ ಪ್ರಜೆಗಳಾದ ನಮ್ಮೊಳಗೆ ಮೂಡಬಾರದು ಎಂಬ ಸದುದ್ದೇಶದಿಂದ ಹಾಗೂ ಏಕತೆಯ ಸಂದೇಶವನ್ನು ಸಾರಲು…

Read More

ಸೋಮವಾರಪೇಟೆ NEWS DESK ಅ.31 : ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ-ಎಡದಂಟೆ ಗ್ರಾಮಕ್ಕೆ ಶಾಸಕರಾದ ಡಾ.ಮಂತರ್‌ಗೌಡ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಎಡದಂಟೆ ಜಲಪಾತ ವೀಕ್ಷಿಸಿದ ಶಾಸಕರು, ಪ್ರವಾಸಿಗರಿಗೆ ಜಲಪಾತ ವೀಕ್ಷಣೆಗೆ ಅವಕಾಶ ಮಾಡಿಕೊಡಲು, ಜಲಪಾತ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಕಲ್ಪಿಸಲಾಗುವುದು ಎಂದು ಹೇಳಿದರು. ಮೊದಲು ಮೆಟ್ಟಿಲುಗಳನ್ನು ನಿರ್ಮಿಸಲು ಅಂದಾಜುಪಟ್ಟಿಯನ್ನು ತಯಾರಿಸುವಂತೆ ಲೋಕೋಪಯೋಗಿ ಇಲಾಖೆ ಎಇಇ ಅವರಿಗೆ ಸೂಚಿಸಿದರು. ಕೂತಿ ಮುಖ್ಯ ರಸ್ತೆಯಿಂದ ಎಡದಂಟೆ ಗ್ರಾಮಕ್ಕೆ ಒಂದೂವರೆ ಕಿ.ಮೀ.ರಸ್ತೆ ಅಭಿವೃದ್ಧಿಗೆ ಅನುದಾನ ಕಲ್ಪಿಸುವಂತೆ ಎಡದಂಟೆ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ವೈ.ಎಂ.ರವಿ ಮನವಿ ಮಾಡಿದರು. ರಸ್ತೆ ಅಭಿವೃದ್ದಿಗೆ ಅನುದಾನ ಕಲ್ಪಿಸುವ ಭರವಸೆಯನ್ನು ಶಾಸಕರು ನೀಡಿದರು. ಜಲಪಾತ ಅಭಿವೃದ್ಧಿ ಹಾಗು ಅದೇ ಮಾರ್ಗವಾಗಿ ರುದ್ರಗಿರಿ ಬೆಟ್ಟಕ್ಕೆ ಸಂಪರ್ಕ ರಸ್ತೆಗಾಗಿ 5 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಈ ಹಿಂದಿಯೆ ಪ್ರವಾಸೋಧ್ಯಮ ಇಲಾಖೆಗೆ ಸಲ್ಲಿಸಲಾಗಿದೆ. ಆದರೆ ಅನುದಾನ ಸಿಕ್ಕಿಲ್ಲ ಎಂದು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎಂ.ಲವ ಶಾಸಕರ ಗಮನಕ್ಕೆ ತಂದರು.…

Read More

ಸೋಮವಾರಪೇಟೆ ಅ.31 : ನಾವು ಪ್ರತಿಷ್ಠಾನದ ವತಿಯಿಂದ ಶಾಲಾ ಆರೋಗ್ಯ ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮ ಕಾರ್ಯಕ್ರಮ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು. ಪ್ರತಿಷ್ಠಾನದ ಸ್ಥಾಪಕರಾದ ಗೌತಮ್ ಕಿರಗಂದೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕಿ ಸುಮನಾ ಮ್ಯಾಥ್ಯು ಮಾತನಾಡಿ, ರಾಷ್ಟ್ರೀಯ ಅರೋಗ್ಯ ಮಿಷನ್‌ನಡಿಯಲ್ಲಿ 2020ರಲ್ಲಿ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಜೀವನಶೈಲಿ, ಅರೋಗ್ಯಕರ ನಡವಳಿಕೆ ಮುಂತಾದ ವಿಷಯಗಳ ಬಗ್ಗೆ ಮಕ್ಕಳಿಗೆ ಮಾಹಿತಿ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ. ಕಾರ್ಯಕ್ರಮದಲ್ಲಿ ಮಕ್ಕಳು ಮುಕ್ತವಾಗಿ ತಮ್ಮ ಬೇಕು ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ ಎಂದು ಹೇಳಿದರು. ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಬೆಂಗಳೂರು, ಯುನಿಸೆಫ್ ಜಂಟಿಯಾಗಿ ಕಾರ್ಯಕ್ರಮ ರೂಪಿಸುತ್ತಿದೆ. ನಾವು ಪ್ರತಿಷ್ಠಾನ ಕೊಡಗು ಜಿಲ್ಲೆಯ ಶಾಲೆಗಳ ಜವಾಬ್ದಾರಿ ತೆಗೆದುಕೊಂಡಿದೆ. ಪ್ರಸಕ್ತ ವರ್ಷ ಸೋಮವಾರಪೇಟೆ ತಾಲೂಕಿನ ಆಯ್ದ 5 ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಹೇಳಿದರು. ಸರ್ಕಾರಿ ಪ್ರೌಢಶಾಲೆಯ ಎಂಟನೇ ಮತ್ತು ಒಂಬತ್ತನೆ ತರಗತಿ ಮಕ್ಕಳಿಗೆ…

Read More

ಮಡಿಕೇರಿ NEWS DESK ಅ.31 : ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಯಿತು. ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ‘ಏಕತಾ ಯಾತ್ರೆ’ ನಡೆಯಿತು. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ‘ಏಕತಾ ಯಾತ್ರೆ’ ಸಾಗಿತು. ರಾಷ್ಟçದ ಏಕತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವುದರೊಂದಿಗೆ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ಪಕ್ಷದ ಪ್ರಮುಖರು ತಿಳಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಬಿಜೆಪಿ ಮಾಜಿ ಅಧ್ಯಕ್ಷರುಗಳಾದ ರವಿ ಕುಶಾಲಪ್ಪ, ಬಿ.ಬಿ.ಭಾರತೀಶ್, ರಾಬಿನ್ ದೇವಯ್ಯ, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ನಗರಸಭಾ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪ್ರಮುಖರು ಹಾಗೂ ಕಾರ್ಯಕರ್ತರು ‘ಏಕತಾ ಯಾತ್ರೆ’ಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಅ.30 NEWS DESK : ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಫೆಡರೇಷನ್ ನ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರಾಗಿ ಗಣೇಶ್ ನಾಯ್ಡು ಅವರು ನೇಮಕಗೊಂಡಿದ್ದಾರೆ. ಮಜ್ದೂರ್ ಕಾಂಗ್ರೆಸ್ ಫೆಡರೇಷನ್ ನ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿನಾಥ್ ಜೈಸ್ವಾಲ್ ಅವರ ಅನುಮೋದನೆ ಮತ್ತು ಫೆಡರೇಷನ್ ನ ಕರ್ನಾಟಕ ರಾಜ್ಯಾಧ್ಯಕ್ಷ ನಂದಾ ಎನ್. ಅವರ ಆದೇಶದ ಮೇರೆಗೆ ಗಣೇಶ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ. ಮಹಿಳೆಯರು, ಹಿಂದುಳಿದ ವರ್ಗ, ಪರಿಶಿಷ್ಟರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರನ್ನು ಪಕ್ಷದೆಡೆಗೆ ಸೆಳೆದು ಸದಸ್ಯತ್ವವನ್ನು ಹೆಚ್ಚಿಸಲಾಗುವುದು. ಪಕ್ಷದ ಮುಖಂಡರ ಮಾರ್ಗದರ್ಶನ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ. ಮೂರ್ನಾಡುವಿನ ಗಣೇಶ್ ನಾಯ್ಡು ಅವರು ಶ್ರೀಯೋಗಿ ನಾರಾಯಣ ಕೊಡಗು ಬಲಿಜ ಸಮಾಜದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More

ಮಡಿಕೇರಿ ಅ.30 NEWS DESK : ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚುತ್ತಲೇ ಇದೆ, ಪುರುಷರ ಪ್ರಮಾಣ ಸ್ತನ ಕ್ಯಾನ್ಸರ್ ರೋಗಿಗಳಲ್ಲಿ ವಿಶ್ವಾದ್ಯಂತ ಒಂದು ಶೇಕಡಾದಷ್ಟು ಇದ್ದಾರೆ. ಇದರಿಂದಾಗಿ ಜಾಗೃತಿ ಮೂಡಿಸುವಲ್ಲಿ ಮತ್ತು ಸ್ತನ ಸ್ವಯಂ ಪರೀಕ್ಷೆಯನ್ನು ಉತ್ತೇಜಿಸುವಲ್ಲಿ ಪುರುಷರು ಮತ್ತು ಮಹಿಳೆಯರು ಸಮಾನ ಜವಾಬ್ದಾರಿಯನ್ನು ತೆಗೆದುಕೊಳ್ಳುವುದು ಅತ್ಯಗತ್ಯವಾಗಿದೆ. ಪುರುಷರು ಸಕ್ರಿಯವಾಗಿ ಜಾಗೃತಿ ಮೂಡಿಸಿದಾಗ ಮತ್ತು ಸ್ತನ ಸ್ವಯಂ ಪರೀಕ್ಷೆಗಳ ಬಗ್ಗೆ ತಮ್ಮ ಕುಟುಂಬಗಳು ಮತ್ತು ಸಮುದಾಯಗಳಿಗೆ ಶಿಕ್ಷಣ ನೀಡಿದಾಗ, ತನ್ನ ಮನಸ್ಥಿತಿಯನ್ನು ಅರಿಯುವುದರೊಂದಿಗೆ, ಆರಂಭಿಕ ಪತ್ತೆ ಹಚ್ಚುವಿಕೆಯನ್ನು ಉತ್ತೇಜಿಸುತ್ತದೆ ಮತ್ತು ಹೆಚ್ಚುತಿಳುವಳಿಕೆಯುಳ್ಳ ಮತ್ತು ಬೆಂಬಲಿಸುವ ವಾತಾವರಣವನ್ನು ಬೆಳೆಸುತ್ತದೆ. :: ಜೀವನ ಸಂಗಾತಿಯಾಗಿ :: ಜೀವನ ಸಂಗಾತಿಯಾಗಿ, ಸ್ತನ ಕ್ಯಾನ್ಸರ್ ಜಾಗೃತಿಯಲ್ಲಿ ಮನುಷ್ಯನ ಜವಾಬ್ದಾರಿಯು ಭಾವನಾತ್ಮಕ ಬೆಂಬಲವನ್ನು ಒದಗಿಸುವುದು, ಆಗಾಗ್ಗೆ ತಪಾಸಣೆಗಳನ್ನು ಉತ್ತೇಜಿಸುವುದು ಮತ್ತು ಆತಂಕ ಅಥವಾ ಅವಮಾನವಿಲ್ಲದೆ ಆರೋಗ್ಯ ಸಮಸ್ಯೆಗಳನ್ನು ಚರ್ಚಿಸ ಬಹುದಾದ ಮುಕ್ತ ವಾತಾವರಣಕ್ಕೆ ಕೊಡುಗೆ ನೀಡುವುದು. ಸ್ತನ ಸ್ವಯಂ-ಪರೀಕ್ಷೆಗಳ ಬಗ್ಗೆ ಕಲಿಯುವ ಮೂಲಕ ಮತ್ತು ಆರಂಭಿಕ ಪತ್ತೆ ಹಚ್ಚುವಿಕೆಯನ್ನು…

Read More

ಮಡಿಕೇರಿ ಅ.30 NEWS DESK : ಜೀವನದ ಕೊನೆಯ ದಿನಗಳನ್ನು ಎಣಿಸುತ್ತಿರುವ ರೋಗಿಗಳಿಗೆ ಸಾಧ್ಯವಾದಷ್ಟು ಉತ್ತಮ ಬದುಕು ನಡೆಸಲು ಅಗತ್ಯವಾದ ಸೇವೆಯನ್ನು ನೀಡುವ ಅಗತ್ಯತೆ ಇದ್ದು, ಈ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಅಗತ್ಯತೆ ಇರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಕೆ.ಎಂ. ತಿಳಿಸಿದರು. ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಡಗು ಜಿಲ್ಲೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಶಾಖೆ, ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಮಡಿಕೇರಿ ಹಾಗೂ ಸಮುದಾಯದ ಸಹಭಾಗಿತ್ವದಲ್ಲಿ ನಗರದ ಬಾಲ ಭವನದಲ್ಲಿ ಆಯೋಜಿತ ‘ವಿಶ್ವ ಹಾಸ್ಪಿಸ್ ಮತ್ತು ಉಪಶಮನ ಆರೈಕೆ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಸಂಸ್ಥೆಯು ಪ್ರಸ್ತುತ…

Read More

ಮಡಿಕೇರಿ NEWS DESK ಅ.30 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025- 28ನೇ ಸಾಲಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಬಾಚರಣಿಯಂಡ ಅನು ಕಾರ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜೆ.ರಾಕೇಶ್,ಉಪಾಧ್ಯಕ್ಷರಾಗಿ ನವೀನ್ ಸುವರ್ಣ, ವನಿತಾ ಚಂದ್ರಮೋಹನ್, ಎ.ಎನ್.ವಾಸು, ಕಾರ್ಯದರ್ಶಿಗಳಾಗಿ ಮಲ್ಲಿಕಾರ್ಜುನ, ರಿಜ್ವಾನ್ ಹುಸೇನ್, ಚೆರಿಯಮನೆ ಸುರೇಶ್ ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು, ರಾಜ್ಯ ಉಪಾಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಹಾಗೂ ರಾಜ್ಯ ಸಮಿತಿ ಸದಸ್ಯರಾಗಿ ಸವಿತಾ ರೈ ಆಯ್ಕೆಗೊಂಡಿದ್ದಾರೆ.

Read More

ಮಡಿಕೇರಿ NEWS DESK ಅ.30 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಸರ್ವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಾರುಗುಂದ, ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ…

Read More