ಲೇಖಕ: admin

ಪಾಲಿಬೆಟ್ಟ ಅ.30 NEWS DESK : ಪಾಲಿಬೆಟ್ಟ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯ ಬೆಳ್ಳಿ ಹಬ್ಬದ ಕಾರ್ಯಕ್ರಮದಲ್ಲಿ ಪಾಲಿಬೆಟ್ಟದ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯ ಶಿವರಾಜ್ ಅವರನ್ನು ಭಾರತೀಯ ಕಾಮೆಂಟೇಟರ್ ಹಾಗೂ ಪ್ರೊ ಕಬಡ್ಡಿ ಲೀಗ್ ನ ನಿರ್ದೇಶಕರಾಗಿರುವ ಚಾರು ಶರ್ಮಾ ಹಾಗೂ ಚೆಶೈರ್ ಹೋಮ್ ನ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.

Read More

ಮಡಿಕೇರಿ ಅ.30 NEWS DESK : ಅರೆಭಾಷಿಕ ಗೌಡ ಜನಾಂಗದ ಶಾಸಕರ ಅಭಿಮಾನಿಗಳ ವತಿಯಿಂದ ಭಾಗಮಂಡಲದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಪವಿತ್ರ ಕಾವೇರಿ ತುಲಾ ಸಂಕ್ರಮಣ ಸಂದರ್ಭ ಶಾಸಕರು ಅತ್ಯಂತ ಅಚ್ಚುಕಟ್ಟಾಗಿ, ಸೌಹಾರ್ದಯುತವಾಗಿ ಎಲ್ಲಾ ಜನಾಂಗದವರು ತಾಯಿ ಕಾವೇರಿ ತೀರ್ಥ ಸ್ವರೂಪಿಣಿಯಾಗಿ ಉಗಮಿಸುವುದನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಸ್ಥಳೀಯ ಹಾಗೂ ಸುತ್ತಮುತ್ತಲಿನ ಅರೆಭಾಷಿಕ ಗೌಡ ಜನಾಂಗದ ಶಾಸಕರ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ನಮ್ಮ ನಾಡು ಸುಖ-ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದತೆಯಿಂದ ಇರಬೇಕಾದರೆ ಎಲ್ಲರೂ ಒಂದೇ ಎಂಬ ಭಾವನೆಯಿಂದ ಪರಸ್ಪರ ಸೌಹಾರ್ದತೆಯಿಂದ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡಬೇಕು. ತಾಯಿ ಕಾವೇರಿಯ ಆಶೀರ್ವಾದ ಎಲ್ಲರ ಮೇಲಿರಬೇಕೆಂದರೆ ಎಲ್ಲರೂ ತಾಯಿಯ ಇಚ್ಛೆಯಂತೆ ನಾಡಿನ ಒಳಿತಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.  ಈ ಸಂದರ್ಭದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್,…

Read More

ಸಿದ್ದಾಪುರ ಅ.30 NEWS DESK : ಪಾಲಿಬೆಟ್ಟ ಚೆಶೈರ್ ಹೋಮ್ಸ್ ವಿಶೇಷ ಶಾಲೆಯ ಬೆಳ್ಳಿ ಹಬ್ಬ ಆಚರಣೆಯು ಶಾಲೆಯ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಭಾರತೀಯ ಕ್ರೀಡಾ ವಿವರಣೆಗಾರ ಹಾಗೂ ಪ್ರೋ ಕಬಡ್ಡಿ ಲೀಗ್ ನಿರ್ದೇಶಕ ಚಾರು ಶರ್ಮಾ ಬೆಳ್ಳಿ ಹಬ್ಬದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿಶೇಷ ಚೇತನ ವಿದ್ಯಾರ್ಥಿಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ಮೂಲಕ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯ ರೂಪಿಸಲು ಸೇವಾ ಮನೋಭಾವದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವುದು ಸಂತಸ ತಂದಿದೆ. ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಸ್ವಉದ್ಯೋಗದ ಮೂಲಕ ಸಾವಲಂಬಿ ಜೀವನ ನಡೆಸಲು ಸಹಕಾರ ನೀಡುವುದರೊಂದಿಗೆ ಮಾದರಿ ವಿಶೇಷ ಚೇತನರ ಶಾಲೆಯನ್ನಾಗಿಸಿ ಮನೆಯ ಮಕ್ಕಳಂತೆ ಕಲಿಸಿ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಷಯ. ಮಕ್ಕಳ ಮುಂದಿನ ಭವಿಷ್ಯ ರೂಪಿಸಲು ಎಲ್ಲರೂ ಪ್ರೋತ್ಸಾಹ ನೀಡಬೇಕಾಗಿದೆ ಎಂದರು. ಚೆಶೈರ್ ಹೋಮ್ಸ್ ಶಾಲೆಯ ಮುಖ್ಯಸ್ಥೆ ಗೀತಾ ಚಂಗಪ್ಪ ಮಾತನಾಡಿ, 6 ಮಕ್ಕಳಿಂದ ಪ್ರಾರಂಭವಾದ…

Read More

ಸಿದ್ದಾಪುರ ಅ.30 NEWS DESK : ವಿನೂತನವಾಗಿ ತಣಲ್ ಸಂಸ್ಥೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವುದು ನಿಜವಾಗಿಯೂ ಶ್ಲಾಘನೀಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಸಿದ್ದಾಪುರದ ತಣಲ್ ಸಂಸ್ಥೆ ವತಿಯಿಂದ ಬಡ ಕಿಡ್ನಿ ರೋಗಿಗಳಿಗೆ ಡಯಾಲಿಸಿಸ್ ಮಾಡಲು ಸಹಾಯಾರ್ಥವಾಗಿ ಮಾಡುತ್ತಿರುವ ಬಿರಿಯಾನಿ ಚಾಲೆಂಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚೆಗೆ ಕಿಡ್ನಿ‌ರೋಗದಿಂದ ಬಳಲುತ್ತಿರುವವವರು ಹೆಚ್ಚಾಗಿದ್ದು ಎಲ್ಲರಿಗೂ ಡಯಾಲಿಸಿಸ್ ಮಾಡುವುದು ಅಸಾಧ್ಯವಾಗಿದೆ. ಈ ನಡುವೆ ಬಡವರಿಗಾಗಿ ತಣಲ್ ಸಂಸ್ಥೆ ಕಡಿಮೆ ವೆಚ್ಚದಲ್ಲಿ ಹಾಗೂ ಇನ್ನೂ ಕೆಲವರಿಗೆ ಉಚಿತವಾಗಿ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ.ಇತ್ತೀಚೆಗೆ ತಣಲ್ ಸಂಸ್ಥೆ ಬಿರಿಯಾನಿ‌ಚಾಲೆಂಜ್ ಎಂಬ ವಾಕ್ಯದೊಂದಿಗೆ ಸಾರ್ವಜನಿಕರಿಗೆ ಬಿರಿಯಾನಿ ನೀಡುವ ಮೂಲಕ ಅದರಿಂದ ಬರುವ ಹಣದಿಂದ ಬಡ ರೋಗಿಗಳ ಚಿಕಿತ್ಸೆಗೆ ನೆರವಾಗುತ್ತಿರುವ ಮೂಲಕ ಸಂಘಟನೆಯು ನಿಜವಾದ ಸೇವೆಯನ್ನು ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಜನಪ್ರತಿನಿಧಿಗಳು, ಸಮಾಜ ಸೇವಕರು, ದಾನಿಗಳು, ಗಣ್ಯರು ಹಾಜರಿದ್ದರು. :: ಏನಿದು ಬಿರಿಯಾನಿ ಚಾಲೆಂಜ್….! :: ಕಡಿಮೆ ವೆಚ್ಚದಲ್ಲಿ…

Read More

ಮಡಿಕೇರಿ ಅ.30 NEWS DESK : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮ(ನಿ)ವತಿಯಿಂದ 2025-26ನೇ ಸಾಲಿನ ಕ್ರಿಶ್ಚಿಯನ್ ಜನಾಂಗದವರಿಗೆ ಶ್ರಮ ಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗೆ ಸಾಲ ಮತ್ತು ಸಹಾಯಧನ ಹಾಗೂ ವ್ಯಾಪಾರ ಮತ್ತು ಉದ್ಯಮಗಳಿಗೆ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಮಹಿಳಾ ಸ್ವ ಸಹಾಯ ಸಂಘ ಗುಂಪುಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್: https://kccdclonline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್‍ಎಂಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಿಗೆ ಭೇಟಿ ನೀಡಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನ.26 ಕೊನೆಯ ದಿನವಾಗಿದೆ. ಕಚೇರಿಯಿಂದ ಸಂಪರ್ಕಿಸುವ ಮೊದಲು ಸಲ್ಲಿಸಿರುವ…

Read More

ಮಡಿಕೇರಿ ಅ.30 NEWS DESK : ಕೂರ್ಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕೊಡಗು ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ವಿಜೇತರಾಗುವ ಮೂಲಕ ಸತತವಾಗಿ ನಾಲ್ಕನೇ ಬಾರಿಗೆ ರಾಜ್ಯಮಟ್ಟಕ್ಕೆ ಲಗ್ಗೆಯಿಟ್ಟಿದೆ. ಈ ಪಂದ್ಯಾವಳಿಯಲ್ಲಿ ವಿರಾಜಪೇಟೆ ತಾಲ್ಲೂಕನ್ನು ಪ್ರತಿನಿಧಿಸಿದ ಸರ್ವದೈವತ ಪಿ.ಯು.ಕಾಲೇಜಿನ ಬಾಲಕರ ತಂಡ, ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದರು. ಈ ಸಾಧನೆಗೆ ಕಾಲೇಜು ಪ್ರಾಂಶುಪಾಲರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಅ.30 NEWS DESK : ಭಾಗಮಂಡಲದ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯದ ಹುಂಡಿ ಎಣಿಕೆ ಭಗಂಡೇಶ್ವರ ದೇವಾಲಯದಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಯಿಂದ ಆರಂಭಿಸಿ ಸಂಜೆ 5.30ರ ವರೆಗೆ ನಿರಂತರವಾಗಿ 25 ಮಂದಿ ಹುಂಡಿ ಹಣ ಎಣಿಕೆ ಕಾರ್ಯ ಕೈಗೊಂಡರು. ಅ.17 ರಂದು ಜರುಗಿದ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ನಂತರ ಪ್ರಥಮ ಹುಂಡಿ ಎಣಿಕೆಯನ್ನು ಭಾಗಮಂಡಲ ಕೆನರಾ ಬ್ಯಾಂಕ್ ಸಿಬ್ಬಂದಿ, ಭಾಗಮಂಡಲ ಆರಕ್ಷಕ ಠಾಣಾ ಸಿಬ್ಬಂದಿಯವರು, ದೇವಾಲಯದ ಕಾರ್ಯನಿರ್ವಾಹಣಾಧಿಕಾರಿಗಳು, ತಕ್ಕಮುಖ್ಯಸ್ಥರು ಮತ್ತು ಸಿಬ್ಬಂದಿಯವರು ಮತ್ತು ಸ್ವಯಂ ಸೇವಕರು ಹಾಗೂ ಭಾಗಮಂಡಲ ಕಂದಾಯ ಇಲಾಖೆ ಸಿಬ್ಬಂದಿ ಸಮಕ್ಷಮ ವೀಡಿಯೋ ಚಿತ್ರೀಕರಣದೊಂದಿಗೆ ಹುಂಡಿ ಎಣಿಕೆಯನ್ನು ನಡೆಸಲಾಯಿತು. ಈ ವರ್ಷ ರೂ. ಹದಿನೆಂಟು ಲಕ್ಷದ ಐದು ಸಾವಿರ ಮೊತ್ತ ಸಂಗ್ರಹವಾಗಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ರೂ. 7,27,389, ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ರೂ. 5,44,333, ಅನ್ನ ಸಂತರ್ಪಣಾ ನಿಧಿ ಯಲ್ಲಿ ರೂ. 2,52,867 ಹಾಗೂ ಇ-ಹುಂಡಿಯಲ್ಲಿ ರೂ.…

Read More

ಮಡಿಕೇರಿ ಅ.30 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಸ್ನೇಹಾಶ್ರಯ ಯೂತ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಮಾನಸಿಕ ರೋಗಿಗಳಿಗಾಗಿ ‘ಮಾನಸಧಾರ’  ಮಾನಸಿಕ ರೋಗಿಗಳ ಹಗಲು ಆರೈಕೆ ಕೇಂದ್ರದ ವತಿಯಿಂದ ನಗರದ ರಾಣಿಪೇಟೆ ಗೆಜ್ಜೆಸಂಗಪ್ಪ ಕಲ್ಯಾಣ ಮಂಟಪದ ಎದುರು ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.  ಉಚಿತವಾಗಿ ನುರಿತ ಮಾನಸಿಕ ವೈದ್ಯರಿಂದ ಮಾನಸಿಕ ರೋಗಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ನುರಿತ ಮನೋ ಚಿಕಿತ್ಸಕರಿಂದ ರೋಗಿಗಳಿಗೆ ಹಾಗೂ ಕುಟುಂಬದವರಿಗೆ ಮೂರು ಹಂತದಲ್ಲಿ ಆಪ್ತ ಸಮಾಲೋಚನೆ ನಡೆಸಿ ಧೈರ್ಯ ಮತ್ತು ಆತ್ಮವಿಶ್ವಾಸ ಮೂಡಿಸಿ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸಲಾಗುತ್ತದೆ.  ವೃತ್ತಿಪರ ತರಬೇತಿಗಳಾದ ಚಿತ್ರಕಲೆ, ಪೈಲ್ ತಯಾರಿಕೆ, ಪೇಪರ್ ಕವರ್ ತಯಾರಿಕೆ, ಗೊಂಬೆ ತಯಾರಿಕೆ, ಬುಟ್ಟಿ ಹೆಣೆಯುವುದು, ಮೇಣದ ಬತ್ತಿ ತಯಾರಿಸುವುದು, ಕಸೂತಿ, ಕರಕುಶಲ ವಸ್ತುಗಳನ್ನು ತಯಾರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ. ಭಜನೆ, ಯೋಗ, ಪ್ರಾಣಯಾಮ, ಆಧ್ಯಾತ್ಮ, ಮನೋರಂಜನೆ, ಆಟ ಇನ್ನಿತರ ಚಟುವಟಿಕೆಗಳನ್ನು ಹೇಳಿ ಕೊಡಲಾಗುತ್ತದೆ. ನೋಂದಣಿಯಾದ ಮಾನಸಿಕ ರೋಗಿಗಳಿಗೆ…

Read More

ಮಡಿಕೇರಿ ಅ.30 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲ್ಲೂಕು ಘಟಕ ಮತ್ತು ಹೋಬಳಿ ಘಟಕಗಳ ಜಂಟಿ ಸಭೆಯು ಅ.31 ರಂದು ನಡೆಯಲಿದೆ. ಅಂದು ಸಂಜೆ 4.30 ಗಂಟೆಗೆ ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್ ಅಧ್ಯಕ್ಷತೆಯಲ್ಲಿ ಪ್ರವಾಸಿ ಮಂದಿರದಲ್ಲಿ ಜರುಗಲಿದೆ. ಜಿಲ್ಲಾಧ್ಯಕ್ಷ ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ರೇವತಿ ರಮೇಶ್, ಕೋಶಾಧಿಕಾರಿ ಸಂಪತ್, ಜಿಲ್ಲಾ ನಿರ್ದೇಶಕರಾದ ಹಂಚಿಟೀರಾ ಪ್ಯಾನ್ಸಿ ಮುತ್ತಣ್ಣ, ವೆಂಕಟ್ ನಾಯಕ್ ಮತ್ತಿತ್ತರ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಕಾರ್ಯದರ್ಶಿ ಎಸ್.ನಾಗರಾಜ್ ತಿಳಿಸಿದ್ದಾರೆ.

Read More

ಮಡಿಕೇರಿ ಅ.30 NEWS DESK : ನಾಪೋಕ್ಲು ಹಾಗೂ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಮುಖರ ಸಭೆಯು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಗೃಹ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ,  ಮುಂಬರುವ ಚುನಾವಣೆಗಳು ಹಾಗೂ ಹಲವು ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಿತು. ಶಾಸಕರು ಸಂಘಟನೆಯ ಕುರಿತು ವಿಶೇಷ ಆಸಕ್ತಿ ವಹಿಸುವಂತೆ ಕರೆ ನೀಡಿದರಲ್ಲದೇ, ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಪ್ರತಿಶತ ನಿಭಾಯಿಸಲೇಬೇಕೆಂದು ಸೂಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಧರ್ಮಜ ಉತ್ತಪ್ಪ ವಹಿಸಿದರು.  ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಿರಾಜಪೇಟೆ ಅಧ್ಯಕ್ಷ ರಂಜಿ ಪೂಣಚ್ಚ,ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್, ಡಿಸಿಸಿ ಉಪಾಧ್ಯಕ್ಷರಾದ ಅಬ್ದುಲ್ ರೆಹಮಾನ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ವಿರಾಜಪೇಟೆ ತಾಲೂಕು ಬಗರ್ ಹುಕುಂ ಅಧ್ಯಕ್ಷರು ಸಲಾಂ, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ ಮಹಿಳಾ ಕಾಂಗ್ರೆಸ್ ಪ್ರಮುಖರು ಶೈಲಾ ಕುಟ್ಟಪ್ಪ, ಮಡಿಕೇರಿ ತಾಲೂಕು ಬಗರ್ ಹುಕುಂ ಅಧ್ಯಕ್ಷರು…

Read More