ಲೇಖಕ: admin

ಮಡಿಕೇರಿ ಅ.30 NEWS DESK : ವಿರಾಜಪೇಟೆ ಪುರಸಭೆ ವತಿಯಿಂದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನಯೋಜನೆಯ ಹಂತ -04 ರಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಗತ್ಯ ಕಿಟ್‌ಗಳನ್ನು ವಿತರಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು ರಾಫಿ, ಮತೀನ್,ಬೆನ್ನಿ ಆಗಷ್ಟಿನ್, ರಾಜೇಶ್, ಹಮೀದ್, ಪುರಸಭೆ ಮುಖ್ಯಧಿಕಾರಿ ನಾಚಪ್ಪ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಅ.30 NEWS DESK : ಪೊನ್ನಂಪೇಟೆ ತಾಲ್ಲೂಕು ಬಿ.ಶೆಟ್ಟಿಗೇರಿಯ ಕೂಟಿಯಾಲ ಸೇತುವೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪರಿಶೀಲಿಸಿದರು. ಕೂಟಿಯಾಲ ರಸ್ತೆ ಹಾಗೂ ಸೇತುವೆ ವಿಷಯ ಈಗಾಗಲೇ ನ್ಯಾಯಾಲಯದಲ್ಲಿದ್ದು, ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕೆಂದು ಸಾರ್ವಜನಿಕರ ಬೇಡಿಕೆಯ ಮೇರೆಗೆ ಶಾಸಕರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದರು. ಅಲ್ಲಿ ಅಧಿಕಾರಿಗಳೊಂದಿಗೆ ಸುಧೀರ್ಘವಾಗಿ ಚರ್ಚಿಸಿದ ಬಳಿಕ ಪರ್ಯಾಯ ಮಾರ್ಗ ಒದಗಿಸುವ ಬಗ್ಗೆ ಚರ್ಚಿಸಲಾಯಿತು. ಎಲ್ಲವನ್ನು ಕೂಲಂಕುಶವಾಗಿ ಪರಿಶೀಲಿಸಿ ಅತಿ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು. ಈ ಸಂದರ್ಭ ಬಗರ್ ಹುಕುಂ ತಾಲೂಕು ಅಧ್ಯಕ್ಷ ಲಾಲಾ ಅಪ್ಪಣ್ಣ, ಪಂಚಾಯಿತಿ ಅಧ್ಯಕ್ಷ ಕೊಲ್ಲಿರ ಬೋಪಣ್ಣ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರ ಉಮೇಶ್ ಕೇಚಮಯ್ಯ, ರೋಹಿತ್, ಅನು, ಅಯ್ಯಪ್ಪ, ಜಗನ್, ರಾಜ, ಈರಪ್ಪ, ನಂದ, ಅಣ್ಣಳಮಾಡ ಹರೀಶ್, ಕುಪ್ಪಣ್ಣಮಾಡ ಪ್ರೀತಮ್, ಜೀತು, ರಶೀದ್, ಅರಣ್ಯ ಇಲಾಖೆಯ ಅಧಿಕಾರಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Read More

ನಾಪೋಕ್ಲು ಅ.30 NEWS DESK : ಮೂರ್ನಾಡು ಮಾರುತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಬಿ.ಸಿ.ಅನುಶಿಕ ಬೋಜಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ, ಗೋಣಿಕೊಪ್ಪ ಕಾಪ್ಸ್ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪ ಮತ್ತು ಪೆÇನ್ನಂಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಿ.ಸಿ.ಅನುಶಿಕ ಬೋಜಮ್ಮ ಎತ್ತರ ಜಿಗಿತ (High jump) ನಲ್ಲಿ ಪ್ರಥಮ ಸ್ಥಾನ ಮತ್ತು ಜಾವಲಿನ್ ಎಸೆತ (Javelin Throw) ದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ವಿದ್ಯಾ ಸಂಸ್ಥೆ ಗೆ ಕೀರ್ತಿ ತಂದಿದ್ದಾಳೆ. ಅನುಶಿಕ ಬೋಜಮ್ಮ ಮೂರ್ನಾಡಿನ ಬಡುವಂಡ ಚಂಗಪ್ಪ-ಸುಶೀಲ ಚಂಗಪ್ಪ ದಂಪತಿಯ ಪುತ್ರಿ. ವರದಿ : ದುಗ್ಗಳ ಸದಾನಂದ. 

Read More

ವಿರಾಜಪೇಟೆ ಅ.30 NEWS DESK : ವಿರಾಜಪೇಟೆ ನಗರ ಠಾಣೆಯ ಸಿಬ್ಬಂದಿ ಪಿ.ಬೆಳ್ಯಪ್ಪ ಅವರು ವಿರಾಜಪೇಟೆ ನಗರದ ಮೂರ್ನಾಡು ಜಂಕ್ಷನ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಒಂದು ಬ್ಯಾಗ್ ಬಿದ್ದು ಸಿಕ್ಕಿದ್ದು ಅದರಲ್ಲಿದ್ದ ಫೋನ್ ಮತ್ತು 10 ಸಾವಿರ ಹಣವನ್ನು ಅದರ ವಾರಸುದಾರರನ್ನು ಪತ್ತೆ ಹಚ್ಚಿ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ವಾರಸುದಾರರಾದ ಮೀನುಪೇಟೆ ನಿವಾಸಿ ಮೀನಾ ಅವರು ಪೋಲಿಸ್ ಇಲಾಖೆಯ ಪ್ರಾಮಾಣಿಕ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ NEWS DESK ಅ.30 : ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಅ.31 ರಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯಲ್ಲಿ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ನಡೆಯಲಿದೆ ಎಂದು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ ಅವರು ತಿಳಿಸಿದ್ದಾರೆ. ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ‍್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ. ಸರ್ವರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಕೋರಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ…

Read More

ಮಡಿಕೇರಿ NEWS DESK ಅ.30 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ನಮನ ಸಮರ್ಪಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣ್ತಲೆ ಹರೀಶ್ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು 1837 ಅಕ್ಟೋಬರ್ 31…

Read More

ಮಡಿಕೇರಿ NEWS DESK ಅ.29 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದಲ್ಲಿ ಅ.31 ರಂದು ಬೆಳಗ್ಗೆ 9.30 ಗಂಟೆಗೆ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಹಾಗೂ ಕೋಟೆ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಗಲ್ಲಿಗೇರಿಸಲ್ಪಟ್ಟ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ವರು ಪಾಲ್ಗೊಳ್ಳುವಂತೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ‍್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ. ಸರ್ವರು ಕಾರ್ಯಕ್ರಮದಲ್ಲಿ ಹೆಚ್ಚಿನ…

Read More

ಮಡಿಕೇರಿ NEWS DESK ಅ.29 : ಲಕ್ಷಾಂತರ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ ಆರೋಪದಡಿ ನಾಲ್ವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆ ನಿವಾಸಿ ಸುಮಂತ್, ಕಿಬೆಟ್ಟ ಗ್ರಾಮದ ಕೀರ್ತಿ, ಕೊಣನೂರು ಗ್ರಾಮದ ಮಣಿಕಂಠ ಹಾಗೂ ಕೆ.ಆರ್.ಪೇಟೆಯ ನಿವಾಸಿ ಸಚಿನ್ ಬಂಧಿತ ಆರೋಪಿಗಳಾಗಿದ್ದಾರೆ. ಇತ್ತೀಚೆಗೆ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಸಹಿತ 2.4 ಲಕ್ಷ ರೂ. ಮೌಲ್ಯದ 360 ಕೆ.ಜಿ ಕಾಳು ಮೆಣಸು ಮತ್ತು ಕಳ್ಳತನಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

Read More

ಮಡಿಕೇರಿ NEWS DESK ಅ.29 : ಶಿಕ್ಷಣ ಮತ್ತು ಸಮುದಾಯದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ರೋಟರಿ ಮಡಿಕೇರಿ ಸಂಸ್ಥೆಯು ಮೂವರು ಸರಕಾರಿ ಶಾಲಾ ಶಿಕ್ಷಕರಿಗೆ ರೋಟರಿ ನೇಷನ್ ಬಿಲ್ಡರ್ಸ್ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ನಗರದ ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಸರಕಾರಿ ಜೂನಿಯರ್ ಕಾಲೇಜ್ ನ ಕನ್ನಡ ಶಿಕ್ಷಕಿ ಗೌರಿ ಕೆ.ಬಿ., ಕಕ್ಕಬ್ಬೆ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕ ಕುಟ್ಟಂಜೆಟ್ಟಿರ ಎಂ.ಶರತ್ ಹಾಗೂ ಮಾದಾಪುರದ ಡಿ.ಚೆನ್ನಮ್ಮ ಪಿಯು ಕಾಲೇಜ್ ನ ಪ್ರಾಂಶುಪಾಲ ಸಿ.ಜಿ.ಮಂದಪ್ಪ ಅವರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಜಿಲ್ಲೆ 3181 ಜಿಲ್ಲಾ ಯೋಜನೆಗಳ ಅಧ್ಯಕ್ಷ ರೊಟೇರಿಯನ್ ಕೆ.ಎಸ್.ತಮ್ಮಯ್ಯ ಅವರು ಸಿ.ಜಿ.ಮಂದಪ್ಪ ಅವರಿಗೆ, ರೋಟರಿ ಕ್ಲಬ್ ಸೇವಾ ನಿರ್ದೇಶಕ ರೋ.ಎಂ.ಎಂ.ಕಾರ್ಯಪ್ಪ, ಕ್ಲಬ್ ಖಜಾಂಚಿ ರೋ.ಈಶ್ವರ ಭಟ್ ಅವರು ಗೌರಿ ಕೆ.ಬಿ ಅವರಿಗೆ ಹಾಗೂ ರೋ.ಪಿಡಿಜಿ ಡಾ.ರವಿ ಅಪ್ಪಾಜಿ ಅವರು ಕುಟ್ಟಂಜೆಟ್ಟಿರ ಎಂ.ಶರತ್ ಅವರಿಗೆ ಪ್ರಶಸ್ತಿ ಮತ್ತು ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು. ಪಬ್ಲಿಕ್ ಇಮೇಜ್ ಮತ್ತು ಕ್ಲಬ್ ಬುಲೆಟಿನ್…

Read More

ಮಡಿಕೇರಿ ಅ.29 NEWS DESK : ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಅ.31 ರಂದು ಆಚರಿಸಲಾಗುತ್ತಿದ್ದು, ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಅಂದು ಮಡಿಕೇರಿಯಲ್ಲಿ ‘ಏಕತಾ ಯಾತ್ರೆ’ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ‘ಏಕತಾ ಯಾತ್ರೆ’ ನಡೆಸಲಾಗುವುದು. ಆ ಮೂಲಕ ರಾಷ್ಟ್ರದ ಏಕತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಗುತ್ತದೆ ಮತ್ತು ಅವರಿಗೆ ಗೌರವ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ. ಜಿಲ್ಲಾ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರುಗಳು, ನಗರಸಭಾ ಸದಸ್ಯರು, ಪಕ್ಷದ ಎಲ್ಲಾ ಘಟಕಗಳ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ‘ಏಕತಾ ಯಾತ್ರೆ’ಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Read More