ಮಡಿಕೇರಿ ಅ.29 NEWS DESK : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಪಂಜರ್‍ಪೇಟೆ ಫೀಡರ್‍ನಲ್ಲಿ ಅ.30 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ವಿದ್ಯಾನಗರ, ಕೆಎಸ್‍ಆರ್‍ಟಿಸಿ, ಶಾಂತಿನಗರ, ಗೋಣಿಕೊಪ್ಪ ರಸ್ತೆ, ನೆಹರುನಗರ, ಪಂಜರ್‍ಪೇಟೆ, ಸಿಲ್ವನಗರ, ವಿಜಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಅ.29 NEWS DESK : ರಾಜಾಸೀಟು ರಸ್ತೆಯಲ್ಲಿ ಪಾರ್ಕಿಂಗ್ ಶುಲ್ಕ ಸಂಗ್ರಹವನ್ನು ಏಕಾಏಕಿ ಸ್ಥಗಿತಗೊಳಿಸಿದ ಕ್ರಮದ ಕುರಿತು ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು. ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಎಸ್‍ಡಿಪಿಐ ಸದಸ್ಯ ಅಮಿನ್ ಮೊಹಿಸಿನ್ ಅವರು ರಾಜಾಸೀಟು ಬಳಿ ವಾಹನ ಪಾರ್ಕಿಂಗ್ ಶುಲ್ಕ ವಸೂಲಾತಿ ಸ್ಥಗಿತಗೊಂಡಿದೆ. ಈ ದಿಢೀರ್ ನಿರ್ಧಾರಕ್ಕೆ ಕಾರಣವೇನೆಂದು ಪ್ರಶ್ನಿಸಿದರು. ಬಿಜೆಪಿ ಸದಸ್ಯ ಕೆ.ಎಸ್.ರಮೇಶ್ ಅವರು ಮಾತನಾಡಿ ರಾಜಾಸೀಟು ಬಳಿ ವಾಹನ ಪಾರ್ಕಿಂಗ್ ಶುಲ್ಕ ವಸೂಲಾತಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವಂತೆ ಒತ್ತಾಯಿಸಿದರು. ಈ ಸಂದರ್ಭ ಅಧ್ಯಕ್ಷರ ಸೂಚನೆಯಂತೆ ಕೌನ್ಸಿಲ್ ಕಾರ್ಯದರ್ಶಿ ತಾಹಿರ್ ಅವರು ಉತ್ತರ ನೀಡಿ ರಾಜಾಸೀಟು ಬಳಿ ಪಾರ್ಕಿಂಗ್ ಟೆಂಡರನ್ನು 37.85 ಲಕ್ಷ ರೂ.ಗಳಿಗೆ ನೀಡಲಾಗಿದ್ದು, ಈ ಟೆಂಡರ್ ಮೊತ್ತದಲ್ಲಿ ಟೆಂಡರ್‍ದಾರರು 17.79 ಲಕ್ಷ ರೂ.ಗಳನ್ನಷ್ಟೇ ಪಾವತಿಸಿದ್ದಾರೆ. ಸುಮಾರು 20 ಲಕ್ಷ ರೂ. ಪಾವತಿಗೆ ಬಾಕಿ ಇರುವುದರಿಂದ, ಶುಲ್ಕ ವಸೂಲಾತಿ ಸ್ಥಗಿತಕ್ಕೆ ಆದೇಶಿಸಿ…
ಮಡಿಕೇರಿ ಅ.29 NEWS DESK : ‘ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ಈ ಸಂಬಂಧ ರೈತರ ಹೆಸರು ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದೆ. ಜಿಲ್ಲೆಯ ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಆದೇಶದಂತೆ 2025-26ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿ ಖರೀದಿ ಮಾಡಲಾಗುತ್ತಿದ್ದು, ಈ ಅವಕಾಶ ಸದ್ಬಳಕೆಗೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಭತ್ತ ಮತ್ತು ರಾಗಿಯನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುತ್ತಿದ್ದು, ಆಹಾರ, ನಾಗರಿಕ ಸರಬರಾಜು ನಿಗಮ ನಿಯಮಿತರವರನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಜಿಲ್ಲೆಯಾದ್ಯಂತ…
ಮಡಿಕೇರಿ ಅ.29 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ಯುವ ಘಟಕದ ವತಿಯಿಂದ ನ.1 ಮತ್ತು 2 ರಂದು ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಕ್ರಿಕೆಟ್ ಚಾಂಪಿಯನ್ಸ್ ಟ್ರೋಫಿ-2025 ಸೀಸನ್-1 ನಡೆಯಲಿದೆ. ಮೂರ್ನಾಡುವಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಗೆ ನ.1 ರಂದು ಬೆಳಿಗ್ಗೆ 9 ಗಂಟೆಗೆ ಚಾಲನೆ ದೊರೆಯಲಿದೆ. ವಿಜೇತ ತಂಡಕ್ಕೆ 20,000 ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ 15,000 ನಗದು ಮತ್ತು ಟ್ರೋಫಿ, ತೃತೀಯ ಬಹುಮಾನ 5,000 ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ ಹಲವಾರು ವೈಯಕ್ತಿಕ ಬಹುಮಾನವನ್ನು ನೀಡಲಾಗುವುದು. ಪಂದ್ಯಾವಳಿಯು ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಕುಲಬಾಂಧವರಿಗೆ ಮಾತ್ರ ಸೀಮಿತವಾಗಿದ್ದು, 4 ಓವರ್‍ಗಳಿಗೆ ಸೀಮಿತವಾಗಿದೆ ಎಂದು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ಯುವ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 8105358468, 7022466621, 8277133291 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಅ.29 NEWS DESK : ಚಾಮುಂಡೇಶ್ವರಿ ನಗರದ ಅಂಗನವಾಡಿಯಲ್ಲಿ ಸುಮಾರು 30 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವಿಜಯ ಅವರಿಗೆ ಚಾಮುಂಡೇಶ್ವರಿ ನಗರದ ನಿವಾಸಿಗಳು ಬೀಳ್ಕೊಡುಗೆ ನೀಡಿದರು. ಚಾಮುಂಡೇಶ್ವರಿ ನಗರದ ಅಂಗನವಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ ವಿಜಯ ಅವರನ್ನು ಸನ್ಮಾನಿಸಿ, ಬೀಳ್ಕೊಟ್ಟರು. ಮುಂದಿನ ನಿವೃತ್ತಿ ಜೀವನ ಸುಖಕರವಾಗಿರಲೆಂದು ಹಾರೈಸಿದರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕಾರ್ಕಳ ಅ.29 NEWS DESK : ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಕನ್ನಡ ಸಂಸ್ಕೃತಿಯ ಪ್ರಚಾರ ಹಾಗೂ ಓದುಗರಲ್ಲಿ ಪುಸ್ತಕಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಕಳ ಹಾಗೂ ಮೂಡುಬಿದಿರೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ವಿಶೇಷ ರಿಯಾಯಿತಿಯಲ್ಲಿ ಪುಸ್ತಕಗಳ ಮಾರಾಟ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ಸಾಹಿತ್ಯ, ಕಾದಂಬರಿ, ಪ್ರಬಂಧ, ಜೀವನ ಚರಿತ್ರೆ, ಮಕ್ಕಳ ಸಾಹಿತ್ಯ ಸೇರಿದಂತೆ ವಿವಿಧ ವಿಷಯಗಳ ನೂರಾರು ಪುಸ್ತಕಗಳು ವಿಶೇಷ ರಿಯಾಯಿತಿ ದರದಲ್ಲಿ ಲಭ್ಯವಿರಲಿವೆ. ಕನ್ನಡ ಸಾಹಿತ್ಯ ಕ್ಷೇತ್ರದ ಮಹನೀಯರ ಕೃತಿಗಳ ಜೊತೆಗೆ ಯುವ ಲೇಖಕರ ಹೊಸ ಕೃತಿಗಳು, ಹೊಸ ಪ್ರಕಾಶನಗಳು ಹಾಗೂ ಜನಪ್ರಿಯ ಪುಸ್ತಕಗಳು ಈ ಮೇಳದ ಆಕರ್ಷಣೆಯಾಗಿದೆ. ಶೇ.10 ರಿಂದ ಶೇ.50ರ ವರೆಗೆರಿಯಾಯಿತಿಸಿಗಲಿದೆ. ಈ ವಿಶೇಷ ಮೇಳವು ನ.1 ರಿಂದ ನ.9 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ ಸಮಯ 9 ರಿಂದ ಸಂಜೆ ಸಮಯ 9ರ ವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಎಲ್ಲಾ ಪುಸ್ತಕ ಪ್ರೇಮಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಾಶಕರು ಕೋರಿದ್ದಾರೆ. ಕನ್ನಡದ ನಾಡು…
ವಿರಾಜಪೇಟೆ ಅ.29 NEWS DESK : ವಿದ್ಯಾ ಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಮೂಡಿದಾಗ ಮಾತ್ರ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಎಕೋಸ್ ಆಫ್ ದಿ ಅರ್ಥ್ ದ್ಯೇಯದಡಿಯಲ್ಲಿ ಆನ್ಸ್ ಫೆಸ್ಟ್ 2k25 ನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾ ಸಂಸ್ಥೆಗಳು ಕಾರ್ಯಕ್ರಮವನ್ನು ಆಯೋಜಿಸಿ ಮತ್ತೊಂದು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳನ್ನು ಪರಸ್ಪರ ಆಹ್ವಾನಿಸಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಸಂಸ್ಥೆಗಳ ನಡುವೆ ಪರಸ್ಪರ ಸಹಕಾರ, ಬಾಂಧವ್ಯ ಬೆಳೆಯುತ್ತದೆ ಎಂದರು. ಇಂದಿನ ಶಿಕ್ಷಣವು ವಿದ್ಯಾರ್ಥಿ ಕೇಂದ್ರೀತವಾಗಿದ್ದು, ನಮ್ಮ ವಿದ್ಯಾ ಸಂಸ್ಥೆಯು ಮೌಲ್ಯಧಾರಿತ ಶಿಕ್ಷಣಕ್ಕೆ ಮನ್ನಣೆಯನ್ನು ನೀಡುತ್ತಿದೆ ಎಂದರು. ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ …
ಪೊನ್ನಂಪೇಟೆ ಅ.29 NEWS DESK : ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಮಾತ್ರ ಸೀಮಿತವಾಗಿ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯನ್ನು (ಕೆ.ಎಂ.ಎಸ್. ಎ.) ನೂತನವಾಗಿ ಅಸ್ತಿತ್ವಕ್ಕೆ ತರಲಾಗಿದೆ. ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷರಾಗಿರುವ ಆಲೀರ ರಶೀದ್ ಅವರು ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಸ್ಥಾಪನೆ ಕುರಿತು ವಿರಾಜಪೇಟೆಯಲ್ಲಿ ನಡೆದ ರಚನಾ ಸಭೆಯಲ್ಲಿ ಈ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಗಳಾಗಿ ಹಿರಿಯ ಕ್ರೀಡಾಪಟು ಕೊಟ್ಟೋಳಿ ಗ್ರಾಮದ ಮೀತಲತಂಡ ಎಂ.ಇಸ್ಮಾಯಿಲ್ ಮತ್ತು ಕೋಶಾಧಿಕಾರಿಗಳಾಗಿ ಕಾಟ್ರಕೊಲ್ಲಿಯ ಆಲೀರ ಎ.ಅಬ್ದುಲ್ ಅಜ್ಹೀಜ್ಹ್ ಅವರನ್ನು ಸಭೆ ಅವಿರೋಧವಾಗಿ ಆಯ್ಕೆಗೊಳಿಸಿತು. ಉಳಿದಂತೆ ಅಕಾಡೆಮಿಯ ಉಪಾಧ್ಯಕ್ಷರುಗಳಾಗಿ ವಿರಾಜಪೇಟೆಯ ಕೇಂಗೋಟಂಡ ಎಸ್. ಸೂಫಿ, ಕುಂಜಿಲದ ಕುಂಡಂಡ ಎ. ರಜ್ಹಾಕ್, ಜಂಟಿ ಕಾರ್ಯದರ್ಶಿಗಳಾಗಿ ಕೊಳಕೇರಿಯ ಕಣ್ಣಪ್ಪಣೆ ವೈ.ಅಶ್ರಫ್ ಹಾಗೂ ಕ್ರೀಡಾ ಸಂಚಾಲಕರಾಗಿ ಕೊಂಡಂಗೇರಿಯ ಕತ್ತಣಿರ ಹೆಚ್. ಅಬ್ದುಲ್ ರಹಿಮಾನ್ (ಅಂದಾಯಿ) ಅವರು ಅವಿರೋಧವಾಗಿ ನೇಮಕಗೊಂಡಿದ್ದಾರೆ. ಅಕಾಡೆಮಿಯ ನಿರ್ದೇಶಕರುಗಳಾಗಿ ಎಡಪಾಲದ…
ವಿರಾಜಪೇಟೆ ಅ.29 NEWS DESK : ವಿದ್ಯಾ ಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಮೂಡಿದಾಗ ಮಾತ್ರ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಎಕೋಸ್ ಆಫ್ ದಿ ಅರ್ಥ್ ದ್ಯೇಯದಡಿಯಲ್ಲಿ ಆನ್ಸ್ ಫೆಸ್ಟ್ 2k25 ನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾ ಸಂಸ್ಥೆಗಳು ಕಾರ್ಯಕ್ರಮವನ್ನು ಆಯೋಜಿಸಿ ಮತ್ತೊಂದು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳನ್ನು ಪರಸ್ಪರ ಆಹ್ವಾನಿಸಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಸಂಸ್ಥೆಗಳ ನಡುವೆ ಪರಸ್ಪರ ಸಹಕಾರ, ಬಾಂಧವ್ಯ ಬೆಳೆಯುತ್ತದೆ ಎಂದರು. ಇಂದಿನ ಶಿಕ್ಷಣವು ವಿದ್ಯಾರ್ಥಿ ಕೇಂದ್ರೀತವಾಗಿದ್ದು, ನಮ್ಮ ವಿದ್ಯಾ ಸಂಸ್ಥೆಯು ಮೌಲ್ಯಧಾರಿತ ಶಿಕ್ಷಣಕ್ಕೆ ಮನ್ನಣೆಯನ್ನು ನೀಡುತ್ತಿದೆ ಎಂದರು. ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ …
ಮಡಿಕೇರಿ ಅ.29 NEWS DESK : ಪೊನ್ನಂಪೇಟೆ ತಾಲ್ಲೂಕಿನಲ್ಲಿ ಆಯೋಜಿಸಿದ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿದರು. ತಾಲ್ಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು, ಸಮಿತಿಯ ಸದಸ್ಯರೊಂದಿಗೆ ಹಲವು ವಿಷಯಗಳ ಕುರಿತು ಚರ್ಚಿಸಿದರು. ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜವಾಬ್ದಾರಿಗಳನ್ನು ಹಾಗೂ ನಿಭಾಯಿಸಬೇಕಾದ ಕಾರ್ಯಕ್ರಮಗಳನ್ನು ಮತ್ತು ರೂಪಿಸಬೇಕಾದ ವಿಷಯಗಳ ಬಗ್ಗೆ ವಿಶೇಷ ಮಾಹಿತಿಯನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವೈಸ್ ಚೇರ್ ಪರ್ಸನ್ ಬಾಲಚಂದ್ರ ನಾಯರ್ ಹಾಗೂ ಸಮಿತಿಯ ಪದಾಧಿಕಾರಿಗಳದ ಕೊಲ್ಲಿರ ಬೋಪಣ್ಣ, ಅಣ್ಣೀರ ಹರೀಶ್, ಪಂದಿಕಂಡ ದಿನೇಶ್ ಕುಶ, ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿವಿಧ ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳು, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.






