ಅಂಬಾಲಾ ಅ.29 NEWS DESK : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು. 2023 ರಲ್ಲಿ, ರಾಷ್ಟ್ರಪತಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30MKI ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಿದ್ದರು. ಬ್ರಹ್ಮಪುತ್ರ ನದಿ ಮತ್ತು ತೇಜ್‌ಪುರ ಕಣಿವೆಯ ಮೇಲೆ ಹಾರಾಟ ನಡೆಸಿದ್ದರು, ನಂತರ ಸುರಕ್ಷಿತವಾಗಿ ನೆಲೆಗೆ ಮರಳಿದ್ದರು. ಈ ಬಾರಿ ಅಂಬಾಲಾ ವಾಯುನೆಲೆಯ ಸುತ್ತಲೂ ಅವರು ಹಾರಾಟ ನಡೆಸಲಿದ್ದಾರೆ. ಅವರು ಫೈಟರ್ ಪ್ಲೇಟ್ ಸೂಟ್ ಧರಿಸಿ ವಿಮಾನದಲ್ಲಿ ಕುಳಿತಿದ್ದು ಎಲ್ಲರ ಗಮನ ಸೆಳೆದಿತ್ತು.
ಲೇಖಕ: admin
ಮಡಿಕೇರಿ ಅ.29 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ವಿವಿಧ ಮಾಧ್ಯಮ ಸಂಸ್ಥೆಗಳು ದತ್ತಿನಿದಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದು, ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಅಭಿಮಾನಿ ಪ್ರಶಸ್ತಿʼ, ಮೈಸೂರಿನ ʼಮೈಸೂರು ದಿಗಂತʼ ಪತ್ರಿಕಾ ಸಂಸ್ಥೆಯು ʼ‘ಮಾನವೀಯ ಸಮಸ್ಯೆʼಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಮೈಸೂರು ದಿಗಂತ ಪ್ರಶಸ್ತಿʼ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ʼಅಭಿಮನ್ಯು ಪ್ರಶಸ್ತಿʼ, ಬೆಂಗಳೂರಿನ ʼಪ್ರಜಾ ಸಂದೇಶʼ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ʼಪ್ರಜಾ ಸಂದೇಶ ದತ್ತಿ ಪ್ರಶಸ್ತಿʼಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ 10,000/- (ಹತ್ತು ಸಾವಿರ) ರೂ .ನಗದು ಬಹುಮಾನ ಒಳಗೊಂಡಿವೆ. ಆಸಕ್ತ ಪತ್ರಕರ್ತರು 2025ರ ಜನವರಿ 1 ರಿಂದ 2025ರ ಅಕ್ಟೋಬರ್…
ಬೆಂಗಳೂರು ಅ.29 NEWS DESK : ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸುವ, “ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ, 2003 ಅಡಿಯಲ್ಲಿ ಏಪ್ರಿಲ್ ನಿಂದ ಸೆಪ್ಟೆಂಬರ್-2025 ತಿಂಗಳವರೆಗೆ ಸುಮಾರು 1,82,000 ಜನರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ದಂಡ ವಿಧಿಸಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ. ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಶಾಲಾ/ಕಾಲೇಜುಗಳಲ್ಲಿ 100 ಮೀ. ವ್ಯಾಪ್ತಿಯಲ್ಲಿ 2470 ಜನರು ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿದವರಿಗೆÉ ದಂಡ ವಿಧಿಸಲಾಗಿದೆ. ಇದರಿಂದಾಗಿ ರೂ. 45 ಲಕ್ಷ ಪ್ರತಿ ವರ್ಷ ದಂಡ ಸಂಗ್ರಹವಾಗುತ್ತಿದೆ. ಈ ಪೈಕಿ, 21 ವರ್ಷದೊಳಗಿನ ಯುವಜನರ ದತ್ತಾಂಶವನ್ನು ನೀಡಲು ಆರೋಗ್ಯ ಇಲಾಖೆಗೆ ಸೂಚಿಸಿದರು.…
ವಿರಾಜಪೇಟೆ ಅ.29 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಚಿತ್ರದುರ್ಗದ ಪತ್ರಿಕಾ ಭವನದಲ್ಲಿನ ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಪತ್ರಕರ್ತರಿಗೆ ಕನ್ನಡ ಸಾಹಿತ್ಯಾಭಿರುಚಿ ಕಾರ್ಯಾಗಾರದಲ್ಲಿ ವಿರಾಜಪೇಟೆಯ ಸಾಹಿತಿಗಳು ಹಾಗೂ ಪತ್ರಕರ್ತರಾದ ರಜಿತ ಕಾರ್ಯಪ್ಪ ಅವರು ಭಾಗವಹಿಸಿದರು. ಕಾರ್ಯಾಗಾರದಲ್ಲಿ ಸಾಹಿತ್ಯಾಭಿರುಚಿ ಕುರಿತು ಮಾತನಾಡಿ ಸಂವಾದ ನಡೆಸಿದರು. ಇದೇ ಸಂದರ್ಭ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕಾರ್ಯಾಗಾರದ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದರಾಜ್, ನಿರ್ದೇಶಕರುಗಳಾದ ಮಮತಾ ಅರಸಿಕೆರೆ, ಪ್ರೋ. ಎಂ.ಅಬದುಲ್ ರೆಹಮಾನ್ ಪಾಷಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಚಿತ್ರದುರ್ಗ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಸದಸ್ಯರುಗಳು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಮಡಿಕೇರಿ ಅ.29 NEWS DESK : ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ನೆಲ್ಲಿಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ, ತನಲ್ ಸಂಸ್ಥೆಯವರು ಆಯೋಜಿಸಿರುವ ಬಡ ಕಿಡ್ನಿ ರೋಗಿಗಳ ಡಯಾಲಿಸಿಸ್ ಗೆ ನೆರವಾಗಲು ಬಿರಿಯಾನಿಚಾಲೆಂಜ್ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಹಲವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ತನಲ್ ಸಂಸ್ಥೆಯ ಕಾರ್ಯವೈಖರಿ ಎಲ್ಲರಿಗೂ ಮಾದರಿ ಹಾಗೂ ಶ್ಲಾಘನೀಯ ಎಂದು ಬಣ್ಣಿಸಿದರು. ಸಂಸ್ಥೆಯು ಕೈಗೊಳ್ಳುತ್ತಿರುವ ಹಲವಾರು ಕಾರ್ಯಕ್ರಮಗಳು ಇಂದು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿದ್ದು, ಇದರಿಂದ ಎಲ್ಲರೂ ಇಂತಹ ಕಾರ್ಯಕ್ರಮಗಳನ್ನು ಮಾಡಲು ಪ್ರೇರೇಪಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಿದ್ದಾಪುರ ವಲಯ ಅಧ್ಯಕ್ಷರು ಪ್ರತೀಶ್, ಪಕ್ಷದ ಹಿರಿಯರು ಚೆಕು, ಸಿದ್ದಾಪುರ ಧರ್ಮ ಗುರುಗಳು, ಪಂಚಾಯಿತಿ ಉಪಾಧ್ಯಕ್ಷರು ಪಳನಿ ಸ್ವಾಮಿ, ಸದಸ್ಯರು ದೇವಿಯನಿ, ಅಬ್ದುಲ್ ಸುಕೂರ್, ಜಫರ್, ರವಿ, ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಅ.29 NEWS DESK : ಸವಿತಾ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಯಾಂದಿರ ಶಿವಾಜಿ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದರು. ನೂತನ ಅಧ್ಯಕ್ಷರಿಗೆ ಶುಭಕೋರಿದ ಶಾಸಕರು, ನಿಮ್ಮ ಕಾಲಾವಧಿಯಲ್ಲಿ ಸವಿತಾ ಸಮಾಜಕ್ಕೆ ಬೇಕಾದ ಎಲ್ಲಾ ಅನುಕೂಲಗಳನ್ನು ಒದಗಿಸಲು ಹಾರೈಸಿದರು. ಇದೇ ಸಂದರ್ಭದಲ್ಲಿ ಅಧಿಕಾರ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ಸವಿತಾ ಸಮಾಜದ ಸದಸ್ಯರುಗಳು ಉಪಸ್ಥಿತರಿದ್ದರು.
ಮಡಿಕೇರಿ ಅ.29 NEWS DESK : ವಿರಾಜಪೇಟೆ ನಿವಾಸಿ ಕಲಾವಿದರಾದ ಸಾಧಿಕ್ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದರು. ಇದೇ ಸಂದರ್ಭ ಶಾಸಕರ ತಂದೆಯವರಾದ ದಿವಂಗತ ಎ.ಕೆ.ಸುಬ್ಬಯ್ಯ ಅವರ ಚಿತ್ರವನ್ನು ಗೌರವಾರ್ಥವಾಗಿ ನೀಡಿದರು.
ಮಡಿಕೇರಿ ಅ.29 NEWS DESK : ವಿರಾಜಪೇಟೆ ತಾಲ್ಲೂಕು ಪಾಲಂಗಾಲ ಗ್ರಾಮದ ಮಿಸ್ಟರ್ ಇಂಡಿಯಾ ಯೂನಿವರ್ಸ್ 2025ರ ಪ್ರಶಸ್ತಿ ವಿಜೇತರಾದ ಕರಿನೇರವಂಡ ಬಿಷನ್ ಮಾದಪ್ಪ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಇಂದು ಭೇಟಿ ಮಾಡಿದರು. ಈ ಸಂದರ್ಭ ಶಾಸಕರು ಬಿಷನ್ ಅವರಿಗೆ ಶುಭ ಕೋರುತ್ತಾ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರಲಿ ಎಂದು ಶುಭ ಹಾರೈಸಿದರು.
ವಿರಾಜಪೇಟೆ ಅ.29 NEWS DESK : ಯುನಿಸೆಫ್ ಮತ್ತು ಪತ್ರಿಕೋದ್ಯಮ ವಿಭಾಗ ಮೈಸೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮೈಸೂರು ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದ್ದ ಬದಲಾವಣೆಗೆ ಮಾಧ್ಯಮ ಎಂಬ ಕಾರ್ಯಾಗಾರದಲ್ಲಿ ವಿರಾಜಪೇಟೆಯ ಪತ್ರಕರ್ತೆ ಹಾಗೂ ಸಾಹಿತಿಗಳಾದ ರಜಿತ ಕಾರ್ಯಪ್ಪ ಭಾಗವಹಿಸಿ ಪ್ರಶಂಸನಾ ಪತ್ರ ಪಡೆದುಕೊಂಡರು. ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ಪ್ರೋ.ಸಪ್ನಾ ಎಂ.ಎಸ್. ಹಾಗೂ ಯುನಿಸೆಫ್‍ನ ಪ್ರೊಸುನ್ ಸೆನ್ ಸೇರಿದಂತೆ ಇತರರು ಇದ್ದರು.
ಮಡಿಕೇರಿ ಅ.29 NEWS DESK : ಇತ್ತೀಚಿಗಿನ ಕೌನ್ ಬನೇಗಾ ಕರೋಡ್ ಪತಿ (KBC) ಕಾರ್ಯಕ್ರಮದಲ್ಲಿ ಅಮಿತಾಭ್ ಬಚ್ಚನ್ ರ ಎದುರು ಕುಳಿತಿದ್ದ ಓರ್ವ ಬಾಲಕನ ವರ್ತನೆ ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಯಿತು. ಕೆಲವರು ಆ ಹುಡುಗನ ವರ್ತನೆಯನ್ನು ‘ಅಹಂಕಾರ’, ‘ಅಸಭ್ಯತೆ’ ಎಂದು ಕರೆದು ಟೀಕಿಸಿದರು. ಈ ಕಾರ್ಯಕ್ರಮದ ನಂತರ ಮಕ್ಕಳಲ್ಲಿ ಕಾಣುವ ಕೆಲವೊಂದು ಅತಿಯಾದ ವರ್ತನೆಗಳ ಬಗ್ಗೆ ಜಾಲತಾಣಗಳಲ್ಲಿ ವಿವಿಧ ರೀತಿಯ ಚರ್ಚೆಗಳು ಆಗ ತೊಡಗಿತು. ಈ ಕಂತಿನಲ್ಲಿ ಆ ಹುಡುಗ ಸ್ವಲ್ಪ ಅತಿಯಾಗಿ ವರ್ತಿಸಿದರೂ , ಇನ್ನು ಕೆಲವು ಮಕ್ಕಳಲ್ಲಿ ಇದೇ ರೀತಿಯ ಕೆಲವೊಂದು ನಡವಳಿಕೆಗಳು ಕಂಡು ಬರಬಹುದು. ಅಂತಹವುಗಳನ್ನು ವೈದ್ಯಕೀಯ ಮತ್ತು ಮಾನಸಿಕ ದೃಷ್ಟಿಯಿಂದ ನೋಡಿದಾಗ ಅದು ಅಹಂಕಾರವಲ್ಲ, ಬದಲಾಗಿ ಅತಿಯಾದ ಉತ್ತೇಜನ ಎಂಬ ಸಮಸ್ಯೆಯ ಲಕ್ಷಣ ಎಂದು ಕಂಡು ಬರುತ್ತದೆ. ಅತಿಯಾದ ಚುರುಕುತನ, ನಿಗ್ರಹ-ಹಿಡಿತವಿಲ್ಲದ ಮಾತುಗಳು, ನಿರಂತರ ಚಲನೆ, ಕ್ಷಣಮಾತ್ರವೂ ಶಾಂತವಾಗಿ ಕುಳಿತು ಕೊಳ್ಳದ ಸ್ವಭಾವ ಇರುವ ಮಕ್ಕಳು ನಮ್ಮ ಶಾಲೆಗಳಲ್ಲಿ, ಮನೆಗಳಲ್ಲಿ, ಸಾರ್ವಜನಿಕ…






