ಮಡಿಕೇರಿ ಅ.29 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಜಿಲ್ಲಾ ಅಧ್ಯಕ್ಷೆಯಾಗಿ ಆಯ್ಕೆಯಾದ ಜಿ.ಆರ್.ಪುಷ್ಪಲತಾ ಅವರು ಶಾಸಕ ಡಾ.ಮಂತರ್ ಗೌಡ ಅವರನ್ನು ನಗರೂರಿನ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭ ಶಾಸಕರು ಜಿ.ಆರ್.ಪುಷ್ಪಲತಾ ಅವರನ್ನು ಅಭಿನಂದಿಸಿ ಶುಭಹಾರೈಸಿದರು.
ಲೇಖಕ: admin
ಪೊನ್ನಂಪೇಟೆ ಅ.29 NEWS DESK : ಚೊಚ್ಚಲ ಕೃತಿಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು ಸಾಧನೆಗೈದ ದುದ್ದಿಯಂಡ ಮುಸ್ಕಾನ್ ಸೂಫಿ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಸನ್ಮಾನಿಸಲಾಯಿತು. ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಶ್ ಸಭಾಂಗಣದಲ್ಲಿ ನಡೆದ ಕೆಎಂಎ ಪ್ರತಿಭಾ ಪುರಸ್ಕಾರ-2025 ವಿತರಣೆ ಮತ್ತು ಸನ್ಮಾನ ಸಮಾರಂಭದಲ್ಲಿ ಮುಸ್ಕಾನ್ ಸೂಫಿ ಅವರನ್ನು ಸಂಸ್ಥೆಯ ಪರವಾಗಿ ಸಾಂಪ್ರದಾಯಿಕ ಶೈಲಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಆರಂಭದಿಂದಲೇ ಇಂಗ್ಲೀಷ್ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ದುದ್ದಿಯಂಡ ಮುಸ್ಕಾನ್ ಸೂಫಿ ಅವರ ಮೊದಲ ಇಂಗ್ಲಿಷ್ ಕೃತಿ ‘ದಿಸ್ ಟೂ ಶೆಲ್ ಪಾಸ್’ ಅನ್ನು ಅಂತರಾಷ್ಟ್ರೀಯ ಖ್ಯಾತಿಯ ಬುಕ್ ಲಿಫ್ ಪಬ್ಲಿಕೇಶನ್ ಪ್ರಕಟಿಸಿತ್ತು. ನಂತರ ಈ ಕೃತಿ ಅಮೆರಿಕ ಮೂಲದ ಪ್ರಸಿದ್ಧ ಕವಿ ಎಮಿಲಿ ಡಿಕ್ಕಿನ್ಸನ್ ಸ್ಮರಣಾರ್ಥವಾಗಿ ನೀಡಲಾಗುವ 21ನೇ ಶತಮಾನದ ಅಂತರಾಷ್ಟ್ರೀಯ ಮಟ್ಟದ ‘ಇಂಡಿ ಆಥರ್ಸ್ ಅವಾರ್ಡ್ 2025’ ಕ್ಕೆ ನಾಮನಿರ್ದೇಶನಗೊಂಡಿತ್ತು. ಇದಕ್ಕೂ ಮೊದಲು…
ಮಡಿಕೇರಿ ಅ.29 NEWS DESK : ಕೊಡಗು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ರಂಜಿ ಪೂಣಚ್ಚ ಅವರ ನೇತೃತ್ವದ ತಂಡವು ಸೋಮವಾರಪೇಟೆ ಮತ್ತು ಕುಶಾಲನಗರ ಮಂಡಲಗಳಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆಯನ್ನು ನಡೆಸಿತು. ಈ ಸಂದರ್ಭ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಮಾಜಿ ಸಚಿವ ಅಪ್ಪಚ್ಚು ರಂಜನ್, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಚಂದ್ರ, ಮಂಡಲ ರೈತ ಮೋರ್ಚಾ ಅಧ್ಯಕ್ಷ ಮಚ್ಚಂಡ ಪ್ರಕಾಶ್ , ದಿನೇಶ್ ಚೋಡುಮಡ, ಸುಧೀಶ್ ಸಂದೀಪ್ ಮತ್ತು ರೈತ ಮೋರ್ಚಾದ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಅ.29 NEWS DESK : ಕೊಡಗರಹಳ್ಳಿ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ತಾಲ್ಲೂಕನ್ನು ಪ್ರತಿನಿಧಿಸಿದ್ದ ಸರ್ವದೈವತಾ ಪ್ರೌಢಶಾಲೆಯ ಬಾಲಕ-ಬಾಲಕಿಯರ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ತಂಡದಲ್ಲಿ ಲಿತೇಶ್ ಮತ್ತು ಸಫ್ವಾನ್ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಬಾಲಕಿಯರ ತಂಡದಲ್ಲಿ ದೃತಿ ಮತ್ತು ಅನ್ಹಾ ಫಾತಿಮಾ ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ತರಬೇತುದಾರರಾದ ಪ್ರಮೋದ್ ಗೌಡ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲೂ ಯಶಸ್ಸು ಸಾಧಿಸಲಿ ಎಂದು ಆಡಳಿತ ಮಂಡಳಿ ಮತ್ತು ಬೋಧಕ ವರ್ಗ ಹಾರೈಸಿದೆ.
ನಾಪೋಕ್ಲು ಅ.29 NEWS DESK : ಬೆಂಗಳೂರಿನಲ್ಲಿ ಸಹಾಯಕ ಸಬ್ ಇನ್ಸ್‍ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಪಾಜೆಯ ಉದಯ ಕುಮಾರ್ ಹನಿಯಡ್ಕ(56) ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಟ್ರಾಫಿಕ್ ನಲ್ಲಿ ಸಹಾಯಕ ಇನ್ಸ್ ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸಂಪಾಜೆ ಗ್ರಾಮದ ಕೈಪಡ್ಕ ನಿವಾಸಿ ಉದಯ ಹನಿಯಡ್ಕ ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಹನಿಯಡ್ಕ ಕುಟುಂಬದ ದಿವಂಗತ ಆನಂದ ಗೌಡ ಹಾಗೂ ರುಕ್ಕಿಣಿ ದಂಪತಿಗಳ ಪುತ್ರರಾಗಿದ್ದು. ಸುಮಾರು 30 ವರ್ಷದಿಂದ ಬೆಂಗಳೂರಿನಲ್ಲಿ ಸಹಾಯಕ ಸಬ್‍ಇನ್ಸ್ ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ ರುಕ್ಮಿಣಿ ಮಕ್ಕಳಾದ ಡಿಂಪಲ್, ದರ್ಶನ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ನೆರವೇರಿಸಲಾಯಿತು. ವರದಿ : ದುಗ್ಗಳ ಸದಾನಂದ.
ಮಡಿಕೇರಿ NEWS DESK ಅ.28 : ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಗಲ್ಲಿಗೇರಿಸಲ್ಪಟ್ಟ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಸರ್ವರೂ ಪಾಲ್ಗೊಳ್ಳುವಂತೆ ಚೇರಂಬಾಣೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲ ಗಣಪತಿ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ‍್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ…
ಮಡಿಕೇರಿ NEWS DESK ಅ.28 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ‍್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ…
ಮಡಿಕೇರಿ ಅ.28 NEWS DESK : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತಿತಿರ ಧರ್ಮಜ ಉತ್ತಪ್ಪ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅರ್ಹರಿಗೆ ಬಿಪಿಎಲ್‍ನಿಂದ ಎಪಿಎಲ್‍ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ ಇಲಾಖೆ ಅಥವಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೆದಾರರಿಗೆ ಮನವಿ ಸಲ್ಲಿಸುವಂತಾಗಬೇಕು. ಇದರಿಂದ ಪರಿಶೀಲಿಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಿದ್ದಾರೆ. ಆ ನಿಟ್ಟಿನಲ್ಲಿ ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರು ನಿರ್ದೇಶನ ನೀಡಿದರು. ಅನ್ನಭಾಗ್ಯ ಯೋಜನೆಯಡಿ ಪ್ರತೀ ಫಲಾನುಭವಿಗೆ 10 ಕೆ.ಜಿ. ಅಕ್ಕಿ ವಿತರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ…
ಮಡಿಕೇರಿ ಅ.28 NEWS DESK : ಮಡಿಕೇರಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ರೋಟರಿ ಮಡಿಕೇರಿ ವತಿಯಿಂದ ರೋಟರಾಕ್ಟ್ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ರೋಟರಾಕ್ಟ್ ಸಂಘದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಜೀವನ್ ಹೆಚ್.ಕೆ, ಉಪಾಧ್ಯಕ್ಷರಾಗಿ ನಿಷ್ಮ, ಕಾರ್ಯದರ್ಶಿಯಾಗಿ ರಾಹುಲ್ ಪಿ.ಆರ್, ಸಾಜೆರ್ಂಟ್ ಅಟ್ ಅಮ್ರ್ಸ್ ಆಗಿ ಮಮತಾ, ಖಜಾಂಚಿ ಗಾಯತ್ರಿ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಮೇಘನಾ ಹಾಗೂ ಸಮುದಾಯ ಸೇವಾ ನಿರ್ದೇಶಕರಾಗಿ ಅಕ್ಷತಾ ಅವರು ಅಧಿಕಾರ ವಹಿಸಿಕೊಂಡರು. ಅನುಸ್ಥಾಪನ ಅಧಿಕಾರಿಯಾಗಿ ಉಪಸ್ಥಿತರಿದ್ದ ರೋ.ಮನೋಹರ್ ಹೆಚ್. ಕಾಮತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ರೋಟರಿ ಕಾರ್ಯಚಟುವಟಿಕೆಯ ಕುರಿತು ವಿವರಿಸಿದರು ಮತ್ತು ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ರೋಟರಿ ಮಡಿಕೇರಿಯ ಅಧ್ಯಕ್ಷರಾದ ರೋ.ಲಲಿತ ರಾಘವನ್ ಅವರು ರೋಟರಿ ಸಂಸ್ಥೆ ಮತ್ತು ಶುಚಿತ್ವದ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕಾಲೇಜ್ ನ ಪ್ರಾಂಶುಪಾಲರಾದ ಡಾ.ವೆಂಕಟೇಶ ಪ್ರಸನ್ನ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕರಾದ ಡಾ.ಅನುಪಮಾ ಸಭಾಪತಿ, ರೋಟರಾಕ್ಟ್ ಸಂಯೋಜಕರಾದ ಸುಪ್ರಿಯಾ, ಕಳೆದ…
ಸುಂಟಿಕೊಪ್ಪ ಅ.28 NEWS DESK : ಜಿಲ್ಲಾ ಮಟ್ಟದ ಟೇಬಲ್‍ಟೆನ್ನಿಸ್ ಪಂದ್ಯಾವಳಿಯಲ್ಲಿ ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯ ಬಾಲಕಿಯರ ತಂಡವು ಜಿಲ್ಲಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಜಿಲ್ಲಾ ಮಟ್ಟದ 14ರ ವಯೋಮನದವರಿಗೆ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ಆಯೋಜಿಸಲಾಗಿದ್ದು, ಪಂದ್ಯಾವಳಿಯಲ್ಲಿ ಜಿಲ್ಲೆಯ 5 ತಾಲ್ಲೂಕುಗಳ ತಂಡಗಳು ಭಾಗವಹಿಸಿದ್ದವು. ಅತಿಥೇಯ ಶಾಂತಿನೀಕೇತನದ ಬಾಲಕಿಯರ ತಂಡವು ಮಡಿಕೇರಿ ತಾಲ್ಲೂಕು ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಗೊಂಡಿತು.






