ಮಡಿಕೇರಿ ಡಿ.15 NEWS DESK : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕರ್ನಾಟಕ ದಕ್ಷಿಣ ಪ್ರಾಂತದ 45ನೇ ಪ್ರಾಂತ ಸಮ್ಮೇಳನ ಡಿ.17, 18 ಮತ್ತು 19 ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಪ್ರವೀಣ್ ಎಚ್.ಕೆ ಅವರು ಸಮ್ಮೇಳನದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತದ 9 ಸಂಘಟನಾತ್ಮಕ ವಿಭಾಗಗಳಿಂದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಆಧ್ಯಾಪಕರು ಭಾಗವಹಿಸಲಿದ್ದಾರೆ. ಡಿ.17 ರ ಬೆಳಗ್ಗೆ 10 ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, ಪ್ರದರ್ಶಿನಿ ಉದ್ಘಾಟನೆಗೊಳ್ಳಲಿದೆ ಎಂದರು. ಜನರಲ್ ತಿಮ್ಮಯ್ಯ ಪ್ರದರ್ಶನಿಯನ್ನು ಪದ್ಮಶ್ರೀ ಪುರಸ್ಕೃತ ಕಲಾವಿದೆ ರಾಣಿ ಮಾಚಯ್ಯ ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಪ್ರಾಂತ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಹಾಗೂ ಅಭಿಮನ್ಯು ಅಕಾಡೆಮಿಯ ಸಿಇಓ ಅರ್ಜುನ್ ದೇವಯ್ಯ ಭಾಗವಹಿಸಲಿದ್ದಾರೆ. ಡಿ.19 ರಂದು ನಡೆಯುವ ಯುವ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ…
ಲೇಖಕ: admin
ಮಡಿಕೇರಿ ಡಿ.15 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿ ಅಸ್ತಿತ್ವಕ್ಕೆ ಬಂದಿರುವ ಪತ್ರಕರ್ತರ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ಡಿ. 16 ರಂದು ಕುಶಾಲನಗರ ಬಳಿಯ ಹುಣಸೆವಾಡಿ ಸರ್ಕಲ್‍ನಲ್ಲಿರುವ ಕೂರ್ಗ್ ವಾಟರ್ ಪಾರ್ಕ್‍ನಲ್ಲಿ ಆಯೋಜಿತವಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ತಿಳಿಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಲಿದ್ದಾರೆ. ಸಾಂಸ್ಕೃತಿಕ ವೇದಿಕೆಗೆ ಬಿಗ್‍ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಹಾಗೂ ಹಾಸ್ಯ ನಟ ತುಕಾಲಿ ಸಂತೋಷ್ ಚಾಲನೆ ನೀಡಲಿದ್ದು, ಹಿರಿಯ ಪತ್ರಕರ್ತ ರವಿ ಟೆಲೆಕ್ಸ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೂರ್ಗ್ ವಾಟರ್ ಪಾರ್ಕ್ ಮಾಲೀಕ ಲಕ್ಷ್ಮೀ ನಾರಾಯಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ನಿರ್ದೇಶಕಿ ಬಿ.ಆರ್. ಸವಿತಾ ರೈ,…
ಮಡಿಕೇರಿ ಡಿ.15 NEWS DESK : ಅಹ್ಮದಿಯಾ ಮುಸ್ಲಿಂ ಜಮಾತ್‍ನ ಮಹಿಳಾ ವಿಭಾಗದ ವತಿಯಿಂದ ನಗರದ ಬಾಲಭವನದಲ್ಲಿ “ಮಹಿಳಾ ಸರ್ವಧರ್ಮ ಸಮ್ಮೇಳನ” ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಎಲ್ಲರ ದೇಹದಲ್ಲಿ ಹರಿಯುವ ರಕ್ತ ಒಂದೇ, ನಾವು ಎಲ್ಲರೂ ಶಾಂತಿಗಾಗಿ ಒಟ್ಟಾಗಿ ಸೇರಿ ಸಹಬಾಳ್ವೆ ನಡೆಸಬೇಕೆಂದು ಹೇಳಿದರು. ಲಜ್ನಾ ಇಮಾಇಲ್ಲಾಹ್ ಸದಸ್ಯರಾದ ಡಾ.ಅಫ್ರೀನ್ ಮೆಲ್ವಿನ್ ಮಾತನಾಡಿ ಬಹುಧರ್ಮೀಯ ಹಾಗೂ ಬಹುಸಾಂಸ್ಕೃತಿಕ ಸಮಾಜದಲ್ಲಿ ಜೀವಿಸುತ್ತಿರುವುದರಿಂದ ಪರಸ್ಪರ ಧರ್ಮಗಳ ಸಂಪ್ರದಾಯಗಳು ಮತ್ತು ನಂಬಿಕೆಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಲಜ್ನಾ ಇಮಾಇಲ್ಲಾಹ್ ಸಂಸ್ಥೆಯ ಅಧ್ಯಕ್ಷೆ ಜೀನತ್ ಜಫ್ರುಲ್ಲಾ ಅವರು “ಇಸ್ಲಾಂನಲ್ಲಿ ಮಹಿಳೆಯ ಸ್ಥಾನಮಾನ” ವಿಷಯದ ಕುರಿತು ಮಾತನಾಡಿ, ಇಸ್ಲಾಂ ಮಹಿಳೆಯರಿಗೆ ಸಂಪೂರ್ಣ ಸ್ವಾತಂತ್ರ್ಯ, ಸಮಾನತೆ, ಘನತೆ, ಗೌರವ, ರಕ್ಷಣೆ ಹಾಗೂ ಸೂಕ್ತ ಸ್ಥಾನಮಾನವನ್ನು ನೀಡುತ್ತದೆ ಎಂದು ವಿವರಿಸಿದರು. ಶಿಕ್ಷಣ, ಉದ್ಯೋಗ, ಆರ್ಥಿಕ ಹಕ್ಕುಗಳು, ಭದ್ರತೆ ಹಾಗೂ ಸಂರಕ್ಷಣೆ, ವಿವಾಹ ಮತ್ತು ವಿಚ್ಛೇದನ ಸೇರಿದಂತೆ ಜೀವನದ ಎಲ್ಲಾ ವಲಯಗಳಲ್ಲಿ ಮಹಿಳೆಯರಿಗೆ ಹಕ್ಕುಗಳನ್ನು…
ಮಡಿಕೇರಿ NEWS DESK ಡಿ.15 : ಖಾಸಗಿ ಬಸ್ ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ದಕ್ಷಿಣ ಕೊಡಗಿನ ಮಾಕುಟ್ಟ ಹೆದ್ದಾರಿ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ರಾಜ್ಯಕ್ಕೆ ಸೇರಿದ ಖಾಸಗಿ ಬಸ್ ಇದಾಗಿದ್ದು, ಮಾಕುಟ್ಟದ ಆಂಜನೇಯ ದೇವಾಲಯದ ಬಳಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬಸ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರು. ಆದರೆ ಅಷ್ಟೊತ್ತಿಗಾಗಲೇ ಬಸ್ ಸಂಪೂರ್ಣ ಅಗ್ನಿಗೆ ಆಹುತಿಯಾಗಿತ್ತು. ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.
ಮಡಿಕೇರಿ ಡಿ.15 NEWS DESK : ನಗರದ ಸಂತ ಮೈಕಲರ ದೇವಾಲಯದ ಬೆಳ್ಳಿ ಮಹೋತ್ಸವ ಹಾಗೂ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಸಂಜೆ ಅಲಂಕೃತ ವಾಹನದಲ್ಲಿ ದೇವರ ವಿಗ್ರಹಗಳನ್ನು ಕುಳ್ಳಿರಿಸಿ ಸಹಸ್ರಾರು ಸಂಖ್ಯೆಯ ಕ್ರಿಶ್ಚಿಯನ್ ಬಾಂಧವರು ನಗರದಲ್ಲಿ ಮೆರವಣಿಗೆ ನಡೆಸಿದರು. ಭಕ್ತರು ಉರಿಯುತ್ತಿದ್ದ ಮೇಣದ ಬತ್ತಿ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಕ್ಕಳು, ಮಹಿಳೆಯರಾದಿಯಾಗಿ ಜನಾಂಗದ ಮಂದಿ ಸಂತ ಮೈಕಲರ ದೇವಾಲಯದಿಂದ ಹೊರಟ ಮೆರವಣಿಗೆ ಮಂಗೇರೀರ ಮುತ್ತಣ್ಣ ವೃತ್ತ, ಸ್ಕ್ವಾಡರ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಚೌಕಿವರೆಗೆ ಸಾಗಿ ಮತ್ತೆ ಅದೇ ರಸ್ತೆ ಮೂಲಕ ದೇವಾಲಯಕ್ಕೆ ಹಿಂತಿರುಗಿತು. ದೇವಾಲಯಕ್ಕೆ 25 ವರ್ಷ ತುಂಬಿದ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ನಾಪೋಕ್ಲು ಡಿ.15 NEWS DESK : ಕಕ್ಕಬ್ಬೆಯ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಸಭಾಂಗಣದಲ್ಲಿ ಕೊಡವ ಮುಸ್ಲಿಂ ಸ್ಪೋಟ್ರ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ಅನ್ನು ಉದ್ಘಾಟಿಸಲಾಯಿತು. ಕೊಡಗು ಜಿಲ್ಲಾ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಮಕ್ಕಳಿಗೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸುವುದರ ಮೂಲಕ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ಅನ್ನು ಉದ್ಘಾಟಿಸಿ, ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಆದರೆ ಅವರಿಗೆ ಪೂರಕ ವ್ಯವಸ್ಥೆ ಇಲ್ಲದಿರುವ ಕಾರಣ ಯಶಸ್ಸು ಸಾಧಿಸಲಾಗುತ್ತಿಲ್ಲ. ಆದ್ದರಿಂದ ಅರ್ಹ ಕ್ರೀಡಾ ಪ್ರತಿಭಗಳಿಗೆ ಸರಕಾರೇತರ ಸಂಘ ಸಂಸ್ಥೆಗಳ ಪ್ರೋತ್ಸಾಹ ತೀರಾ ಅಗತ್ಯ ಎಂದರು. ಕ್ರೀಡೆಗಳು ಸಮಾಜದಲ್ಲಿ ಬಹು ಆಯಾಮದ ಪಾತ್ರವನ್ನು ವಹಿಸುತ್ತವೆ. ಇದು ದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಅತ್ಯಗತ್ಯ ಅಂಶವಾಗಿದೆ. ಕ್ರೀಡೆಗಳಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು. ಕ್ರೀಡೆ ಜೀವನದಲ್ಲಿ ಮನುಷ್ಯನಿಗೆ ಶಿಸ್ತನ್ನು ಕಲಿಸುತ್ತದೆ ಎಂದರಲ್ಲದೆ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯ ಪದಾಧಿಕಾರಿಗಳ ಸಾಮಾಜಿಕ ಚಿಂತನೆ ಶ್ಲಾಘನೀಯ ಎಂದು ಮೆಚ್ಚುಗೆ…
ಮಡಿಕೇರಿ ಡಿ.15 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಕುಟ್ಟ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವಾಗಿದೆ. ಸಾರ್ವಜನಿಕರು ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಹಿಂದೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಈ ರಸ್ತೆಯನ್ನು ಮಳೆ ನಿಂತ ಕೂಡಲೇ ದುರಸ್ತಿಗೊಳಿಸಲಾಗುವುದೆಂದು ಭರವಸೆ ನೀಡಿದ್ದರು.
ನಾಪೋಕ್ಲು ಡಿ.15 NEWS DESK : ಲಕ್ನೋದಲ್ಲಿ ನಡೆದ 19ನೇ ರಾಷ್ಟ್ರೀಯ ಡೈಮಂಡ್ ಜುಬಿಲಿ ಸ್ಕೌಟ್ ಜಂಬೂರಿ ಕಾರ್ಯಕ್ರಮದಲ್ಲಿ ನಾಪೋಕ್ಲು ಅಂಕುರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕೊಡಗಿಗೆ ಕೀರ್ತಿ ತಂದಿದ್ದಾರೆ. ಕಾರ್ಯಕ್ರಮದಲ್ಲಿ ಸ್ಕೌಟ್ ವಿದ್ಯಾರ್ಥಿಗಳಾದ ಲಿತನ್ ಪೂಣಚ್ಚ, ಧೀಮಂತ್ ಎ.ಎಸ್., ಪೊನ್ನಣ್ಣ ಬಿ.ಎನ್, ವಿಹಾನ್ ಕರುಂಬಯ್ಯ, ತನುಷ್ ಎಂ.ಬಿ, ಬೆಳ್ಳಿಪ್ಪ ಬಿ ಹಾಗೂ ಸ್ಕೌಟ್ ಮಾಸ್ಟರ್ ಮಹೇಶ್ ಪಾಲ್ಗೊಂಡಿದ್ದರು. ಅಂಕುರ್ ಪಬ್ಲಿಕ್ ಶಾಲೆಯ ಶಾಲಾ ಅಧ್ಯಕ್ಷ ರಾಜಾ ಚರ್ಮಣ್ಣ, ಕಾರ್ಯದರ್ಶಿ ರತ್ನ ಚರ್ಮಣ್ಣ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಡಿ.15 NEWS DESK : ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪಿಸಿ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಎಐಸಿಸಿ ವತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರ್ ಗದ್ದಿ ಚೋಡ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು , ಶ್ರೀಮತಿ ಸೋನಿಯಾ ಗಾಂಧಿ ಅವರು, ಶ್ರೀ ರಾಹುಲ್ ಗಾಂಧಿ ಅವರು, ಶ್ರೀಮತಿ ಪ್ರಿಯಾಂಕ ಗಾಂಧಿ ಅವರು , ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು , ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರು, ಸಚಿವರುಗಳಾದ ಡಾಕ್ಟರ್ ಎಂ.ಸಿ ಸುಧಾಕರ್ ಅವರು , ಈಶ್ವರ್ ಖಂಡ್ರೆ ಅವರು , ರಹಿಮ್ ಖಾನ್ ಅವರು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ನಾಪೋಕ್ಲು ಡಿ.15 NEWS DESK : ತಮ್ಮ ಇಷ್ಟಾರ್ಥ ಸಿದ್ಧಿಗೆ ಭಕ್ತರು ಹರಕೆ ಒಪ್ಪಿಸುವ ಪದ್ಧತಿ ಅನಾದಿಕಾಲದಿಂದಲೂ ರೂಢಿಗತವಾಗಿ ಬಂದಿದೆ. ತಮ್ಮ ಇಷ್ಟ ದೇವರಿಗೆ ಆಯಾ ಪ್ರದೇಶದ ಆಚರಣೆಗೆ ತಕ್ಕಂತೆ ಪ್ರಾಣಿಗಳನ್ನು, ಹೂವುಹಣ್ಣುಗಳನ್ನು ಹರಕೆರೂಪದಲ್ಲಿ ಭಕ್ತರು ಒಪ್ಪಿಸುವುದು ಅನೂಚಾನವಾಗಿ ನಡೆದುಕೊಂಡು ಬಂದಿದೆ. ಆದರೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಬಳಿಯ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಲ್ಲಿ ಭಕ್ತರು ಹರಕೆ ರೂಪದಲ್ಲಿ ಮಣ್ಣಿನ ನಾಯಿಗಳ ಪ್ರತಿಕೃತಿಯನ್ನು ಒಪ್ಪಿಸುವಂತಹ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ಹರಕೆಯ ಕಾರಣದಿಂದ ದೇವಾಲಯದ ಸುತ್ತಲೂ ಮಣ್ಣಿನ ನಾಯಿಗಳ ಪ್ರತಿಕೃತಿ ಮೆರುಗು ನೀಡುತ್ತವೆ.ದಟ್ಟ ಕಾನನದ ಮದ್ಯೆ ಸುಮಾರು ಐದು ಅಡಿ ಎತ್ತರದ ವೃತ್ತಾಕಾರದ ಕಟ್ಟೆ ಈ ಕಟ್ಟೆಯ ನಡುವೆ ತ್ರಿಶೂಲಧಾರಿ ಶಿಲಾಮೂರ್ತಿ ಶಾಸ್ತಾವು ಸನ್ನಿಧಿ. ದೇವರಿಗೆ ಆಧ್ರಯವಿತ್ತಂತೆ ತೋರುವ ಒಂದು ಹಲಸಿನ ಮರ, ಸುತ್ತಲೂ ಸಹಸ್ರಾರು ಹರಕೆಯ ಮಣ್ಣಿನ ನಾಯಿಗಳು ಇದು ಮಕ್ಕಿ ಶಾಸ್ತಾವು ದೇವಾಲಯದ ಚಿತ್ರಣ. ಈ ದೇವಸ್ಥಾನದಲ್ಲಿ ಹರಕೆಯ ನಾಯಿ ತಯಾರಿಸುವ ಮತ್ತು…






