ಮಡಿಕೇರಿ ಡಿ.15 NEWS DESK : ಕ್ರೀಡೆಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತವೆ ಮತ್ತು ನಾಯಕತ್ವದ ಗುಣವನ್ನು ಸೃಷ್ಟಿಸುತ್ತವೆ ಎಂದು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ತಿಳಿಸಿದ್ದಾರೆ. ಕೊಡಗು ಸೈನಿಕ ಶಾಲೆಯಲ್ಲಿ ನಡೆದ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆಯು ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ತೋರಿದ ಉನ್ನತ ಮಟ್ಟದ ಕ್ರೀಡಾಸ್ಫೂರ್ತಿ, ಶಿಸ್ತು ಮತ್ತು ಕನಿಷ್ಠ ಪ್ರಶಂಸನೀಯ. ಕ್ರೀಡಾಕೂಟದ ಆಯೋಜಕರು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯ. ಕ್ರೀಡಾಕೂಟದುದ್ದಕ್ಕೂ ಸುರಕ್ಷತೆ ಮತ್ತು ನ್ಯಾಯಸಮ್ಮತ ಆಟಕ್ಕೆ ಆದ್ಯತೆ ನೀಡಲಾಗಿತ್ತು ಎಂದು ಹೇಳಿದರು. ಬಾಲಕಿಯರ ಹಿರಿಯರ ವಿಭಾಗದಿಂದ ಸುಬ್ರತೋ ನಿಲಯದ ಕೆಡೆಟ್ ದೀಪ್ತಿದೇವಿ ಹಾಗೂ ಕಿರಿಯ ಬಾಲಕಿಯರ ವಿಭಾಗದಿಂದ ಕಟಾರಿ ಕಿರಿಯರ ನಿಲಯದ ಕೆಡೆಟ್ ಕನಿಷ್ಠ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾದರು. ಕ್ರೀಡಾಕೂಟದ ಎಲ್ಲಾ ವಿಭಾಗಗಳಲ್ಲಿ ಸ್ಮರಣೀಯವಾದ ಸಾಧನೆಗೈದ ಸುಬ್ರತೋವನ್ನು 2025ನೇ ಸಾಲಿನ ಚಾಂಪಿಯನ್ ನಿಲಯವನ್ನಾಗಿ…
ಲೇಖಕ: admin
ಮಡಿಕೇರಿ ಡಿ.15 NEWS DESK : ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್ ಮಾದರಿಯಲ್ಲಿ “ಕೊಡವಲ್ಯಾಂಡ್” ಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಡಿ.18ರಂದು ಗನ್ ಕಾರ್ನಿವಲ್ ತೋಕ್ ನಮ್ಮೆ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 16ನೇ ವಾರ್ಷಿಕ ಸಾರ್ವಜನಿಕ ಗನ್ ಕಾರ್ನಿವಲ್-ತೋಕ್ ನಮ್ಮೆಯನ್ನು ಮೂರ್ನಾಡ್ ನ ಬಲಂಬೇರಿ ರಸ್ತೆಯ ಬಳಿ ಕಡಿಯತ್ನಾಡ್ ಗಡಿರೇಖೆಯ ಸಮೀಪ ಚೇನಂಡ ಪೃಥ್ವಿ ಅವರ ಕಾಫಿ ಕ್ಯಾಸಲ್ ಕೂರ್ಗ್ ರೆಸಾರ್ಟ್ ನಲ್ಲಿ ಜಾನಪದ ಸಂಭ್ರಮ ಮತ್ತು ಉತ್ಸಾಹದೊಂದಿಗೆ ಆಚರಿಸಲಾಗುತ್ತಿದೆ. ಬಂದೂಕುಗಳನ್ನು ಹೂವುಗಳಿಂದ ಅಲಂಕರಿಸಲಾಗುತ್ತದೆ, ಮಕ್ಕಳು, ಮಹಿಳೆಯರು ಮತ್ತು ಪುರುಷರಿಗಾಗಿ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಕೊಡವರು, ಕೊಡವತಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಬಂದೂಕು ಆದಿಮ ಸಂಜಾತ ಕೊಡವರ ಜನಾಂಗದ ಧಾರ್ಮಿಕ-ಜನಾಂಗೀಯ ಸಂಸ್ಕಾರವಾಗಿದೆ. ತೋಕ್ ಕೊಡವರ ಪ್ರಾಚೀನ ಹೆಮ್ಮೆ, ಹಳೆಯ ಸಂಪ್ರದಾಯದ ಆಚರಣೆಗಳು, ಜಾನಪದ ಕಾನೂನು ವ್ಯವಸ್ಥೆಗಳನ್ನು ಪ್ರದರ್ಶಿಸಲು ಮತ್ತು ಸಂರಕ್ಷಿಸಲು ಪ್ರತಿ ವರ್ಷ…
ಮಡಿಕೇರಿ ಡಿ.15 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ವಾಷಿ೯ಕ ಕ್ರೀಡಾಕೂಟ ವಿದ್ಯಾಥಿ೯, ಶಿಕ್ಷಕರ ಸಂಭ್ರಮದೊಂದಿಗೆ ಜರುಗಿತು. ಕ್ರೀಡೋತ್ಸವದ ಒಲಂಪಿಕ್ ಟಾರ್ಚ್ ನ್ನು ಕೊಡಗು ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಬೆಳಗಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜು ಮಾತನಾಡಿ, ಕ್ರೀಡೆಗಳು ಶಾರೀರಿಕ ಆರೋಗ್ಯದ ಜೊತೆಗೆ ಮಾನಸಿಕ ಸ್ಥೈರ್ಯ, ಶಿಸ್ತು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಪರಿಶ್ರಮ ಹಾಗೂ ಆತ್ಮವಿಶ್ವಾಸದೊಂದಿಗೆ ಮುಂದುವರಿಯಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ವ್ಯಕ್ತಿತ್ವ ನಿರ್ಮಾಣದಲ್ಲಿ ಗೆಳೆಯರ ಪಾತ್ರ ಮಹತ್ವದ್ದಾಗಿದ್ದು, ವಿಫಲತೆಯನ್ನು ಧೈರ್ಯದಿಂದ ಎದುರಿಸುವುದು ನಾಯಕತ್ವದ ಪ್ರಮುಖ ಗುಣವೆಂದು ಅವರು ಅಭಿಪ್ರಾಯಪಟ್ಟರು. ಒತ್ತಡದ ಸಂದರ್ಭಗಳಲ್ಲಿ ಮನಸ್ಸಿನ ಸಮತೋಲನ ಕಾಪಾಡಿಕೊಳ್ಳಬೇಕು ಹಾಗೂ ವಿನಯವೇ ವ್ಯಕ್ತಿಯನ್ನು ಎತ್ತರಕ್ಕೆ ಕೊಂಡೊಯ್ಯುವ ಶಾಶ್ವತ ಗುಣವೆಂದೂ ಜಿಲ್ಲಾಧಿಕಾರಿ ಕಿವಿಮಾತು ಹೇಳಿದರು. ಕುಂಡ್ಲೋಳಂಡ ದಿನೇಶ್ ಕಾರ್ಯಪ್ಪ ಮಾತನಾಡಿ ಸಾಮಾಜಿಕ ಮಾಧ್ಯಮಗಳ ಪರಿಣಾಮದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳು ಹಾಗೂ ವಿದ್ಯಾರ್ಥಿ–ಗುರುಗಳ ನಡುವಿನ ಪರಸ್ಪರ ಗೌರವದಲ್ಲಿ ಉಂಟಾಗುತ್ತಿರುವ…
ಸುಂಟಿಕೊಪ್ಪ ಡಿ.13 NEWS DESK : ಪ್ರಪಂಚದಲ್ಲಿ ಒಬ್ಬರಿಂದ ಕಿತ್ತುಕೊಳ್ಳಲಾಗದ ಮತ್ತು ಅಪಹರಿಸಲಾಗದ ಸಂಪತ್ತು ಎಂದರೆ ಅದು ವಿದ್ಯೆ ಎಂದು ಸಮಾಜ ಸೇವಕ ಹರಪಳ್ಳಿ ಎನ್.ರವೀಂದ್ರ ಹೇಳಿದರು. ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 61ನೇ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಳ್ಳಿಯಲ್ಲಿರುವ ಈ ಶಾಲೆ ಕನ್ನಡ ಮಾಧ್ಯಮದಾಗಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸಾಧನೆ ಮಾಡಿದೆ ಎಂದು ಪ್ರಶಂಸಿದರು. ಬದುಕಿನಲ್ಲಿ ನಾವು ಕೊಟ್ಟು ಹೋಗಬೇಕು ಇಲ್ಲಾವೇ ಬಿಟ್ಟು ಹೋಗಬೇಕು ಈ ತತ್ವಕ್ಕೆ ಅನುಸಾರವಾಗಿ ಬದುಕಬೇಕೆಂದು ಹೇಳಿದ ಅವರು, ಸ್ವಾಮಿ ವಿವೇಕಾನಂದರು ಹೇಳಿದ ಮನುಷ್ಯನಲ್ಲಿರುವ ಪರಿಪೂರ್ಣತೆಯನ್ನು ಪ್ರಕಾಶಗೊಳಿಸುವುದೇ ವಿದ್ಯೆ. ವಿದ್ಯೆಯಿಂದ ನಮ್ಮ ಬಾಳು ಮಾತ್ರವಲ್ಲ ಸಮಾಜವನ್ನು ಬೆಳಗುವಂತಾಗಬೇಕೆಂದು ಕಿವಿಮಾತು ಹೇಳಿದರು. ನಾವು ಏನೇ ಕಲಿತರು ಎಷ್ಟೇ ದೊಡ್ಡವರಾದರೂ ಸಮಾಜಕ್ಕಾಗಿ ಮತ್ತು ಪರಹಿತಕ್ಕಾಗಿ ನಮ್ಮನ್ನು ಸಮರ್ಪಸಿಕೊಳ್ಳುವುದು ನಮ್ಮ ವ್ಯಕ್ತಿತ್ವದ ಭಾಗವಾಗಬೇಕೆಂದು ಅವರು ಕರೆ ನೀಡಿದರು. ಶಾಲೆಯ ಮಕ್ಕಳಿಗೆ ಟ್ರ್ಯಾಕ್‍ಶೂಟ್ ಕೊಡುಗೆಯಾಗಿ ನೀಡಿ ಮಾತನಾಡಿದ ಕಾಫಿ ಬೆಳೆಗಾರ ಮತ್ತು ಸಮಾಜ…
ಮಡಿಕೇರಿ ಡಿ.13 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿಗಳು ಹಾಗೂ ಎನ್‍ಸಿಸಿ ವಿದ್ಯಾರ್ಥಿಗಳಿಗಾಗಿ ಕಾಲೇಜು ಮತ್ತು ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜ್ ನ ಮೈದಾನದಲ್ಲಿ ಸುಸಜ್ಜಿತ ಫೈರಿಂಗ್ ರೇಂಜನ್ನು ನಿರ್ಮಾಣ ಮಾಡಲು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘ ನಿರ್ಧರಿಸಿದೆ. ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಕಾಲೇಜ್ ನ ಸೆಮಿನಾರ್ ಹಾಲ್ ನಲ್ಲಿ ನಡೆದ ಸಂಘದ ಸಭೆಯಲ್ಲಿ ಮುಂಬರುವ ದಿನಗಳಲ್ಲಿ ನಡೆಸಲಾಗುವ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಸಾರ್ವಜನಿಕರು, ಹಳೇ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಗುಂಡು ಹೊಡೆಯುವ ಸ್ಪರ್ಧೆಯನ್ನು ಶೀಘ್ರ ಆಯೋಜಿಸಲು ಮತ್ತು ಹಳೇ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಯಿತು. ಹಳೇ ವಿದ್ಯಾರ್ಥಿ ಸಂಘಕ್ಕೆ ನೂತನ ಕಟ್ಟಡವನ್ನು ನಿರ್ಮಿಸುವ ಕುರಿತು ಚರ್ಚಿಸಿ, ಖಾತೆಯಲ್ಲಿ ಹೆಚ್ಚು ಹಣ ಇಲ್ಲದಿರುವ ಕಾರಣ ಮುಂದಿನ ದಿನಗಳಲ್ಲಿ ದಾನಿಗಳನ್ನು ಸಂಪರ್ಕಿಸಿ, ಸೂಕ್ತ…
ಮಡಿಕೇರಿ ಡಿ.13 NEWS DESK : ಸುಂದರ ಪರಿಸರದ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳೊಂದಿಗೆ ದಿನದಿನವೂ ಹೆಚ್ಚುತ್ತಿರುವ ವಾಹನ ದಟ್ಟಣೆ, ರಸ್ತೆಗಳ ಅವ್ಯವಸ್ಥೆ, ಸ್ವಚ್ಛತೆಯ ಪರಿಜ್ಞಾನವಿಲ್ಲದೆ ಉಂಟಾಗುತಿರುವ ಅಶುಚಿತ್ವ, ಅನಧಿಕೃತ ಹೋಂ ಸ್ಟೇಗಳಿಂದ ಉದ್ಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೊಡಗು ಪತ್ರಕರ್ತರ ಸಂಘದಿಂದ ಆಯೋಜಿತ ವಿಷನ್ ಮಡಿಕೇರಿ- ‘ ನಮ್ಮ ಮಡಿಕೇರಿ ನಮ್ಮ ಹೆಮ್ಮೆ- ಸಂವಾದ’ ಕಾರ್ಯಕ್ರಮದಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ನಗರದ ರೆಡ್ ಬ್ರ‍್ರಿಕ್ಸ್ ಸಭಾಂಗಣದ ಸತ್ಕಾರ ಭವನದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘಂದ ಅಧ್ಯಕ್ಷ ಅನಿಲ್ ಹೆಚ್.ಟಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 1691 ರಲ್ಲಿ ಮುದ್ದುರಾಜನಿಂದ ನಿರ್ಮಾಣವಾದ ಮಡಿಕೇರಿ 344 ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿದೆ. ಈ ಪುಟ್ಟ ನಗರಿ ಬದಲಾವಣೆಗಳಿಗೆ ಮೈಯೊಡ್ಡುತ್ತಲೆ ಬಂದಿದ್ದು, ಭವಿಷ್ಯದಲ್ಲಿ ಮಡಿಕೇರಿಯನ್ನು ಸುಂದರ ನಗರವನ್ನಾಗಿ ರೂಪಿಸುವ ಮತ್ತು ಸಂರಕ್ಷಿಸುವ ಬಗ್ಗೆ ಯಾವುದೇ ಅಭಿಪ್ರಾಯ ಭೇದಗಳಿದ್ದರೂ ಬದಿಗೊತ್ತಿ, ಜಾತಿ ಮತಗಳ ಭೇದವಿಲ್ಲದೆ ನಗರದ ನಾಗರಿಕರೆಲ್ಲರು ಕೈಜೋಡಿಸಬೇಕೆನ್ನುವ ಆಶಯವನ್ನು ವ್ಯಕ್ತಪಡಿಸಿದರು. :: ಶೋಚನೀಯ ಸ್ಥಿತಿಯಲ್ಲಿ ಜಿಲ್ಲಾ…
ಮಡಿಕೇರಿ ಡಿ.13 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಗು ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾವಳಿಯನ್ನು ಡಿ.14 ರಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಕ್ಲಬ್ ಪ್ರಧಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಡಿ.14 ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಪಂದ್ಯಾವಳಿಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ.ಮೇ.ಬಿ.ರಾಘವ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಶಾಲನಗರ ತಾಲ್ಲೂಕಿನ ಹೆರೂರು ಗ್ರಾಮದ ಉದ್ಯಮಿ ಮೋಹಿನಿ ಪ್ರಕಾಶ್, ಜಿಲ್ಲಾ ಹಿಂದು ಮಲಯಾಳಿ ಸಮಾಜದ ಸಲಹೆಗಾರ ಹಾಗೂ ಎಸ್‌ಎನ್‌ಡಿಪಿ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಟಿ.ಆರ್.ವಾಸುದೇವ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್‌ಕುಟ್ಟಪ್ಪ, ರಾಜ್ಯ ಸಮಿತಿ ಸದಸ್ಯೆ ಬಿ.ಆರ್.ಸವಿತಾ ರೈ, ಜಿಲ್ಲಾಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ, ಪಂದ್ಯಾವಳಿಯ ಸಂಚಾಲಕರಾದ ಲೋಕೇಶ್ ಕಾಟಕೇರಿ, ಶಿವ ಕಾಂತರಾಜು,…
ಗದಗ ಡಿ.13 NEWS DESK : ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಚಂದನ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಭಾರತ ರತ್ನ ಪ್ರೊ.ಸಿ.ಎನ್.ಆರ್ ರಾವ್ 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್.ಪಾಟೀಲ್ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ “ಚಂದನ ಶ್ರೀ” ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು.
ಕುಶಾಲನಗರ ಡಿ.13 NEWS DESK : ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಮಯ ಪ್ರಜ್ಞೆ ಹಾಗೂ ಉತ್ತಮ ಸಂಸ್ಕಾರಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಕನ್ನಡ ಭಾರತಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಕಾಲೇಜು ಜೀವನವನ್ನು ಮೋಜು ಮಾಸ್ತಿಗಾಗಿ ಹಾಳುಮಾಡಿಕೊಳ್ಳಬಾರದು. ಇದೊಂದು ಗೋಲ್ಡನ್ ಲೈಫ್ ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿಯೊಂದಿಗೆ ಏಕಾಗ್ರತೆ ಹಾಗೂ ಶ್ರದ್ಧೆ ಅಧ್ಯಯನಶೀಲತೆ ಕೈಗೊಂಡು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಪೋಷಕರು ಹಾಗೂ ಗುರುಹಿರಿಯರು ಗೌರವ ನೀಡುವುದರ ಜೊತೆಗೆ ಅವರ ಆಸೆ ಆಕಾಂಕ್ಷೆ ಹಾಗೂ ನಿರೀಕ್ಷೆಯಂತೆ ಉನ್ನತ ಸ್ಥಾನಮಾನಕ್ಕೆ ಹೋದಾಗ ಮಾತ್ರ ಪೋಷಕರು ಕಂಡ ಕನಸು ನನಸಾಗಿಸಲು ಸಾಧ್ಯ ಎಂದರು. ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಪುಟ್ಟರಾಜು ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕೆ…
ಮಡಿಕೇರಿ ಡಿ.13 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಪ್ರಸಕ್ತ ಸಾಲಿನಲ್ಲಿ ಪ್ರಕಟಿಸಲು ಉದ್ದೇಶಿಸಿರುವ ವಿಷಯಾಧಾರಿತ ಪುಸ್ತಕಗಳ ಪ್ರಕಟಣೆಗೆ ಅರ್ಹ ಆಸಕ್ತ ಯುವ ಬರಹಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕಾಡೆಮಿ ವತಿಯಿಂದ ಕೊಡ ಮಾಡುವ ಅಂದಾಜು 20 ವಿಭಿನ್ನ ರೀತಿಯ ವಿಷಯಗಳ ಮೇಲೆ ಅಧ್ಯಯನ, ಸಂಶೋಧನೆ ನಡೆಸಿ, ನಿಖರವಾದ ಮಾಹಿತಿ ಸಂಗ್ರಹಿಸಿ ಕನಿಷ್ಟ ನೂರು ಪುಟಗಳ ಸಚಿತ್ರ ವಿವರವುಳ್ಳ ಪುಸ್ತಕಗಳನ್ನು ಹೊರತರಲಾಗುವುದು. ಆಯ್ಕೆಯಾಗುವ ಬರಹಗಾರರಿಗೆ ಪುಸ್ತಕದ ವಿಷಯ ಹಾಗೂ ತಲಾ ರೂ.25 ಸಾವಿರ ಪ್ರೋತ್ಸಾಹ ಧನವನ್ನು ಷರತ್ತುಗಳೊಂದಿಗೆ ನೀಡಲಾಗುವುದು. ಆಸಕ್ತ ಬರಹಗಾರರು ಅಧ್ಯಯನ ಕ್ಷೇತ್ರದಲ್ಲಿ ತಮ್ಮ ಅನುಭವ, ಅರ್ಹತೆ ಹಾಗೂ ಆಸಕ್ತಿಯೊಂದಿಗಿನ ಸ್ವ ವಿವರವುಳ್ಳ ಅರ್ಜಿಯನ್ನು ಅಕಾಡೆಮಿ ಕಚೇರಿಗೆ ತಲುಪಿಸಲು ಡಿ.25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮೊಬೈಲ್ ಸಂಖ್ಯೆ 8762942976 ಯನ್ನು ಸಂಪರ್ಕಿಸಬಹುದು. ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ-571201 ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಅಧ್ಯಕ್ಷರಾದ ಅಜ್ಜಿನಿಕಂಡ ಸಿ.…






